Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 41:20 - ಕನ್ನಡ ಸತ್ಯವೇದವು C.L. Bible (BSI)

20 ಇದನು ಕಂಡರಿತು ಗ್ರಹಿಸಿಕೊಳ್ಳುವರು ಜನರು ಮನಸಾರೆ, ನುಡಿವರಾಗ, ‘ಇದನ್ನು ಮಾಡಿದ ಹಸ್ತವು ಸರ್ವೇಶ್ವರ ಸ್ವಾಮಿಯದೇ, ಇದನ್ನು ಸೃಷ್ಟಿಸಿದಾತ ಇಸ್ರಯೇಲಿನ ಪರಮಪಾವನ ಸ್ವಾಮಿಯೇ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಗ ಯೆಹೋವನ ಹಸ್ತವು ಇದನ್ನು ಮಾಡಿದೆ, ಹೌದು, ಇಸ್ರಾಯೇಲಿನ ಸದಮಲಸ್ವಾಮಿಯೇ ಸೃಷ್ಟಿಸಿದ್ದಾನೆ” ಎಂದು ಎಲ್ಲರೂ ಕಂಡು ತಿಳಿದು ಮನಸ್ಸಿಗೆ ತಂದು ಗ್ರಹಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆಗ ಯೆಹೋವನ ಹಸ್ತವು ಇದನ್ನು ಮಾಡಿದೆ, ಹೌದು, ಇಸ್ರಾಯೇಲಿನ ಸದಮಲ ಸ್ವಾವಿುಯೇ ಸೃಷ್ಟಿಸಿದ್ದಾನೆ ಎಂದು ಎಲ್ಲರೂ ಕಂಡು ತಿಳಿದು ಮನಮುಟ್ಟಿ ಗ್ರಹಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಜನರು ಇವುಗಳನ್ನು ನೋಡಿ, ಇವು ಯೆಹೋವನ ಶಕ್ತಿಯಿಂದ ಆದವು ಎಂದು ತಿಳಿದುಕೊಳ್ಳುವರು. ಜನರು ಈ ಸಂಗತಿಗಳನ್ನು ನೋಡಿ ಇಸ್ರೇಲರ ಪರಿಶುದ್ಧನಾದ ಯೆಹೋವನೇ ಇವುಗಳನ್ನು ಮಾಡಿದನೆಂದು ತಿಳಿದುಕೊಳ್ಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ಯೆಹೋವ ದೇವರ ಹಸ್ತವು ಇದನ್ನು ಮಾಡಿದೆ ಎಂದೂ, ಇಸ್ರಾಯೇಲಿನ ಪರಿಶುದ್ಧನು ಇದನ್ನು ಸೃಷ್ಟಿಸಿದನು ಎಂದೂ ಅವರು ಕಂಡು ತಿಳಿದು, ಮನಸ್ಸಿಗೆ ಗ್ರಹಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 41:20
20 ತಿಳಿವುಗಳ ಹೋಲಿಕೆ  

ಇವುಗಳೆಲ್ಲವನ್ನು ಮಾಡಿದ್ದು ಸರ್ವೇಶ್ವರನ ಕೈಯೇ ಇದು ತಿಳಿಯದಿರುವುದು ಯಾರಿಗೆ ತಾನೆ?


ಜಯ ಜಯಕಾರ ಮಾಡು ಓ ಆಕಾಶವೇ, ಜಯಘೋಷ ಮಾಡು ಭೂ ತಳವೇ, ಹರ್ಷಧ್ವನಿಗೈಯಿರಿ ಬೆಟ್ಟಗುಡ್ಡಗಳೇ ವನವೃಕ್ಷಗಳೇ. ವಿಮೋಚಿಸಿದನು ಸರ್ವೇಶ್ವರ ಯಕೋಬನನು, ಇಸ್ರಯೇಲನ್ನು ರಕ್ಷಿಸಿ ಪ್ರಚಾರಗೊಳಿಸಿದನು ತನ್ನ ಮಹಿಮೆಯನು.


ನಾ ಸೃಷ್ಟಿಸಿದ ಆಪ್ತ ಜನಕೆ ನೀಡುವೆನು ಜಲಪಾನವನು; ಎಂದೇ ಸ್ತುತಿಸಿಕೊಂಡಾಡುವರು ನನ್ನನು.”


ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೆ ನಿನ್ನನ್ನು ಸಾಯಿಸದೆ ಉಳಿಸಿದ್ದೇನೆ.


ಪ್ರಭು ತಮ್ಮ ಸದ್ಭಕ್ತರೆಲ್ಲರಿಂದ ಸನ್ಮಾನವನ್ನೂ ವಿಶ್ವಾಸಿಗಳೆಲ್ಲರಿಂದ ಗೌರವವನ್ನೂ ಪಡೆಯುವ ಆ ದಿನದಲ್ಲಿ ಇದೆಲ್ಲಾ ಸಂಭವಿಸುವುದು. ನಾವು ನಿಮಗಿತ್ತ ಸಾಕ್ಷಿಯನ್ನು ನಂಬಿದ ನೀವೆಲ್ಲರೂ ಅವರೊಂದಿಗಿರುವಿರಿ.


ನನ್ನ ರಕ್ಷಣೆ ನಿನ್ನ ಕೈಯಿಂದಾದುದೆಂದು ಅವರರಿಯಲಿ I ಅದು ನಿನ್ನಿಂದಲೇ ಹೇ ಪ್ರಭು, ಆದುದೆಂದು ಖಚಿತವಾಗಲಿ II


“ಅವರ ಕೃತ್ಯಗಳೂ ಆಲೋಚನೆಗಳೂ ನನಗೆ ತಿಳಿದಿವೆ. ಸಮಸ್ತ ರಾಷ್ಟ್ರಗಳನ್ನೂ ಸಕಲ ಭಾಷೆಯವರನ್ನೂ ಒಟ್ಟಿಗೆ ಬರಮಾಡುವೆನು. ಅವರು ಬಂದು ನನ್ನ ಮಹಿಮೆಯ ಪ್ರಕಾಶವನ್ನು ಕಾಣುವರು.


ಯಕೋಬ್ಯರಿಗೆ ವಿರುದ್ಧವಾದ ಶಕುನವಿಲ್ಲ ಇಸ್ರಯೇಲರಿಗೆ ವಿರುದ್ಧವಾದ ತಂತ್ರಮಂತ್ರವಿಲ್ಲ. ತಾನು ಮಾಡುವುದನ್ನು ತತ್ಕಾಲದಲ್ಲೇ ದೇವ ತಿಳಿಸುತ್ತಾನೆ ಯಕೋಬ್ಯರಿಗೆ ಅದನ್ನು ಸೂಚಿಸುತ್ತಾನೆ ಸಮಯೋಚಿತವಾಗಿ ಆ ಇಸ್ರಯೇಲರಿಗೆ.


ನಾನು ನಿಮ್ಮನ್ನು ನನ್ನ ಪ್ರಜೆಯಾಗಿ ಮಾಡುವೆನು; ನಾನು ನಿಮ್ಮ ದೇವರಾಗಿರುವೆನು. ಈಜಿಪ್ಟಿನವರು ಹೊರಿಸುವ ದುಡಿಮೆಯನ್ನು ನಾನು ನಿಮ್ಮಿಂದ ಬಿಡಿಸಿದಾಗ ಸರ್ವೇಶ್ವರ ಎಂಬ ನಾನೇ ನಿಮ್ಮ ದೇವರೆಂದು ನಿಮಗೆ ತಿಳಿದುಬರುವುದು.


ಚಂಚಲಚಿತ್ತರು ಬುದ್ಧಿವಂತರಾಗುವರು. ಗೊಣಗುಟ್ಟುವವರು ಧ್ಯಾನಮಗ್ನರಾಗುವರು.


ಗೋಚರವಾಗುವುದಾಗ ಸರ್ವೇಶ್ವರ ಸ್ವಾಮಿಯ ಮಹಿಮೆಯು, ಮಾನವರೆಲ್ಲರೂ ಅದನ್ನು ಕಾಣುವರು ಒಟ್ಟಿಗೆ, ಸರ್ವೇಶ್ವರ ಸ್ವಾಮಿಯೇ ಇದನ್ನು ಬಾಯಾರೆ ನುಡಿದಿದ್ದಾರೆ.”


ನಾನೇ ಸರ್ವೇಶ್ವರನು, ನಿಮ್ಮ ಪರಮಪೂಜ್ಯನು ಇಸ್ರಯೇಲಿನ ಸೃಷ್ಟಿಕರ್ತನು, ನಿಮ್ಮ ಅರಸನು.”


ಸಾಕುತಂದೆಗಳಾಗುವರು ರಾಜರು ನಿನಗೆ ಸಾಕುತಾಯಿಯರಾಗುವರು ರಾಣಿಯರು ನಿನಗೆ. ನಿನ್ನ ಪಾದಧೂಳಿಯ ನೆಕ್ಕುವರವರು ಸಾಷ್ಟಾಂಗವೆರಗಿ ನನಗೆ. ಆಗ ನಿನಗೆ ಗೊತ್ತಾಗುವುದು ನಾನೇ ಸರ್ವೇಶ್ವರನೆಂದು ನನ್ನನ್ನು ನಿರೀಕ್ಷಿಸುವವರು ಆಶಾಭಂಗಪಡರೆಂದು.


ಇದನ್ನು ಕಂಡಾಗ ನಿಮ್ಮೆದೆ ಸಂತಸದಿಂದ ಉಬ್ಬುವುದು ಚಿಗುರುವುದು ಹಸಿಹುಲ್ಲಂತೆ ನಿಮ್ಮೆಲುಬು. ‘ಸರ್ವೇಶ್ವರನ ಕೃಪಾಹಸ್ತ ತನ್ನ ಭಕ್ತರ ಮೇಲೆ ಆತನ ರೋಷಾವೇಶ ಶತ್ರುಗಳ ಮೇಲೆ’ ಎಂಬುವುದು ವ್ಯಕ್ತವಾಗುವುದು ನಿಮಗೆ.


ಈ ವಿವೇಕವು ಕೂಡ ಸೇನಾಧೀಶ್ವರ ಸರ್ವೇಶ್ವರನಿಂದಲೇ ಬರುತ್ತದೆ. ಅವರ ಆಲೋಚನೆ ಅತಿಶಯವಾದುದು. ಅವರ ಜ್ಞಾನ ಸರ್ವಶ್ರೇಷ್ಠವಾದುದು.


ಇದನ್ನೆಲ್ಲಾ ನಡೆಯಿಸಿ ನೆರವೇರಿಸಿದವನು ಯಾರು? ಆದಿಯಿಂದ ಈಗಿನವರೆಗೂ ತಲತಲಾಂತರಗಳನ್ನು ಬರಮಾಡುವವರು ಯಾರು? ಸರ್ವೇಶ್ವರನಾದ ನಾನೇ. ಹೌದು, ಆದಿಯಲ್ಲಿದ್ದವನು. ಅಂತ್ಯದಲ್ಲಿ ಇರುವವನು ಆದ ನಾನೇ.


ಇವುಗಳನ್ನೆಲ್ಲ ನಿರ್ಮಿಸಿದ್ದು ನನ್ನ ಕೈಯೇ. ಹೌದು, ಇವುಗಳೆಲ್ಲ ಆದುವು ನನ್ನಿಂದಲೇ . ವಿನಮ್ರನು, ಪಶ್ಚಾತ್ತಾಪ ಪಡುವವನು, ನನ್ನ ಮಾತಿನಲ್ಲಿ ಭಯಭಕ್ತಿಯುಳ್ಳವನು, ಇಂಥವರೇ ನನಗೆ ಮೆಚ್ಚುಗೆಯಾದವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು