Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 41:15 - ಕನ್ನಡ ಸತ್ಯವೇದವು C.L. Bible (BSI)

15 ಮಾಡಿರುವೆ ನಿನ್ನನ್ನು ಮಸೆದ ಮೊನೆಹಲ್ಲಿನ ಹೊಸ ಕುಂಟೆಯಂತೆ. ನೀನು ಒಕ್ಕುತ್ತಾ ಪುಡಿಪುಡಿ ಮಾಡುವೆ ಬೆಟ್ಟಗಳನೆ ಹೊಟ್ಟು ಧೂಳಾಗಿಸುವೆ ಗುಡ್ಡಗಳನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ಇಗೋ, ನಾನು ನಿನ್ನನ್ನು ಮಸೆದ ಮೊನೆಹಲ್ಲಿನ ಹೊಸ ಹಂತಿಕುಂಟೆಯನ್ನಾಗಿ ಮಾಡಿದ್ದೇನೆ, ನೀನು ಬೆಟ್ಟಗಳನ್ನು ಒಡೆದು ಪುಡಿಪುಡಿಮಾಡಿ ಗುಡ್ಡಗಳನ್ನು ಹೊಟ್ಟು ಮಾಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇಗೋ, ನಾನು ನಿನ್ನನ್ನು ಮಸೆದ ಮೊನೆಹಲ್ಲಿನ ಹೊಸ ಹಂತಿಕುಂಟೆಯನ್ನಾಗಿ ಮಾಡಿದ್ದೇನೆ, ನೀನು ಬೆಟ್ಟಗಳನ್ನು ಒಕ್ಕುತ್ತಾ ಪುಡಿಪುಡಿಗೈದು ಗುಡ್ಡಗಳನ್ನು ಹೊಟ್ಟುಮಾಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಇಗೋ, ನಾನು ನಿನ್ನನ್ನು ಹೊಸ ಹಂತಿಕುಂಟೆಯನ್ನಾಗಿ ಮಾಡಿದ್ದೇನೆ. ಅದಕ್ಕೆ ಅನೇಕ ಹರಿತವಾದ ಹಲ್ಲುಗಳಿವೆ. ಬೇಸಾಯಗಾರರು ಧಾನ್ಯವನ್ನು ಹುಲ್ಲಿನಿಂದ ಪ್ರತ್ಯೇಕಿಸುವದಕ್ಕಾಗಿ ಅದನ್ನು ಉಪಯೋಗಿಸುವರು. ನೀವು ಬೆಟ್ಟದ ಶಿಖರಗಳಲ್ಲಿ ತುಳಿದಾಡಿ ಅದನ್ನು ಪುಡಿ ಮಾಡುವಿರಿ. ಆ ಬೆಟ್ಟಗಳನ್ನು ನೀವು ಕುಂಟೆಯಂತೆ ಮಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇಗೋ, ನಿನ್ನನ್ನು ಹದವಾದ, ಹೊಸ ಮೊನೆಹಲ್ಲಿನ ಹಂತೀಕುಂಟೆಯನ್ನಾಗಿ ಮಾಡುವೆನು. ನೀನು ಬೆಟ್ಟಗಳನ್ನು ಹೊಕ್ಕು, ಪುಡಿಪುಡಿಮಾಡಿ, ಗುಡ್ಡಗಳನ್ನು ಹೊಟ್ಟಿನಂತೆ ಮಾಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 41:15
20 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಇಂತೆನ್ನುತ್ತಾರೆ: “ಸಿಯೋನ್ ನಗರಿಯೇ, ಎದ್ದು ಒಕ್ಕಣೆಮಾಡು. ಇದಕ್ಕಾಗಿ ನಿನ್ನ ಕೊಂಬನ್ನು ಕಬ್ಬಿಣವಾಗಿಸುವೆನು. ನಿನ್ನ ಗೊರಸನ್ನು ಕಂಚನ್ನಾಗಿ ಮಾಡುವೆನು. ಅನೇಕ ರಾಷ್ಟ್ರಗಳನ್ನು ನೀನು ತುಳಿದು ಧ್ವಂಸಮಾಡುವೆ. ಅವುಗಳನ್ನು ಕೊಳ್ಳೆಹೊಡೆದು ತಂದ ಸ್ವತ್ತನ್ನು ಸರ್ವೇಶ್ವರಸ್ವಾಮಿಗೆ ಮೀಸಲಾಗಿಡುವೆ. ಅವುಗಳಿಂದ ಬಂದ ಆಸ್ತಿಯನ್ನು ಲೋಕದೊಡೆಯನಿಗೆ ಪ್ರತ್ಯೇಕಿಸಿಡುವೆ.”


ಅಡ್ಡಿ ಅಡಚಣೆಗಳು ಬೆಟ್ಟದಂತಿದ್ದರೂ ನೀನು ದೇವಾಲಯವನ್ನು ಕಟ್ಟುವೆ. ಅಂತ್ಯದಲ್ಲಿ ಕಲಶವನ್ನು ಸ್ಥಾಪಿಸುವಾಗ ಜನರು ‘ಎಷ್ಟು ರಮ್ಯ! ಎಷ್ಟು ಸುಂದರ!’ ಎಂದು ಉದ್ಗರಿಸುವರು.”


ಧರೆಯನು ನೀ ಹಾದುಹೋಗುವೆ ರೌದ್ರದಿಂದ ರಾಷ್ಟ್ರಗಳನು ತುಳಿದುಹಾಕುವೆ ರೋಷದಿಂದ.


ನನ್ನ ಪ್ರಜೆಯೇ, ನನ್ನ ಕಣಜದ ದವಸವೇ, ಬಡಿತಕ್ಕೆ ಈಡಾದ ಜನರೇ, ಇಸ್ರಯೇಲರ ದೇವರಾದ ಸೇನಾಧಿಶ್ವರ ಸರ್ವೇಶ್ವರ ಸ್ವಾಮಿಯಿಂದ ನಾನು ಕೇಳಿದ್ದನ್ನೇ ತಿಳಿಸುತ್ತಿದ್ದೇನೆ.


ಸದಾಪನ್ನು ಒಕ್ಕುವುದು ಕಣದ ಗುಂಡಿನಿಂದಲ್ಲ, ದೊಣ್ಣೆಯಿಂದಲೇ.


ಪುಡಿಪುಡಿ ಮಾಡಿದೆ ನಾನವರನು ಗಾಳಿಗೆ ತೂರುವ ಧೂಳಿನಂತೆ I ಎತ್ತೆಸೆದುಬಿಟ್ಟೆ ನಾನವರನು ಮೋರಿಯ ಕೆಸರಿನಂತೆ II


ಹೌದು, ಪ್ರಚಂಡ ಜಲಪ್ರವಾಹಗಳಂತೆ ಪ್ರಬಲ ರಾಷ್ಟ್ರಗಳು ಆರ್ಭಟಿಸುತ್ತವೆ. ಆದರೆ ದೇವರು ಅವರನ್ನು ಗದರಿಸುವರು. ಅವರು ಬಿರುಗಾಳಿಗೆ ಸಿಕ್ಕಿದ ಬೆಟ್ಟದ ಹೊಟ್ಟಿನಂತೆ, ಸುಂಟರಗಾಳಿಗೆ ಸುತ್ತುವ ಧೂಳಿನಂತೆ ಓಡುವರು.


ಅರೀಯೇಲೇ, ಗುಂಪುಗುಂಪಾಗಿ ಕೂಡಿಬರುವ ನಿನ್ನ ಶತ್ರುಗಳು ಧೂಳಿಪುಡಿಯಂತೆ ತೂರಿಹೋಗುವರು. ತಂಡೋಪತಂಡವಾಗಿ ಬಂದಿರುವ ಭಯಂಕರ ಸೈನಿಕರು ಹೊಟ್ಟಿನಂತೆ ಹಾರಿಹೋಗುವರು. ತಟ್ಟನೆ ಕ್ಷಣಮಾತ್ರದಲ್ಲಿ ಕಣ್ಮರೆಯಾಗುವರು.


ನಾಶಪಡಿಸುವೆನು ಬೆಟ್ಟಗುಡ್ಡಗಳನು ಒಣಗಿಸಿಬಿಡುವೆನು ಹುಲ್ಲು ಸಸಿಗಳನು. ಒಣನೆಲ ಮಾಡುವೆನು ನದಿಗಳನು ಬತ್ತಿಸಿಬಿಡುವೆನು ಕೆರೆಕುಂಟೆಗಳನು.


(ಸ್ವಾಮೀ) ಆಕಾಶವನ್ನು ಸೀಳಿ ಇಳಿದು ಬರಲಾರಿರಾ? ನಿಮ್ಮ ದರ್ಶನವನ್ನು ಕಂಡು ಬೆಟ್ಟಗುಡ್ಡಗಳು ಗಡಗಡನೆ ನಡುಗಬಾರದೆ?


ನಾನು : ಪರ್ವತಗಳಿಗಾಗಿ ಅತ್ತು ಗೋಳಾಡುವೆನು ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು ಅವು ಸುಟ್ಟುಹೋಗಿವೆ, ಯಾರೂ ಅಲ್ಲಿ ಹಾದುಹೋಗರು. ದನಕರುಗಳ ಸದ್ದೂ ಕಿವಿಗೆ ಬೀಳದು ತೊಲಗಿಹೋಗಿವೆ ಮೃಗಪಕ್ಷಿಗಳೂ !


“ಬಾಬಿಲೋನೇ, ನೀನು ನನಗೊಂದು ಯುದ್ಧಾಸ್ತ್ರ, ಒಂದು ಗದೆ. ಈ ಗದೆಯಿಂದ ರಾಷ್ಟ್ರಗಳನ್ನು ಬಡಿದುಬಿಡುವೆನು, ರಾಜ್ಯಗಳನ್ನು ಅಳಿಸಿಬಿಡುವೆನು.


ಬಾಬಿಲೋನ್ ನಗರವು ತುಳಿದು ತುಳಿದು ಸರಿಮಾಡಿದ ಕಣದಂತಿದೆ. ಇಷ್ಟರಲ್ಲೆ ಕೊಯ್ಲುಕಾಲ ಅದಕ್ಕೆ ಸಂಭವಿಸಲಿದೆ; ಇದು ಇಸ್ರಯೇಲರ ದೇವರೂ ಸೇನಾಧೀಶ್ವರನೂ ಆದ ಸರ್ವೇಶ್ವರನ ನುಡಿ.”


ನಾನು ದೇಶವನ್ನು ಹಾಳುಪಾಳು ಮಾಡುವೆನು, ಅದರ ಶಕ್ತಿಯ ಮದವು ಇಳಿದುಹೋಗುವುದು; ಇಸ್ರಯೇಲಿನ ಮಲೆನಾಡು ಬೀಡುಬೀಳುವುದು; ಯಾರೂ ಇಲ್ಲಿ ಹಾದುಹೋಗರು.


ಆಗ ಕಬ್ಬಿಣ-ಮಣ್ಣು-ಕಂಚು-ಬೆಳ್ಳಿ-ಬಂಗಾರ ಇವುಗಳೆಲ್ಲವೂ ಪುಡಿಪುಡಿಯಾದವು; ಸುಗ್ಗಿಯ ಕಣಗಳ ಹೊಟ್ಟಿನಂತಾದವು. ಗಾಳಿ ಅವುಗಳನ್ನು ತೂರಿಕೊಂಡುಹೋಯಿತು. ಅವುಗಳಿಗೆ ನೆಲೆಯೇ ಇಲ್ಲವಾಯಿತು. ಪ್ರತಿಮೆಗೆ ಬಡಿದ ಆ ಬಂಡೆ ಮಹಾ ಪರ್ವತವಾಗಿ ಭೂಲೋಕದಲ್ಲೆಲ್ಲಾ ತುಂಬಿಕೊಂಡಿತು.


ಸಿಂಹವು ತಿರುಗಾಡುತ್ತಾ ಕಾಡುಮೃಗಗಳನ್ನು ಕಬಳಿಸುತ್ತದೆ. ಪ್ರಾಯದ ಸಿಂಹವು ಓಡಾಡುತ್ತಾ ಸುರಕ್ಷಣೆಯಿಲ್ಲದ ಕುರಿಮಂದೆಗಳನ್ನು ಸೀಳಿಹಾಕುತ್ತದೆ. ಅಂತೆಯೇ ಯಕೋಬನ ಅಳಿದುಳಿದ ಜನರು ದೇಶವಿದೇಶಗಳ ಹಲವಾರು ರಾಷ್ಟ್ರಗಳ ನಡುವೆ ನಾಶಕರವಾಗಿರುವರು.


ಆಮೇಲೆ ನಾಡನ್ನು ನಿಮಗೆ ಕೊಟ್ಟಿರುತ್ತೇನೆ. ಅದರಲ್ಲಿ ಕಾಡುಗಳಿದ್ದರೂ ನೀವು ಅವುಗಳನ್ನು ಕಡಿದು ಹಾಕಬಹುದು. ಅದಕ್ಕೆ ಸೇರಿರುವ ಬಯಲುಭೂಮಿ ನಿಮ್ಮದೇ. ಕಾನಾನ್ಯರು ಬಲಿಷ್ಠರು ಹಾಗೂ ಕಬ್ಬಿಣದ ರಥಗಳುಳ್ಳವರು. ಆದರೂ ನೀವು ಅವರನ್ನು ಹೊರದೂಡಬಲ್ಲಿರಿ,” ಎಂದು ಉತ್ತರ ಕೊಟ್ಟನು.


ಸರ್ವೇಶ್ವರ ಅವನಿಗೆ, “ನಾನು ನಿನ್ನೊಂದಿಗೆ ಇರುವುದರಿಂದ ನೀನು ಮಿದ್ಯಾನ್ಯರೆಲ್ಲರನ್ನೂ ಒಬ್ಬ ಮನುಷ್ಯನನ್ನೋ ಎಂಬಂತೆ ಸದೆಬಡಿಯುವೆ,” ಎಂದರು.


ಅದರ ಹೊಟ್ಟೆಯ ಅಡಿಭಾಗವು ಬೋಕಿಬಿಲ್ಲೆಗಳಂತೆ ಚೂಪು ಹಲಿವೆಯ ಹಾಗೆ ಕೆಸರಿನ ಮೇಲೆ ಮೈ ಚಾಚಿಕೊಂಡಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು