Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 41:2 - ಕನ್ನಡ ಸತ್ಯವೇದವು C.L. Bible (BSI)

2 ಕರೆತಂದವರಾರು ಆ ಪರಾಕ್ರಮಿಯನ್ನು ಪೂರ್ವದಿಂದ? ಅವನು ಗೆದ್ದುಬರುವಂತೆ ಮಾಡಿದವರಾರು ದಿಗ್ವಿಜಯದಿಂದ? ರಾಷ್ಟ್ರಗಳನ್ನು, ರಾಜರುಗಳನ್ನು ಸೋಲಿಸಿದವರಾರು ಅವನ ಕೈಯಿಂದ? ಧೂಳು ಧೂಳಾಗಿಸುತ್ತಾನೆ ಅವರನ್ನು ಅವನ ಖಡ್ಗದಿಂದ ಗಾಳಿಗೆ ತೂರಿಹೋಗುವ ಹುಲ್ಲನ್ನಾಗಿಸುತ್ತಾನೆ ಅವನ ಬಿಲ್ಲಿನಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಮೂಡಣದಿಂದ ಒಬ್ಬನನ್ನು ಎಬ್ಬಿಸಿ, ನ್ಯಾಯದ ಸಂಕಲ್ಪಾನುಸಾರವಾಗಿ ತನ್ನ ಪಾದಸನ್ನಿಧಿಗೆ ಕರೆದು, ಜನಾಂಗಗಳನ್ನು ಅವನ ವಶಕ್ಕೆ ಕೊಟ್ಟು, ಅವನನ್ನು ರಾಜರ ಮೇಲೆ ಆಳುವಂತೆ ಮಾಡಿ, ಅವರ ಕತ್ತಿಯನ್ನು ಧೂಳನ್ನಾಗಿಯೂ, ಬಿಲ್ಲನ್ನು ಗಾಳಿ ಬಡಿದುಕೊಂಡು ಹೋಗುವ ಹುಲ್ಲನ್ನಾಗಿಯೂ ಅವರನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಮೂಡಲಲ್ಲಿ ಒಬ್ಬನನ್ನು ಎಬ್ಬಿಸಿ ನ್ಯಾಯದ ಸಂಕಲ್ಪಾನುಸಾರವಾಗಿ ತನ್ನ ಪಾದಸನ್ನಿಧಿಗೆ ಕರೆದು ಜನಾಂಗಗಳನ್ನು ಅವನ ವಶಕ್ಕೆ ಕೊಟ್ಟು ಅವನನ್ನು ರಾಜರ ಮೇಲೆ ಆಳಗೊಡಿಸಿ ಅವರ ಕತ್ತಿಯನ್ನು ದೂಳನ್ನಾಗಿಯೂ ಬಿಲ್ಲನ್ನು ಗಾಳಿ ಬಡಿದುಕೊಂಡು ಹೋಗುವ ಒಣಹುಲ್ಲನ್ನಾಗಿಯೂ ಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಈ ಪ್ರಶ್ನೆಗಳಿಗೆ ಉತ್ತರಿಸಿರಿ: ಪೂರ್ವದಿಕ್ಕಿನಿಂದ ಬರುವ ಮನುಷ್ಯನನ್ನು ಎಚ್ಚರಿಸಿದವರು ಯಾರು? ಅವನು ಒಳ್ಳೆಯತನವನ್ನು ತನ್ನೊಂದಿಗಿರಲು ಕೇಳುತ್ತಾನೆ. ತನ್ನ ಖಡ್ಗವನ್ನು ಉಪಯೋಗಿಸಿ ಜನಾಂಗಗಳನ್ನು ಸೋಲಿಸುವನು. ಅವರನ್ನು ಧೂಳಿನಂತೆ ಮಾಡುವನು. ತನ್ನ ಬಿಲ್ಲನ್ನು ಉಪಯೋಗಿಸಿ ರಾಜರನ್ನು ವಶಪಡಿಸಿಕೊಳ್ಳುತ್ತಾನೆ. ಅವರು ಗಾಳಿಯಲ್ಲಿ ತೂರಾಡುವ ಹುಲ್ಲಿನಂತೆ ಓಡಿಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಪೂರ್ವದಿಂದ ನೀತಿವಂತನನ್ನು ಎಬ್ಬಿಸಿ, ಅವನನ್ನು ತನ್ನ ಪಾದಸನ್ನಿಧಿಗೆ ಕರೆದು, ರಾಷ್ಟ್ರಗಳನ್ನು ಅವನ ಮುಂದೆ ಕೊಟ್ಟುಬಿಟ್ಟು, ಅವನನ್ನು ರಾಜರ ಮೇಲೆ ಆಳುವುದಕ್ಕೆ ಮಾಡಿದವನು ಯಾರು? ಅವನ ಖಡ್ಗವನ್ನು ಧೂಳನ್ನಾಗಿಯೂ, ಅವನ ಬಿಲ್ಲನ್ನು ಹಾರಿಹೋಗುವ ಹೊಟ್ಟಿನಂತೆಯೂ ಅವರನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 41:2
22 ತಿಳಿವುಗಳ ಹೋಲಿಕೆ  

ಇಂತೆಂದರು ಸರ್ವೇಶ್ವರ ತಾನು ಅಭಿಷೇಕಿಸಿದ ಕೋರೆಷನಿಗೆ “ರಾಷ್ಟ್ರಗಳನ್ನು ನೀ ಸದೆಬಡಿಯುವಂತೆ ರಾಜಮಹಾರಾಜರನು ನಿಶ್ಯಸ್ತ್ರರನ್ನಾಗಿ ಮಾಡುವಂತೆ ಮುಚ್ಚಲಾಗದ ಹಾಗೆ ಬಾಗಿಲು ಹೆಬ್ಬಾಗಿಲುಗಳನ್ನು ತೆರೆಯುವಂತೆ ನಾ ನಿನ್ನ ಕೈಹಿಡಿದು ನಡೆಸುವೆನು ಮುಂದೆ.


ಪುಡಿಪುಡಿ ಮಾಡಿದೆ ನಾನವರನು ಮಣ್ಣಿನ ಹೆಂಟೆಯಂತೆ ಎತ್ತೆಸೆದುಬಿಟ್ಟೆ ನಾನವರನು ಮೋರಿಯ ಕೆಸರಿನಂತೆ.


ಮೂಡಲಿಂದ ಬೇಟೆಗಾಗಿ ರಣಹದ್ದನು ಕರೆದಂತೆ ಕರೆದಿಹೆನು ದೂರದೇಶದಿಂದ ನನ್ನ ಸಂಕಲ್ಪ ಈಡೇರಿಸಲೆಂದೇ. ನುಡಿದಿರುವೆನು ನಾನು; ಈಡೇರಿಸುವೆನು ಅದನ್ನು ಯೋಜಿಸಿರುವೆನು ನಾನು; ಸಾಧಿಸುವೆನು ಅದನ್ನು.


ಹುರಿದುಂಬಿಸಿ ಕರೆತಂದಿರುವೆನು ಒಬ್ಬನನ್ನು ಉತ್ತರದಿಂದ ನನ್ನ ನಾಮವನ್ನು ಪ್ರಚುರಪಡಿಸಲು ಬಂದಿಹನಾತ ಪೂರ್ವದಿಂದ ಕುಂಬಾರನು ಜೇಡಿಮಣ್ಣನ್ನು ತುಳಿಯುವಂತೆ ತುಳಿಯುವನಾತ ರಾಜರನ್ನು ಮಣ್ಣಂತೆ.


ನೆಟ್ಟಕೂಡಲೇ, ಬಿತ್ತಿದಾಕ್ಷಣವೇ, ಭೂಮಿಯಲ್ಲಿ ಬೇರೂರುವಾಗಲೆ ಬಾಡುವುದು ಇವರ ಸಂತಾನ ಆತನ ಶ್ವಾಸದಿಂದಲೆ; ಬಡಿದು ಹೊಯ್ಯಲ್ಪಡುವುದು ಒಣಹುಲ್ಲಿನಂತೆ ಬಿರುಗಾಳಿಯಿಂದಲೆ.


ಪರ್ಷಿಯ ರಾಜನಾದ ಸೈರಸೆಂಬ ನನ್ನ ಮಾತನ್ನು ಕೇಳಿರಿ; ಪರಲೋಕ ದೇವರಾದ ಸರ್ವೇಶ್ವರಸ್ವಾಮಿ ಭೂಲೋಕದ ಎಲ್ಲ ರಾಜ್ಯಗಳನ್ನು ನನಗೆ ಕೊಟ್ಟಿದ್ದಾರೆ; ‘ನನಗಾಗಿ ಜುದೇಯ ನಾಡಿನ ಜೆರುಸಲೇಮಿನಲ್ಲಿ ಒಂದು ಆಲಯವನ್ನು ಕಟ್ಟಿಸಬೇಕು’ ಎಂದು ಅವರು ಆಜ್ಞಾಪಿಸಿದ್ದಾರೆ.


ಧರ್ಮಸಾಧನೆಗಾಗಿ ಕೋರೆಷನನ್ನು ಉದಯಗೊಳಿಸಿರುವೆನು ಅವನ ಮಾರ್ಗಗಳನ್ನು ನಾನೇ ಸರಾಗಮಾಡುವೆನು ನನ್ನ ನಗರವನು ಪುನರ್ ನಿರ್ಮಾಣಮಾಡುವನು ಅವನು ಸೆರೆಯಾದ ನನ್ನ ಜನರನು ಬಿಡುಗಡೆ ಮಾಡುವನು ಸಂಬಳವನ್ನಾಗಲಿ ಸಂಭಾವನೆಯನ್ನಾಗಲಿ ಸ್ವೀಕರಿಸನು. ಇದ ನುಡಿದಿರುವೆನು ಸೇನಾಧೀಶ್ವರ ಸರ್ವೇಶ್ವರನಾದ ನಾನು.”


"ಪರ್ಷಿಯದ ರಾಜ ಸೈರಸ್ ಎಂಬ ನನ್ನ ಮಾತಿಗೆ ಕಿವಿಗೊಡಿ; ಪರಲೋಕ ದೇವರಾದ ಸರ್ವೇಶ್ವರ ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನು ಒಪ್ಪಿಸಿದ್ದಾರೆ; ತಮಗಾಗಿ ಜುದೇಯ ನಾಡಿನ ಜೆರುಸಲೇಮಿನಲ್ಲಿ ಆಲಯವನ್ನು ಕಟ್ಟಬೇಕೆಂದು ಆಜ್ಞಾಪಿಸಿದ್ದಾರೆ; ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತಾರೋ ಅವರು ಸ್ವಂತನಾಡಿಗೆ ಹೋಗಬಹುದು; ಅವರ ದೇವರಾದ ಸರ್ವೇಶ್ವರ ಅವರೊಂದಿಗೆ ಇರುತ್ತಾರೆ!” ಎಂದು ಪ್ರಕಟಿಸಿದನು.


ಈ ಮೆಲ್ಕಿಸದೇಕನು ಸಾಲೇಮ್ ನಗರದ ರಾಜನೂ ಮಹೋನ್ನತ ದೇವರ ಯಾಜಕನೂ ಆಗಿದ್ದನು. ಶತ್ರುರಾಜರನ್ನು ಗೆದ್ದು ಹಿಂದಿರುಗುತ್ತಿದ್ದ ಅಬ್ರಹಾಮನನ್ನು ಈತನು ಎದುರುಗೊಂಡು ಆಶೀರ್ವದಿಸಿದನು.


ಯೆಹೋವಾಹಾಜನಿಗೆ ಐವತ್ತುಮಂದಿ ರಾಹುತರು, ಹತ್ತು ರಥಗಳು, ಹತ್ತುಸಾವಿರ ಮಂದಿ ಕಾಲಾಳುಗಳು ಮಾತ್ರ ಉಳಿದಿದ್ದರು. ಸಿರಿಯಾದವರ ಅರಸನು ಬೇರೆ ಎಲ್ಲರನ್ನೂ ಸಂಹರಿಸಿ, ಕಣದ ಧೂಳಿಪಟದಂತೆ ಮಾಡಿಬಿಟ್ಟನು.


ಅಬ್ರಾಮನಿಗೆ ತೊಂಬತ್ತೊಂಬತ್ತು ವರ್ಷಗಳಾಗಿದ್ದಾಗ, ಸರ್ವೇಶ್ವರ ದರ್ಶನವಿತ್ತು ಇಂತೆಂದರು: “ನಾನು ಸರ್ವಶಕ್ತ ಸರ್ವೇಶ್ವರ. ನೀನು ನನ್ನ ಸಮ್ಮುಖದಲ್ಲಿದ್ದು ನಿರ್ದೋಷಿಯಾಗಿ ನಡೆದುಕೊಳ್ಳಬೇಕು.


ತೆರಹನು ತನ್ನ ಮಗನಾದ ಅಬ್ರಾಮನನ್ನು ಮತ್ತು ತನಗೆ ಮೊಮ್ಮಗನೂ ಹಾರಾನನಿಗೆ ಮಗನೂ ಆದ ಲೋಟನನ್ನೂ ಹಾಗು ತನಗೆ ಸೊಸಯೂ ಅಬ್ರಾಮನಿಗೆ ಹೆಂಡತಿಯೂ ಆದ ಸಾರಯಳನ್ನೂ ಕರೆದುಕೊಂಡು ಬಾಬಿಲೋನಿನ ಊರ್ ಎಂಬ ಪಟ್ಟಣವನ್ನು ಬಿಟ್ಟು ಕಾನಾನ್ ನಾಡಿಗೆ ತೆರಳಿದನು. ಅವರು ಹಾರಾನ್ ಎಂಬ ಪಟ್ಟಣವನ್ನು ತಲುಪಿ ಅಲ್ಲಿ ವಾಸಮಾಡಿಕೊಂಡರು.


ಆಗ ಪೂರ್ವದಿಕ್ಕಿನಿಂದ ಮತ್ತೊಬ್ಬ ದೇವದೂತನು ಏರಿಬಂದನು. ಅವನು ಜೀವಸ್ವರೂಪಿಯಾದ ದೇವರ ಮುದ್ರೆಯನ್ನು ಕೈಯಲ್ಲಿ ಹಿಡಿದಿದ್ದನು. ಅವನು ಭೂಮಿಗೂ ಸಮುದ್ರಕ್ಕೂ ಕೇಡನ್ನು ಮಾಡುವ ಅಧಿಕಾರವನ್ನು ಪಡೆದಿದ್ದ ನಾಲ್ಕು ಮಂದಿ ದೇವದೂತರಿಗೆ:


ಆರನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಯೂಫ್ರೆಟಿಸ್ ಎಂಬ ಮಹಾನದಿಯ ಮೇಲೆ ಸುರಿದನು. ಕೂಡಲೇ ಅದರ ನೀರು ಬತ್ತಿಹೋಯಿತು. ಇದರ ಪರಿಣಾಮವಾಗಿ ಪೂರ್ವದೇಶದ ರಾಜರು ಬರುವುದಕ್ಕೆ ಮಾರ್ಗವಾಯಿತು.


ಹಿಂದಟ್ಟುತ್ತಾನೆ ಅವರನ್ನು ನಿರ್ಭೀತಿಯಿಂದ ಮುನ್ನುಗ್ಗುತ್ತಾನೆ ಕಾಲು ನೆಲ ಊರದಷ್ಟು ವೇಗದಿಂದ.


ಸರ್ವೇಶ್ವರ ಸ್ವಾಮಿಯಾದ ನಾನು ಕೈ ಹಿಡಿದು ಕಾದಿರಿಸುವೆನು ನಿನ್ನನು, ಕರೆದಿಹೆನು ನಿನ್ನನ್ನು ಸದ್ಧರ್ಮ ಸಾಧನೆಗಾಗಿ ಇತ್ತಿರುವೆನು ನಿನ್ನನು ಜನರಿಗೆ ಒಡಂಬಡಿಕೆಯಾಗಿ ನೇಮಿಸಿರುವೆನು ನಿನ್ನನು ರಾಷ್ಟ್ರಗಳಿಗೆ ಬೆಳಕಾಗಿ.


ಆತನನ್ನು ಹೆಸರಿಸಿ ಕರೆದವನು ನಾನೇ ಆತನನ್ನು ಬರಮಾಡಿದವನೂ ನಾನೇ. ಆತನು ಗಳಿಸುವುದು ಜಯವನ್ನೇ.


“ಸ್ವಾಮಿ ತೃಣೀಕರಿಸಿದನು ನನ್ನ ಶೂರರನ್ನೆಲ್ಲಾ ನನ್ನ ಕಣ್ಮುಂದೆಯೇ. ಸೈನ್ಯಸಮೂಹವನ್ನೆ ಬರಮಾಡಿದನು ನನ್ನ ಯುವಕರನ್ನು ಸದೆಬಡಿಯಲೆಂದೇ. ಯೆಹೂದಿಯೆಂಬ ಯುವತಿಯನ್ನು ತುಳಿಸಿದನು ತೊಟ್ಟಿಯಲ್ಲಿ ದ್ರಾಕ್ಷಿ ತುಳಿವಂತೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು