Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 40:31 - ಕನ್ನಡ ಸತ್ಯವೇದವು C.L. Bible (BSI)

31 ಸರ್ವೇಶ್ವರನನ್ನು ಎದುರುನೋಡುವವರು ಹೊಸ ಚೇತನವನ್ನು ಹೊಂದುವರು. ರೆಕ್ಕೆ ಚಾಚಿದ ಹದ್ದುಗಳಂತೆ ಹಾರುವರು ಓಡಿದರೂ ದಣಿಯರು, ನಡೆದರೂ ಬಳಲರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು ಏರುವರು; ಅವರು ಓಡಿ ದಣಿಯರು, ನಡೆದು ಬಳಲರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು [ಏರುವರು]; ಓಡಿ ದಣಿಯರು, ನಡೆದು ಬಳಲರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆದರೆ ಯೆಹೋವನಲ್ಲಿ ಭರವಸೆಯಿಟ್ಟವರು ಮತ್ತೆ ಬಲಹೊಂದುವರು. ಹದ್ದು ಹೊಸಗರಿಗಳನ್ನು ಹೊಂದುವಂತೆ ಅವರು ಹೊಸ ಬಲವನ್ನು ಹೊಂದುವರು. ಅವರು ಓಡಾಡಿದರೂ ಆಯಾಸಗೊಳ್ಳುವದಿಲ್ಲ. ನಡೆದಾಡಿದರೂ ಬಳಲಿಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆದರೆ ಯೆಹೋವ ದೇವರನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು. ಅವರು ಹದ್ದುಗಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಅವರು ಓಡಿ ದಣಿಯರು. ನಡೆದು ಬಳಲರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 40:31
46 ತಿಳಿವುಗಳ ಹೋಲಿಕೆ  

ಹೀಗಿರಲು, ನಾವು ಎದೆಗುಂದುವುದಿಲ್ಲ. ನಮ್ಮ ಭೌತಿಕ ದೇಹವು ನಶಿಸುತ್ತಿದ್ದರೂ ನಮ್ಮ ಅಂತರಂಗವು ದಿನೇದಿನೇ ನೂತನವಾಗುತ್ತದೆ.


ಒಳ್ಳೆಯವುಗಳಿಂದ ತುಂಬಿಸುವನು ನನ್ನ ಜೀವಮಾನವನು I ಪುನರುಜ್ಜೀವನಗೊಳಿಸುವನು ಗರುಡನಂತೆ ನನ್ನ ಯೌವನವನು II


ಆದಕಾರಣ ಇಷ್ಟುಮಂದಿ ಸಾಕ್ಷಿಗಳು ದೊಡ್ಡ ಮೇಘದಂತೆ ನಮ್ಮ ಸುತ್ತಲೂ ಆವರಿಸಿರುವಾಗ, ನಮಗೆ ಅಡ್ಡಿಯಾಗಬಲ್ಲ ಹೊರೆಯನ್ನೂ ಅಂಟಿಕೊಳ್ಳುವ ಪಾಪವನ್ನೂ ತೆಗೆದುಹಾಕಿ, ನಮಗಾಗಿ ನೇಮಿಸಿರುವ ಓಟದ ಸ್ಪರ್ಧೆಯಲ್ಲಿ ನಾವು‍ ಸ್ಥಿರಚಿತ್ತದಿಂದ ಭಾಗವಹಿಸೋಣ.


ಸತ್ಕಾರ್ಯಗಳನ್ನು ಮಾಡುವುದರಲ್ಲಿ ಬೇಸರಪಡದಿರೋಣ, ಎದೆಗುಂದದಿರೋಣ; ಆಗ ಸೂಕ್ತಕಾಲದಲ್ಲಿ ಸತ್ಫಲವನ್ನು ಕೊಯ್ಯುವೆವು.


ಪ್ರತ್ಯಕ್ಷವಾಗದೆ ಇರುವುದನ್ನು ನಾವು ನಿರೀಕ್ಷಿಸುವವರಾಗಿದ್ದರೆ, ಅದಕ್ಕಾಗಿ ತಾಳ್ಮೆಯಿಂದ ಕಾದುಕೊಂಡಿರುತ್ತೇವೆ.


ಆದರೆ ಸರ್ವೇಶ್ವರ ನಿಮಗೆ ಕೃಪೆತೋರಬೇಕೆಂದು ಕಾದಿರುತ್ತಾರೆ. ನಿಮ್ಮನ್ನು ಕರುಣಿಸಲು ಎದ್ದುನಿಂತಿದ್ದಾರೆ. ಅವರು ನ್ಯಾಯಪರರಾದ ದೇವರು, ಅವರಿಗಾಗಿ ಕಾದಿರುವವರೆಲ್ಲರೂ ಧನ್ಯರು.


ಸಾಗುಸಾಗುತ್ತಾ ಬೆಳೆವುದಾ ಯಾತ್ರಿಕರ ಚೇತನ I ಪಡೆವರು ಸಿಯೋನ್ ಗಿರಿಯೊಳು ದೇವಾಧಿದೇವನ ದರ್ಶನ II


ಪ್ರಭುವನು ನಂಬಿ ನಡೆ ಆತನ ಪಥದಲೇ I ಉದ್ಧಾರವಾಗುವೆ, ನಾಡಿಗೊಡೆಯನಾಗುವೆ I ದುಷ್ಟರ ವಿನಾಶವನು ಕಣ್ಣಾರೆ ಕಾಣುವೆ II


ನಿರಾಶರಾಗದೆ ನಿರಂತರವಾಗಿ ಪ್ರಾರ್ಥನೆ ಮಾಡಬೇಕು ಎಂಬುದನ್ನು ಕಲಿಸಲು, ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಈ ಸಾಮತಿಯನ್ನು ಹೇಳಿದರು:


ಇದು ನೆರವೇರಿದಾಗ ಜನರು : “ಇವರೇ ನಮ್ಮ ದೇವರು; ನಮ್ಮನ್ನು ರಕ್ಷಿಸುವರೆಂದು ಇವರನ್ನೇ ನೆಚ್ಚಿಕೊಂಡಿದ್ದೆವು ಇವರೇ ಸರ್ವೇಶ್ವರ; ಇವರನ್ನೇ ನೆಚ್ಚಿಕೊಂಡಿದ್ದೆವು. ಇವರು ನೀಡುವ ರಕ್ಷಣೆಯಲ್ಲಿ ಆನಂದಿಸೋಣ !” ಎಂದು ಹೇಳಿಕೊಳ್ಳುವರು.


ಮೊರೆಯಿಟ್ಟಾಗ ದಯಪಾಲಿಸಿದೆ ಸದುತ್ತರವನು I ಅಧಿಕಮಾಡಿದೆ ನೀನು ನನ್ನಾತ್ಮ ಶಕ್ತಿಯನು II


ಸನ್ಮಾರ್ಗದಲಿ ಮುನ್ನಡೆಸೆನ್ನ ದೇವಾ, ಮುಕ್ತಿದಾತ I ಕಲಿಸೆನಗೆ, ನಿನಗಾಗಿ ಕಾದಿರುವೆ ಸತತ II


ಆಗಲಿ ಆಶಾಭಂಗ ನಿನ್ನೆದುರಾಳಿಗಳಿಗೆ I ಹಾಗಾಗದಿರಲಿ ನಿನ್ನ ನಿರೀಕ್ಷಿಸುವವರಿಗೆ II


'ನಾನು ಈಜಿಪ್ಟಿನವರಿಗೆ ಏನು ಮಾಡಿದೆನೆಂದು ನೀವು ನೋಡಿದ್ದೀರಿ. ಹದ್ದು ತನ್ನ ಮರಿಗಳನ್ನು ರೆಕ್ಕೆಗಳ ಮೇಲೆ ಹೊತ್ತುಕೊಳ್ಳುವಂತೆ ನಾನು ನಿಮ್ಮನ್ನು ಹೊತ್ತು ಈ ನನ್ನ ಸ್ಥಳಕ್ಕೆ ಸೇರಿಸಿದ್ದೇನೆ. ಇದೆಲ್ಲಾ ನಿಮಗೆ ಗೊತ್ತಿದೆ.


ಪಾಪಿಗಳಿಂದ ತಮಗುಂಟಾದ ಕಠಿಣ ವಿರೋಧವನ್ನು ಯೇಸುಸ್ವಾಮಿ ಹೇಗೆ ಸಹಿಸಿಕೊಂಡರೆಂಬುದನ್ನು ಮನಸ್ಸಿನಲ್ಲಿಡಿ. ಆಗ ನೀವು ಬೇಸತ್ತು ಎದೆಗುಂದಲಾರಿರಿ.


ಸನ್ಮಾರ್ಗದಲ್ಲಿ ಮುಂದುವರೆವವನು ಸಜ್ಜನನು ಬಲಗೊಳ್ಳುತ್ತಲೇ ಇರುವನು ಶುದ್ಧಹಸ್ತನು.


ಕಾದಿದ್ದೆನು, ಪ್ರಭುವಿಗಾಗಿ ಕಾದಿದ್ದೆನು I ಕೊನೆಗಾತ ನನ್ನತ್ತ ಬಾಗಿ ಕಿವಿಗೊಟ್ಟನು II


ಹೌದು, ಸಹನಾಶಕ್ತಿ ನಿನಗಿದೆ. ಬೇಸರಗೊಳ್ಳದೆ ನನ್ನ ಹೆಸರಿನ ನಿಮಿತ್ತ ನೀನು ಕಷ್ಟಸಂಕಟಗಳನ್ನು ತಾಳಿಕೊಂಡೆ.


ನಿರ್ದೋಷ, ನಿಷ್ಕಪಟ ನಡತೆ ನನಗೆ ರಕ್ಷೆ I ನೀನೆ ಪ್ರಭು ನನಗಿರುವ ದೃಢ ನಿರೀಕ್ಷೆ II


ದಾಸನ ಕಣ್ಣು ಯಜಮಾನನತ್ತ I ದಾಸಿಯ ಕಣ್ಣು ಯಜಮಾನಿಯತ್ತ II ನನ್ನ ಕಣ್ಣು ಸ್ವಾಮಿದೇವನತ್ತ I ಆತನ ಕಟಾಕ್ಷವನ್ನು ನಿರೀಕ್ಷಿಸುತ್ತಾ II


ಬಲಿಷ್ಠರಾಗುವರಾ ಜನರು ಸರ್ವೇಶ್ವರನಲಿ ಹೆಚ್ಚಳಪಡುವರು ಆತನ ನಾಮದಲಿ,” ನುಡಿದಿಹನು ಸರ್ವೇಶ್ವರ ಈ ರೀತಿಯಲಿ.


ದೇವರ ಕರುಣೆಯಿಂದ ಈ ಸೇವೆಯನ್ನು ಕೈಗೊಂಡಿರುವ ನಾವು ಧೈರ್ಯಗೆಟ್ಟು ಹಿಂಜರಿಯುವುದಿಲ್ಲ.


ಯಕೋಬನ ಮನೆತನದವರಿಗೆ ತನ್ನ ಮುಖವನ್ನು ಮರೆಯಿಸಿಕೊಂಡು ಇರುವ ಸ್ವಾಮಿಗಾಗಿ ಕಾದಿರುವೆನು. ಸ್ವಾಮಿಯನ್ನೇ ಎದುರು ನೋಡುತ್ತಿರುವೆನು.


ಅವರಿರುವರು ಪ್ರಭುವಿನಾಲಯದಲೆ ನೆಟ್ಟ ಸಸಿಗಳಂತೆ I ನಮ್ಮ ದೇವಾಂಗಳದಿ ಹುಲುಸಾಗಿ ಬೆಳೆವ ಮರಗಳಂತೆ I ಫಲಿಸುವರು ಮುಪ್ಪಿನಲೂ, ಶೋಭಿಸುವರು ಪಚ್ಚೆಪಸಿರಂತೆ II


ಸಾವಿನಿಂದ ಜೀವಕ್ಕೆ ಎಬ್ಬಿಸಲಾದ ದೇವರ ಪುತ್ರ ಯೇಸು ಸ್ವರ್ಗದಿಂದ ಪುನರಾಗಮಿಸುವುದನ್ನು ನೀವು ಹೇಗೆ ಎದುರುನೋಡುತ್ತಿದ್ದೀರಿ - ಎಂಬುದನ್ನು ಆ ಜನರೇ ಹೇಳುತ್ತಾರೆ. ಈ ಯೇಸುವೇ ಮುಂದೆ ಬರಲಿರುವ ದೈವಕೋಪದಿಂದ ನಮ್ಮನ್ನು ಪಾರುಮಾಡುವವರು.


ಆಗ ಸಂಸೋನನು ಸರ್ವೇಶ್ವರನಿಗೆ, “ಪ್ರಭು ಸರ್ವೇಶ್ವರಾ, ಫಿಲಿಷ್ಟಿಯರು ಕಿತ್ತುಹಾಕಿದ ನನ್ನ ಎರಡು ಕಣ್ಣುಗಳಲ್ಲಿ ಒಂದಕ್ಕಾದರು ನಾನು ಅವರಿಗೆ ಮುಯ್ಯಿ ತೀರಿಸುವ ಹಾಗೆ ನನ್ನನ್ನು ಈ ಸಾರಿ ಬಲಪಡಿಸಿರಿ,” ಎಂದು ಮೊರೆಯಿಟ್ಟನು.


ಹೇ ಪ್ರಭೂ, ನಿನ್ನ ಗುಣಗಾನ ಮಂಗಳಕರ I ಪರಾತ್ಪರನೆ, ನಿನ್ನ ನಾಮಭಜನೆ ಹಿತಕರ II


ನಲ್ಲನನ್ನು ಒರಗಿಕೊಂಡು ಅಡವಿಯಿಂದ ಬರುವ ಈಕೆ ಯಾರು? ನಲ್ಲೆ : ಎಬ್ಬಿಸಿದೆ ನಿನ್ನನ್ನು ಸೇಬುಮರದ ಅಡಿಯಲಿ ನಿನ್ನ ತಾಯಿ ಪ್ರಸವವೇದನೆಯಿಂದ ಹಡೆದಾ ಸ್ಥಳದಲಿ ನಿನ್ನನ್ನು ಆಕೆ ಗರ್ಭಧರಿಸಿದಾ ಜಾಗದಲಿ.


ಮೊದಲನೆಯ ಜೀವಿ ಸಿಂಹದಂತೆ ಇತ್ತು. ಎರಡನೆಯ ಜೀವಿ ಹೋರಿಯಂತಿತ್ತು. ಮೂರನೆಯ ಜೀವಿಯ ಮುಖವು ಮನುಷ್ಯನ ಮುಖದಂತಿತ್ತು ಮತ್ತು ನಾಲ್ಕನೆಯ ಜೀವಿಯು ಹಾರುತ್ತಿರುವ ಗರುಡ ಪಕ್ಷಿಯಂತಿತ್ತು.


ಆಗ ಆ ಮಹಿಳೆ ಅರಣ್ಯದಲ್ಲಿರುವ ತನ್ನ ಸ್ಥಳಕ್ಕೆ ಹಾರಿಹೋಗುವಂತೆ ದೊಡ್ಡ ಗರುಡಪಕ್ಷಿಗಿರುವಂಥ ಎರಡು ರೆಕ್ಕೆಗಳನ್ನು ಆಕೆಗೆ ಕೊಡಲಾಯಿತು. ಅಲ್ಲಿ ಘಟಸರ್ಪದ ಕಣ್ಣಿಗೆ ಬೀಳದೆ ಮೂರುವರೆ ವರ್ಷಗಳ ಕಾಲ ಪೋಷಣೆ ಹೊಂದುವಂತಾಯಿತು.


ಗೂಡಿನಿಂದ ಮರಿಗಳನು ಹೊರಡಿಸಿದಾ ಗರುಡಪಕ್ಷಿ ಹಾರಾಡಿ ಅವು ಬೀಳದಂತೆ ಕಾಯುತ್ತದೆ ರೆಕ್ಕೆಗಳನು ಚಾಚಿ. ಅಂತೆಯೆ ಸರ್ವೇಶ್ವರ ಕಾಪಾಡಿದ ಇಸ್ರಯೇಲರನು ಕೈಚಾಚಿ.


ದೂರದೇಶದವರೇ, ಮೌನದಿಂದ ನನಗೆ ಕಿವಿಗೊಡಿ; ರಾಷ್ಟ್ರಗಳು ಎಷ್ಟೇ ಬಲಿಷ್ಠರಾಗಿರಲಿ ಬಂದು ಮಾತಾಡಲಿ ಸಮೀಪದಲಿ. ಒಟ್ಟಿಗೆ ಸೇರೋಣ ನ್ಯಾಯಸ್ಥಾನದಲಿ.


ತಮ್ಮನ್ನು ಕಾದು ಎದುರುನೋಡುವವರ ಪರವಾಗಿ ಕಾರ್ಯಗತರಾಗುವಂಥ ದೇವರು, ನಿಮ್ಮನ್ನು ಬಿಟ್ಟರೆ, ಯಾರಿದ್ದಾರೆ? ಅಂಥಾ ದೇವರನ್ನು ಲೋಕಾದಿಯಿಂದ ಯಾರೂ ಕಂಡಿಲ್ಲ, ಅಂಥವರು ಯಾರ ಕಿವಿಗೂ ಬೀಳಲಿಲ್ಲ, ಯಾವ ಕಣ್ಣಿಗೂ ಕಾಣಿಸಲಿಲ್ಲ.


ಮೋವಾಬು ಹಾಳಾಗಿದೆ ಸುಟ್ಟುಹೋದ ಅದರ ನಗರಗಳಿಂದ ಹೊಗೆ ಎದ್ದಿದೆ. ಅದರ ಸರ್ವಶ್ರೇಷ್ಟ ಯುವಕರು ಹೋಗಿದ್ದಾರೆ ಹತರಾಗುವುದಕ್ಕೆ, ಸರ್ವಶಕ್ತ ಸರ್ವೇಶ್ವರನೆಂಬ ನಾಮವುಳ್ಳ ರಾಜಾಧಿರಾಜನ ನುಡಿಯಂತೆ.


ನಿನ್ನ ಕೋಟೆಯ ಬಾಗಿಲು ಕಬ್ಬಿಣದವು ಅವುಗಳ ಅಗುಳಿಗಳು ಕಂಚಿನವು ನೀನಿರುವಷ್ಟು ಕಾಲ ನಿನಗಿರುವುದು ಬಲವು.”


ಮೋಶೆ ನನ್ನನ್ನು ಕಳಿಸಿದಾಗ ನನಗೆಷ್ಟು ಬಲವಿತ್ತೋ ಈಗಲೂ ಅಷ್ಟೇ ಬಲವಿದೆ. ಯುದ್ಧಮಾಡುವುದಕ್ಕೂ ವಿಶೇಷ ಕಾರ್ಯಗಳನ್ನು ನಿರ್ವಹಿಸುವುದಕ್ಕೂ ನನಗೆ ಮುಂಚಿನಂತೆಯೇ ಶಕ್ತಿಯಿದೆ.


ಜಯವ ನೀಡು ಪ್ರಭು, ಅರಸನಿಗೆ I ಕಿವಿಗೊಡು ನೀ, ನಮ್ಮ ಪ್ರಾರ್ಥನೆಗೆ II


ಸ್ವರ್ಗಸೇನಾಧೀಶ್ವರ, ಸ್ವಾಮಿದೇವ ಕಿವಿಗೊಡು ನನ್ನ ಮೊರೆಗೆ I ಯಕೋಬ ಕುಲದೇವಾ, ನನ್ನ ಪ್ರಾರ್ಥನೆ ಬೀಳಲಿ ನಿನ್ನ ಕಿವಿಗೆ II


ಅವು ಯಾವುವೆಂದರೆ: ಆಕಾಶದಲ್ಲಿ ಹದ್ದಿನ ಹಾದಿ, ಬಂಡೆಯ ಮೇಲೆ ಸರ್ಪದ ಸರಣಿ, ಸಾಗರದ ನಡುವೆ ಹಡಗಿನ ಮಾರ್ಗ, ಯುವಕ-ಯುವತಿಯರ ಪರಸ್ಪರ ಆಕರ್ಷಣೆ.


ಪರಮಪಾವನವಾಗಿರುವ ಇಸ್ರಯೇಲಿನ ಸರ್ವೇಶ್ವರ ಸ್ವಾಮಿಯಾದ ನಾನು ನಿಮಗೆ ಹೇಳುವುದೇನೆಂದರೆ : “ನೀವು ಪಶ್ಚಾತ್ತಾಪಪಟ್ಟು ನನಗೆ ಅಭಿಮುಖವಾಗಿ ನೆಮ್ಮದಿಯಿಂದಿದ್ದರೆ ಉದ್ಧಾರವಾಗುವಿರಿ. ಶಾಂತಿಸಮಾಧಾನ ಮತ್ತು ಭಕ್ತಿಭರವಸೆಯಲ್ಲೇ ಶಕ್ತಿಯನ್ನು ಪಡೆಯುವಿರಿ.” ಆದರೆ ನೀವು ಒಪ್ಪಿಕೊಂಡಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು