ಯೆಶಾಯ 41:23 - ಕನ್ನಡ ಸತ್ಯವೇದವು C.L. Bible (BSI)23 ತಿಳಿಸಿ ನಮಗೆ ಮುಂದೆ ನಡೆಯಬೇಕಾದವುಗಳನು ನಂಬುವೆವು ಆಗ ನೀವು ದೇವರುಗಳೆಂಬುದನು, ಪ್ರದರ್ಶಿಸಿ ಒಳಿತನ್ನಾಗಲಿ ಕೆಡುಕನ್ನಾಗಲಿ ಆಗ ನೋಡುವೆವು ಒಟ್ಟಿಗೆ ನಿಬ್ಬೆರಗಾಗಿ ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ನೀವು ದೇವರುಗಳೆಂದು ನಮಗೆ ಅರಿವು ಹುಟ್ಟುವಂತೆ ಮುಂದೆ ಆಗುವವುಗಳನ್ನು ತಿಳಿಸಿರಿ. ನಾವು ಒಟ್ಟಿಗೆ ಗಾಬರಿಯಿಂದ ಭಯಪಡುವ ಹಾಗೆ ಒಳ್ಳೆಯದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನೀವು ದೇವರುಗಳೆಂದು ನಮಗೆ ಅರಿವು ಹುಟ್ಟುವಂತೆ ಮುಂದಾಗತಕ್ಕವುಗಳನ್ನು ತಿಳಿಸಿರಿ; ನಾವು ಒಟ್ಟಿಗೆ ಕಕ್ಕಾಬಿಕ್ಕಿಯಾಗಿ ನೋಡುವಂತೆ ಮೇಲಾಗಲಿ ಕೇಡಾಗಲಿ ಏನಾದರೂ ಮಾಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಮುಂದೆ ಸಂಭವಿಸುವುದನ್ನು ತಿಳಿದುಕೊಳ್ಳಲು ನಾವು ಯಾವ ಸೂಚನೆಗಳಿಗಾಗಿ ಎದುರು ನೋಡಬೇಕು? ತಿಳಿಸಿರಿ. ನೀವೇ ದೇವರುಗಳೆಂದು ಆಗ ನಮಗೆ ಖಚಿತವಾಗುವುದು. ಏನನ್ನಾದರೂ ಮಾಡಿರಿ. ಯಾವದನ್ನಾದರೂ ಮಾಡಿರಿ. ಒಳ್ಳೆಯದನ್ನು, ಕೆಟ್ಟದ್ದನ್ನು ಮಾಡಿರಿ. ಆಗ ನೀವು ಜೀವವುಳ್ಳವರೆಂದು ತಿಳಿದು ನಿಮಗೆ ಗೌರವಿಸಿ, ಭಯಪಟ್ಟು ನಿಮ್ಮನ್ನು ಹಿಂಬಾಲಿಸುವೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ನೀವು ದೇವರುಗಳೆಂದು ತಿಳಿದುಕೊಳ್ಳುವಂತೆ ಮುಂದೆ ಬರುವವುಗಳನ್ನು ನಮಗೆ ತಿಳಿಸಿರಿ. ಹೌದು, ನಾವು ಗಾಬರಿಯಿಂದ ಭಯಪಡುವ ಹಾಗೆ ಒಳ್ಳೆಯದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾಡಿರಿ. ಅಧ್ಯಾಯವನ್ನು ನೋಡಿ |