Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 41:4 - ಕನ್ನಡ ಸತ್ಯವೇದವು C.L. Bible (BSI)

4 ಇದನ್ನೆಲ್ಲಾ ನಡೆಯಿಸಿ ನೆರವೇರಿಸಿದವನು ಯಾರು? ಆದಿಯಿಂದ ಈಗಿನವರೆಗೂ ತಲತಲಾಂತರಗಳನ್ನು ಬರಮಾಡುವವರು ಯಾರು? ಸರ್ವೇಶ್ವರನಾದ ನಾನೇ. ಹೌದು, ಆದಿಯಲ್ಲಿದ್ದವನು. ಅಂತ್ಯದಲ್ಲಿ ಇರುವವನು ಆದ ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇದನ್ನೆಲ್ಲಾ ನಡೆಸಿ ನೆರವೇರಿಸಿದವನು ಯಾರು? ಆದಿಯಿಂದ ಈಗಿನವರೆಗೂ ತಲತಲಾಂತರಗಳನ್ನು ಬರಮಾಡುವವನಾದ ಯೆಹೋವನೆಂಬ ನಾನೇ; ಹೌದು, ಆದಿಪುರುಷನೂ, ಅಂತ್ಯಕಾಲದವರ ಸಂಗಡಿಗನೂ ಆಗಿರುವ ನಾನೊಬ್ಬನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇದನ್ನೆಲ್ಲಾ ನಡೆಯಿಸಿ ನೆರವೇರಿಸಿದವನು ಯಾರು? ಆದಿಯಿಂದ ಈಗಿನವರೆಗೂ ತಲತಲಾಂತರಗಳನ್ನು ಬರಮಾಡುವವನಾದ ಯೆಹೋವನೆಂಬ ನಾನೇ; ಹೌದು, ಆದಿಪುರುಷನೂ ಅಂತ್ಯಕಾಲದವರ ಸಂಗಡಿಗನೂ ಆಗಿರುವ ನಾನೊಬ್ಬನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಇವೆಲ್ಲಾ ನೆರವೇರುವಂತೆ ಮಾಡಿದವರು ಯಾರು? ಆದಿಯಿಂದ ಎಲ್ಲಾ ಜನರನ್ನು ಕರೆದವರು ಯಾರು? ಯೆಹೋವನೆಂಬ ನಾನೇ ಇವೆಲ್ಲವನ್ನು ಮಾಡಿದೆನು. ನಾನೇ ಮೊದಲನೆಯವನಾಗಿದ್ದೇನೆ. ಅನಾದಿಕಾಲಕ್ಕಿಂತ ಮೊದಲು ನಾನಿದ್ದೆನು. ಎಲ್ಲವೂ ಅಂತ್ಯವಾಗುವ ತನಕ ನಾನು ಇರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇದನ್ನೆಲ್ಲಾ ನಡೆಯಿಸಿ ನೆರವೇರಿಸಿದವನೂ ಆದಿಯಿಂದ ತಲತಲಾಂತರಗಳನ್ನು ಬರಮಾಡಿದವನು ಯಾರು? ಯೆಹೋವ ಎಂಬ ನಾನೇ ಮೊದಲನೆಯವನು, ಅಂತ್ಯಕಾಲದಲ್ಲಿ ಸಂಗಡಿಗನು ಆಗಿರುವಾತನೇ ನಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 41:4
26 ತಿಳಿವುಗಳ ಹೋಲಿಕೆ  

‘ಅ'ಕಾರವೂ ‘ಳ'ಕಾರವೂ ನಾನೇ ಆದಿಯೂ ಸಮಾಪ್ತಿಯೂ ನಾನೇ'. “


“ಯಕೋಬೆ, ನಾ ಕರೆದ ಇಸ್ರಯೇಲೆ ನನಗೆ ಕಿವಿಗೊಡು, ಪರಮಾತ್ಮ ನಾನೆ ಆದಿಯು ನಾನೆ, ಅಂತ್ಯವು ನಾನೆ.


ನಾನು ಅವರನ್ನು ಕಂಡಾಗ, ಸತ್ತವನಂತಾದೆ. ಅವರ ಪಾದಗಳ ಮುಂದೆ ಬಿದ್ದೆ. ಅವರು ತಮ್ಮ ಬಲಗೈಯನ್ನು ನನ್ನ ಮೇಲಿಟ್ಟು, “ಭಯಪಡಬೇಡ, ನಾನೇ ಮೊದಲನೆಯವನೂ ಕಡೆಯವನೂ


ಈ ಘಟನೆಯನ್ನು ಅರುಹಿದವನಾರು ಅದು ನೆರವೇರುವ ಮುಂದೆ? ಇದನ್ನು ಮುನ್ನ ತಿಳಿಸಿದವನಾರು ನಮಗೆ ಗೊತ್ತಾಗುವಂತೆ? ತಿಳಿಸಿದ್ದರೆ ಹೇಳುತ್ತಿದ್ದೆವು ಅವನು ಸತ್ಯವಂತನೆಂದೆ. ಆದರೆ ಇದನ್ನು ತಿಳಿಸಿದವನಿಲ್ಲ ಮುನ್ನ ತಿಳಿಸಬಲ್ಲವನಾರೂ ಇಲ್ಲ ನಿಮ್ಮಿಂದ ಮಾತೊಂದನ್ನು ಕೇಳಿದವನಾರೂ ಇಲ್ಲ.


ಆರಂಭದಲ್ಲಿಯೇ ಅಂತ್ಯವನು ತಿಳಿಸಿದವನು ನಾನು ಭೂತಕಾಲದಲ್ಲಿಯೆ ಭವಿಷ್ಯವನು ಅರುಹಿದವನು ನಾನು. ಸ್ಥಿರವಿರುವುದು ನನ್ನ ಸಂಕಲ್ಪ, ನೆರವೇರುವುದು ನನ್ನ ಇಷ್ಟಾರ್ಥ


ಇಂತೆನ್ನುತ್ತಾರೆ ಸರ್ವೇಶ್ವರ : “ನೀವೇ ನನಗೆ ಸಾಕ್ಷಿಗಳು; ನನ್ನಿಂದ ಆಯ್ಕೆಯಾದ ನನ್ನ ದಾಸರು; ಏಕೆನೆ ನಾನೇ ಪರಮಾತ್ಮನೆಂದು ಅರಿತು, ವಿಶ್ವಾಸವಿಟ್ಟು, ಗ್ರಹಿಸಬೇಕಾದವರು; ದೇವರಾರೂ ನನಗಿಂತ ಮುಂದೆ ಇರಲಿಲ್ಲ ನನ್ನಾನಂತರವೂ ಇರುವುದಿಲ್ಲ.


ಒಂದೇ ಮೂಲದಿಂದ ಅವರು ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ ಭೂಮಂಡಲದಲ್ಲೆಲ್ಲಾ ಜೀವಿಸುವಂತೆ ಮಾಡಿದ್ದಾರೆ. ಆಯಾ ಜನಾಂಗದ ಕಾಲಾವಧಿಯನ್ನೂ ಅವರವರ ನೆಲೆಯ ಎಲ್ಲೆಮೇರೆಗಳನ್ನೂ ಮುಂಚಿತವಾಗಿ ಅವರೇ ನಿರ್ಧರಿಸಿದ್ದಾರೆ.


“ ‘ಅ'ಕಾರವೂ ‘ಳ'ಕಾರವೂ ನಾನೇ. ವರ್ತಮಾನಕಾಲದಲ್ಲಿ ‘ಇರುವಾತನೂ,’ ಭೂತಕಾಲದಲ್ಲಿ ‘ಇದ್ದಾತನೂ,” ಭವಿಷ್ಯತ್ಕಾಲದಲ್ಲಿ ‘ಬರುವಾತನೂ’ ಸರ್ವಶಕ್ತನೂ ನಾನೇ” ಎಂದು ಪ್ರಭು ದೇವರು ನುಡಿಯುತ್ತಾರೆ.


ಕೊಟ್ಟವರಾರು ಯಕೋಬನ್ನು ಸುಲಿಗೆಗೆ, ಇಸ್ರಯೇಲನ್ನು ಕೊಳ್ಳೆಗೆ? ಯಾವ ಸರ್ವೇಶ್ವರನಿಗೆ ದ್ರೋಹಮಾಡಿದ್ದೇವೋ ಆತನೇ ಅಲ್ಲವೇ? ಜನರು ಆತನ ಮಾರ್ಗದಲ್ಲಿ ನಡೆಯದೇ, ಆತನ ಉಪದೇಶವನ್ನು ಕೇಳದೆಹೋದರಲ್ಲವೆ?


“ಸ್ಮುರ್ನದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ಮೊದಲನೆಯವನೂ ಕಡೆಯವನೂ, ಮೃತನಾದರೂ ಮೃತ್ಯುಂಜಯನಾದವನು ನೀಡುವ ಸಂದೇಶವಿದು:


ಅದು ಹೀಗೆಂದು ನುಡಿಯಿತು: “ನೀನು ಕಾಣುತ್ತಿರುವುದನ್ನು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ ಮತ್ತು ಲವೊದಿಕೀಯ ಎಂಬ ಪಟ್ಟಣಗಳಲ್ಲಿರುವ ಏಳು ಸಭೆಗಳಿಗೆ ಕಳುಹಿಸು.”


ಅಳೆವನಾರು ಸಮುದ್ರಸಾಗರಗಳನ್ನು ಬೊಗಸೆಗೈಯಿಂದ? ಮೊಳ ಹಾಕುವವನಾರು ಆಕಾಶಮಂಡಲವನ್ನು ಕೈಗೇಣಿನಿಂದ? ತುಂಬುವವನಾರು ಧರೆಯ ಮರಳನ್ನೆಲ್ಲಾ ಕೊಳಗದೊಳಗೆ? ತೂಗಿದವನಾರು ಬೆಟ್ಟಗುಡ್ಡಗಳನ್ನು ತ್ರಾಸುತಕ್ಕಡಿಯೊಳಗೆ?


ಎಂಬೀ ಸರ್ವೇಶ್ವರನ ನುಡಿ ಎಂದಿನಿಂದಲೋ ತಿಳಿದಿಹುದು.’


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


“ಇಮ್ಮಾನುವೇಲ್” ಎಂದರೆ, “ದೇವರು ನಮ್ಮೊಡನೆ ಇದ್ದಾರೆ” ಎಂದು ಅರ್ಥ.


ಕಣ್ಣೆತ್ತಿ, ದಿಟ್ಟಿಸಿನೋಡಿ ಆಕಾಶದತ್ತ ಯಾರು ಆ ತಾರೆಗಳನ್ನು ರಚಿಸಿದಾತ? ಆ ತಾರಾ ಸಮೂಹವನ್ನು ಕ್ರಮಾನುಸಾರ ನಡೆಸುವಾತ, ಒಂದೊಂದನ್ನೂ ಹೆಸರಿಟ್ಟು ಕರೆಯುವಾತ, ಅವುಗಳಲ್ಲಿ ಒಂದನ್ನೂ ಕಾಣೆಯಾಗಲು ಬಿಡದಾತ, ಅಷ್ಟು ಬಲಾಢ್ಯನು, ಶಕ್ತಿವಂತನು ಆತ


“ಇರುವಾತನು ನಾನೇ, ನಾನೊಬ್ಬನೇ ಬದುಕಿಸುವವನು, ಕೊಲ್ಲುವವನು ನಾನೇ, ಗಾಯಗೊಳಿಸುವವನು, ವಾಸಿಮಾಡುವವನು ನಾನೇ. ಇಂದಾದರು ತಿಳಿಯಿರಿ: ನನ್ನ ವಿನಾ ದೇವರಿಲ್ಲ ನನ್ನ ಕೈಯಿಂದ ತಪ್ಪಿಸಬಲ್ಲ ಶಕ್ತನಾರೂ ಇಲ್ಲ.


ನೀನಂತೂ ಬದಲಾಗದೆ ಇರುವೆಯಯ್ಯಾ I ನಿನ್ನ ವರುಷಗಳಿಗೆ ಮುಗಿವೇ ಇಲ್ಲವಯ್ಯಾ II


ಹಿಂದಟ್ಟುತ್ತಾನೆ ಅವರನ್ನು ನಿರ್ಭೀತಿಯಿಂದ ಮುನ್ನುಗ್ಗುತ್ತಾನೆ ಕಾಲು ನೆಲ ಊರದಷ್ಟು ವೇಗದಿಂದ.


ಹೌದು, ನಾನೇ ಪರಮಾತ್ಮ ಆದಿಯಿಂದ ಬಿಡಿಸುವವರಾರು ಇಲ್ಲ ನನ್ನ ಕೈಯಿಂದ ನಾಗೈದುದನು ತಡೆಯಲಾಗದು ಯಾರಿಂದ.” ಈ ಪರಿ ನುಡಿದಿಹನು ಸರ್ವೇಶ್ವರನು, ನಿಮ್ಮ ಉದ್ಧಾರಕನು, ಇಸ್ರಯೇಲಿನ ಪರಮಪಾವನನು;


ಬಾಳುವರು ನಿನ್ನ ದಾಸರ ಮಕ್ಕಳು ಸುರಕ್ಷಿತವಾಗಿ I ಇರುವುದವರ ಸಂತತಿ ನಿನ್ನ ಸಮ್ಮುಖದಲಿ ಸ್ಥಿರವಾಗಿ II 7


ಇದನು ಕಂಡರಿತು ಗ್ರಹಿಸಿಕೊಳ್ಳುವರು ಜನರು ಮನಸಾರೆ, ನುಡಿವರಾಗ, ‘ಇದನ್ನು ಮಾಡಿದ ಹಸ್ತವು ಸರ್ವೇಶ್ವರ ಸ್ವಾಮಿಯದೇ, ಇದನ್ನು ಸೃಷ್ಟಿಸಿದಾತ ಇಸ್ರಯೇಲಿನ ಪರಮಪಾವನ ಸ್ವಾಮಿಯೇ.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು