Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 40:8 - ಕನ್ನಡ ಸತ್ಯವೇದವು C.L. Bible (BSI)

8 ಒಣಗಿ ಹೋಗುವುದಾ ಹುಲ್ಲು, ಬಾಡಿಹೋಗುವುದಾ ಹೂವು, ನಮ್ಮ ದೇವರ ನುಡಿಯಾದರೋ ಇರುವುದು ಚಿರಕಾಲವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹುಲ್ಲು ಒಣಗಿ ಹೋಗುವುದು, ಹೂವು ಬಾಡಿ ಹೋಗುವುದು, ನಮ್ಮ ದೇವರ ಮಾತೋ ಸದಾಕಾಲವೂ ಇರುವುದು” ಎಂದು ಉತ್ತರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹುಲ್ಲು ಒಣಗಿಹೋಗುವದು, ಹೂವು ಬಾಡಿಹೋಗುವದು, ನಮ್ಮ ದೇವರ ಮಾತೋ ಸದಾಕಾಲವೂ ಇರುವದು ಎಂದು ಉತ್ತರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಜನರೆಲ್ಲರೂ ಹುಲ್ಲಿನಂತಿದ್ದಾರೆ. ಹುಲ್ಲು ಸಾಯುತ್ತದೆ. ಪುಷ್ಪಗಳು ಉದುರುತ್ತವೆ. ಆದರೆ ನಮ್ಮ ದೇವರ ಮಾತುಗಳು ಶಾಶ್ವತವಾಗಿವೆ” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಹುಲ್ಲು ಒಣಗಿಹೋಗುವುದು, ಹೂವು ಬಾಡಿಹೋಗುವುದು. ಆದರೆ ನಮ್ಮ ದೇವರ ವಾಕ್ಯವಾದರೋ ಸದಾಕಾಲ ಇರುವುದು,” ಎಂದು ಉತ್ತರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 40:8
15 ತಿಳಿವುಗಳ ಹೋಲಿಕೆ  

ಭೂಮ್ಯಾಕಾಶಗಳು ಗತಿಸಿಹೋಗುವುವು, ಆದರೆ ನನ್ನ ಮಾತುಗಳು ಶಾಶ್ವತವಾಗಿ ಉಳಿಯುವುವು.


ಈ ವಾಕ್ಯವೇ ನಿಮಗೆ ಸಾರಲಾದ ಶುಭಸಂದೇಶ.


ಭೂಮ್ಯಾಕಾಶಗಳು ಗತಿಸಿಹೋಗುವುವು; ಆದರೆ ನನ್ನ ಮಾತುಗಳು ಶಾಶ್ವತವಾಗಿ ನಿಲ್ಲುವುವು.


ಭೂಮ್ಯಾಕಾಶಗಳು ಉಳಿದಿರುವ ತನಕ ಧರ್ಮಶಾಸ್ತ್ರವೆಲ್ಲ ನೆರವೇರುವುದೇ ಹೊರತು ಅದರಲ್ಲಿ ಒಂದು ಚಿಕ್ಕ ಅಕ್ಷರವಾಗಲಿ, ಚುಕ್ಕೆಯಾಗಲಿ ನಿರರ್ಥಕವಾಗದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ದೇವರ ವಾಕ್ಯವನ್ನು ಪಡೆದವರು ದೇವರುಗಳೇ ಎಂದು ಕರೆಯಲಾಗಿದೆ. ಹೀಗೆ ಪವಿತ್ರಗ್ರಂಥದಲ್ಲೇ ಲಿಖಿತವಾಗಿರುವುದು ನಿರರ್ಥಕವೇನೂ ಅಲ್ಲ.


ಆದರೂ ನನ್ನ ದಾಸರಾದ ಪ್ರವಾದಿಗಳಿಗೆ ನಾನು ಕೊಟ್ಟ ಆಜ್ಞೆಗಳು, ವಿಧಿನಿಯಮಗಳು ನಿಮ್ಮ ಪಿತೃಗಳ ಮರಣದ ನಂತರವೂ ಶಾಶ್ವತವಾಗಿ ಉಳಿದಿವೆಯಲ್ಲವೆ? ಅವರು ಪಶ್ಚಾತ್ತಾಪಪಟ್ಟು, ‘ಸೇನಾಧೀಶ್ವರ ಸರ್ವೇಶ್ವರ ನಮ್ಮ ದುರ್ಮಾರ್ಗ ಹಾಗೂ ದುಷ್ಕೃತ್ಯಗಳಿಗೆ ತಕ್ಕಂತೆ ಏನು ಮಾಡಬೇಕೆಂದು ಸಂಕಲ್ಪಿಸಿದ್ದರೋ, ಅದನ್ನು ನಮಗೆ ಮಾಡಿಯೇ ಮಾಡಿದ್ದಾರೆ’ ಎಂದು ಹೇಳಿಕೊಂಡರಲ್ಲವೆ?”


ಅವರೊಡನೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಇದೇ: ನಿಮ್ಮ ಮೇಲೆ ನೆಲೆಸಿರುವ ನನ್ನ ಆತ್ಮವೂ ಮತ್ತು ನಿಮ್ಮ ಬಾಯಲ್ಲಿ ನಾನಿಟ್ಟಿರುವ ವಾಕ್ಯಗಳೂ ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ, ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ, ಇಂದಿನಿಂದ ಎಂದಿಗೂ ತೊಲಗುವುದಿಲ್ಲ.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ನೆರೆದಿದ್ದ ಜನರು ಪ್ರತ್ಯುತ್ತರವಾಗಿ, “ಅಭಿಷಿಕ್ತನಾದ ಲೋಕೋದ್ಧಾರಕ ಸದಾಕಾಲ ಇರುವನೆಂದು ಧರ್ಮಶಾಸ್ತ್ರವೇ ತಿಳಿಸುತ್ತದೆ. ಹೀಗಿರುವಲ್ಲಿ, ನರಪುತ್ರನನ್ನು ಮೇಲೇರಿಸಬೇಕಾಗಿದೆ ಎಂದು ನೀನು ಹೇಳುತ್ತೀಯಲ್ಲಾ, ಅದು ಹೇಗೆ? ಆ ನರಪುತ್ರನು ಯಾರು?” ಎಂದು ಕೇಳಿದರು.


ನರಮಾನವರಂತೆ ದೇವರು ಎರಡು ಮಾತಿನವರಲ್ಲ ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಆತ ನುಡಿದಂತೆ ನಡೆಯದಿರುತ್ತಾನೋ?


ಯುಗಯುಗಾಂತರಕು ದೃಢವಾಗಿರುವುವು I ಸತ್ಯನೀತಿಗಳು ಅವುಗಳಿಗೆ ಅಡಿಪಾಯವು II


‘ನಾನು ನಿಮ್ಮನ್ನು ಈ ಸ್ಥಳದಲ್ಲೇ ದಂಡಿಸುವೆನು ಎಂಬುದಕ್ಕೆ ಒಂದು ಗುರುತು ಕಾಣುವುದು. ನನ್ನ ಮಾತು ಈಡೇರಿ ನಿಮಗೆ ಕೇಡು ಉಂಟಾಗುವುದು ಎಂಬುದಾಗಿ ಅದರಿಂದಲೇ ನಿಮಗೆ ತಿಳಿದುಬರುವುದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು