Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 42:16 - ಕನ್ನಡ ಸತ್ಯವೇದವು C.L. Bible (BSI)

16 ಕುರುಡರನ್ನು ನೆಪ್ಪಿಲ್ಲದ ಮಾರ್ಗದಲ್ಲಿ ಬರಮಾಡುವೆನು ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಸುವೆನು. ಅವರೆದುರಿನ ಕತ್ತಲನ್ನು ಬೆಳಕಾಗಿಸುವೆನು ಅವರ ಹಾದಿಯ ಡೊಂಕನು ನೇರಮಾಡುವೆನು. ಬಿಡದೆ ಮಾಡುವೆನು ಈ ಕಾರ್ಯಗಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಕುರುಡರನ್ನು ತಿಳಿಯದ ಮಾರ್ಗದಲ್ಲಿ ಬರಮಾಡುವೆನು, ಅವರಿಗೆ ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಸುವೆನು, ಅವರೆದುರಿಗೆ ಕತ್ತಲನ್ನು ಬೆಳಕುಮಾಡಿ, ಡೊಂಕನ್ನು ಸರಿಪಡಿಸುವೆನು. ಈ ಕಾರ್ಯಗಳನ್ನು ಬಿಡದೆ ಮಾಡುವೆನು. ನಾನು ಅವರನ್ನು ಕೈ ಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಮತ್ತು ಕುರುಡರನ್ನು ನೆಪ್ಪಿಲ್ಲದ ಮಾರ್ಗದಲ್ಲಿ ಬರಮಾಡುವೆನು, ಅವರಿಗೆ ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಯಿಸುವೆನು; ಅವರೆದುರಿನ ಕತ್ತಲನ್ನು ಬೆಳಕುಮಾಡಿ ಡೊಂಕನ್ನು ಸರಿಪಡಿಸುವೆನು. ಈ ಕಾರ್ಯಗಳನ್ನು ಬಿಡದೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅವರು ಹಿಂದೆಂದೂ ತಿಳಿಯದ ರೀತಿಯಲ್ಲಿ ನಾನು ಕುರುಡರನ್ನು ನಡೆಸುವೆನು. ಕುರುಡರು ಹೋಗಿರದ ಸ್ಥಳಕ್ಕೆ ನಾನು ಅವರನ್ನು ನಡಿಸುವೆನು. ನಾನು ಅವರಿಗಾಗಿ ಕತ್ತಲೆಯನ್ನು ಬೆಳಕಾಗಿ ಮಾರ್ಪಡಿಸುವೆನು. ನಾನು ಕೊರಕಲು ನೆಲವನ್ನು ಸಮತಟ್ಟಾಗಿ ಮಾಡುವೆನು. ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು. ನನ್ನ ಜನರನ್ನು ನಾನು ಎಂದಿಗೂ ತೊರೆಯುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಕುರುಡರನ್ನು ಅವರು ತಿಳಿಯದ ಮಾರ್ಗದಲ್ಲಿ ಬರಮಾಡುವೆನು. ಅವರನ್ನು ತಿಳಿಯದ ಹಾದಿಗಳಲ್ಲಿ ನಡೆಸುವೆನು. ಕತ್ತಲೆಯನ್ನು ಅವರ ಮುಂದೆ ಬೆಳಕಾಗಿಯೂ, ಸೊಟ್ಟಾದವುಗಳನ್ನು ನೆಟ್ಟಗಾಗಿಯೂ ಮಾಡುವೆನು. ಇವುಗಳನ್ನು ನಾನು ಅವರಿಗೋಸ್ಕರ ಮಾಡುವೆನು. ನಾನು ಅವರನ್ನು ಕೈಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 42:16
40 ತಿಳಿವುಗಳ ಹೋಲಿಕೆ  

ನೀವು ಬಲಕ್ಕಾಗಲೀ ಎಡಕ್ಕಾಗಲೀ ತಿರುಗಿದರೆ, ‘ಇದೇ ಮಾರ್ಗ, ಇದರಲ್ಲೇ ನಡೆಯಿರಿ,’ ಎಂಬ ಮಾತು ಹಿಂದಿನಿಂದ ನಿಮ್ಮ ಕಿವಿಗೆ ಕೇಳಿಸುವುದು.


ಹಳ್ಳಕೊಳ್ಳಗಳೆಲ್ಲ ಭರ್ತಿಯಾಗಬೇಕು; ಬೆಟ್ಟಗುಡ್ಡಗಳು ಮಟ್ಟವಾಗಬೇಕು; ಅಂಕುಡೊಂಕಾದವು ನೆಟ್ಟಗಾಗಬೇಕು; ತಗ್ಗುಮುಗ್ಗಾದ ಹಾದಿಗಳು ಹಸನಾಗಬೇಕು.


ಅಲ್ಲಿರುವುದೊಂದು ರಾಜಮಾರ್ಗ ಅದೆನಿಸಿಕೊಳ್ಳುವುದು ಪವಿತ್ರಮಾರ್ಗ ನಡೆಯನು ಅದರೊಳು ಪಾಪಾತ್ಮನು; ಅದಾಗುವುದು ಜನರಿಗೆ ಮೀಸಲು ದಾರಿತಪ್ಪನು ಅಲ್ಲಿ ನಡೆಯುವ ಮೂಢನು.


ತುಂಬಬೇಕು ಎಲ್ಲ ಹಳ್ಳಕೊಳ್ಳಗಳನು ಮಟ್ಟಮಾಡಬೇಕು ಎಲ್ಲ ಬೆಟ್ಟಗುಡ್ಡಗಳನು. ನೆಲಸಮಮಾಡಬೇಕು ದಿಬ್ಬದಿಣ್ಣೆಗಳನು ಸಮತಲಗೊಳಿಸಬೇಕು ತಗ್ಗುಮುಗ್ಗಾದ ಸ್ಥಳಗಳನು.


ನೀವು ಹಿಂದೊಮ್ಮೆ ಕತ್ತಲುಮಯವಾಗಿದ್ದಿರಿ. ಈಗಲಾದರೋ ಪ್ರಭುವಿನಲ್ಲಿ ಬೆಳಕಾಗಿದ್ದೀರಿ. ಆದ್ದರಿಂದ ಬೆಳಕಿನ ಮಕ್ಕಳಾಗಿ ಬಾಳಿರಿ.


ಆಗ ನೋಡುವವರ ಕಣ್ಣು ಮಬ್ಬಾಗದು, ಕೇಳುವವರ ಕಿವಿ ಮಂದವಾಗದು.


ಹಣದಾಶೆಗೆ ಬಲಿಯಾಗಬೇಡಿ. ನಿಮಗೆ ಇರುವುದರಲ್ಲಿಯೇ ತೃಪ್ತರಾಗಿರಿ. “ಎಂದೆಂದಿಗೂ ನಾನು ನಿನ್ನ ಕೈಬಿಡಲಾರೆ; ತ್ಯಜಿಸಲಾರೆ,” ಎಂದು ದೇವರೇ ಹೇಳಿದ್ದಾರೆ.


ಆ ದಿನದಂದು ಕಿವುಡರು ಗ್ರಂಥವಾಕ್ಯಗಳನ್ನು ಓದುವುದನ್ನು ಕೇಳುವರು. ಕುರುಡರಿಗೆ ಮಬ್ಬಿನಲ್ಲೂ ಕತ್ತಲಲ್ಲೂ ಕಣ್ಣು ಕಾಣಿಸುವುದು.


ತಳ್ಳಿಬಿಡಲು ಪ್ರಭು ತನ್ನ ಜನರನು I ಕೈಬಿಡನವನು ತನ್ನ ಸ್ವಕೀಯರನು II


ನಿನ್ನ ಜೀವೋದ್ಧಾರಕನು ಇಸ್ರಯೇಲಿನ ಪರಮಪಾವನನು ಆದ ಸರ್ವೇಶ್ವರ ಸ್ವಾಮಿಯೆ ನುಡಿದಿಹನು : “ನಿನಗೆ ಕ್ಷೇಮ‍ಕರವಾದ ಮಾರ್ಗವನು ಬೋಧಿಸುವವನೂ ನೀ ಹೋಗಬೇಕಾದ ಹಾದಿಯಲಿ ನಡೆಯಿಸುವವನೂ ಆದಂಥ ಸರ್ವೇಶ್ವರ ಸ್ವಾಮಿ ದೇವರು ನಾನು.


ನಿನ್ನ ಮುಂದೆ ಸಾಗುವೆನು ನಾನು ಸಮಮಾಡುವೆನು ಬೆಟ್ಟಗುಡ್ಡಗಳನು ಒಡೆದುಹಾಕುವೆನು ಕಂಚಿನ ಕದಗಳನು ಮುರಿದುಬಿಡುವೆನು ಕಬ್ಬಿಣದ ಅಗುಳಿಗಳನು.


ಕುರುಡರ ಕಣ್ಣು ಕಾಣುವುದಾಗ ಕಿವುಡರ ಕಿವಿ ತೆರೆಯುವುದಾಗ.


ಆದುದರಿಂದ ಇಗೋ, ನಾನು ಅವಳನ್ನು ಪುನಃ ಬೆಂಗಾಡಿಗೆ ಕರೆದೊಯ್ಯುವೆನು. ಹೃದಯಂಗಮವಾಗಿ ಅವಳನ್ನು ಒಲಿಸಿಕೊಂಡು ಮಾತಾಡುವೆನು.


ಆದುದರಿಂದ ನಾನು ಅವಳ ದಾರಿಗೆ ಮುಳ್ಳುಬೇಲಿಹಾಕುವೆನು. ಇಷ್ಟಬಂದ ದಾರಿಯನ್ನು ಹಿಡಿಯದಂತೆ ಅವಳ ಮುಂದೆ ಅಡ್ಡಗೋಡೆಯನ್ನು ಎಬ್ಬಿಸುವೆನು.


ಚಂಚಲಚಿತ್ತರು ಬುದ್ಧಿವಂತರಾಗುವರು. ಗೊಣಗುಟ್ಟುವವರು ಧ್ಯಾನಮಗ್ನರಾಗುವರು.


ಆದರೆ ಅದರ ಹತ್ತಿರ ನೀವು ಹೋಗಬಾರದು. ನಿಮಗೂ ಮಂಜೂಷಕ್ಕೂ ಸುಮಾರು ಒಂದು ಕಿಲೋಮೀಟರ್ ಅಂತರವಿರಬೇಕು. ಹೀಗೆ ನೀವು ಹೋಗಬೇಕಾದ ಮಾರ್ಗ ನಿಮಗೆ ಗೊತ್ತಾಗುವುದು. ಏಕೆಂದರೆ ನೀವು ಆ ಮಾರ್ಗವಾಗಿ ಇಲ್ಲಿಯವರೆಗೆ ಪ್ರಯಾಣ ಮಾಡಿದ್ದಿಲ್ಲ,” ಎಂದು ತಿಳಿಸಿದರು.


ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ನೋಡುವಾಗ ಅವರಿಂದಲೇ ನಿಮಗೆ ಸಮಾಧಾನವಾಗುವುದು; ನಾನು ಜೆರುಸಲೇಮಿಗೆ ಮಾಡಿದ್ದೆಲ್ಲಾ ಕಾರಣವಿಲ್ಲದೆ ಮಾಡಿದ್ದಲ್ಲವೆಂದು ನಿಮಗೆ ಆಗ ತಿಳಿಯುವುದು. ಇದು ಸರ್ವೇಶ್ವರನಾದ ದೇವರ ನುಡಿ.”


ನಿನ್ನ ಮಕ್ಕಳು ಶಿಕ್ಷಿತರಾಗುವರು ನನ್ನಿಂದ ಸಮೃದ್ಧವಾಗಿ ಬಾಳುವರು ಅವರು ಸುಖಶಾಂತಿಯಿಂದ.


ಹಿಂದಟ್ಟುತ್ತಾನೆ ಅವರನ್ನು ನಿರ್ಭೀತಿಯಿಂದ ಮುನ್ನುಗ್ಗುತ್ತಾನೆ ಕಾಲು ನೆಲ ಊರದಷ್ಟು ವೇಗದಿಂದ.


ದೇವರ ಸೃಷ್ಟಿಕಾರ್ಯವನ್ನು ಗಮನಿಸು; ಅವರು ಸೊಟ್ಟಗೆ ಮಾಡಿದ್ದನ್ನು ನೆಟ್ಟಗೆ ಮಾಡುವವರು ಯಾರು?


ಸೊಟ್ಟವಾದುದನ್ನು ನೆಟ್ಟಗೆ ಮಾಡುವುದು ಅಸಾಧ್ಯ, ಇಲ್ಲವಾದುದನ್ನು ಲೆಕ್ಕ ಹಾಕುವುದು ಅಶಕ್ಯ.


ನೀನು ಇವರ ಕಣ್ಣುಗಳನ್ನು ತೆರೆಯಬೇಕು; ಅಂಧಕಾರವನ್ನು ಬಿಟ್ಟು ಬೆಳಕಿಗೆ ಬರುವಂತೆ ಮಾಡಬೇಕು; ಸೈತಾನನ ಆಧಿಪತ್ಯವನ್ನು ತ್ಯಜಿಸಿ ದೇವರತ್ತ ತಿರುಗುವಂತೆ ಮಾಡಬೇಕು. ಹೀಗೆ, ಅವರು ನನ್ನಲ್ಲಿಡುವ ವಿಶ್ವಾಸದ ಪ್ರಯುಕ್ತ ಪಾಪವಿಮೋಚನೆಯನ್ನು ಪಡೆಯುವರು; ಆಯ್ಕೆಯಾದವರಿಗಿರುವ ಹಕ್ಕುಬಾಧ್ಯತೆಗಳಲ್ಲಿ ಭಾಗಿಗಳಾಗುವರು,’ ಎಂದು ಹೇಳಿದರು.


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ನೇರವಾಗಿದೆ ಸಜ್ಜನನ ದಾರಿ ಸುಗಮವಾಗಿದೆ ನಿನ್ನಿಂದ ಆತನ ಹಾದಿ.


ಆದರೆ ಸರ್ವೇಶ್ವರ ನಿಮಗೆ ಕೃಪೆತೋರಬೇಕೆಂದು ಕಾದಿರುತ್ತಾರೆ. ನಿಮ್ಮನ್ನು ಕರುಣಿಸಲು ಎದ್ದುನಿಂತಿದ್ದಾರೆ. ಅವರು ನ್ಯಾಯಪರರಾದ ದೇವರು, ಅವರಿಗಾಗಿ ಕಾದಿರುವವರೆಲ್ಲರೂ ಧನ್ಯರು.


ದೀನದರಿದ್ರರು ನೀರಿಗಾಗಿ ಪರದಾಡುವಾಗ ಬಾಯಾರಿ ಅವರ ನಾಲಿಗೆ ಒಣಗಿಹೋದಾಗ ಪ್ರಸನ್ನನಾಗುವೆ ಸರ್ವೇಶ್ವರನಾದ ನಾನೇ. ಇಸ್ರಯೇಲಿನ ದೇವರಾದ ನಾನವರನ್ನು ಕೈಬಿಡುವೆನೆ?


ಬೆಳಕಿಗೂ ಕತ್ತಲಿಗೂ ನಾನೆ ಸೃಷ್ಟಿಕರ್ತನೆಂದು ಸುಖದುಃಖಗಳಿಗೆ ಕಾರಣಕರ್ತನೆಂದು ಸಕಲವನು ನಡೆಸುವ ಸರ್ವೇಶ್ವರ ನಾನೇ ಎಂದು.


ಅವಸರವಾಗಿ ನೀವು ಹೊರಡಬೇಕಿಲ್ಲ ನೆಗೆನೆಗೆದು ನೀವು ಓಡಬೇಕಿಲ್ಲ. ಹೋಗುವನು ಸರ್ವೇಶ್ವರ ನಿಮಗೆ ಮುಂಬಲವಾಗಿ, ನಿಮಗಿರುವನು ಇಸ್ರಯೇಲ್ ದೇವರು ಹಿಂಬಲವಾಗಿ.


ಹಾಗೂ ಹಸಿದವರಿಗೆ ಜೀವನಾಂಶವನ್ನೂ ಬಡವರಿಗೆ ಅಗತ್ಯವಾದುದನ್ನೂ ನೀಡಿದರೆ, ನಿಮ್ಮ ಜ್ಯೋತಿ ಕತ್ತಲಲ್ಲಿ ಬೆಳಗುವುದು; ಅಂಧಕಾರ ನೀಗಿ ಮಧ್ಯಾಹ್ನವಾಗುವುದು.


‘ಪವಿತ್ರ ಪ್ರಜೆ’ ಎನಿಸಿಕೊಳ್ಳುವುದು ನಿಮ್ಮ ಜನತೆ ‘ಸರ್ವೇಶ್ವರ ಸ್ವಾಮಿಯೇ ಉದ್ಧರಿಸಿದ ಜನತೆ’. ನಿನ್ನ ಹೆಸರೋ, ‘ಪ್ರಾಪ್ತ ನಗರಿ’ ಪತಿ ವರಿಸಿ ಕೈ ಬಿಡದ ಪುರಿ.


ಕೃತ್ತಿಕೆ, ಮೃಗಶಿರ, ನಕ್ಷತ್ರಪುಂಜಗಳನು ಸೃಜಿಸಿದಾತನು ಕತ್ತಲನು ಬೆಳಕಾಗಿ, ಹಗಲನು ಇರುಳಾಗಿ ಮಾಡುವವನು, ಕಡಲಿನ ಜಲವನು ಮೇಲೆತ್ತಿ, ಧರೆಗೆ ಮಳೆಗರೆವಾತನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು