Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 40:29 - ಕನ್ನಡ ಸತ್ಯವೇದವು C.L. Bible (BSI)

29 ದಯಪಾಲಿಸುವನಾತ ಬಲಾಭಿವೃದ್ಧಿಯನ್ನು ಬಳಲಿದವನಿಗೆ ಅನುಗ್ರಹಿಸುವನಾತ ಚೈತನ್ಯವನು ನಿತ್ರಾಣನಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಸೋತವನಿಗೆ ತ್ರಾಣವನ್ನು ಅನುಗ್ರಹಿಸಿ, ಬಲಹೀನನಿಗೆ ಬಹು ಬಲವನ್ನು ದಯಪಾಲಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಸೋತವನಿಗೆ ತ್ರಾಣವನ್ನು ಅನುಗ್ರಹಿಸಿ ನಿರ್ಬಲನಿಗೆ ಬಹು ಬಲವನ್ನು ದಯಪಾಲಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಬಳಲಿಹೋದವರನ್ನು ಆತನು ಬಲಶಾಲಿಗಳನ್ನಾಗಿ ಮಾಡುತ್ತಾನೆ. ಬಲಹೀನರನ್ನು ಶಕ್ತಿವಂತರನ್ನಾಗಿ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆತನು ದಣಿದವನಿಗೆ ಶಕ್ತಿಯನ್ನೂ, ಬಲಹೀನನಿಗೆ ಬಹುಬಲವನ್ನೂ ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 40:29
17 ತಿಳಿವುಗಳ ಹೋಲಿಕೆ  

ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ.


ಸರ್ವೇಶನ ಶಕ್ತಿಯಿಂದ ಸರ್ವವನ್ನೂ ಸಾಧಿಸುವ ಸಾಮರ್ಥ್ಯ ನನಗಿದೆ.


ದೇವರ ಮಹಿಮಾಶಕ್ತಿಯಿಂದ ನೀವು ಬಲಗೊಂಡು ಎಲ್ಲವನ್ನೂ ತಾಳ್ಮೆಯಿಂದಲೂ ಸಮಾಧಾನದಿಂದಲೂ ಸಹಿಸಿಕೊಳ್ಳುವಿರಿ.


ಬಲಿಷ್ಠರಾಗುವರಾ ಜನರು ಸರ್ವೇಶ್ವರನಲಿ ಹೆಚ್ಚಳಪಡುವರು ಆತನ ನಾಮದಲಿ,” ನುಡಿದಿಹನು ಸರ್ವೇಶ್ವರ ಈ ರೀತಿಯಲಿ.


ಬಳಲಿ ಬೆಂಡಾದವರೆಲ್ಲರನ್ನು ತಣಿಸುವೆನು ಹಾಗೂ ತೃಪ್ತಿಪಡಿಸುವೆನು.”


ಅನುಗ್ರಹಿಸಲಿ ಪ್ರಭು ತನ್ನ ಜನರಿಗೆ‍ ಶಕ್ತಿಯನು I ದಯಪಾಲಿಸಲಿ ತನ್ನ ಪ್ರಜೆಗೆ ಸುಕ್ಷೇಮವನು II


ದಣಿದವರನ್ನು ಹಿತನುಡಿಗಳಿಂದ ತಣಿಸುವಂತೆ ಅನುಗ್ರಹಿಸುತ್ತಾನೆನಗೆ ಸ್ವಾಮಿ ಸರ್ವೇಶ್ವರ ಶಿಕ್ಷಿತರ ನಾಲಗೆಯನು; ಶಿಷ್ಯನೋಪಾದಿ ನಾನು ಆತನನ್ನು ಆಲಿಸುವಂತೆ ಬೆಳಬೆಳಗೂ ನನ್ನನೆಚ್ಚರಿಸಿ ಚೇತನಗೊಳಿಸುತ್ತಾನೆ ನನ್ನ ಕಿವಿಯನು.


ನಿನ್ನ ಕೋಟೆಯ ಬಾಗಿಲು ಕಬ್ಬಿಣದವು ಅವುಗಳ ಅಗುಳಿಗಳು ಕಂಚಿನವು ನೀನಿರುವಷ್ಟು ಕಾಲ ನಿನಗಿರುವುದು ಬಲವು.”


ಅಗ್ನಿಜ್ವಾಲೆಯನ್ನು ಆರಿಸಿದರು; ಖಡ್ಗದ ಬಾಯಿಂದ ತಪ್ಪಿಸಿಕೊಂಡರು; ಬಲಹೀನರಾಗಿದ್ದರೂ ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಶತ್ರುಗಳ ಸೈನ್ಯವನ್ನು ಸದೆಬಡಿದರು.


ಆದರೂ ಯಕೋಬಕುಲದ ಸರ್ವ ಬಲಾಢ್ಯನ ಶಕ್ತಿಯಿಂದ ಇಸ್ರಯೇಲನ ಪೊರೆಬಂಡೆ - ಪರಿಪಾಲಕನ ನಾಮದಿಂದ ನಿಂತಿತು ಸ್ಥಿರವಾಗಿ ಅವನ ಬಿಲ್ಲು ಚುರುಕುಗೊಂಡಿತು ಅವನ ಕೈಗಳ ಬಲ್ಬು.


ಹೀಗಿರಲು, ನಾವು ಎದೆಗುಂದುವುದಿಲ್ಲ. ನಮ್ಮ ಭೌತಿಕ ದೇಹವು ನಶಿಸುತ್ತಿದ್ದರೂ ನಮ್ಮ ಅಂತರಂಗವು ದಿನೇದಿನೇ ನೂತನವಾಗುತ್ತದೆ.


ದೇವರು ಲೆಹೀಯಲ್ಲಿ ಒರಳಬಂಡೆಯನ್ನು ಸೀಳಿ ಅದರೊಳಗಿಂದ ನೀರು ಬರುವಂತೆ ಮಾಡಿದರು. ಅವನು ಕುಡಿದು ಪುನಃ ಚೇತನಗೊಂಡನು. ಆದುದರಿಂದ ಅದಕ್ಕೆ ‘ಏನ್ ಹಕ್ಕೋರೇ’ ಎಂದು ಹೆಸರಾಯಿತು; ಅದು ಇಂದಿನವರೆಗೂ ಲೆಹೀಯಲ್ಲಿದೆ.


ಪರಮ ಪವಿತ್ರಾಲಯದಲ್ಲಿಹ ದೇವಭಯಭಕುತಿಗೆ ಪಾತ್ರ I ಪ್ರಜೆಗೆ ಪರಾಕ್ರಮವೀವ ಇಸ್ರಯೇಲ ದೇವನಿಗೆ ಸ್ತೋತ್ರ II


ಮುರಿದು ಬಿದ್ದಿವೆ ಶೂರರ ಬಿಲ್ಲುಬಾಣಗಳು ದುರ್ಬಲರಾದರೋ ಶೌರ್ಯದ ನಡುಕಟ್ಟಿ ನಿಂತಿಹರು.


ಹೀಗೆ ಎಲ್ಲರೂ, ನಮ್ಮ ಕೈಗಳು ಜೋಲುಬಿದ್ದು ಕೆಲಸ ಮುಗಿಯದೆ ನಿಂತುಹೋಗಲಿ ಎಂದುಕೊಂಡು ನಮ್ಮನ್ನು ಹೆದರಿಸುವುದಕ್ಕೆ ಪ್ರಯತ್ನಿಸಿದರು. ನಾನೋ, “ನನ್ನ ದೇವರೇ, ನನ್ನ ಕೈಗಳನ್ನು ಬಲಪಡಿಸಿ,” ಎಂದು ಪ್ರಾರ್ಥಿಸಿದೆ.


ವಸತಿಯಾಯಿತದು ನಿನ್ನ ಜನಮಂದೆಗೆ I ಆಸ್ಥೆಯಿಂದೊದಗಿಸಿದೆ ದೀನ ದಲಿತರಿಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು