Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 41:29 - ಕನ್ನಡ ಸತ್ಯವೇದವು C.L. Bible (BSI)

29 ನಿಶ್ಚಯವಾಗಿ ಆ ದೇವತೆಗಳೆಲ್ಲ ಕ್ಷುದ್ರರೇ‍ ಅವರ ಕಾರ್ಯಗಳೆಲ್ಲ ಶೂನ್ಯವೇ ಆ ಎರಕದ ಬೊಂಬೆಗಳೆಲ್ಲಾ ಬರಿ ಗಾಳಿಯೆ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆಹಾ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ವ್ಯರ್ಥವೇ, ಅವರ ಎರಕದ ಬೊಂಬೆಗಳು ಗಾಳಿ ಮತ್ತು ಶೂನ್ಯವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆಹಾ, ಇವರೆಲ್ಲಾ ಮಾಯೆ, ಇವರ ಕಾರ್ಯಗಳು ಶೂನ್ಯ, ಇವರ ಎರಕದ ಬೊಂಬೆಗಳು ಗಾಳಿಯೇ, ಹಾಳೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆ ದೇವರುಗಳೆಲ್ಲಾ ಶೂನ್ಯಕ್ಕಿಂತಲೂ ಕಡಿಮೆಯೇ. ಅವುಗಳು ಏನೂ ಮಾಡಲಾರವು. ಆ ಪ್ರತಿಮೆಗಳು ಸಂಪೂರ್ಣವಾಗಿ ಬೆಲೆಯಿಲ್ಲದವುಗಳಾಗಿವೆ. ಅವುಗಳು ಖಂಡಿತವಾಗಿಯೂ ನಿಷ್ಪ್ರಯೋಜಕವಾದವುಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಇಗೋ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ಶೂನ್ಯವೇ. ಅವರ ಕೆತ್ತಿದ ವಿಗ್ರಹಗಳು ಗಾಳಿ ಮತ್ತು ಗಲಿಬಿಲಿಯೇ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 41:29
16 ತಿಳಿವುಗಳ ಹೋಲಿಕೆ  

ಪ್ರವಾದಿಗಳು ಆಡುವುದೆಲ್ಲ ಬರೀ ಗಾಳಿಮಾತುಗಳು. ದೈವೋಕ್ತಿಯೆಂಬುದು ಅವುಗಳಲ್ಲಿ ಇಲ್ಲ. ಅವರಿಗೇ ತಗಲಲಿ ಅವರು ಹೇಳುವುದೆಲ್ಲ,” ಎಂದುಕೊಂಡಿದ್ದಾರೆ.


ಇಗೋ, ನೀವು ಶೂನ್ಯರೇ ಸರಿ, ನಿಮ್ಮ ಕಾರ್ಯವು ವ್ಯರ್ಥವೇ, ಸರಿ ನಿಮ್ಮನ್ನು ಮರೆಹೋಗುವವರು ತುಚ್ಛರೇ ಸರಿ !


ಕೆತ್ತನೆಯ ವಿಗ್ರಹದಿಂದ ಪ್ರಯೋಜನ ಏನು? ಅದು ಕೇವಲ ಮಾನವನ ಕೃತಿ, ಸುಳ್ಳು ಕಣಿಗಾಗಿ ಇಟ್ಟುಕೊಂಡ ಎರಕದ ಗೊಂಬೆ. ಅದನ್ನು ನಿರ್ಮಿಸಿದಾತನಿಗೆ ಅದು ಯಾವ ಅಭಯವನ್ನು ತಾನೇ ತಂದೀತು? ಅದು ಬಾಯ್ದೆರೆಯಲಾಗದ ಮೂಕ ಬೊಂಬೆಯಷ್ಟೆ.


ಯಾಜಕನೂ ಬಂದು ಇವರೊಡನೆ ಬಾಗಿಲಲ್ಲಿ ನಿಂತಿದ್ದಾಗ ಆ ಐದು ಮಂದಿ ಮನೆಯನ್ನು ಹೊಕ್ಕು ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನೂ ‘ಏಫೋದ’ನ್ನೂ ದೇವತಾಪ್ರತಿಮೆಗಳನ್ನೂ ತೆಗೆದುಕೊಂಡರು.


ದೇವರಲ್ಲದವುಗಳನ್ನು ಹಿಂಬಾಲಿಸಬೇಡಿ; ಅವುಗಳಿಂದ ನಿಮಗೆ ಲಾಭವಿಲ್ಲ; ರಕ್ಷಣೆಯೂ ಸಿಕ್ಕುವುದಿಲ್ಲ. ಅವು ವ್ಯರ್ಥವಾದವುಗಳೇ ಸರಿ.


ದೇಶದಲ್ಲಿ ವಿಗ್ರಹಗಳು ತುಂಬಿ ತುಳುಕುತ್ತಿವೆ. ಜನರು ತಮ್ಮ ಕೈಯಿಂದ ಮಾಡಿದ ವಿಗ್ರಹಗಳನ್ನೇ ಪೂಜಿಸುತ್ತಿದ್ದಾರೆ.


ಅವರ ದೇವರುಗಳನ್ನೂ ಬೆಂಕಿಗೆ ಹಾಕಿದ್ದು ನಿಜ. ಅವು ದೇವರುಗಳಲ್ಲ, ಕೇವಲ ಮನುಷ್ಯರು ಕೆತ್ತಿದ ಕಲ್ಲುಮರಗಳ ಬೊಂಬೆಗಳಷ್ಟೆ, ಆದುದರಿಂದಲೇ ಅವು ಅವರಿಂದ ಹಾಳಾದವು.


ಅನ್ಯಜನಾಂಗಗಳ ಶೂನ್ಯದೇವತೆಗಳಲ್ಲಿ ಮಳೆಸುರಿಸಬಲ್ಲವರುಂಟೆ? ಆಕಾಶವು ತಾನಾಗಿ ಹದಮಳೆಯನ್ನು ಬರಮಾಡಬಲ್ಲುದೆ? ನಮ್ಮ ದೇವರಾದ ಸರ್ವೇಶ್ವರಾ, ವೃಷ್ಟಿದಾತರು ನೀವೇ ನಾವು ನಿರೀಕ್ಷಿಸುತ್ತಿರುವುದು ನಿಮ್ಮನ್ನೇ ಹೌದು, ಇವುಗಳನ್ನೆಲ್ಲ ನಡೆಸುವವರು ನೀವೇ.


ಶೂನ್ಯ ಪ್ರತಿಮೆಗಳು ಅನ್ಯರಾಷ್ಟ್ರಗಳ ದೇವರುಗಳೆಲ್ಲ I ಪ್ರಭುವಿನಿಂದಲೇ ಉಂಟಾಯಿತು ಆಕಾಶಮಂಡಲವೆಲ್ಲ II


ಅದನ್ನು ಮೆರವಣಿಗೆ ಮಾಡುತ್ತಾರೆ ಹೊತ್ತು ಹೆಗಲಮೇಲೆ ಪ್ರತಿಷ್ಠಾಪನೆ ಮಾಡುತ್ತಾರೆ ಇಟ್ಟು ಪೀಠದ ಮೇಲೆ. ಕೂಗಿಕೊಂಡರೂ ಜರುಗದದು ಅಲ್ಲಿಂದ ಉತ್ತರಿಸಿ ಬಿಡಿಸದು ಯಾರನ್ನು ಕಷ್ಟದಿಂದ.


ಗೃಹದೇವತೆಗಳು ನುಡಿಯುವುದು ಜೊಳ್ಳು; ಶಕುನ ಹೇಳುವವರ ಮಾತು ಸುಳ್ಳು. ಸ್ವಪ್ನಕಾರರ ಕನಸುಗಳು ಕಲ್ಪಿತ, ಅವರು ಹೇಳುವ ಸಮಾಧಾನ ವ್ಯರ್ಥ, ಈ ಕಾರಣ ಜನರು ಕುರಿಗಳಂತೆ ಚದರಿದ್ದಾರೆ; ಕುರುಬನಿಲ್ಲದೆ ಕಂಗೆಟ್ಟಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು