ಯೆಶಾಯ 41:17 - ಕನ್ನಡ ಸತ್ಯವೇದವು C.L. Bible (BSI)17 ದೀನದರಿದ್ರರು ನೀರಿಗಾಗಿ ಪರದಾಡುವಾಗ ಬಾಯಾರಿ ಅವರ ನಾಲಿಗೆ ಒಣಗಿಹೋದಾಗ ಪ್ರಸನ್ನನಾಗುವೆ ಸರ್ವೇಶ್ವರನಾದ ನಾನೇ. ಇಸ್ರಯೇಲಿನ ದೇವರಾದ ನಾನವರನ್ನು ಕೈಬಿಡುವೆನೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಬಾಯಾರಿ ನಾಲಿಗೆ ಒಣಗಿ ನೀರನ್ನು ಹುಡುಕಿ ಹೊಂದದ ದೀನದರಿದ್ರರಿಗೆ ಯೆಹೋವನೆಂಬ ನಾನು ಪ್ರಸನ್ನನಾಗುವೆನು, ಇಸ್ರಾಯೇಲಿನ ದೇವರಾದ ನಾನು ಅವರನ್ನು ಕೈಬಿಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಬಾಯಾರಿ ನಾಲಿಗೆ ಒಣಗಿ ನೀರನ್ನು ಹುಡುಕಿ ಹೊಂದದ ದೀನದರಿದ್ರರಿಗೆ ಯೆಹೋವನೆಂಬ ನಾನು ಪ್ರಸನ್ನನಾಗುವೆನು, ಇಸ್ರಾಯೇಲಿನ ದೇವರಾದ ನಾನು ಅವರನ್ನು ಕೈಬಿಡೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 “ಬಡಜನರು ನೀರಿಗಾಗಿ ಹುಡುಕಾಡುವರು. ಆದರೆ ನೀರು ಅವರಿಗೆ ದೊರಕುವದಿಲ್ಲ. ಅವರು ದಾಹಗೊಂಡಿದ್ದಾರೆ, ಅವರ ನಾಲಿಗೆ ಒಣಗಿಹೋಗಿದೆ. ನಾನು ಅವರ ಮೊರೆಯನ್ನು ಕೇಳುವೆನು. ನಾನು ಅವರನ್ನು ತೊರೆಯುವುದಿಲ್ಲ, ಅವರನ್ನು ಸಾಯಲು ಬಿಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಬಡವರೂ ದರಿದ್ರರೂ ನೀರನ್ನು ಹುಡುಕಿ ಕಾಣದೇ, ಬಾಯಾರಿಕೆಯಿಂದ ನಾಲಿಗೆ ಒಣಗಿದಾಗ, ಯೆಹೋವನಾದ ನಾನೇ ಅವರಿಗೆ ಉತ್ತರಕೊಡುವೆನು. ಇಸ್ರಾಯೇಲ್ ದೇವರಾಗಿರುವ ನಾನು ಅವರನ್ನು ಕೈಬಿಡೆನು. ಅಧ್ಯಾಯವನ್ನು ನೋಡಿ |