Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 41:5 - ಕನ್ನಡ ಸತ್ಯವೇದವು C.L. Bible (BSI)

5 ದೂರದೇಶದವರು ಕಂಡು ಬೆರಗಾದರು ಭೂಮಿಯ ಕಟ್ಟಕಡೆಯವರು ನಡುಗಿದರು ಎಲ್ಲರೂ ಇಲ್ಲಿಗೆ ನೆರೆದುಬಂದಿಹರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದ್ವೀಪ ನಿವಾಸಿಗಳು ಕಂಡು ಬೆರಗಾದರು, ಭೂಮಿಯ ಕಟ್ಟ ಕಡೆಯವರು ನಡುಗಿದರು, ಎಲ್ಲರೂ ನೆರೆದು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದ್ವೀಪ ನಿವಾಸಿಗಳು ಕಂಡು ಬೆರಗಾದರು, ಭೂವಿುಯ ಕಟ್ಟಕಡೆಯವರು ನಡುಗಿದರು, ಎಲ್ಲರೂ ನೆರೆದುಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದೂರ ಸ್ಥಳಗಳವರೇ, ನೋಡಿರಿ, ಭಯಗೊಳ್ಳಿರಿ. ಭೂಮಿಯ ಕಟ್ಟಕಡೆಗಿರುವ ದೇಶಗಳೇ, ಭಯದಿಂದ ನಡುಗಿರಿ. ನನ್ನ ಬಳಿಗೆ ಬಂದು ನನ್ನ ಮಾತನ್ನು ಕೇಳಿರಿ ಎಂದಾಗ ಅವರು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ದ್ವೀಪಗಳೆಲ್ಲವೂ ಕಂಡು ಬೆರಗಾದವು. ಭೂಮಿಯ ಕಟ್ಟಕಡೆಯು ನಡುಗಿತು. ಅವರು ಸಮೀಪಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 41:5
12 ತಿಳಿವುಗಳ ಹೋಲಿಕೆ  

ನಮ್ಮೆಲ್ಲರನು ದೇವನು ಹರಸಲಿ I ಎಲ್ಲೆಡೆ ಆತನ ಭಯಭಕ್ತಿಯಿರಲಿ II


“ನಿನ್ನ ಕಾರ್ಯಗಳೆನಿತೋ ಚೇತೋಹಾರಿ I ನಿನ್ನ ಪರಾಕ್ರಮಕೆ ಶತ್ರುಗಳು ಪರಾರಿ II


ಅಚ್ಚರಿಗೊಳ್ಳುವುವು ನಿನ್ನ ಮಹತ್ಕಾರ್ಯಗಳ ಕಂಡು ಎಲ್ಲೆ ಎಲ್ಲೆಗಳು I ಹರ್ಷಾನಂದಗೊಳ್ಳುವರು ಅದಕಂಡಾ ಪೂರ್ವಪಶ್ಚಿಮ ಪ್ರವಾಸಿಗಳು II


ಜೋರ್ಡನಿನ ಪಶ್ಚಿಮದಲ್ಲಿದ್ದ ಅಮೋರಿಯರ ಎಲ್ಲ ಅರಸರು ಮತ್ತು ಸಮುದ್ರದ ಬಳಿಯಿದ್ದ ಸರ್ವ ಕಾನಾನ್ ರಾಜರು ಸರ್ವೇಶ್ವರ ಸ್ವಾಮಿ ಇಸ್ರಯೇಲರ ಕಣ್ಮುಂದೆಯೇ ಜೋರ್ಡನನ್ನು ಬತ್ತಿಸಿ ಆ ನದಿ ದಾಟಿಸಿದರೆಂದು ಕೇಳಿದರು. ಆಗ ಅವರ ಎದೆ ಒಡೆದುಕೋಯಿತು. ಇಸ್ರಯೇಲರ ಮುಂದೆ ಅವರಿಗೆ ಧೈರ್ಯವಿಲ್ಲದೆ ಹೋಯಿತು.


ನೀವು ಈಜಿಪ್ಟಿನಿಂದ ಹೊರಟುಬಂದ ಮೇಲೆ ಸರ್ವೇಶ್ವರ ನಿಮ್ಮ ಮುಂದೆ ಕೆಂಪುಸಮುದ್ರವನ್ನು ಬತ್ತಿಸಿಬಿಟ್ಟರೆಂದು ಕೇಳಿದ್ದೇವೆ. ಅಲ್ಲದೆ ಜೋರ್ಡನ್ನಿನ ಆಚೆ ಇರುವ ಅಮೋರಿಯರ ಅರಸರಿಬ್ಬರನ್ನು ಅಂದರೆ, ಸೀಹೋನ್ ಮತ್ತು ಓಗ್ ಎಂಬವರನ್ನು ನೀವು ನಾಶಮಾಡಿದಿರೆಂದು ಕೇಳಿದ್ದೇವೆ.


ಇದನ್ನು ಕೇಳಿ ನಡುಗುತ್ತಿರುವುವು ಜನಾಂಗಗಳು ಪ್ರಸವವೇದನೆ ಪಡುತ್ತಿರುವರು ಫಿಲಿಷ್ಟಿಯರು.


ದೇಶ - ಭಾಷಾ - ಕುಲ - ಜನಾಂಗಗಳ ಪ್ರಕಾರ ಇವರೇ ಯೆಫೆತನ ವಂಶದವರು.


ದೂರದೇಶದವರೇ, ಮೌನದಿಂದ ನನಗೆ ಕಿವಿಗೊಡಿ; ರಾಷ್ಟ್ರಗಳು ಎಷ್ಟೇ ಬಲಿಷ್ಠರಾಗಿರಲಿ ಬಂದು ಮಾತಾಡಲಿ ಸಮೀಪದಲಿ. ಒಟ್ಟಿಗೆ ಸೇರೋಣ ನ್ಯಾಯಸ್ಥಾನದಲಿ.


ಸಹಾಯಮಾಡಿದರು ಒಬ್ಬರಿಗೊಬ್ಬರು ಧೈರ್ಯ ಹೇಳಿಕೊಂಡರು ಒಬ್ಬರಿಗೊಬ್ಬರು.


ಈ ನಿನ್ನ ಪತನ ದಿನದಲ್ಲಿ ಕರಾವಳಿಯು ನಡುಗುತ್ತದೆ; ನೀನು ಅಳಿದುಹೋದುದಕ್ಕೆ ಸಮುದ್ರದ್ವೀಪಗಳು ತತ್ತರಿಸುತ್ತವೆ.’ ಎಂಬ ಶೋಕಗೀತೆಯನ್ನೆತ್ತುವರು.”


ಇಳೆಯನು ಸಂಧಿಸಿ, ಮಳೆಯನು ಸುರಿಸಿ, ನೆಲವನು ನೀ ಸಿರಿಗೊಳಿಸುವಾತ I ನಾಲೆ ತುಂಬ ನೀರಹರಿಸಿ, ಹೊಲ ತುಂಬ ನೀ ಧಾನ್ಯನೀಡುವಾತ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು