Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 41:24 - ಕನ್ನಡ ಸತ್ಯವೇದವು C.L. Bible (BSI)

24 ಇಗೋ, ನೀವು ಶೂನ್ಯರೇ ಸರಿ, ನಿಮ್ಮ ಕಾರ್ಯವು ವ್ಯರ್ಥವೇ, ಸರಿ ನಿಮ್ಮನ್ನು ಮರೆಹೋಗುವವರು ತುಚ್ಛರೇ ಸರಿ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆಹಾ, ನೀವು ಶೂನ್ಯವೇ! ನಿಮ್ಮ ಕಾರ್ಯವು ಮಟ್ಟಮಾಯವೇ! ನಿಮ್ಮನ್ನು ಮೊರೆಹೋಗುವವರು ತುಚ್ಛರೇ ಸರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆಹಾ, ನೀವು ಶೂನ್ಯವೇ! ನಿಮ್ಮ ಕಾರ್ಯವು ಮಟ್ಟಮಾಯವೇ! ನಿಮ್ಮನ್ನು ಮರೆಹೊಗುವವರು ತುಚ್ಫರೇ ಸರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ಸುಳ್ಳುದೇವರುಗಳೇ, ಕೇಳಿ. ನೀವು ಶೂನ್ಯಕ್ಕಿಂತ ಕಡಿಮೆಯಾದವರು. ನೀವು ಏನನ್ನೂ ಮಾಡಲಾರಿರಿ. ದೇವರ ದೃಷ್ಠಿಯಲ್ಲಿ ತುಚ್ಛನಾದವನು ಮಾತ್ರ ನಿಮ್ಮನ್ನು ಪೂಜಿಸುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನೀವು ಶೂನ್ಯವೇ, ನಿಮ್ಮ ಕಾರ್ಯವು ವ್ಯರ್ಥವೇ. ನಿಮ್ಮನ್ನು ಆರಿಸಿಕೊಂಡವನು ಅಸಹ್ಯನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 41:24
17 ತಿಳಿವುಗಳ ಹೋಲಿಕೆ  

ವಿಗ್ರಹಗಳಿಗೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವ ಬಗ್ಗೆ ನನ್ನ ಅಭಿಪ್ರಾಯ ಹೀಗಿದೆ: ವಿಗ್ರಹಗಳಿಗೆ ನಿಜವಾದ ಅಸ್ತಿತ್ವವಿಲ್ಲ. ದೇವರು ಒಬ್ಬರೇ ಹೊರತು ಬೇರೆ ದೇವರಿಲ್ಲ. ಇದು ನಮಗೆ ತಿಳಿದ ವಿಷಯ.


ಅವುಗಳಂತಾಗುವರು ಅವುಗಳನು ಮಾಡುವವರು I ಅವುಗಳಂತಾಗುವರು ಅವುಗಳನು ನಂಬುವವರು II


ನಿಶ್ಚಯವಾಗಿ ಆ ದೇವತೆಗಳೆಲ್ಲ ಕ್ಷುದ್ರರೇ‍ ಅವರ ಕಾರ್ಯಗಳೆಲ್ಲ ಶೂನ್ಯವೇ ಆ ಎರಕದ ಬೊಂಬೆಗಳೆಲ್ಲಾ ಬರಿ ಗಾಳಿಯೆ !


ಕೇವಲ ಪಶುಪ್ರಾಯರು, ಮಂದಮತಿಗಳು, ಅವರೆಲ್ಲರು ಬೊಂಬೆ ಪೂಜೆಯಿಂದ ಬರುವ ಜ್ಞಾನ ಮರದಂತೆ ಮೊದ್ದು.


ಅವಳ ಹಣೆಯ ಮೇಲೆ : ಬಾಬಿಲೋನ್ ಮಹಾನಗರಿ ವೇಶ್ಯೆಯರ ಮಹಾತಾಯಿ ಜಗತ್ತಿನ ದುರ್ನಡತೆಗಳ ಜನನಿ,” ಎಂಬ ನಿಗೂಢವಾದ ಹೆಸರಿತ್ತು.


ಇದರ ಮುಂದೆ ತಿಳುವಳಿಕೆಯಿಲ್ಲದ ಪಶುಪ್ರಾಯರು ಜನರೆಲ್ಲರು. ತಾನು ಕೆತ್ತಿದ ವಿಗ್ರಹಕ್ಕಾಗಿ ಹೇಸುವನು ಪ್ರತಿಯೊಬ್ಬ ಅಕ್ಕಸಾಲಿಗನು. ಅವನು ಎರಕ ಹೊಯ್ದ ವಿಗ್ರಹಗಳು ಟೊಳ್ಳು, ಶ್ವಾಸವಿಲ್ಲದವುಗಳು.


ಅವರು ಹೊರಟುಹೋಗುವಾಗ ನೋಡುವರು ನನಗೆ ದ್ರೋಹವೆಸಗಿದವರ ಹೆಣಗಳನು ಸಾಯುವುದಿಲ್ಲ ಅವುಗಳನ್ನು ಕಡಿಯುವ ಹುಳು ಆರುವುದಿಲ್ಲ ಅವುಗಳನ್ನು ಸುಡುವ ಬೆಂಕಿಯು ಎಲ್ಲ ಮನುಜರಿಗವು ಅಸಹ್ಯವಾಗಿರುವುವು.”


ಅವರ ದೇವರುಗಳನ್ನೂ ಬೆಂಕಿಗೆ ಹಾಕಿದ್ದು ನಿಜ. ಅವು ದೇವರುಗಳಲ್ಲ, ಕೇವಲ ಮನುಷ್ಯರು ಕೆತ್ತಿದ ಕಲ್ಲುಮರಗಳ ಬೊಂಬೆಗಳಷ್ಟೆ, ಆದುದರಿಂದಲೇ ಅವು ಅವರಿಂದ ಹಾಳಾದವು.


‘ಶಿಲ್ಪಿಯ ಕೆಲಸವಾಗಿ ಇರುವ ಮರದ ವಿಗ್ರಹ ಹಾಗು ಲೋಹವಿಗ್ರಹ ಸರ್ವೇಶ್ವರನಿಗೆ ಹೇಯವಾದದ್ದು. ಆದುದರಿಂದ ಅವನ್ನು ಮಾಡಿಸಿ ಗೋಪ್ಯವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು,’ ಎನ್ನಲು ಜನರೆಲ್ಲರು, ‘ಆಮೆನ್’ ಎನ್ನಬೇಕು.


ನೀವು ಅಂಥ ವಸ್ತುವನ್ನು ಮನೆಯೊಳಕ್ಕೆ ತಂದು ಅದರಂತೆಯೇ ನಾಶಕ್ಕೆ ಗುರಿಯಾಗಬಾರದು. ಅದು ಶಾಪಗ್ರಸ್ತವಾದ್ದರಿಂದ ಅಸಹ್ಯಪಟ್ಟು ಅದನ್ನು ಮುಟ್ಟಲೂಕೂಡದು.


ವಕ್ರಬುದ್ಧಿಯವನು ಸರ್ವೇಶ್ವರನಿಗೆ ಅಸಹ್ಯನು, ಸತ್ಯಸಂಧರು ಆತನಿಗೆ ಪ್ರೀತಿಪಾತ್ರರು.


ಧರ್ಮಶಾಸ್ತ್ರಕ್ಕೆ ಕಿವಿಮುಚ್ಚಿಕೊಳ್ಳುವವನ ಪ್ರಾರ್ಥನೆ, ದೇವರಿಂದ ತಿರಸ್ಕೃತವಾದ ಪ್ರಾರ್ಥನೆ.


ಸೌತೆ ತೋಟದ ಬೆದರುಗಂಬದಂತಿರುವ ಈ ಬೊಂಬೆಗಳು ಮಾತನಾಡಲಾರವು. ಅವನ್ನು ಹೊತ್ತುಕೊಂಡು ಹೋಗಬೇಕು, ಅವು ನಡೆಯಲಾರವು. ಅವುಗಳಿಗೆ ನೀವು ಅಂಜಬೇಕಾಗಿಲ್ಲ, ಅವು ಕೇಡುಮಾಡಲಾರವು; ಮೇಲುಮಾಡಲಿಕ್ಕೂ ಸಾಮರ್ಥ್ಯವಿಲ್ಲದಿರುವುವು.”


ಅವು ವ್ಯರ್ಥವಾದುವುಗಳು, ಹಾಸ್ಯಾಸ್ಪದವಾದುವುಗಳು ದಂಡನೆಯ ಕಾಲದಲ್ಲಿ ಅಳಿದುಹೋಗುವಂಥವುಗಳು.


“ಆ ಜನರು ದೇವರೆಂದು ಮಾಡಿಕೊಂಡ ಮರದ ವಿಗ್ರಹಗಳನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. ಆ ವಿಗ್ರಹಗಳ ಮೇಲಿರುವ ಬೆಳ್ಳಿಬಂಗಾರವನ್ನು ನೀವು ಬಯಸಬಾರದು. ಅದನ್ನು ತೆಗೆದುಕೊಂಡರೆ ಅದೇ ನಿಮಗೆ ಉರುಲಾಗುವದು. ಅದು ನಿಮ್ಮ ದೇವರಾದ ಸರ್ವೇಶ್ವರನಿಗೆ ಹೇಯವಾದುದು; ಅವರಿಂದ ಶಾಪಗ್ರಸ್ತವಾದುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು