ಯೆಶಾಯ 41:12 - ಕನ್ನಡ ಸತ್ಯವೇದವು C.L. Bible (BSI)12 ಹುಡುಕಿದರೂ ಸಿಗರು ನಿನ್ನೊಡನೆ ಹೋರಾಡಿದವರು ನಾಶವಾಗಿ ನಿರ್ನಾಮವಾಗುವರು ನಿನ್ನ ವಿರುದ್ಧ ಯುದ್ಧಮಾಡಿದವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಿನ್ನೊಡನೆ ಹೋರಾಡಿದವರನ್ನು ಹುಡುಕಿದರೂ ಅವರು ನಿನಗೆ ಕಾಣಿಸರು. ನಿನ್ನ ವಿರುದ್ಧವಾಗಿ ಯುದ್ಧ ಮಾಡಿದವರು ನಿರ್ನಾಮವಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನಿನ್ನೊಡನೆ ಹೋರಾಡಿದವರನ್ನು ಹುಡುಕಿದರೂ ಅವರು ನಿನಗೆ ಕಾಣಿಸರು; ನಿನಗೆ ವಿರುದ್ಧವಾಗಿ ಯುದ್ಧಮಾಡಿದವರು ಇಲ್ಲದೆ ಹೋಗಿ ನಿರ್ನಾಮವಾಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಿನಗೆ ವಿರುದ್ಧವಾಗಿದ್ದ ಜನರನ್ನು ನೀನು ಹುಡುಕುವೆ. ಆದರೆ ಅವರು ನಿನಗೆ ಕಾಣಿಸುವುದಿಲ್ಲ. ನಿನ್ನ ವಿರುದ್ಧವಾಗಿ ಯುದ್ಧ ಮಾಡಿದವರು ಕಾಣದೆಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಿನ್ನೊಡನೆ ಹೋರಾಡಿದವರನ್ನು ಹುಡುಕಿದವರೂ ಅವರು ನಿನಗೆ ಕಾಣಿಸರು. ನಿನ್ನ ಸಂಗಡ ಯುದ್ಧ ಮಾಡಿದವರು ಇಲ್ಲದೆ ಹೋಗಿ ನಿರ್ನಾಮವಾಗುವರು. ಅಧ್ಯಾಯವನ್ನು ನೋಡಿ |
ಸಿಯೋನ್ ಪರ್ವತಕ್ಕೆ ವಿರುದ್ಧವಾಗಿ ಹೋರಾಡುವ ಸಕಲ ರಾಷ್ಟ್ರಗಳ ಸಮುದಾಯದ ಗತಿ ಸ್ವಪ್ನಕಾಣುವವನ ಗತಿಯಾಗುವುದು. ಹಸಿದಿರುವ ಅವನು ಉಣ್ಣುವಂತೆ ಕನಸುಕಂಡರೂ ಎಚ್ಚರವಾದಾಗ ಅವನ ಹೊಟ್ಟೆ ಬರಿದಾಗಿಯೇ ಇರುತ್ತದೆ. ಬಾಯಾರಿದ ಅವನು ಕುಡಿಯುವಂತೆ ಕನಸು ಕಂಡರೂ ಎಚ್ಚರವಾದಾಗ ಅವನ ಹೊಟ್ಟೆ ಬರಿದಾಗಿಯೇ ಇರುತ್ತದೆ. ಬಾಯಾರಿದ ಅವನು ಕುಡಿಯುವಂತೆ ಕನಸು ಕಂಡರೂ ಎಚ್ಚರವಾದಾಗ ಬಳಲಿ ಬಾಯಾರಿಕೆಯಿಂದಲೇ ಇರುತ್ತಾನೆ.