Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 41:7 - ಕನ್ನಡ ಸತ್ಯವೇದವು C.L. Bible (BSI)

7 ಚೆನ್ನಾಗಿದೆ ಎನ್ನುತ್ತಾನೆ ಬಡಗಿ ಅಕ್ಕಸಾಲಿಗನಿಗೆ; ಪ್ರೋತ್ಸಾಹ ನೀಡುತ್ತಾನೆ ನುಣುಪು ಮಾಡುವವನು ಅಡಿಗಲ್ಲನ್ನು ತಟ್ಟುವವನಿಗೆ. ಬೆಸುಗೆ ಚೆನ್ನಾಗಿದೆ ಎಂದವರು ಮೊಳೆಗಳನ್ನು ಬಡಿಯುತ್ತಾರೆ ವಿಗ್ರಹ ಅಲುಗದಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹಾಗೆಯೇ ಶಿಲ್ಪಿಯು ಎರಕದವನನ್ನೂ, ಸುತ್ತಿಗೆಯಿಂದ ಸಮಮಾಡುವವನು ಅಡಿಗಲ್ಲಿನ ಮೇಲೆ ಕುಟ್ಟುವವನನ್ನೂ ಪ್ರೋತ್ಸಾಹಗೊಳಿಸಿದರು. “ಬೆಸಿಗೆ ಚೆನ್ನಾಗಿದೆ” ಎಂದು ಹೇಳಿ ವಿಗ್ರಹವನ್ನು ಕದಲದಂತೆ ಮೊಳೆಗಳಿಂದ ಜಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಬೆಸಿಗೆ ಚೆನ್ನಾಗಿದೆ ಎಂದು ಹೇಳಿ ಶಿಲ್ಪಿಯು ಎರಕದವನನ್ನೂ ಸುತ್ತಿಗೆಯಿಂದ ಸಮತಟ್ಟುವವನು ಅಡಿಗಲ್ಲಿನ ಮೇಲೆ ಕುಟ್ಟುವವನನ್ನೂ ಪ್ರೋತ್ಸಾಹಗೊಳಿಸಿದರು; ವಿಗ್ರಹವನ್ನು ಅಲುಗದಂತೆ ಮೊಳೆಗಳಿಂದ ಬಿಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಒಬ್ಬ ಕೆಲಸಗಾರನು ಮರವನ್ನು ಕಡಿದು ಅದರಿಂದ ವಿಗ್ರಹವನ್ನು ಮಾಡುವನು. ಅವನು ಬಂಗಾರದ ಕೆಲಸದವನನ್ನು ಪ್ರೋತ್ಸಾಹಿಸುವನು. ಇನ್ನೊಬ್ಬನು ತನ್ನ ಸುತ್ತಿಗೆಯಿಂದ ತಗಡನ್ನು ಸಮತಟ್ಟು ಮಾಡುವನು. ಅವನು ಕಬ್ಬಿಣದ ಕೆಲಸದವನನ್ನು ಪ್ರೋತ್ಸಾಹಿಸುವನು. ಈ ಕೆಲಸದವನು ‘ಇದು ಒಳ್ಳೆಯ ಕೆಲಸ. ತಗಡು ಹೊರಗೆ ಬರಲಾರದು’ ಎಂದು ಹೇಳಿ ಆ ವಿಗ್ರಹವನ್ನು ಪೀಠಕ್ಕೆ ಮೊಳೆ ಹೊಡೆದು ಭದ್ರಪಡಿಸುವನು. ಈಗ ವಿಗ್ರಹವು ಅಲ್ಲಾಡುವದಿಲ್ಲ, ಕೆಳಕ್ಕೆ ಬೀಳುವದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಹಾಗೆಯೇ ಶಿಲ್ಪಿಯು ಅಕ್ಕಸಾಲಿಗನನ್ನು ಪ್ರೋತ್ಸಾಹಗೊಳಿಸಿದನು. ಸುತ್ತಿಗೆಯಿಂದ ಸಮಮಾಡುವವನು ಅಡಿಗಲ್ಲಿನ ಮೇಲೆ ತಟ್ಟುವವನನ್ನು ಉತ್ತೇಜಿಸಿದನು. ಬೆಸುಗೆ “ಚೆನ್ನಾಗಿದೆ” ಎಂದು ಹೇಳಿ, ಅದು ಕದಲದ ಹಾಗೆ ಮೊಳೆಗಳಿಂದ ಜಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 41:7
9 ತಿಳಿವುಗಳ ಹೋಲಿಕೆ  

ಆ ಬೊಂಬೆಗಳ ಭೂಷಣಕ್ಕಾಗಿ ಸಾಗಿಬರುತ್ತವೆ ತಾರ್ಷೀಷಿನಿಂದ ಬೆಳ್ಳೀತಗಡುಗಳು, ಊಫಜಿನಿಂದ ಚಿನ್ನ. ಅವು ಕೆತ್ತನೆಗಾರನ, ಎರಕದವನ ಕೈಕೆಲಸಗಳು ಅವುಗಳ ಉಡುಪು ನೀಲಧೂಮ್ರ ವರ್ಣದ ವಸ್ತ್ರಗಳು. ಇವೆಲ್ಲವು ಕೇವಲ ಕಲಾಕುಶಲರ ಕೌಶಲ್ಯಗಳು.


ಅವನು, “ನೀವು ಯಾಜಕನನ್ನೂ ನಾನು ಮಾಡಿಸಿಕೊಂಡ ದೇವರುಗಳನ್ನೂ ಅಪಹರಿಸಿಕೊಂಡಿದ್ದೀರಿ, ನನಗೆ ಇನ್ನೇನಿದೆ; ಹೀಗಿರಲಾಗಿ ನಿನಗೇನಾಯಿತೆಂದು ನೀವೇ ನನ್ನನ್ನು ಕೇಳುವುದು ಹೇಗೆ?” ಎಂದನು.


ಸಹಾಯಮಾಡಿದರು ಒಬ್ಬರಿಗೊಬ್ಬರು ಧೈರ್ಯ ಹೇಳಿಕೊಂಡರು ಒಬ್ಬರಿಗೊಬ್ಬರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು