Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 40:28 - ಕನ್ನಡ ಸತ್ಯವೇದವು C.L. Bible (BSI)

28 ನೀವು ಕೇಳಿಲ್ಲವೇ? ನಿಮಗೆ ತಿಳಿದಿಲ್ಲವೇ? ಸರ್ವೇಶ್ವರ ಅನಂತ ದೇವರಲ್ಲವೇ? ಭೂದಿಗಂತಗಳನ್ನು ಆತ ಸೃಜಿಸಿದನಲ್ಲವೇ? ದಣಿವೆಂಬುದು ಇಲ್ಲ, ಬಳಲಿಕೆ ಎಂಬುದು ಇಲ್ಲ ಆತನಿಗೆ. ಆತನ ದಕ್ಷಸಾಮರ್ಥ್ಯ ಅಗಮ್ಯ ಪರಿಶೋಧನೆಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನೀನು ಗ್ರಹಿಸಲಿಲ್ಲವೋ? ಕೇಳಲಿಲ್ಲವೋ? ಯೆಹೋವನು ನಿರಂತರ ದೇವರೂ, ಭೂಮಿಯ ಕಟ್ಟಕಡೆಗಳನ್ನು ನಿರ್ಮಿಸಿದವನೂ ಆಗಿದ್ದಾನೆ. ಆತನು ದಣಿದು ಬಳಲುವುದಿಲ್ಲ, ಆತನ ವಿವೇಕವು ಪರಿಶೋಧನೆಗೆ ಅಗಮ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನೀನು ಗ್ರಹಿಸಲಿಲ್ಲವೋ? ಕೇಳಲಿಲ್ಲವೋ? ಯೆಹೋವನು ನಿರಂತರ ದೇವರೂ ಭೂವಿುಯ ಕಟ್ಟಕಡೆಗಳನ್ನು ನಿರ್ಮಿಸಿದವನೂ ಆಗಿದ್ದಾನೆ; ಆತನು ದಣಿದು ಬಳಲುವದಿಲ್ಲ; ಆತನ ವಿವೇಕವು ಪರಿಶೋಧನೆಗೆ ಅಗಮ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ದೇವರಾದ ಯೆಹೋವನು ಜ್ಞಾನಿಯೆಂಬುದನ್ನು ನೀನು ಖಂಡಿತವಾಗಿಯೂ ಕೇಳಿರುವೆ. ಆತನು ತಿಳಿದಿರುವ ಪ್ರತಿಯೊಂದನ್ನೂ ಕಲಿತುಕೊಳ್ಳಲು ಜನರಿಗೆ ಸಾಧ್ಯವಿಲ್ಲ. ಆತನು ಆಯಾಸಗೊಳ್ಳುವದಿಲ್ಲ; ಆತನಿಗೆ ವಿಶ್ರಾಂತಿಯ ಅವಶ್ಯವಿಲ್ಲ. ಭೂಮಿಯಲ್ಲಿರುವ ದೂರ ಸ್ಥಳಗಳನ್ನೆಲ್ಲಾ ಮಾಡಿದವನು ಆತನೇ. ಆತನು ನಿರಂತರಕ್ಕೂ ಜೀವಿಸುವಾತನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನಿನಗೆ ಗೊತ್ತಿಲ್ಲವೋ? ನೀನು ಕೇಳಲಿಲ್ಲವೋ? ಯೆಹೋವ ದೇವರು ನಿರಂತರವಾದ ದೇವರೂ, ಭೂಮಿಯ ಅಂತ್ಯಗಳನ್ನು ಸೃಷ್ಟಿಸಿದವನೂ ದಣಿಯುವುದಿಲ್ಲ, ಬಳಲುವುದಿಲ್ಲ, ಆತನ ತಿಳುವಳಿಕೆಯು ಪರಿಶೋಧನೆಗೆ ಅಗಮ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 40:28
37 ತಿಳಿವುಗಳ ಹೋಲಿಕೆ  

ನಮ್ಮ ಪ್ರಭು ಘನವಂತ, ಪರಾಕ್ರಮಿ I ಅಪರಿಮಿತವಾದುದು ಆತನ ಜ್ಞಾನನಿಧಿ II


ಈ ಸತ್ಕಾರ್ಯವನ್ನು ನಿಮ್ಮಲ್ಲಿ ಪ್ರಾರಂಭಿಸಿದ ದೇವರು ಅದನ್ನು ಮುಂದುವರೆಸುತ್ತಾ, ಯೇಸುಕ್ರಿಸ್ತರು ಪುನರಾಗಮಿಸುವಷ್ಟರಲ್ಲಿ ಪೂರೈಸುವರು ಎಂಬುದೇ ನನ್ನ ದೃಢ ನಂಬಿಕೆ.


ಸರ್ವಯುಗಗಳ ಅರಸರೂ ಅಮರರೂ ಅಗೋಚರರೂ ಆಗಿರುವ ಏಕೈಕ ದೇವರಿಗೆ ಯುಗಯುಗಾಂತರಕ್ಕೆ ಗೌರವವೂ ಮಹಿಮೆಯೂ ಸಲ್ಲಲಿ! ಆಮೆನ್.


ನಿಮಗೆ ತಿಳಿದಿಲ್ಲವೋ, ನೀವು ಕೇಳಿಲ್ಲವೋ ಆದಿಯಿಂದ ನಿಮಗೆ ಉಪದೇಶವಾಗಿ ಬಂದಿಲ್ಲವೋ? ಪೃಥ್ವಿಸ್ಥಾಪನೆ ಹೇಗಾಯಿತೆಂದು ನೀವು ಗ್ರಹಿಸಿಲ್ಲವೋ?


“ಪ್ರಭುವಿನ ಮನಸ್ಸನ್ನರಿತವರಾರು? ಪ್ರಭುವಿಗೆ ಉಪದೇಶಿಸುವವರಾರು?” ಎಂದು ಲಿಖಿತವಾಗಿದೆ. ನಾವಾದರೋ, ಕ್ರಿಸ್ತಯೇಸುವಿನ ಮನೋಭಾವನೆಯುಳ್ಳವರು.


ಅದಕ್ಕೆ ಉತ್ತರವಾಗಿ ಯೇಸು, “ನಾನು ಇಷ್ಟುಕಾಲ ನಿಮ್ಮೊಡನೆ ಇದ್ದರೂ ನಾನು ಯಾರೆಂಬುದನ್ನು ನೀನು ಅರಿತುಕೊಳ್ಳಲಿಲ್ಲವೆ? ನನ್ನನ್ನು ನೋಡಿದವನು ಪಿತನನ್ನೇ ನೋಡಿದವನಾಗಿದ್ದಾನೆ. ಹೀಗಿರುವಾಗ, ಫಿಲಿಪ್ಪನೇ, ‘ನಮಗೆ ಪಿತನನ್ನು ತೋರಿಸಿ’ ಎಂದು ಹೇಗೆ ಕೇಳುತ್ತೀ?


ಅಬ್ರಹಾಮನು ಆ ಬೇರ್ಷೆಬದಲ್ಲೇ ಒಂದು ಪಿಚುಲ ವೃಕ್ಷವನ್ನು ನೆಟ್ಟು ನಿತ್ಯದೇವರಾದ ಸರ್ವೇಶ್ವರ ಸ್ವಾಮಿಯ ನಾಮಸ್ಮರಣೆ ಮಾಡಿ, ಅಲ್ಲಿ ಆರಾಧನೆ ಮಾಡಿದನು.


ಯೇಸುವಿನ ರಕ್ತವು ಮತ್ತಷ್ಟು ಹೆಚ್ಚಾಗಿ ನಮ್ಮನ್ನು ಪರಿಶುದ್ಧಗೊಳಿಸುತ್ತದಲ್ಲವೇ? ನಿತ್ಯಾತ್ಮದ ಮೂಲಕ ಅವರು ತಮ್ಮನ್ನೇ ನಿಷ್ಕಳಂಕಬಲಿಯಾಗಿ ದೇವರಿಗೆ ಸಮರ್ಪಿಸಿದ್ದಾರೆ; ನಾವು ಜೀವಸ್ವರೂಪರಾದ ದೇವರನ್ನು ಆರಾಧಿಸುವಂತೆ, ಜಡಕರ್ಮಗಳಿಂದ ನಮ್ಮನ್ನು ಬಿಡುಗಡೆಮಾಡಿ ನಮ್ಮ ಅಂತರಂಗವನ್ನು ಪರಿಶುದ್ಧಗೊಳಿಸುತ್ತಾರೆ.


ಆಗ ಯೇಸು, “ಎಂಥ ಮತಿಹೀನರು ನೀವು! ಪ್ರವಾದಿಗಳು ಹೇಳಿರುವುದೆಲ್ಲವನ್ನು ನಂಬುವುದರಲ್ಲಿ ಎಷ್ಟು ಮಂದಮತಿಗಳು ನೀವು!


ದೇವರು ನಿಮಗೆ ಅನುಗ್ರಹಿಸಿರುವ ಪವಿತ್ರಾತ್ಮರಿಗೆ ನಿಮ್ಮ ದೇಹ ಗರ್ಭಗುಡಿಯಾಗಿದೆ; ಆ ಪವಿತ್ರಾತ್ಮ ನಿಮ್ಮಲ್ಲಿ ವಾಸಮಾಡುತ್ತಿದ್ದಾರೆ ಎಂಬುದು ನಿಮಗೆ ಗೊತ್ತಿಲ್ಲವೇ? ನೀವು ನಿಮ್ಮ ಸ್ವಂತ ಸೊತ್ತಲ್ಲ.


ಅಧರ್ಮಿಗಳು ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲವೆಂದು ನೀವು ಬಲ್ಲಿರಿ. ನಿಮ್ಮನ್ನು ನೀವೇ ವಂಚಿಸಿಕೊಳ್ಳಬೇಡಿ. ದುರಾಚಾರಿಗಳು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಸಲಿಂಗಕಾಮಿಗಳು,


ಸರ್ವೇಶ್ವರ ಹೀಗೆನ್ನುತ್ತಾರೆ: ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು. ಪೆದ್ದ ಮಕ್ಕಳು, ಬುದ್ಧಿಯಿಲ್ಲದವರು ಕೇಡುಮಾಡುವುದರಲ್ಲಿ ಪ್ರವೀಣರು ಒಳಿತನ್ನು ಮಾಡಲು ಅರಿಯರು


ಬೆಟ್ಟಗಳು ಹುಟ್ಟುವುದಕೆ ಮುಂಚಿನಿಂದ I ಭೂದೇಶಗಳು ಆಗುವುದಕೆ ಮೊದಲಿಂದ I ನೀನೆಮಗೆ ದೇವರು ಯುಗಯುಗಗಳಿಂದ II


“ಎಲ್ಲೆ ಎಲ್ಲೆಗಳಲ್ಲಿರುವ ಜನರೇ, ತಿರುಗಿಕೊಳ್ಳಿರಿ ನನ್ನ ಕಡೆಗೆ, ಆಗ ಉದ್ಧಾರವಾಗುವಿರಿ. ದೇವರು ಬೇರಾರೂ ಇಲ್ಲ, ನಾನೊಬ್ಬನೆ ಎಂಬುದನರಿಯಿರಿ.


ನನ್ನ ಕುರಿತು ನಿನಗಿರುವ ಅರಿವು ಅಗಾಧ I ನನ್ನ ಬುದ್ಧಿಗದು ಸಿಲುಕದಷ್ಟು ಉನ್ನತ II


ಏಕೆಂದರೆ ಪ್ರಭು ನಮಗಿತ್ತ ಆಜ್ಞೆ ಹೀಗಿದೆ: ಅನ್ಯಧರ್ಮೀಯರಿಗೆ ಜ್ಯೋತಿಯನ್ನಾಗಿಯೂ ವಿಶ್ವಪೂರ್ತಿಗೆ ಜೀವೋದ್ಧಾರದ ಸಾಧನವಾಗಿಯೂ ನಾನು ನಿನ್ನನ್ನು ನೇಮಿಸಿದ್ದೇನೆ.’


ಅದಕ್ಕೆ ಉತ್ತರವಾಗಿ ಯೇಸು, “ನನ್ನ ಪಿತ ಸತತವೂ ಕಾರ್ಯನಿರತರು. ಅವರಂತೆಯೇ ನಾನು ಸದಾ ಕಾರ್ಯನಿರತನಾಗಿದ್ದೇನೆ,” ಎಂದು ನುಡಿದರು.


ಅನಂತರ, ಹನ್ನೊಂದು ಮಂದಿ ಶಿಷ್ಯರು ಊಟಮಾಡುತ್ತಿದ್ದಾಗ ಯೇಸುಸ್ವಾಮಿ ಪ್ರತ್ಯಕ್ಷರಾದರು. ತಾವು ಪುನರುತ್ಥಾನ ಹೊಂದಿದ ಮೇಲೆ, ತಮ್ಮನ್ನು ಕಂಡವರ ಮಾತನ್ನು ಅವರು ನಂಬದಿದ್ದ ಕಾರಣ ಅವರ ಅವಿಶ್ವಾಸವನ್ನೂ ಹೃದಯ ಕಾಠಿಣ್ಯವನ್ನೂ ಯೇಸು ಖಂಡಿಸಿದರು.


“ಪರಮ ಪವಿತ್ರನ, ಶಾಶ್ವತ ಲೋಕದ ನಿತ್ಯನಿವಾಸಿಯಾದ ಮಹೋನ್ನತನ ಮಾತಿದು : ಉನ್ನತವಾದ ಪವಿತ್ರಾಲಯದಲ್ಲಿ ವಾಸಿಸುವವನು ನಾನು; ಆದರೂ ಪಶ್ಚಾತ್ತಾಪಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ಸಿದ್ಧಿಗೆ ತರುವೆ ನೀ ಪ್ರಭು, ನನ್ನ ಕಾರ್ಯವನು I ಶಾಶ್ವತವಾಗಿಸು ನಿನ್ನ ಅಚಲ ಪ್ರಿತಿಯನು I ಮರೆತುಬಿಡಬೇಡ ನಿನ್ನಯ ಕೈ ಕೃತಿಯನು II


ನಾನು ಹೇಳುವುದನ್ನು ಕೇಳಿ : ಸರ್ವೇಶ್ವರ ಸ್ವಾಮಿಯ ಕೈ ನಿಮ್ಮನ್ನು ರಕ್ಷಿಸಲಾಗದಂಥ ಮೋಟುಗೈಯಲ್ಲ, ಅವರ ಕಿವಿ ಕಿವುಡಲ್ಲ.


ಆದಿಯಿಂದ ದೇವರೇ ನಿಮಗೆ ಶ್ರೀನಿವಾಸ ಆತನ ಹಸ್ತವೇ ನಿಮಗೆ ನಿತ್ಯಾಧಾರ! ಶತ್ರುಗಳನು ಹೊರಡಿಸುವನು ನಿಮ್ಮ ಬಳಿಯಿಂದ ಅವರನು ಸಂಹರಿಸಲು ಆಜ್ಞಾಪಿಸಿಹನು ಆತ.


“ಇಬ್ಬರೂ ಒಂದೇ ಶರೀರವಾಗುತ್ತಾರೆ,” ಎಂದು ಬರೆಯಲಾಗಿದೆ. ವೇಶ್ಯೆಯ ಸಂಸರ್ಗ ಮಾಡುವವನು ಅವಳೊಂದಿಗೆ ಒಂದೇ ದೇಹವಾಗುತ್ತಾನೆ, ಎಂದು ನಿಮಗೆ ತಿಳಿಯದೇ?


ಇದನ್ನು ಕೇಳಿ ಯೇಸು, “ಅಯ್ಯೋ, ವಿಶ್ವಾಸವಿಲ್ಲದ ಪೀಳಿಗೆಯೇ, ಇನ್ನೆಷ್ಟು ಕಾಲ ನಿಮ್ಮೊಂದಿಗಿರಲಿ! ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ! ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿ,” ಎಂದರು.


ಇದನ್ನು ಬೆಳಕಿಗೆ ತರುವ ನನ್ನ ಸಂದೇಶದ ಮೂಲಕ ಮತ್ತು ಯೇಸುಕ್ರಿಸ್ತರನ್ನು ಕುರಿತ ಬೋಧನೆಯ ಮೂಲಕ ದೇವರು ನಿಮ್ಮನ್ನು ವಿಶ್ವಾಸದಲ್ಲಿ ದೃಢಪಡಿಸಲು ಶಕ್ತರು.


ಚದರಿಹೋಗುವರು ಸರ್ವೇಶ್ವರನ ವಿರೋಧಿಗಳು ಆಗಸದಿಂದಾತ ಅವರ ವಿರುದ್ಧ ಗರ್ಜಿಸಲು! ನ್ಯಾಯ ತೀರಿಸುವನಾತ ಜಗದ ಕಟ್ಟಕಡೆಯವರೆಗೆ ಶಕ್ತಿಸಾಮರ್ಥ್ಯವನೀವನು ತಾ ನೇಮಿಸಿದರಸನಿಗೆ ಏರಿಸುವನು ತನ್ನಭಿಷಿಕ್ತನ ಒಲುಮೆಯನು ಉನ್ನತಿಗೆ.


ಹೇ ಸರ್ವೇಶ್ವರಾ, ನೀವಾದರೋ ಸತ್ಯದೇವರು, ಜೀವಸ್ವರೂಪ ದೇವರು, ಶಾಶ್ವತ ರಾಜರು ನಿಮ್ಮ ಕೋಪಕ್ಕೆ ನಡುಗುತ್ತದೆ ಭೂಲೋಕ ನಿಮ್ಮ ರೋಷವನ್ನು ತಾಳಲಾರದು ಜನಾಂಗ.


ಪ್ರಸವಕ್ಕೆ ತಂದ ನಾನು ಹೆರಲಿಕ್ಕೆ ಬಿಡದಿರುವೆನೊ?’ - ಎನ್ನುತ್ತಾರೆ ನಿಮ್ಮ ದೇವರು. ‘ಹೆರುವಂತೆ ಮಾಡುವವನಾದ ನಾನು ಗರ್ಭ ಮುಚ್ಚಿಬಿಡುವೆನೊ?’ ಎನ್ನುತ್ತಾರೆ ಸ್ವಾಮಿ ಸರ್ವೇಶ್ವರ.


ಪ್ರಭು ಮಹಾತ್ಮನು, ಸ್ತುತ್ಯರ್ಹನು I ಆತನ ಮಹಿಮೆ ಅಗಮ್ಯವಾದದು II


ಇದನ್ನೆಲ್ಲಾ ಬಹುಕಾಲದ ಹಿಂದೆ ಗೊತ್ತು ಮಾಡಿದವನು ನಾನೇ, ಪೂರ್ವಕಾಲದಲ್ಲಿ ನಿರ್ಣಯಿಸಿದುದನ್ನು ಈಗ ನೆರವೇರಿಸಿದ್ದೇನೆ. ಕೋಟೆ ನಗರಗಳನ್ನು ನೀನು ಹಾಳು ದಿಬ್ಬಗಳನ್ನಾಗಿಸಿದೆ, ಆದರೆ ಸಾಧ್ಯವಾಯಿತಿದು ನನ್ನಿಂದಲೇ, ನಿನಗಿದು ತಿಳಿಯದೆಹೋಯಿತೆ?


ಎಡವಿ ಬೀಳನವನು, ಎದೆಗುಂದನವನು ಜಗದೊಳು ಸ್ಥಾಪಿಸುವ ತನಕ ಸದ್ಧರ್ಮವನು, ಎದುರುನೋಡುವುವು ದ್ವೀಪ-ದ್ವೀಪಾಂತರಗಳು ಆತನ ಧರ್ಮಶಾಸ್ತ್ರವನು.


ಭೂವಿಸ್ತಾರವನ್ನು ಗ್ರಹಿಸಿರುವೆಯೋ? ಇದೆಲ್ಲವು ನಿನಗೆ ತಿಳಿದಿದ್ದರೆ ಹೇಳು, ನೋಡೋಣ!


“ಸ್ವಾಮಿ ಸರ್ವೇಶ್ವರಾ, ನೀವು ನಿಮ್ಮ ಭುಜಬಲದಿಂದಲೂ ಮಹಾಶಕ್ತಿಯಿಂದಲೂ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದೀರಿ. ನಿಮಗೆ ಅಸಾಧ್ಯವಾದ ಕಾರ್ಯ ಯಾವುದೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು