Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 41:13 - ಕನ್ನಡ ಸತ್ಯವೇದವು C.L. Bible (BSI)

13 ನಿನ್ನ ದೇವರಾದ ಸರ್ವೇಶ್ವರ ನಾನೇ ಭಯಪಡಬೇಡ, ನಿನಗೆ ನಾನೇ ನೆರವಾಗುವೆ ಎಂತಲೇ, ನಿನ್ನ ಕೈ ಹಿಡಿದುಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಏಕೆಂದರೆ ಯೆಹೋವನೆಂಬ ನಾನೇ ನಿನ್ನ ಕೈಹಿಡಿಯುತ್ತೇನೆ. “ಭಯಪಡಬೇಡ, ನಿನಗೆ ಸಹಾಯಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಭಯಪಡಬೇಡ, ನಾನೇ ನಿನಗೆ ಸಹಾಯಮಾಡುತ್ತೇನೆ ಎಂದು ನಿನಗೆ ಹೇಳುವ ನಿನ್ನ ದೇವರಾದ ಯೆಹೋವನೆಂಬ ನಾನೇ ನಿನ್ನ ಕೈಹಿಡಿಯುತ್ತೇನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಿನ್ನ ದೇವರಾದ ಯೆಹೋವನು ನಾನೇ. ನಾನು ನಿನ್ನ ಬಲಗೈಯನ್ನು ಹಿಡಿದಿದ್ದೇನೆ. ‘ನೀನು ಹೆದರಬೇಡ, ನಾನೇ ನಿನಗೆ ಸಹಾಯ ಮಾಡುತ್ತೇನೆ’ ಎಂದು ಹೇಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನೀನಂತೂ ಹೆದರಬೇಡ; ಏಕೆಂದರೆ ಯೆಹೋವ ದೇವರಾದ ನಾನೇ ನಿನಗೆ ಸಹಾಯ ಮಾಡುತ್ತೇನೆ, ನಿನ್ನ ದೇವರಾಗಿರುವ ನಾನೇ ನಿನ್ನ ಕೈಹಿಡಿಯುತ್ತೇನಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 41:13
16 ತಿಳಿವುಗಳ ಹೋಲಿಕೆ  

ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ.


ಆದರೂ ನಾನಿರುವೆ ನಿನ್ನ ಸನ್ನಿಧಿಯಲಿ I ನೀ ಹಿಡಿದಿರುವೆ ನನ್ನ ಬಲಗೈಯನು ಭದ್ರವಾಗಿ II


ನನ್ನಾತ್ಮ ನಿನಗಾತುಕೊಂಡಿದೆ I ನಿನ್ನ ಬಲಗೈ ನನಗಿಂಬಾಗಿದೆ II


ನಿಂತಿರುವನು ಪ್ರಭು ಬಡವನ ಬಲಗಡೆ I ವಿಧಿಸುವವರಿಂದ ತಪ್ಪಿಸುವನು ಮರಣದಂಡನೆ II


ಸರ್ವೇಶ್ವರ ಸ್ವಾಮಿಯಾದ ನಾನು ಕೈ ಹಿಡಿದು ಕಾದಿರಿಸುವೆನು ನಿನ್ನನು, ಕರೆದಿಹೆನು ನಿನ್ನನ್ನು ಸದ್ಧರ್ಮ ಸಾಧನೆಗಾಗಿ ಇತ್ತಿರುವೆನು ನಿನ್ನನು ಜನರಿಗೆ ಒಡಂಬಡಿಕೆಯಾಗಿ ನೇಮಿಸಿರುವೆನು ನಿನ್ನನು ರಾಷ್ಟ್ರಗಳಿಗೆ ಬೆಳಕಾಗಿ.


ಆದರೆ ಪ್ರಭು ನನಗೆ ಬೆಂಬಲವಾಗಿ ನಿಂತರು. ನಾನು ಶುಭಸಂದೇಶವನ್ನು ಸಂಪೂರ್ಣವಾಗಿ ಸಾರುವಂತೆಯೂ ಅನ್ಯಧರ್ಮೀಯರೆಲ್ಲರು ಅದನ್ನು ಕೇಳುವಂತೆಯೂ ಮಾಡಿದರು. ಅಲ್ಲದೆ, ಸಿಂಹದ ಬಾಯಿಂದಲೂ ನನ್ನನ್ನು ಸಂರಕ್ಷಿಸಿದರು.


ಇಂತೆಂದರು ಸರ್ವೇಶ್ವರ ತಾನು ಅಭಿಷೇಕಿಸಿದ ಕೋರೆಷನಿಗೆ “ರಾಷ್ಟ್ರಗಳನ್ನು ನೀ ಸದೆಬಡಿಯುವಂತೆ ರಾಜಮಹಾರಾಜರನು ನಿಶ್ಯಸ್ತ್ರರನ್ನಾಗಿ ಮಾಡುವಂತೆ ಮುಚ್ಚಲಾಗದ ಹಾಗೆ ಬಾಗಿಲು ಹೆಬ್ಬಾಗಿಲುಗಳನ್ನು ತೆರೆಯುವಂತೆ ನಾ ನಿನ್ನ ಕೈಹಿಡಿದು ನಡೆಸುವೆನು ಮುಂದೆ.


ನಾನಪ್ಪಣೆ ಕೊಡುವೆ ‘ಬೀಳ್ಕೊಡು’ ಎಂದು ಬಡಗಲಿಗೆ ‘ತಡೆಯಬೇಡ’ ಎಂದು ನಾನೇ ಹೇಳುವೆ ತೆಂಕಲಿಗೆ. ಹೀಗೆ ಬರಮಾಡುವೆ ನನ್ನ ಕುವರರನ್ನು ದೂರದಿಂದ ಬರಮಾಡುವೆ ನನ್ನ ಕುವರಿಯರನ್ನು ದಿಗಂತಗಳಿಂದ.


ಅವಳನ್ನು ಕರೆದುಕೊಂಡು ಹೋಗುವವನಾರೂ ಇಲ್ಲ, ಆಕೆ ಹೆತ್ತಾ ಮಕ್ಕಳೊಳು; ಅವಳ ಕೈಹಿಡಿದು ನಡೆಸುವವನು ಒಬ್ಬನೂ ಇಲ್ಲ, ಆಕೆ ಸಾಕಿದ ಕುವರರೊಳು.


ಅದಕ್ಕೆ ಮೋಶೆ ಆ ಜನರಿಗೆ, “ಅಂಜಬೇಡಿ, ಸುಮ್ಮನಿರಿ, ಈ ದಿನ ಸರ್ವೇಶ್ವರ ನಿಮ್ಮನ್ನು ಹೇಗೆ ರಕ್ಷಿಸುತ್ತಾರೆಂದು ನೋಡಿ! ಈ ದಿನ ನೀವು ನೋಡುವ ಈಜಿಪ್ಟಿನವರನ್ನು ಇನ್ನೆಂದಿಗೂ ನೋಡುವುದಿಲ್ಲ.


ಅದಕ್ಕೆ ಮೋಶೆ, “ಭಯಪಡಬೇಡಿ; ದೇವರು ನಿಮ್ಮನ್ನು ಪರೀಕ್ಷಿಸುವುದಕ್ಕಾಗಿ ಬಂದಿದ್ದಾರೆ; ಹೀಗೆ ದೈವಭೀತಿ ನಿಮ್ಮ ಕಣ್ಮುಂದಿದ್ದು ನೀವು ಪಾಪಮಾಡದೆ ಇರುವಿರಿ,” ಎಂದನು.


“ನನ್ನ ದಾಸ ಯಕೋಬನೇ, ಅಂಜಬೇಡ! ಇಸ್ರಯೇಲೇ, ಭಯಪಡಬೇಡ” ಎನ್ನುತ್ತಾರೆ ಸರ್ವೇಶ್ವರ. “ದೂರ ನಾಡಿನಿಂದ ನಿನ್ನನ್ನು ಮುಕ್ತನನ್ನಾಗಿಸುವೆನು ನಿನ್ನ ಸಂತಾನ ಸೆರೆಹೋದ ಸೀಮೆಯಿಂದ ನಿನ್ನನ್ನು ಉದ್ಧರಿಸುವೆನು. ಹಿಂದಿರುಗಿ, ಹಾಯಾಗಿ ನೆಮ್ಮದಿಯಿಂದಿರುವುದು ಯಕೋಬು ಯಾರಿಂದಲೂ ಅದನ್ನು ಹೆದರಿಸಲಾಗದು.


“ನನ್ನ ದಾಸ ಯಕೋಬೇ, ಭಯಪಡಬೇಡ ಇಸ್ರಯೇಲೇ, ಅಂಜಬೇಡ, ಇಗೋ, ನಾನು ನಿನ್ನನ್ನು ಉದ್ಧರಿಸುವೆನು ದೂರದೇಶದಿಂದ ನಿನ್ನ ಸಂತಾನವನ್ನು ರಕ್ಷಿಸುವೆನು ಸೆರೆಹೋದ ಸೀಮೆಯಿಂದ. ಯಕೋಬು ಹಾಯಾಗಿ ಹಿಂತಿರುಗಿ ಬಾಳುವುದು ನೆಮ್ಮದಿಯಿಂದ. ಭಯಪಡಬೇಡ ನನ್ನ ದಾಸ ಯಕೋಬೇ, ನಾನಿದ್ದೇನೆ ನಿನ್ನೊಂದಿಗೆ.


ನೀವು ಈಜಿಪ್ಟ್ ದೇಶದಿಂದ ಹೊರಟುಬಂದಾಗ ನಾನು ನಿಮಗೆ ಪ್ರಮಾಣವಾಗಿ ಕೊಟ್ಟ ಮಾತನ್ನು ನೆರವೇರಿಸುವೆನು. ನನ್ನ ಆತ್ಮವು ನಿಮ್ಮಲ್ಲಿ ನೆಲೆಗೊಂಡಿದೆ; ಭಯಪಡದಿರಿ.


ನೆರವು ನೀಡಲು ಪ್ರಭು ಎನ್ನಕಡೆ ಇಹನು I ಶತ್ರುಗಳತ್ತ ಜೇತಾರನಾಗಿ ನೋಡುವೆನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು