Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 42:14 - ಕನ್ನಡ ಸತ್ಯವೇದವು C.L. Bible (BSI)

14 ನನ್ನನ್ನೇ ತಡೆಹಿಡಿದೆನು : ಆದರೀಗ ಸಮಯ ಬಂದಿಹುದು; ಪ್ರಸವವೇದನೆಯನು ಅನುಭವಿಸುವ ಸ್ತ್ರೀಯಂತೆ ಅಬ್ಬರಿಸುವೆನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾನು ಬಹುಕಾಲದಿಂದ ಸುಮ್ಮನೆ ಮೌನವಾಗಿ ನನ್ನನ್ನು ಬಿಗಿ ಹಿಡಿದಿದ್ದೆನು. ಈಗ ಹೆರುವವಳಂತೆ ಕೂಗುವೆನು. ನಿಟ್ಟುಸಿರಿನೊಡನೆ ಏದುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾನು ಬಹುಕಾಲದಿಂದ ಸುಮ್ಮನೆ ಮೌನವಾಗಿ ನನ್ನನ್ನು ಬಿಗಿಹಿಡಿದಿದ್ದೆನು. [ಈಗ] ಹೆರುವವಳಂತೆ ಮೂಲುಗುತ್ತಾ ಅಸುರುಸಿರಿನೊಡನೆ ಏದುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ನಾನು ಬಹುಕಾಲದಿಂದ ಮೌನವಾಗಿದ್ದೆನು. ನಾನು ಏನೂ ಹೇಳದ ಹಾಗೆ ನನ್ನನ್ನು ನಿಯಂತ್ರಿಸಿಕೊಂಡಿದ್ದೆನು. ಈಗ ನಾನು ಹೆರಿಗೆ ಬೇನೆಯನ್ನು ಅನುಭವಿಸುವ ಹೆಂಗಸಿನಂತೆ ಕಿರುಚುವೆನು; ಗಟ್ಟಿಯಾಗಿ ಏದುಸಿರು ಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ಬಹುಕಾಲದಿಂದ ಸುಮ್ಮನೆ ಮೌನವಾಗಿ ನನ್ನನ್ನು ಬಿಗಿಹಿಡಿದಿದ್ದೆನು. ಈಗ ನಾನು ಹೆರುವವಳಂತೆ ಕೂಗುವೆನು. ನಾನು ನಾಶಮಾಡಿ, ಒಂದೇ ಸಾರಿ ನುಂಗಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 42:14
16 ತಿಳಿವುಗಳ ಹೋಲಿಕೆ  

ನಮ್ಮ ಪ್ರಭುವಿನ ದೀರ್ಘಶಾಂತಿ ಹಾಗು ಸಹನೆ ನಮ್ಮ ಜೀವೋದ್ಧಾರಕ್ಕಾಗಿಯೇ ಎಂದು ತಿಳಿದುಕೊಳ್ಳಿ. ನಮ್ಮ ಪ್ರಿಯ ಸಹೋದರನಾದ ಪೌಲನೂ ಸಹ ತನಗೆ ದೇವರಿತ್ತ ಜ್ಞಾನದ ಪ್ರಕಾರ ಹೀಗೆಯೇ ನಿಮಗೆ ಬರೆದಿದ್ದಾನೆ.


ಹೀಗಿರುವಲ್ಲಿ ದೇವರು, ತಾವಾಗಿ ಆಯ್ಕೆಮಾಡಿಕೊಂಡ ಜನರು ಹಗಲುರಾತ್ರಿ ತಮಗೆ ಮೊರೆಯಿಡುವಾಗ ನ್ಯಾಯ ತೀರಿಸದೆ ಹೋಗುವರೆ? ತಡಮಾಡಿಯಾರೆ?


ನೀವು ನಡೆಸಿದ ದುರಾಚಾರಗಳನ್ನು ಹಾಗು ಅಸಹ್ಯಕಾರ್ಯಗಳನ್ನು ಸರ್ವೇಶ್ವರ ಇನ್ನು ಸಹಿಸಲಾರದೆ ಹೋದುದರಿಂದಲೇ ನಿಮ್ಮ ನಾಡು ಹಾಳುಬಿದ್ದಿದೆ. ನಿರ್ಜನವಾಗಿ ಭಯಭೀತಿಗೆ ಎಡೆ ಆಗಿದೆ. ಅದರ ಸ್ಥಿತಿ ಈಗಲೂ ಬದಲಾಗಿಲ್ಲ.


ಸರ್ವೇಶ್ವರನಾದ ನನ್ನ ಈ ಮಾತುಗಳನ್ನು ಕೇಳು : ನೀನು ನನ್ನನ್ನು ಅಲ್ಲಗಳೆದು ನನಗೆ ವಿಮುಖಳಾಗಿರುವೆ. ಆದಕಾರಣ ನಿನ್ನನ್ನು ನಾಶಮಾಡಲು ಕೈಯೆತ್ತಿರುವೆ ನಿನ್ನನ್ನು ಕ್ಷಮಿಸಿ ಕ್ಷಮಿಸಿ ಸಾಕಾಗಿದೆ ನನಗೆ.


ಸುರಸುಂದರವಾದ ಸಿಯೋನಿನಿಂದ I ಉದಯಸಿಹನು ದೇವನು ಶೋಭೆಯಿಂದ II


ತುಟಿ ತೆರೆದು ನಾನು ಉತ್ತರಿಸಲೇಬೇಕು ನೆಮ್ಮದಿಯಿಂದಿರಲು ನಾನು ಮಾತಾಡಲೇಬೇಕು.


ಹೇಳಬೇಕಾದವು ನನ್ನಲ್ಲಿ ತುಂಬಿವೆ ಹೇಳಲು ನನ್ನ ಅಂತರಾತ್ಮ ಒತ್ತಾಯಪಡಿಸುತ್ತಿದೆ.


ನೀವಿದನ್ನೆಲ್ಲ ಮಾಡಿದರೂ ನಾ ಮೌನಿಯೆನ್ನುವಿರಾ? I ನಾ ಕೂಡ ನಿಮ್ಮಂಥವನು ಎಂದುಕೊಂಡಿರಾ? II ನಿಮ್ಮ ದುಷ್ಟತನವನು ಕಣ್ಮುಂದೆಯಿಡುವೆನು I ನೀವು ಅಪರಾಧಿಗಳೆಂದು ಸ್ಥಾಪಿಸದೆಬಿಡೆನು II


ಆದರೆ ಸರ್ವೇಶ್ವರ ನಿಮಗೆ ಕೃಪೆತೋರಬೇಕೆಂದು ಕಾದಿರುತ್ತಾರೆ. ನಿಮ್ಮನ್ನು ಕರುಣಿಸಲು ಎದ್ದುನಿಂತಿದ್ದಾರೆ. ಅವರು ನ್ಯಾಯಪರರಾದ ದೇವರು, ಅವರಿಗಾಗಿ ಕಾದಿರುವವರೆಲ್ಲರೂ ಧನ್ಯರು.


ನೀನು ಯಾರಿಗೆ ಹೆದರಿ ಬೆದರಿ, ನನ್ನನ್ನು ಮರೆತು, ನನಗೆ ಸುಳ್ಳಾಡಿ ಮೋಸಮಾಡಿರುವೆ? ಇಂಥ ದ್ರೋಹಕ್ಕೂ ನೀನು ಹಿಂಜರಿಯಲಿಲ್ಲವಲ್ಲಾ! ಬಹುಕಾಲದಿಂದ ನಾನು ಸುಮ್ಮನೆ ಇದ್ದುದರಿಂದಲೇ ನೀನು ನನ್ನನ್ನು ಗೌರವಿಸದೆ ಇರುವುದಕ್ಕೆ ಕಾರಣವಲ್ಲವೆ?


ಸ್ವಾಮಿ ಸರ್ವೇಶ್ವರಾ, ಇವುಗಳನ್ನು ನೋಡಿಯೂ ಸುಮ್ಮನಿರುವಿರಾ? ನೆಮ್ಮದಿಯಿಂದಿರುವಿರಾ? ನಾವು ತಡೆದುಕೊಳ್ಳಲಾಗದಷ್ಟು ದಂಡಿಸುತ್ತಿರುವಿರಾ?


“ಇಗೋ, ಇವೆಲ್ಲ ನನ್ನ ಕಣ್ಣೆದುರಿಗೆ ಲಿಖಿತವಾಗಿವೆ; ನಾನು ಮುಯ್ಯಿ ತೀರಿಸಿಯೇ ತೀರಿಸುವೆನು, ಸುಮ್ಮನಿರಲಾರೆ.


ಸಿಯೋನ್ ನಗರಿ ಪ್ರಸವವೇದನೆ ಪಡುವವಳಂತೆ ಚೊಚ್ಚಲ ಹೆರಿಗೆಯ ವೇದನೆಯನ್ನು ಅನುಭವಿಸುವವಳಂತೆ ಕಿರಿಚಿಕೊಳ್ಳುವ ಕೂಗನ್ನು ನಾನು ಕೇಳಿದ್ದೇನೆ. ಉಬ್ಬಸಪಡುತ್ತಾ ಎರಡು ಕೈಗಳನ್ನೂ ಚಾಚಿ ‘ಅಯ್ಯೋ ನನಗೆ ಕೇಡು, ಕೊಲೆಗಡುಕನ ಮುಂದೆ ನನ್ನ ಪ್ರಾಣ ಉಡುಗುತ್ತಿದೆ’ ಎಂದು ಅರುಚಿಕೊಳ್ಳುತ್ತಿಹಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು