Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 41:1 - ಕನ್ನಡ ಸತ್ಯವೇದವು C.L. Bible (BSI)

1 ದೂರದೇಶದವರೇ, ಮೌನದಿಂದ ನನಗೆ ಕಿವಿಗೊಡಿ; ರಾಷ್ಟ್ರಗಳು ಎಷ್ಟೇ ಬಲಿಷ್ಠರಾಗಿರಲಿ ಬಂದು ಮಾತಾಡಲಿ ಸಮೀಪದಲಿ. ಒಟ್ಟಿಗೆ ಸೇರೋಣ ನ್ಯಾಯಸ್ಥಾನದಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದ್ವೀಪನಿವಾಸಿಗಳೇ, ನನ್ನ ಕಡೆಗೆ ತಿರುಗಿ ಮೌನದಿಂದಿರಿ. ಜನಾಂಗಗಳು ತಮ್ಮನ್ನು ಬಲಪಡಿಸಿಕೊಳ್ಳಲಿ; ಸಮೀಪಕ್ಕೆ ಬಂದು ಮಾತನಾಡಲಿ. ನ್ಯಾಯಸ್ಥಾನಕ್ಕೆ ಒಟ್ಟಿಗೆ ಹೋಗೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದ್ವೀಪನಿವಾಸಿಗಳೇ, ನನ್ನ ಕಡೆಗೆ ತಿರುಗಿ ಮೌನದಿಂದಿರಿ; ಜನಾಂಗಗಳು [ಎಷ್ಟಾದರೂ] ತಮ್ಮನ್ನು ಬಲಪಡಿಸಿಕೊಳ್ಳಲಿ; ಸಮೀಪಕ್ಕೆ ಬಂದು ಮಾತಾಡಲಿ; ನ್ಯಾಯಸ್ಥಾನಕ್ಕೆ ಒಟ್ಟಿಗೆ ಹೋಗುವ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಹೇಳುವುದೇನೆಂದರೆ: “ಬಹು ದೂರದಲ್ಲಿರುವ ಜನಾಂಗಗಳವರೇ, ಮೌನವಾಗಿದ್ದು ನನ್ನ ಬಳಿಗೆ ಬನ್ನಿರಿ. ಜನಾಂಗಗಳೇ, ಮತ್ತೆ ಬಲಿಷ್ಠರಾಗಿರಿ. ನನ್ನ ಬಳಿಗೆ ಬಂದು ನನ್ನೊಂದಿಗೆ ಮಾತಾಡಿರಿ. ನಾವು ಒಟ್ಟಾಗಿ ಸೇರಿಬಂದು ಯಾರು ಸರಿ ಎಂದು ವಾದಿಸೋಣ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದ್ವೀಪಗಳೇ, ನನ್ನ ಮುಂದೆ ಮೌನದಿಂದಿರಿ. ರಾಷ್ಟ್ರಗಳು ತಮ್ಮ ಬಲವನ್ನು ನವೀಕರಿಸಲಿ! ಅವರು ನನ್ನ ಸಮೀಪಕ್ಕೆ ಬಂದು ಮಾತನಾಡಲಿ. ನ್ಯಾಯಸ್ಥಾನಕ್ಕೆ ಸಮೀಪಕ್ಕೆ ಒಟ್ಟಾಗಿ ಬರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 41:1
22 ತಿಳಿವುಗಳ ಹೋಲಿಕೆ  

ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: “ಬನ್ನಿರಿ, ಈಗ ವಾದಿಸೋಣ. ನಿಮ್ಮ ಪಾಪಗಳು ಕಡುಗೆಂಪಾಗಿದ್ದರೂ ಹಿಮದಂತೆ ಬಿಳುಪಾಗುವುವು. ರಕ್ತಗೆಂಪಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವುವು.


ಸರ್ವೇಶ್ವರ ಪ್ರಸನ್ನನಾಗಿಹನು ಪವಿತ್ರಾಲಯದಲ್ಲಿ; ಜಗವೆಲ್ಲ ಮೌನತಾಳಲಿ ಆತನ ಸನ್ನಿಧಿಯಲ್ಲಿ.


ಸರ್ವೇಶ್ವರ ತಮ್ಮ ಪರಿಶುದ್ಧಾಲಯದಿಂದ ಹೊರಬರುತ್ತಿದ್ದಾರೆ. ನರಮಾನವರೇ, ಅವರ ಶ್ರೀಸನ್ನಿಧಿಯಲ್ಲಿ ನೀವೆಲ್ಲರು ಮೌನತಾಳಿರಿ.


‘ಶಾಂತರಾಗಿರಿ, ತಿಳಿಯಿರಿ ನಾನು ದೇವನೆಂದು I ಜನಕ್ಕೂ ಜನಾಂಗಕ್ಕೂ ನಾನಧಿಪತಿಯೆಂದು’ II


ರಾಷ್ಟ್ರಗಳೇ, ಬನ್ನಿ, ಹತ್ತಿರಕ್ಕೆ ಬಂದು ಕೇಳಿರಿ; ಜನಾಂಗಗಳೇ, ಕಿವಿಗೊಡಿರಿ; ಜಗವೂ ಅದರಲ್ಲಿರುವ ಸಮಸ್ತವೂ, ಲೋಕವೂ ಅದರ ನಿವಾಸಿಗಳೆಲ್ಲರೂ ಆಲಿಸಲಿ.


ಆ ದಿನದಂದು ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಸುಡಾನ್, ಏಲಾಮ್, ಬಾಬಿಲೋನಿಯ, ಹಮಾಥ್ ಹಾಗೂ ಸಮುದ್ರದ ಕರಾವಳಿ - ಈ ಸ್ಥಳಗಳಿಂದ ಸರ್ವೇಶ್ವರ ತಮ್ಮ ಅಳಿದುಳಿದ ಜನರನ್ನು ಬಿಡಿಸಿ ಬರಮಾಡಿಕೊಳ್ಳಲು ಮತ್ತೆ ಕೈನೀಡುವರು.


ಶೂರನಂತೆ ನಡುಕಟ್ಟಿ ನಿಲ್ಲು ನಾನು ಹಾಕುವ ಪ್ರಶ್ನೆಗೆ ಉತ್ತರ ನೀಡು:


ನನ್ನ ಪರ ತೀರ್ಪುಕೊಡುವವನು ಇಹನು ಹತ್ತಿರದಲೆ ನನಗೆ ಪ್ರತಿಕಕ್ಷಿ ಯಾರೆ ಬರಲಿ ಮುಂದಕೆ. ನನ್ನೊಡನೆ ವ್ಯಾಜ್ಯಮಾಡಬಲ್ಲವನಾರೇ ನಿಲ್ಲಲಿ ನ್ಯಾಯಕೆ.


ಕಿವಿಗೊಡಿ ನನ್ನ ದ್ವೀಪನಿವಾಸಿಗಳೇ, ಆಲಿಸಿ ನನ್ನನ್ನು ದೂರದ ಜನಾಂಗಗಳೇ, ಸರ್ವೇಶ್ವರ ಕರೆದನೆನ್ನನ್ನು ಗರ್ಭದಲ್ಲಿದ್ದಾಗಲೇ; ಹೆಸರಿಟ್ಟನೆನಗೆ ನಾನು ತಾಯಿಯ ಉದರದಲ್ಲಿದ್ದಾಗಲೇ.


ಬಂದು ಕೇಳಿ ಇದನ್ನು ಹತ್ತಿರದಿಂದ ನಾ ಮಾತಾಡಿಲ್ಲ ಗುಟ್ಟಾಗಿ ಆದಿಯಿಂದ ಪ್ರಸನ್ನನಾಗಿಹೆನು ಭುವಿ ಉಂಟಾದಂದಿನಿಂದ.” (ಕಳುಹಿಸಿದ್ದಾರೆ ದೇವರಾದ ಸರ್ವೇಶ್ವರ ನನ್ನನ್ನೀಗ ತಮ್ಮ ಪವಿತ್ರಾತ್ಮರ ಸಮೇತ).


ಸರ್ವೇಶ್ವರನನ್ನು ಎದುರುನೋಡುವವರು ಹೊಸ ಚೇತನವನ್ನು ಹೊಂದುವರು. ರೆಕ್ಕೆ ಚಾಚಿದ ಹದ್ದುಗಳಂತೆ ಹಾರುವರು ಓಡಿದರೂ ದಣಿಯರು, ನಡೆದರೂ ಬಳಲರು.


ದೂರದೇಶದವರು ಕಂಡು ಬೆರಗಾದರು ಭೂಮಿಯ ಕಟ್ಟಕಡೆಯವರು ನಡುಗಿದರು ಎಲ್ಲರೂ ಇಲ್ಲಿಗೆ ನೆರೆದುಬಂದಿಹರು.


ಬರಲಿ, ಎಲ್ಲಾ ಜನಾಂಗಗಳು ಒಟ್ಟಿಗೆ ನೆರೆಯಲಿ, ಸಕಲ ದೇಶಿಯರು ಇಲ್ಲಿಯೇ. ಅವರ ದೇವರುಗಳಲ್ಲಿ ಭವಿಷ್ಯವನ್ನು ನುಡಿಯಬಲ್ಲವರು ಯಾರು? ಗತಿಸಿದ ಘಟನೆಗಳನ್ನು ಮುಂತಿಳಿಸಿದವರಾರು? ಕರೆತರಲಿ, ಆ ದೇವರುಗಳು ಸಾಕ್ಷಿಗಳನು ಸ್ಥಾಪಿಸಿಕೊಳ್ಳಲಿ, ತಾವು ಸತ್ಯವಂತರೆಂಬುದನು; ರುಜುಪಡಿಸಲಿ ಕೇಳುವವರಿಗೆ ತಮ್ಮ ಮಾತು ನಿಜವೆಂಬುದನು.


ಮಂಡಿಸು ನನ್ನ ವಿರುದ್ಧ ನಿನ್ನ ಆಪಾದನೆಯನ್ನು; ಒಟ್ಟಿಗೆ ವಾದಿಸೋಣ ಮಂಡಿಸು ನಿನ್ನ ನ್ಯಾಯವನ್ನು; ನೀನು ನಿರ್ದೋಷಿಯೆಂದು ರುಜುಪಡಿಸು ನೋಡೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು