Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 41:18 - ಕನ್ನಡ ಸತ್ಯವೇದವು C.L. Bible (BSI)

18 ಹೊರಡಿಸುವೆನು ಬೋಳುಗುಡ್ಡಗಳಲ್ಲಿ ನದಿಗಳನು ತಗ್ಗುತಿಟ್ಟುಗಳಲ್ಲಿ ಒರತೆಗಳನು ಮಾರ್ಪಡಿಸುವೆನು ಕೆರೆಯಾಗಿ ಅರಣ್ಯವನು ಬುಗ್ಗೆಗಳಾಗಿ ಮರುಭೂಮಿಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಬೋಳುಗುಡ್ಡಗಳಲ್ಲಿ ನದಿಗಳನ್ನು, ಕಣಿವೆಗಳಲ್ಲಿ ಒರತೆಗಳನ್ನು ಹೊರಡಿಸಿ, ಅರಣ್ಯವನ್ನು ಕೆರೆಯಾಗಿಯೂ, ಮರುಭೂಮಿಯನ್ನು ಬುಗ್ಗೆಗಳನ್ನಾಗಿಯೂ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಬೋಳುಗುಡ್ಡಗಳಲ್ಲಿ ನದಿಗಳನ್ನು, ತಗ್ಗುಗಳಲ್ಲಿ ಒರತೆಗಳನ್ನು ಹೊರಡಿಸಿ ಅರಣ್ಯವನ್ನು ಕೆರೆಯಾಗಿಯೂ ಮರುಭೂವಿುಯನ್ನು ಬುಗ್ಗೆಗಳಾಗಿಯೂ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಒಣಬೆಟ್ಟಗಳಲ್ಲಿ ನದಿಗಳು ಹರಿಯುವಂತೆ ನಾನು ಮಾಡುವೆನು. ಕಣಿವೆಗಳ ಮೂಲಕ ಬುಗ್ಗೆಯ ನೀರು ಹರಿಯುವಂತೆ ಮಾಡುವೆನು. ಮರುಭೂಮಿಯನ್ನು ಸರೋವರವನ್ನಾಗಿ ಮಾಡುವೆನು. ಆ ಒಣನೆಲದಲ್ಲಿ ನೀರಿನ ಬುಗ್ಗೆಗಳು ಕಾಣುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಎತ್ತರವಾದ ಸ್ಥಳಗಳಲ್ಲಿ ನದಿಗಳನ್ನು ತಗ್ಗುಗಳ ಮಧ್ಯದಲ್ಲಿ ಬುಗ್ಗೆಗಳನ್ನು ಹೊರಡಿಸಿ, ಮರುಭೂಮಿಯನ್ನು ನೀರಿನ ಕೆರೆಯನ್ನಾಗಿಯೂ, ಒಣನೆಲವನ್ನು ನೀರಿನ ಒರತೆಗಳನ್ನಾಗಿಯೂ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 41:18
24 ತಿಳಿವುಗಳ ಹೋಲಿಕೆ  

ಕೆರೆಯಾಗಿಸಿದಾ ಮರುಭೂಮಿಯನು I ಊಟೆಯಾಗಿಸಿದ ಆ ಒಣನೆಲವನು II


ಸರ್ವೇಶ್ವರ ಸ್ವಾಮಿ ನಿಮ್ಮನ್ನು ನಿರಂತರವಾಗಿ ಮುನ್ನಡೆಸುವರು; ಮರುಭೂಮಿಯಲ್ಲೂ ನಿಮಗೆ ಮನಃತೃಪ್ತಿಯನ್ನು ನೀಡುವರು; ನಿಮ್ಮ ಎಲುಬುಗಳನ್ನು ಬಲಪಡಿಸುವರು; ನೀರೆರೆದ ತೋಟದಂತೆಯೂ ಬತ್ತಿಹೋಗದ ಬುಗ್ಗೆಯಂತೆಯೂ ನೀವು ಇರುವಿರಿ.


ಕೋಟೆಕೊತ್ತಲಗಳು ಬಿದ್ದುಹೋಗುವುವು. ಶತ್ರುಗಳ ಮಹಾಸಂಹಾರ ನಡೆಯುವ ಆ ದಿನದಂದು ಉನ್ನತ ಪರ್ವತಗಳಿಂದಲೂ ಎತ್ತರವಾದ ಗುಡ್ಡಗಳಿಂದಲೂ ತೊರೆಗಳೂ ನೀರಿನ ಕಾಲುವೆಗಳೂ ಹರಿಯುವುವು.


ನಿಂತಿಹನು ಕುರಿಮರಿಯಾದಾತನು ಸಿಂಹಾಸನದ ನಡುವೆ ಕಾಯುವನು ಅವರುಗಳನು ಕುರುಬನಂತೆ ನಡೆಸುವನು ಅವರನು ಜೀವಜಲದ ಒರತೆಗಳ ಬಳಿಗೆ ದೇವನೊರಸುವನು ಅವರ ಕಂಬನಿಗಳನು ಬಿಡದೆ', “ ಎಂದು ನನಗೆ ತಿಳಿಸಿದನು.


ಮಳೆಗರೆವೆನು ಬತ್ತಿದ ಭೂಮಿಯಲಿ ಹರಿಸುವೆನು ಕಾಲುವೆಗಳನು ಒಣನೆಲದಲಿ. ಮಳೆಗರೆವೆನು ನನ್ನಾತ್ಮವನು ನಿನ್ನ ಸಂತಾನದ ಮೇಲೆ ನನ್ನ ಆಶೀರ್ವಾದವನು ನಿನ್ನ ಸಂತತಿಯ ಮೇಲೆ.


ಬಳಿಕ ಆ ದೇವದೂತನು ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ಸ್ಫಟಿಕದಂತೆ ಮಿನುಗುತ್ತಿತ್ತು. ಅದು ದೇವರ ಹಾಗೂ ಯಜ್ಞದ ಕುರಿಮರಿಯ ಸಿಂಹಾಸನದಲ್ಲಿ ಉಗಮಿಸಿ,


ಆ ದಿನ ಬಂದಾಗ ಜೀವಜಲವು ಜೆರುಸಲೇಮಿನಿಂದ ಹರಿಯುವುದು. ಅದರ ಅರ್ಧಭಾಗ ಪೂರ್ವದ ಸಮುದ್ರಕ್ಕೂ ಇನ್ನರ್ಧಭಾಗ ಪಶ್ಚಿಮದ ಸಮುದ್ರಕ್ಕೂ ಹರಿಯುವುದು. ಮಳೆ, ಬೇಸಿಗೆ ಎನ್ನದೆ ಪ್ರವಾಹ ಹರಿಯುತ್ತಲೇ ಇರುವುದು.


ಆ ದಿನಗಳಲ್ಲಿ ಬೆಟ್ಟಗುಡ್ಡಗಳಿಂದ ದ್ರಾಕ್ಷಾರಸ ಮತ್ತು ಹಾಲುತುಪ್ಪ ಹರಿಯುವುದು. ಜುದೇಯ ನಾಡಿನ ಹಳ್ಳಕೊಳ್ಳಗಳು ನೀರಿನಿಂದ ತುಂಬಿರುವುವು. ದೇವಾಲಯದಿಂದ ನೀರು ಚಿಮ್ಮಿಬಂದು ಆಕಾಚಿಯದ ಹಳ್ಳವನ್ನು ತಂಪಾಗಿಸುವುದು.


ಪ್ರತಿಯೊಬ್ಬನೂ ಬಿರುಗಾಳಿಗೆ ತಡೆಯಂತೆ, ಬಿರುಮಳೆಗೆ ಬಿಡಾರದಂತೆ, ಮರುಭೂಮಿಯಲ್ಲಿ ಜಲಧಾರೆಯಂತೆ, ಬೆಂಗಾಡಿನಲ್ಲಿ ಭಾರಿಬಂಡೆಯ ನೆರಳಿನಂತೆ ಇರುವನು.


ಉದ್ಧರಿಸುವಾ ಒರತೆಗಳಿಂದ ಸೇದುವಿರಿ ನೀರನು ಹರುಷದಿಂದ.


ಆತ ಮರುಭೂಮಿಯಲ್ಲಿ ತನ್ನ ಜನರನ್ನು ನಡೆಸಿದಾಗ ಬಳಲಲಿಲ್ಲ ಅವರು ಬಾಯಾರಿಕೆಯಿಂದ; ಹರಿಸಿದನು ನೀರನ್ನು ಅವರಿಗಾಗಿ ಕಲ್ಲಿನೊಳಗಿಂದ ಜಲವಾಹಿನಿ ಹರಿಯಿತು ಆತ ಸೀಳಿದ ಬಂಡೆಯಿಂದ.


ಬಂಡೆಯನಾತ ಸೀಳಲು ನೀರು ಹರಿದು ಬಂದಿತು I ನಿರ್ಜಲ ಪ್ರದೇಶದಲದು ನದಿಯಾಗಿ ಹರಿಯಿತು II


ನದಿಯೊಂದು ಆನಂದಗೊಳಿಸುವುದು ದೇವನಗರವನು I ಪುನೀತಗೊಳಿಸುವುದು ಪರಾತ್ಪರನ ನಿವಾಸವನು II


ಬುಗ್ಗೆಗಳು ಚಿಮ್ಮಿ ಓಡಮಾಡುವೆ ತಗ್ಗುಗಳಲಿ I ನದಿಗಳ ಹರಿಯಮಾಡುವೆ ಗುಡ್ಡಗಳ ನಡುವೆಯಲಿ II


ಅಲ್ಲಿ ಸರ್ವೇಶ್ವರ ತಮ್ಮ ಶಕ್ತಿಯನ್ನು ತೋರ್ಪಡಿಸುವರು. ನದಿಸರೋವರಗಳಂತೆ ನಮ್ಮನ್ನು ಸುತ್ತುವರಿಯುವರು. ಹುಟ್ಟುಗೋಲಿನ ದೋಣಿಯಾಗಲಿ, ದೊಡ್ಡದಾದ ಹಡಗಾಗಲಿ ಅದನ್ನು ದಾಟವು.


ಆನಂದಿಸಲಿ ಅರಣ್ಯವೂ ಮರುಭೂಮಿಯೂ ಹೂಗಳಂತೆ ಅರಳಿ ಹರ್ಷಿಸಲಿ ಒಣನೆಲವು.


ಇಗೋ, ನನ್ನ ಭಕ್ತರು ಊಟಮಾಡುವರು, ನೀವಾದರೋ ಹಸಿದಿರುವಿರಿ. ನನ್ನ ಭಕ್ತರು ಪಾನಮಾಡುವರು, ನೀವಾದರೋ ದಾಹಗೊಳ್ಳುವಿರಿ. ನನ್ನ ಭಕ್ತರು ಉಲ್ಲಾಸಗೊಳ್ಳುವರು; ನೀವಾದರೋ ಲಜ್ಜೆಗೊಳ್ಳುವಿರಿ.


ದೇವರು ಲೆಹೀಯಲ್ಲಿ ಒರಳಬಂಡೆಯನ್ನು ಸೀಳಿ ಅದರೊಳಗಿಂದ ನೀರು ಬರುವಂತೆ ಮಾಡಿದರು. ಅವನು ಕುಡಿದು ಪುನಃ ಚೇತನಗೊಂಡನು. ಆದುದರಿಂದ ಅದಕ್ಕೆ ‘ಏನ್ ಹಕ್ಕೋರೇ’ ಎಂದು ಹೆಸರಾಯಿತು; ಅದು ಇಂದಿನವರೆಗೂ ಲೆಹೀಯಲ್ಲಿದೆ.


ಬತ್ತಿದ ನದಿಯಲಿ ನೀರು ಮರಳಿ ಉಕ್ಕಿ ಹರಿವಂತೆ I ನೀಡು ಸಿರಿ ಸೌಭಾಗ್ಯ, ಹೇ ಪ್ರಭೂ, ನಮಗೆ ಮತ್ತೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು