Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 41:10 - ಕನ್ನಡ ಸತ್ಯವೇದವು C.L. Bible (BSI)

10 ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿಸುತ್ತೇನೆ; ಹೌದು, ನಿನಗೆ ಸಹಾಯಕೊಡುತ್ತೇನೆ; ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾನೇ ನಿನ್ನ ಸಂಗಡವಿದ್ದೇನೆ. ಆದ್ದರಿಂದ ಚಿಂತಿಸದಿರು. ನಾನೇ ನಿನ್ನ ದೇವರು, ಆದ್ದರಿಂದ ಭಯಪಡಬೇಡ. ನಿನ್ನನ್ನು ಬಲಪಡಿಸುವೆನು. ನಿನಗೆ ಸಹಾಯ ಮಾಡುವೆನು. ನನ್ನ ನೀತಿಯ ಬಲಗೈಯಿಂದ ನಿನಗೆ ಆಧಾರ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನೀನಂತೂ ಹೆದರಬೇಡ, ಏಕೆಂದರೆ ನಾನೇ ನಿನ್ನ ದೇವರು, ನಾನು ನಿನ್ನನ್ನು ಬಲಪಡಿಸುತ್ತೇನೆ. ನಾನು ನಿನಗೆ ಸಹಾಯ ಮಾಡುತ್ತೇನೆ. ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿಹಿಡಿಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 41:10
63 ತಿಳಿವುಗಳ ಹೋಲಿಕೆ  

ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವ ಎಡೆಗಳಲ್ಲೆಲ್ಲ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನ್ನ ಸಂಗಡ ಇರುತ್ತೇನೆ,” ಎಂದು ಹೇಳಿದರು.


ಹೀಗಿರುವಲ್ಲಿ ನಾವು ಏನು ಹೇಳೋಣ? ದೇವರೇ ನಮ್ಮ ಪರ ಇರುವಾಗ ನಮ್ಮನ್ನು ವಿರೋಧಿಸುವವರು ಯಾರು?


ಸರ್ವೇಶನ ಶಕ್ತಿಯಿಂದ ಸರ್ವವನ್ನೂ ಸಾಧಿಸುವ ಸಾಮರ್ಥ್ಯ ನನಗಿದೆ.


ಅದಕ್ಕವರು, “ನನ್ನ ಅನುಗ್ರಹವೇ ನಿನಗೆ ಸಾಕು. ನನ್ನ ಶಕ್ತಿ ಪರಿಪಕ್ವವಾಗುವುದು ನಿಶ್ಯಕ್ತಿಯಲ್ಲಿಯೇ,” ಎಂದು ಹೇಳಿದರು. ಕ್ರಿಸ್ತಯೇಸುವಿನ ಶಕ್ತಿ ನನ್ನಲ್ಲಿ ನೆಲಸುವಂತೆ ನನ್ನ ನಿಶ್ಯಕ್ತಿಯನ್ನು ಕುರಿತು ಮತ್ತಷ್ಟು ಹೆಮ್ಮೆಪಡುತ್ತೇನೆ.


ನನಗೆ ಬೆಳಕು, ನನಗೆ ರಕ್ಷೆ, ಪ್ರಭುವೆ I ನಾನಾರಿಗೂ ಅಳುಕೆನು II ನನ್ನ ಬಾಳಿಗಾಧಾರ ಪ್ರಭುವೆ I ನಾನಾರಿಗೂ ಅಂಜೆನು II


ನನ್ನಾತ್ಮ ನಿನಗಾತುಕೊಂಡಿದೆ I ನಿನ್ನ ಬಲಗೈ ನನಗಿಂಬಾಗಿದೆ II


ಈ ಸಾರಿ ನೀವು ಯುದ್ಧಮಾಡುವುದು ಅವಶ್ಯವಿಲ್ಲ. ಯೆಹೂದ್ಯರೇ, ಜೆರುಸಲೇಮಿನವರೇ, ಸುಮ್ಮನೆ ನಿಂತುಕೊಂಡು ಸರ್ವೇಶ್ವರ ನಿಮಗಾಗಿ ನಡೆಸುವ ರಕ್ಷಣಾಕಾರ್ಯವನ್ನು ನೋಡಿರಿ; ಹೆದರಬೇಡಿ, ಕಳವಳಗೊಳ್ಳಬೇಡಿ. ನಾಳೆ ಅವರೆದುರಿಗೆ ಹೊರಡಿರಿ; ಸರ್ವೇಶ್ವರ ನಿಮ್ಮೊಂದಿಗೆ ಇರುವರು!” ಎಂದು ಹೇಳಿದನು.


ನುಡಿಯಲಿ ಪ್ರಭು ಸದಾ ಪ್ರಾಮಾಣಿಕನು I ನಡೆಯಲಿ ಆತನು ಸದಾ ಪ್ರೀತಿಮಯನು II


ದೇವರೇ ಉದ್ಧಾರಕನೆನಗೆ ಆತನಲ್ಲಿದೆ ನನಗೆ ನಿರ್ಭೀತ ನಂಬಿಕೆ. ದೇವಾದಿದೇವನೇ ಎನಗೆ ಶಕ್ತಿ ಆತನೆನ್ನ ಕೀರ್ತನೆಯ ವ್ಯಕ್ತಿ ತಂದಿಹನಾತ ಎನಗೆ ಮುಕ್ತಿ.”


ನಿನಗಿನ್ನು ಬೇಕಾಗಿಲ್ಲ ಸೂರ್ಯನ ಬೆಳಕು ಹಗಲೊಳು ನಿನಗೆಂದಿಗೂ ಬೇಕಾಗಿಲ್ಲ ಚಂದ್ರನ ಬೆಳಕು ಇರುಳೊಳು. ನಿನಗೆ ನಿತ್ಯಪ್ರಕಾಶ ಸರ್ವೇಶ್ವರನೆ, ನಿನ್ನ ಬೆಳಗುವ ತೇಜಸ್ಸು ನಿನ್ನ ದೇವನೆ.


“ನೀವು ಶತ್ರುಗಳ ವಿರುದ್ಧ ಯುದ್ಧಕ್ಕೆ ಹೊರಟಾಗ ಅವರ ಕಡೆ ಕುದುರೆಗಳು, ರಥಗಳು ಹಾಗು ನಿಮಗಿಂತ ಹೆಚ್ಚಾದ ಕಾಲ್ಬಲವು ಇರುವುದನ್ನು ಕಂಡರೆ, ಹೆದರಬೇಡಿ. ಏಕೆಂದರೆ ಈಜಿಪ್ಟ್ ದೇಶದಿಂದ ನಿಮ್ಮನ್ನು ಬಿಡಿಸಿದ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮೊಂದಿಗೆ ಇದ್ದಾರೆ.


ಹಾಕುವೆನಾ ಮೂರನೇ ಭಾಗದವರನ್ನು ಬೆಂಕಿಗೆ, ಶೋಧಿಸುವೆನು ಅವರನ್ನು ಬೆಳ್ಳಿಯ ಹಾಗೆ. ಶುದ್ಧೀಕರಿಸುವೆನು ಬಂಗಾರದ ಹಾಗೆ. ಕಿವಿಗೊಡುವೆ ನನ್ನ ಹೆಸರೆತ್ತಿ ಪ್ರಾರ್ಥಿಸುವವರಿಗೆ. ಹೇಳುವೆನು, ‘ಇವರೇ ನನ್ನ ಪ್ರಜೆಯೆಂದು. ಹೇಳುವರವರು ‘ಸರ್ವೇಶ್ವರನೇ ನಮ್ಮ ದೇವ’ ಎಂದು.


ಬಿದ್ದರೂ ಅವನೆದ್ದೇ ತೀರುವನು I ಪ್ರಭು ಅವನಿಗೆ ಊರುಗೋಲಾಗಿಹನು II


ಅನುಗ್ರಹಿಸಲಿ ಪ್ರಭು ತನ್ನ ಜನರಿಗೆ‍ ಶಕ್ತಿಯನು I ದಯಪಾಲಿಸಲಿ ತನ್ನ ಪ್ರಜೆಗೆ ಸುಕ್ಷೇಮವನು II


ಅವರು ತಮ್ಮ ಮಹಿಮೆಯ ಸಂಪನ್ಮೂಲಗಳಿಂದ ಪವಿತ್ರಾತ್ಮ ಅವರ ಮುಖಾಂತರ ನಿಮ್ಮ ಅಂತರಂಗವನ್ನು ಬಲಗೊಳಿಸಲಿ;


ಅವನಿಗಿರುವ ಸಹಾಯ ಮೂಳೆ ಮಾಂಸದ ತಡಿಕೆಯ ಬಲ; ನಮಗಿದ್ದಾರೆ ನಮ್ಮ ದೇವರಾದ ಸರ್ವೇಶ್ವರ. ಅವರೇ ನಮಗೆ ನೆರವಾಗಿ, ಯುದ್ಧಗಳಲ್ಲಿ ನಮ್ಮ ಪರವಾಗಿ ಕಾದಾಡುವರು,” ಎಂದು ಹೇಳಿ ಹುರಿದುಂಬಿಸಿದನು. ಜನರು ಜುದೇಯದ ಅರಸ ಹಿಜ್ಕೀಯನ ಮಾತುಗಳನ್ನು ಕೇಳಿ ಭರವಸೆಯುಳ್ಳವರಾದರು.


ಬಲಿಷ್ಠರಾಗುವರಾ ಜನರು ಸರ್ವೇಶ್ವರನಲಿ ಹೆಚ್ಚಳಪಡುವರು ಆತನ ನಾಮದಲಿ,” ನುಡಿದಿಹನು ಸರ್ವೇಶ್ವರ ಈ ರೀತಿಯಲಿ.


ಭಯಪಡಬೇಡ, ನಾನಿರುವೆ ನಿನ್ನ ಸಂಗಡ ಕರೆತರುವೆ ನಿನ್ನ ಸಂತತಿಯನ್ನು ಮೂಡಣದಿಂದ ಒಟ್ಟುಗೂಡಿಸುವೆ ನಿನ್ನವರನ್ನು ಪಡುವಣದಿಂದ.


ನಮ್ಮ ಕಡೆಯಿರುವನು ಸೇನಾಧೀಶ್ವರ ಪ್ರಭುವು I ಯಕೋಬ ಕುಲದೇವರು ನಮಗಾಶ್ರಯ ದೇವರು II


ತಮ್ಮ ಪ್ರಜೆಗೆ ಇಂತೆನ್ನುತ್ತಾರೆ ಸರ್ವೇಶ್ವರ ಸ್ವಾಮಿ : “ನಿನಗೆ ದಯಪಾಲಿಸುವೆನು ಸದುತ್ತರವನು ಪ್ರಸನ್ನತೆಯ ಕಾಲದಲಿ ಸಹಾಯ ನೀಡುವೆನು ರಕ್ಷಣೆಯ ದಿನದಲಿ ನಿನ್ನನು ಕಾಪಾಡಿ ನೇಮಿಸುವೆನು ಜನತೆಗೆ ಸ್ಥಿರ ಒಡಂಬಡಿಕೆಯಾಗಿ.


ಬತ್ತಿಹೋಗುವುದು ದುರ್ಜನರ ಭುಜಬಲ I ಸತ್ಯವಂತರಿಗೆ ಪ್ರಭುವೇ ಉನ್ನತಬಲ II


ನಿನ್ನನ್ನು ಸೃಷ್ಟಿಸಿದ ಸರ್ವೇಶ್ವರ ನಾನೆ ತಾಯ ಗರ್ಭದಿಂದ ನಿನ್ನನ್ನು ರೂಪಿಸಿದವನು ನಾನೆ ಅಂದಿನಿಂದ ನಿನಗೆ ನೆರವಾಗುತ್ತಾ ಬಂದವನು ನಾನೆ. ಭಯಪಡಬೇಡ, ನನ್ನ ದಾಸ ಯಕೋಬನೇ, ಅಂಜಬೇಡ, ನಾನು ಆರಿಸಿಕೊಂಡ ಯೆಶುರೂನೇ.


ಕ್ರೂರ ವೈರಿಗಳಿಂದೆನ್ನ ಬಿಡಿಸಯ್ಯಾ I ಅವರ ಬಾಯಿಂದ ಬರುವ ಮಾತು ಅಸತ್ಯ I ಅವರು ಕೈಯೆತ್ತಿ ಮಾಡುವ ಶಪಥ ಮಿಥ್ಯ II


ನಿರ್ದೋಷಿಯಾದೆನ್ನನು ನೀನುದ್ಧರಿಸುವೆ I ಚಿರಕಾಲ ನಿನ್ನ ಸನ್ನಿಧಿಯಲ್ಲೆನ್ನನು ಇರಿಸುವೆ II


ನಮ್ಮ ಕಡೆಯಿರುವನು ಸೇನಾಧೀಶ್ವರ ಪ್ರಭುವು I ಯಕೋಬ ಕುಲದೇವರು ನಮಗಾಶ್ರಯ ದುರ್ಗವು II


ಶುಭಕರ ಸಮಾಚಾರವನು ತರುವ ಶಾಂತಿಸಮಾಧಾನವನು ಸಾರುವ ಸಂತಸದ ಸಂದೇಶವನು ಅರುಹುವ ಜೀವೋದ್ಧಾರವನು ಪ್ರಕಟಿಸುವ ‘ನಿನ್ನ ದೇವರೇ ರಾಜ್ಯಭಾರ ವಹಿಸುವ ಎಂದು ಸಿಯೋನಿಗೆ ತಿಳಿಯಪಡಿಸುತ್ತ ಪರ್ವತಗಳಿಂದ ಇಳಿದುಬರುವ ಶಾಂತಿದೂತನ ಪಾದಪದ್ಮಗಳು ಎಷ್ಟೊಂದು ಸುಂದರ!


ಈ ಘಟನೆಗಳೆಲ್ಲ ನಡೆದ ಮೇಲೆ ಅಬ್ರಾಮನಿಗೆ ಒಂದು ದಿವ್ಯದರ್ಶನ ಆಯಿತು. ಅದರಲ್ಲಿ ಸರ್ವೇಶ್ವರ ಸ್ವಾಮಿಯ ಈ ವಾಣಿ ಕೇಳಿಸಿತು: “ಅಬ್ರಾಮನೇ ಭಯಪಡಬೇಡ, ನಿನ್ನನ್ನು ರಕ್ಷಿಸುವ ಕವಚ ನಾನೇ, ಘನವಾದ ಬಹುಮಾನ ಸಿಗುವುದು ನಿನಗೆ".


ದೇವಾ, ನೀನೆ ನಮ್ಮೆಲ್ಲರ ಜೀವೋದ್ಧಾರ I ದೂರದ ಸಾಗರ ಸೀಮೆಗಳಿಗೂ ಆಶಾಧಾರ I ಗಂಭೀರ ಕಾರ್ಯವೆಸಗಿ ನೀಡುವೆ ವಿಜಯದುತ್ತರ II


ದೂತನು ಆಕೆಗೆ, “ಮರಿಯಾ, ನೀನು ಅಂಜಬೇಕಾಗಿಲ್ಲ; ದೇವರ ಅನುಗ್ರಹ ನಿನಗೆ ಲಭಿಸಿದೆ;


ಜೆರುಸಲೇಮೇ, ಕೀರ್ತಿಸು ಪ್ರಭುವನು I ಸಿಯೋನೇ, ಸ್ತುತಿಸು ನಿನ್ನ ದೇವರನು II


ಆಗ ‘ಮೂವತ್ತು ಪ್ರಮುಖ’ರ ಪಡೆಯಲ್ಲಿ ಮುಖ್ಯಸ್ಥನಾದ ಅಮಾಸೈ ಆತ್ಮಾವೇಶವುಳ್ಳವನಾಗಿ ಹೀಗೆ ಕೂಗಿ ಹೇಳಿದನು: “ಜೆಸ್ಸೆಯ ಮಗ ದಾವೀದನಿಗೆ ಶುಭವಾಗಲಿ! ನಾವೆಲ್ಲರು ನಿಮ್ಮವರು; ನಿಮಗೂ ನಿಮ್ಮ ಸಹಾಯಕರಿಗೂ ಶುಭವಾಗಲಿ! ದೇವರು ನಿಮಗೆ ಜಯಪ್ರದರಾಗಿದ್ದಾರೆ.” ದಾವೀದ ಅವರನ್ನು ಸ್ವಾಗತಿಸಿ ತನ್ನ ಸೈನ್ಯದಲ್ಲಿ ಮುಖ್ಯಾಧಿಕಾರಿಗಳನ್ನಾಗಿ ನೇಮಿಸಿದನು.


ದೂತನು ಅವನಿಗೆ, “ಜಕರೀಯಾ, ಭಯಪಡಬೇಡ! ನಿನ್ನ ಪ್ರಾರ್ಥನೆಯನ್ನು ದೇವರು ಆಲಿಸಿದ್ದಾರೆ. ನಿನ್ನ ಪತ್ನಿ ಎಲಿಜಬೇತಳಲ್ಲಿ ನಿನಗೆ ಒಂದು ಗಂಡುಮಗು ಹುಟ್ಟುವುದು. ನೀನು ಅವನಿಗೆ ‘ಯೊವಾನ್ನ’ ಎಂದು ನಾಮಕರಣ ಮಾಡಬೇಕು.


ಶಕ್ತಿಸ್ವರೂಪಿಯೇ, ನ್ಯಾಯಪ್ರಿಯ ರಾಜನೇ I ನ್ಯಾಯನೀತಿ, ಯಥಾರ್ಥತೆಗೆ ಸ್ಥಾಪಕ ನೀನೆ I ಇಸ್ರಯೇಲ ವಂಶಕ್ಕಿದನು ಮನದಟ್ಟಾಗಿಸಿದವ ನೀನೆ II


ಅವರ ಬಾಯಿಂದ ಬರುವ ಮಾತು ಅಸತ್ಯ I ಅವರು ಕೈಯೆತ್ತಿ ಮಾಡುವ ಶಪಥ ಮಿಥ್ಯ II


ಆಗ ಸರ್ವೇಶ್ವರ: “ಈ ಮಗುವಿಗೆ ‘ಲೋ-ಅಮ್ಮಿ’ ಎಂದು ನಾಮಕರಣ ಮಾಡು. ಏಕೆಂದರೆ, ಇನ್ನು ನೀವು ನನ್ನ ಪ್ರಜೆಯಲ್ಲ; ನಾನು ನಿಮ್ಮ ದೇವರಲ್ಲ,” ಎಂದರು.


ಅಲ್ಲಿ ಅವರಿಗೆ, “ನನ್ನ ವಿಷಯದಲ್ಲಿ ನಿಮ್ಮ ತಂದೆಯ ಮನೋಭಾವ ಮೊದಲಿದ್ದಂತೆ ಇಲ್ಲವೆಂದು ಕಂಡುಬಂದಿದೆ. ಆದರೂ ನನ್ನ ತಂದೆಯ ದೇವರು ನನ್ನೊಂದಿಗೆ ಇದ್ದಾರೆ.


ಆದರೂ ಯಕೋಬಕುಲದ ಸರ್ವ ಬಲಾಢ್ಯನ ಶಕ್ತಿಯಿಂದ ಇಸ್ರಯೇಲನ ಪೊರೆಬಂಡೆ - ಪರಿಪಾಲಕನ ನಾಮದಿಂದ ನಿಂತಿತು ಸ್ಥಿರವಾಗಿ ಅವನ ಬಿಲ್ಲು ಚುರುಕುಗೊಂಡಿತು ಅವನ ಕೈಗಳ ಬಲ್ಬು.


ಅದಕ್ಕೆ ಮೋಶೆ ಆ ಜನರಿಗೆ, “ಅಂಜಬೇಡಿ, ಸುಮ್ಮನಿರಿ, ಈ ದಿನ ಸರ್ವೇಶ್ವರ ನಿಮ್ಮನ್ನು ಹೇಗೆ ರಕ್ಷಿಸುತ್ತಾರೆಂದು ನೋಡಿ! ಈ ದಿನ ನೀವು ನೋಡುವ ಈಜಿಪ್ಟಿನವರನ್ನು ಇನ್ನೆಂದಿಗೂ ನೋಡುವುದಿಲ್ಲ.


ಅದಕ್ಕೆ ಮೋಶೆ, “ಭಯಪಡಬೇಡಿ; ದೇವರು ನಿಮ್ಮನ್ನು ಪರೀಕ್ಷಿಸುವುದಕ್ಕಾಗಿ ಬಂದಿದ್ದಾರೆ; ಹೀಗೆ ದೈವಭೀತಿ ನಿಮ್ಮ ಕಣ್ಮುಂದಿದ್ದು ನೀವು ಪಾಪಮಾಡದೆ ಇರುವಿರಿ,” ಎಂದನು.


ಇಗೋ, ಸ್ವಾಮಿ ಸರ್ವೇಶ್ವರ ನಿಂತಿಹರು ನನಗೆ ನೆರವಾಗಿ ನಿರ್ಣಯಿಸುವವನು ಯಾರು ನನ್ನನ್ನು ಅಪರಾಧಿಯಾಗಿ? ನುಸಿತಿಂದ ವಸ್ತ್ರದಂತೆ ಅಳಿದುಹೋಗುವರವರು ಜೀರ್ಣವಾಗಿ.


ಈ ಕಾರಣ ರಾಜನು ಅಪ್ಪಣೆ ಕೊಡಲೇಬೇಕಾಯಿತು. ಕೂಡಲೆ ಅವರು ದಾನಿಯೇಲನನ್ನು ತಂದು ಸಿಂಹಗಳ ಗವಿಯಲ್ಲಿ ಹಾಕಿಯೇಬಿಟ್ಟರು. ಆಗ ರಾಜನು ದಾನಿಯೇಲನಿಗೆ, “ನೀನು ದಿನನಿತ್ಯವೂ ಆರಾಧಿಸುವ ದೇವರು ನಿನ್ನನ್ನು ಉದ್ಧರಿಸಲಿ!” ಎಂದು ಹರಸಿದನು.


ಆಮೇಲೆ ಅವನು ನನಗೆ, “ದಾನಿಯೇಲನೇ, ಭಯಪಡಬೇಡ! ಏಕೆಂದರೆ ನೀನು ನಿನ್ನ ದೇವರ ಮುಂದೆ ವಿನಮ್ರಪೂರ್ವಕವಾಗಿ (ದೈವಸಂಕಲ್ಪವನ್ನು) ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದ ಮೊದಲನೆಯ ದಿನದಲ್ಲೇ ನಿನ್ನ ಪ್ರಾರ್ಥನೆ ದೇವರಿಗೆ ಮುಟ್ಟಿತು. ಆ ಪ್ರಾರ್ಥನೆಯ ನಿಮಿತ್ತವೇ ನಾನು ಬಂದಿದ್ದೇನೆ.


ಇದನ್ನು ನೋಡಿ ಸ್ವಾಮಿಯ ದೂತನಾದ ಹಗ್ಗಾಯನು ಜನರಿಗೆ, “ನಾನು ನಿಮ್ಮೊಡನೆ ಇದ್ದೇನೆ ಎಂದು ಸರ್ವೇಶ್ವರ ನುಡಿದಿದ್ದಾರೆ. ಇದು ಸರ್ವೇಶ್ವರಸ್ವಾಮಿಯ ಸಂದೇಶ,” ಎಂದನು.


ನೀವು ಈಜಿಪ್ಟ್ ದೇಶದಿಂದ ಹೊರಟುಬಂದಾಗ ನಾನು ನಿಮಗೆ ಪ್ರಮಾಣವಾಗಿ ಕೊಟ್ಟ ಮಾತನ್ನು ನೆರವೇರಿಸುವೆನು. ನನ್ನ ಆತ್ಮವು ನಿಮ್ಮಲ್ಲಿ ನೆಲೆಗೊಂಡಿದೆ; ಭಯಪಡದಿರಿ.


ಆ ರಾತ್ರಿ ಸರ್ವೇಶ್ವರ ಅವನಿಗೆ ದರ್ಶನವಿತ್ತು, “ನಿನ್ನ ತಂದೆ ಅಬ್ರಹಾಮನ ದೇವರು ನಾನೇ ಅಂಜಬೇಡ, ನಿನ್ನ ಸಂಗಡ ನಾನಿರುವೆ. ಆ ನನ್ನ ದಾಸ ಅಬ್ರಹಾಮನ ನಿಮಿತ್ತ ನಿನ್ನ ಹರಸಿ ನಾ ಹೆಚ್ಚಿಸುವೆ ನಿನ್ನ ಸಂತಾನವ” ಎಂದರು.


ಸರ್ವೇಶ್ವರ ಅವನಿಗೆ, “ನಾನು ನಿನ್ನೊಂದಿಗೆ ಇರುವುದರಿಂದ ನೀನು ಮಿದ್ಯಾನ್ಯರೆಲ್ಲರನ್ನೂ ಒಬ್ಬ ಮನುಷ್ಯನನ್ನೋ ಎಂಬಂತೆ ಸದೆಬಡಿಯುವೆ,” ಎಂದರು.


ನನ್ನ ಮೇಲೆರಗಿದ್ದರಾ ಹಗೆಗಳು ದುರಂತ ಕಾಲದಲಿ ನನಗುದ್ಧಾರಕನಾದ ಸರ್ವೇಶ್ವರನು, ಆ ವಿಪತ್ಕಾಲದಲಿ.


ನೀನಿತ್ತೆ ನನ್ನ ಪಾದಗಳಿಗೆ ವಿಶಾಲಸ್ಥಳ I ನನ್ನ ಹೆಜ್ಜೆಗಳು ಕದಲವು ಈ ನಿಮಿತ್ತ II


ಪ್ರಭುವನು ದೇವರಾಗಿ ಪಡೆದ ಜನಾಂಗ ಧನ್ಯ I ಸ್ವಜನರಾಗಿ ಆತನಾಯ್ದುಕೊಂಡ ಜನತೆ ಧನ್ಯ II


ಚಂಚಲ ಹೃದಯರಿಗೆ ಹೀಗೆಂದು ಹೇಳಿ : “ಭಯಪಡಬೇಡಿ; ಎದೆಗುಂದಬೇಡಿ; ಬರುವನು ಆ ದೇವನು ಮುಯ್ಯಿತೀರಿಸಲು ಬರುವನು ಆ ದೇವನು ಪ್ರತೀಕಾರವೆಸಗಲು ತಾನೇ ಬರುವನು ನಿಮ್ಮನ್ನು ರಕ್ಷಿಸಲು.”


“ನೀವು ಹಿಂದಿರುಗಿ ಹೋಗಿ ನಿಮ್ಮ ರಾಜನಿಗೆ ಹೀಗೆಂದು ತಿಳಿಸಿರಿ: ‘ಇದು ಸರ್ವೇಶ್ವರನ ನುಡಿ: ಅಸ್ಸೀರಿಯದ ಅರಸನ ಸೇವಕರು ನನ್ನನ್ನು ದೂಷಿಸಿ ಆಡಿದ ಮಾತುಗಳನ್ನು ಕೇಳಿದ್ದೇನೆ. ಅವುಗಳಿಗಾಗಿ ನೀನು ಹೆದರಬೇಕಾಗಿಲ್ಲ.


ನಿನ್ನನ್ನು ಕೂಗಿಕೊಂಡಾಗ ಸಮೀಪಕ್ಕೆ ಬಂದೆ “ಭಯಪಡಬೇಡ” ಎಂದು ಅಭಯನೀಡಿದೆ.


“ಬಲಗೊಳಿಸುವೆನು ಯೆಹೂದ್ಯ ಕುಲವನು ಉದ್ಧರಿಸುವೆನು ಜೊಸೇಫನ ವಂಶವನು. ಕನಿಕರಿಸುವೆನು, ಮರಳಿ ಬರಮಾಡುವೆನು ಅವರನು ನಾನು ಕೈಬಿಟ್ಟವರಂತೆ ಇರಲಾರರವರು ಇನ್ನು. ಏಕೆನೆ ನಾನೇ ದೇವ ಸರ್ವೇಶ್ವರ ಅವರಿಗೆ ಕಿವಿಗೊಡುವೆನು ನಾನು ಅವರ ಕರೆಗೆ ಸದುತ್ತರವೀಯುವೆನು ಅವರ ಮೊರೆಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು