Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 40:9 - ಕನ್ನಡ ಸತ್ಯವೇದವು C.L. Bible (BSI)

9 ಪರ್ವತವನ್ನೇರು ಶುಭಸಂದೇಶಕಳಾದ ಸಿಯೋನೇ, ಧ್ವನಿಯೇರಿಸು, ಶುಭವಾರ್ತೆ ಸಾರಬಲ್ಲ ಜೆರುಸಲೇಮೇ, ಧ್ವನಿಯೇರಿಸು, ನಿರ್ಭಯದಿಂದ ಏರಿಸು ‘ಇಗೋ, ನಿಮ್ಮ ದೇವರು’ ಎಂದು ಜೂದ ನಗರಗಳಿಗೆ ಸಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಶುಭಸಮಾಚಾರವನ್ನು ತಿಳಿಸಬಲ್ಲ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಸುವರ್ತಮಾನವನ್ನು ಪ್ರಕಟಿಸಬಲ್ಲ ಯೆರೂಸಲೇಮೇ, ನಿನ್ನ ಧ್ವನಿಯನ್ನು ಗಟ್ಟಿಯಾಗಿ ಎತ್ತು, ನಿರ್ಭಯವಾಗಿ ಎತ್ತಿ, ಯೆಹೂದದ ಪಟ್ಟಣಗಳಿಗೆ, “ಇಗೋ, ನಿಮ್ಮ ದೇವರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಶುಭಸಮಾಚಾರವನ್ನು ತಿಳಿಸಬಲ್ಲ ಚೀಯೋನೇ, ಉನ್ನತಪರ್ವತವನ್ನು ಹತ್ತಿಕೋ; ಸುವರ್ತಮಾನವನ್ನು ಪ್ರಕಟಿಸಬಲ್ಲ ಯೆರೂಸಲೇಮೇ, ನಿನ್ನ ಧ್ವನಿಯನ್ನು ಗಟ್ಟಿಯಾಗಿ ಎತ್ತು, ನಿರ್ಭಯವಾಗಿ ಎತ್ತಿ, ಯೆಹೂದದ ಪಟ್ಟಣಗಳಿಗೆ - ಇಗೋ, ನಿಮ್ಮ ದೇವರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಚೀಯೋನೇ, ಸಾರಿ ತಿಳಿಸಲು ನಿನಗೆ ಒಂದು ಶುಭವಾರ್ತೆಯಿದೆ. ಉನ್ನತ ಪರ್ವತಕ್ಕೆ ಏರಿಹೋಗಿ ಶುಭವಾರ್ತೆಯನ್ನು ಗಟ್ಟಿಯಾಗಿ ಸಾರು! ಜೆರುಸಲೇಮೇ, ನಿನಗೆ ತಿಳಿಸಲು ಒಳ್ಳೆಯ ವಾರ್ತೆ ಇದೆ. ಹೆದರಬೇಡ, ಅದನ್ನು ಗಟ್ಟಿಯಾಗಿ ಸಾರು. ಯೆಹೂದದ ಎಲ್ಲಾ ನಗರಗಳಲ್ಲಿ ತಿಳಿಸು: “ಇಗೋ! ನಿನ್ನ ದೇವರು ಇಲ್ಲಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಶುಭಸಮಾಚಾರವನ್ನು ತಿಳಿಸುವ ಚೀಯೋನೇ, ನೀನು ಉನ್ನತ ಪರ್ವತವನ್ನು ಏರು. ಶುಭಸಮಾಚಾರವನ್ನು ತಿಳಿಸುವ ಯೆರೂಸಲೇಮೇ, ಬಲವಾಗಿ ನಿನ್ನ ಧ್ವನಿ ಎತ್ತು, ಭಯಪಡಬೇಡ. ಯೆಹೂದದ ಪಟ್ಟಣಗಳಿಗೆ, “ಇಗೋ, ನಿನ್ನ ದೇವರು!” ಎಂದು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 40:9
31 ತಿಳಿವುಗಳ ಹೋಲಿಕೆ  

ದೇವರೇ ಉದ್ಧಾರಕನೆನಗೆ ಆತನಲ್ಲಿದೆ ನನಗೆ ನಿರ್ಭೀತ ನಂಬಿಕೆ. ದೇವಾದಿದೇವನೇ ಎನಗೆ ಶಕ್ತಿ ಆತನೆನ್ನ ಕೀರ್ತನೆಯ ವ್ಯಕ್ತಿ ತಂದಿಹನಾತ ಎನಗೆ ಮುಕ್ತಿ.”


ಇದು ನೆರವೇರಿದಾಗ ಜನರು : “ಇವರೇ ನಮ್ಮ ದೇವರು; ನಮ್ಮನ್ನು ರಕ್ಷಿಸುವರೆಂದು ಇವರನ್ನೇ ನೆಚ್ಚಿಕೊಂಡಿದ್ದೆವು ಇವರೇ ಸರ್ವೇಶ್ವರ; ಇವರನ್ನೇ ನೆಚ್ಚಿಕೊಂಡಿದ್ದೆವು. ಇವರು ನೀಡುವ ರಕ್ಷಣೆಯಲ್ಲಿ ಆನಂದಿಸೋಣ !” ಎಂದು ಹೇಳಿಕೊಳ್ಳುವರು.


ಶುಭಸಂದೇಶದ ಸತ್ಯಾರ್ಥವನ್ನು ನಿರ್ಭೀತನಾಗಿ ಸಾರಲು ಸೂಕ್ಷ್ಮವಾದ ಮಾತುಗಳನ್ನು ದೇವರು ನನಗೆ ದಯಪಾಲಿಸಲೆಂದು ನನಗೋಸ್ಕರ ಪ್ರಾರ್ಥಿಸಿರಿ.


ನನ್ನ ಮೇಲಿದೆ ಸರ್ವೇಶ್ವರ ಸ್ವಾಮಿಯ ಆತ್ಮ; ನನಗೆ ಅಭಿಷೇಕಮಾಡಿ, ಕಳುಹಿಸಿಹನು ಆತ : ದೀನದಲಿತರಿಗೆ ಶುಭಸಂದೇಶ ಬೋಧಿಸಲೆಂದೆ ಮನನೊಂದವರನು ಸಂತೈಸಿ ಗುಣಪಡಿಸಲೆಂದೆ ಬಂಧಿತರಿಗೆ ಬಿಡುಗಡೆಯನು ಪ್ರಕಟಿಸಲೆಂದೆ; ಸೆರೆಯಾಳುಗಳಿಗೆ ಬಂಧವಿಮುಕ್ತಿಯಾಗುವುದನು,


ನ್ಯಾಯನೀತಿಯ ನಿಮಿತ್ತ ಹಿಂಸೆಯನ್ನು ಅನುಭವಿಸಬೇಕಾಗಿ ಬಂದರೂ ನೀವು ಭಾಗ್ಯವಂತರು. ಮಾನವರ ಬೆದರಿಕೆಗೆ ಹೆದರಬೇಡಿ, ಕಳವಳ ಪಡಬೇಡಿ.


ನಿಜವಾಗಿಯೂ ನಮ್ಮ ಧರ್ಮದ ನಿಗೂಢಾರ್ಥ ಶ್ರೇಷ್ಠವಾದದ್ದು ಎಂಬುದು ನಿಸ್ಸಂದೇಹವಾದ ವಿಷಯ. “ನರಮಾನವ ರೂಪದಲಿ ಪ್ರತ್ಯಕ್ಷನಾಗಿ ದೇವರಿಗೆ ಪ್ರಿಯನೆಂದು ಪವಿತ್ರಾತ್ಮನಿಂದ ಪ್ರಕಟಿತನಾಗಿ ದೇವದೂತರಿಗೆ ಪ್ರದರ್ಶಿತವಾಗಿ ಅನ್ಯಜನರಿಗೆ ಪ್ರಬೋಧಿತನಾಗಿ ಜಗದಲ್ಲೆಲ್ಲೂ ವಿಶ್ವಾಸಪಡೆದವನಾಗಿ ಸ್ವರ್ಗಕ್ಕೇರಿದಾತ ಮಹಿಮಾನ್ವಿತ ಯೇಸುಕ್ರಿಸ್ತ.


ಈಗ ನನ್ನದೊಂದು ಪ್ರಶ್ನೆ: “ಇಸ್ರಯೇಲರಿಗೆ ಶುಭಸಂದೇಶವನ್ನು ಕೇಳುವ ಸಂದರ್ಭ ಇರಲಿಲ್ಲವೆ?” ನಿಶ್ಚಯವಾಗಿ ಇತ್ತು. ಪವಿತ್ರಗ್ರಂಥದಲ್ಲಿ ಹೇಳಿರುವಂತೆ: “ಸಾರುವವರ ಧ್ವನಿ ಜಗದಲ್ಲೆಲ್ಲಾ ಹರಡಿತು. ಅವರ ನುಡಿ ಭೂಮಿಯ ತುತ್ತತುದಿಯನ್ನು ಮುಟ್ಟಿತು.”


ಪ್ರಭುವೇ, ಇಗೋ, ಇವರು ನಮ್ಮನ್ನು ಬೆದರಿಸುತ್ತಿದ್ದಾರೆ; ನಿಮ್ಮ ಸಂದೇಶವನ್ನು ಧೈರ್ಯವಾಗಿ ಸಾರಲು ಶರಣರಾದ ನಮಗೆ ನೆರವು ನೀಡಿರಿ.


ಅವಿದ್ಯಾವಂತರು ಹಾಗೂ ಜನಸಾಮಾನ್ಯರು ಆಗಿದ್ದರೂ, ಇವರು ಇಷ್ಟು ಧೈರ್ಯಶಾಲಿಗಳಾಗಿರುವುದನ್ನು ಕಂಡು ಸಭೆಯ ಸದಸ್ಯರು ಚಕಿತರಾದರು; ಯೇಸುವಿನ ಸಂಗಡಿಗರೆಂದು ಇವರ ಗುರುತು ಹಚ್ಚಿದರು.


ಆಗ ಪೇತ್ರನು ಇತರ ಹನ್ನೊಂದು ಮಂದಿ ಪ್ರೇಷಿತರೊಡನೆ ಎದ್ದುನಿಂತು, ಜನಸಮೂಹವನ್ನು ಉದ್ದೇಶಿಸಿ, ಗಟ್ಟಿಯಾದ ಧ್ವನಿಯಿಂದ ಹೀಗೆಂದು ಪ್ರಬೋಧಿಸಿದನು: “ಯೆಹೂದ್ಯ ಸ್ವಜನರೇ, ಜೆರುಸಲೇಮಿನ ಸಕಲ ನಿವಾಸಿಗಳೇ, ನನಗೆ ಕಿವಿಗೊಡಿ. ಈ ಘಟನೆಯ ಅರ್ಥ ನಿಮಗೆ ಮನದಟ್ಟಾಗಲಿ.


ಅಲ್ಲದೆ ಜನರು ಪಾಪಪರಿಹಾರ ಪಡೆಯಬೇಕಾದರೆ, ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖರಾಗಿ, ದೈವಾಭಿಮುಖಿಗಳಾಗಬೇಕೆಂತಲೂ ಈ ಸಂದೇಶವನ್ನು ಜೆರುಸಲೇಮಿನಿಂದ ಮೊದಲ್ಗೊಂಡು ಎಲ್ಲಾ ಜನಾಂಗಗಳಿಗೂ ಆತನ ಹೆಸರಿನಲ್ಲೇ ಪ್ರಕಟಿಸಬೇಕೆಂತಲೂ ಮೊದಲೇ ಲಿಖಿತವಾಗಿತ್ತು.


“ಲೆಬನೋನ್ ಬೆಟ್ಟವನ್ನು ಹತ್ತಿ ಬೊಬ್ಬೆಯಿಡು ! ಬಾಷಾನಿನಲ್ಲಿ ಮೊರೆಯಿಡು ! ಅಬಾರೀಮಿನಲ್ಲಿ ಕಿರುಚಾಡು ! ಏಕೆಂದರೆ ನಿನ್ನ ಮಿಂಡರೆಲ್ಲ ಹಾಳಾಗಿಹೋದರು !


“ನಿಮ್ಮ ಉಪವಾಸದ ಪರಿಣಾಮಗಳು ಇಷ್ಟೆ : ವ್ಯಾಜ್ಯ, ಕಲಹ, ಗುದ್ದಾಟ. ಇಲ್ಲಿಯವರೆಗೆ ನೀವು ಮಾಡಿದಂತೆ ಉಪವಾಸಮಾಡಿದರೆ, ನಿಮ್ಮ ಪ್ರಾರ್ಥನೆ ಪರಲೋಕವನ್ನು ಮುಟ್ಟುವುದಿಲ್ಲ.


“ನಾನೆ, ನಾನೆ ನಿನ್ನನು ಸಂತೈಸುವವನಾಗಿರೆ, ನೀ ಭಯಪಡುವುದೇಕೆ ಮರ್ತ್ಯನಾದ ಮಾನವನಿಗೆ? ನೀ ಹೆದರಿ ನಡುಗುವುದೇಕೆ ಹುಲುಮಾನವನಿಗೆ?


“ಕಿವಿಗೊಟ್ಟು ಕೇಳಿರಿ ಸದ್ಧರ್ಮದ ಸುಜ್ಞಾನಿಗಳೇ, ನನ್ನ ಬೋಧೆಯಲ್ಲಿ ಶ್ರದ್ಧೆಯಿಡುವವರೇ, ಹೆದರಬೇಡಿ ಮನುಜರಾಡುವ ದೂರಿಗೆ ಅಂಜದಿರಿ ಅವರ ನಿಂದೆದೂಷಣೆಗೆ.


ಕೇಳಿ, ಇದನ್ನು ಮೊದಲು ತಿಳಿಸಿದವನು ನಾನೇ ಸಿಯೋನಿಗೆ; ಶುಭಸಂದೇಶಕ ದೂತನನ್ನು ಕಳುಹಿಸಿದವನು ನಾನೇ ಜೆರುಸಲೇಮಿಗೆ.


ಆಗ ಅಬೀಯನು ಎಫ್ರಯಿಮ್ ಪರ್ವತಪ್ರದೇಶದಲ್ಲಿರುವ ಚೆಮಾರೈಮೆಂಬ ಬೆಟ್ಟದಲ್ಲಿ ನಿಂತು, “ಯಾರೊಬ್ಬಾಮನೇ, ಎಲ್ಲಾ ಇಸ್ರಯೇಲರೇ, ನನ್ನ ಮಾತಿಗೆ ಕಿವಿಗೊಡಿ;


ಯೋತಾಮನು ಇದನ್ನು ಕೇಳಿ, ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ನಿಂತು ಗಟ್ಟಿಯಾದ ಧ್ವನಿಯಿಂದ ಹೀಗೆಂದನು: “ಶೆಕೆಮಿನ ಜನರೇ, ನನ್ನ ಮಾತಿಗೆ ಕಿವಿಗೊಡಿ; ಆಗ ದೇವರೂ ನಿಮ್ಮ ಮೊರೆಗೆ ಕಿವಿಗೊಡುವರು:


ಜುದೇಯ ನಾಡಿನ ಅರಸರಾಗಿದ್ದ ಉಜ್ಜೀಯ, ಯೋತಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಜುದೇಯ ಮತ್ತು ಜೆರುಸಲೇಮ್ ನಗರವನ್ನು ಕುರಿತು ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ ಇದು :


ಉಲ್ಲಾಸಿಸಲಿ ಅದು ಹುಲುಸಾಗಿ ಹೂಬಿಟ್ಟು ಹೌದು, ಸಂತಸ ಸಂಗೀತ ಹಾಡುವಷ್ಟು, ದೊರಕಲಿ ಅದಕ್ಕೆ ಲೆಬನೋನಿನ ಮಹಿಮೆಯು ಕರ್ಮೆಲಿನ ಮತ್ತು ಶಾರೋನಿನ ವೈಭವವು. ಕಾಣುವುವು ಸರ್ವೇಶ್ವರನ ಮಹಿಮೆಯನು ನೋಡುವುವು ಇವೆಲ್ಲ ನಮ್ಮ ದೇವರ ವೈಭವವನು.


ನನ್ನ ದಾಸನ ಮಾತನ್ನಾದರೋ ದೃಢೀಕರಿಸುವವನು ನಾನೆ ನನ್ನ ದೂತರ ಯೋಜನೆಯನ್ನು ಸಫಲಗೊಳಿಸುವವನು ನಾನೆ ಜನನಿವಾಸವಾಗುವುದು ಜೆರುಸಲೇಮ್ ನಗರವು ಪುನಃ ಕಟ್ಟಲ್ಪಡುವುವು ಜುದೇಯ ಪಟ್ಟಣಗಳು. ಅಲ್ಲಿ ಹಾಳುಬಿದ್ದವುಗಳು ಮರಳಿ ಎದ್ದು ನಿಲ್ಲುವುವು.


ನಿಮಗೆ ಇಂಥ ಗತಿ ಬರಲಿ ಎಂದಲ್ಲ, ನಿರೀಕ್ಷೆ ಇರಲಿ ಎಂದೇ ನಾನು ನಿಮ್ಮ ವಿಷಯದಲ್ಲಿ ಮಾಡಿಕೊಂಡ ಆಲೋಚನೆಗಳನ್ನು ನಾನು ಮಾತ್ರ ಬಲ್ಲೆ. ಅವು ಅಹಿತ ಯೋಜನೆಗಳೇನೂ ಅಲ್ಲ, ಹಿತಕರವಾದ ಯೋಜನೆಗಳೇ.


ಇಗೋ, ಶುಭಸಂದೇಶವನ್ನು ಸಾರಲು ದೂತನೊಬ್ಬನು ಪರ್ವತದಿಂದ ಇಳಿದು ಬರುತ್ತಿದ್ದಾನೆ! ಶಾಂತಿ ಸಮಾಧಾನವನ್ನು ಘೋಷಿಸಲು ತ್ವರೆಪಡುತ್ತಿದ್ದಾನೆ! ಜುದೇಯ ನಾಡೇ, ನಿನ್ನ ಹಬ್ಬಗಳನ್ನು ಆಚರಿಸು. ನಿನ್ನ ಹರಕೆಗಳನ್ನು ಸಲ್ಲಿಸು. ಆ ದುಷ್ಟ ಶತ್ರು ಇನ್ನೆಂದಿಗೂ ನಿನಗೆ ಮುತ್ತಿಗೆಹಾಕಲಾರನು. ಅವನು ಸಂಪೂರ್ಣವಾಗಿ ನಾಶವಾಗಿದ್ದಾನೆ!


ಹೀಗಿರಲು ನನ್ನ ಜನರು ನನ್ನ ನಾಮದ ಮಹತ್ವವನ್ನು ಒಂದು ದಿನ ಅರಿತುಕೊಳ್ಳುವರು.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು