Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 42:2 - ಕನ್ನಡ ಸತ್ಯವೇದವು C.L. Bible (BSI)

2 ಆತ ಕೂಗಾಡುವಂಥವನಲ್ಲ, ಕಿರಿಚಾಡುವಂಥವನಲ್ಲ, ಹಾದಿಬೀದಿಗಳಲ್ಲಿ ಅವನ ಧ್ವನಿ ಕೇಳಿಸುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇವನು ಕೂಗಾಡುವುದಿಲ್ಲ, ಆರ್ಭಟಿಸುವುದಿಲ್ಲ, ಬೀದಿಗಳಲ್ಲಿ ಇವನ ಧ್ವನಿಯೇ ಕೇಳಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇವನು ಕೂಗಾಡುವದಿಲ್ಲ, ಆರ್ಭಟಿಸುವದಿಲ್ಲ, ಬೀದಿಗಳಲ್ಲಿ ಇವನ ಧ್ವನಿಯೇ ಕೇಳಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆತನು ಬೀದಿಗಳಲ್ಲಿ ಗಟ್ಟಿಯಾಗಿ ಮಾತನಾಡನು, ಗಟ್ಟಿಯಾಗಿ ಕರೆಯುವದಿಲ್ಲ, ಕೂಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವನು ಕೂಗುವುದಿಲ್ಲ, ಶಬ್ದವನ್ನು ಎತ್ತುವುದಿಲ್ಲ, ಬೀದಿಗಳಲ್ಲಿ ತನ್ನ ಧ್ವನಿಯನ್ನು ಕೇಳಗೊಡಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 42:2
8 ತಿಳಿವುಗಳ ಹೋಲಿಕೆ  

ಪ್ರಭುವಿನ ಶರಣನಿಗೆ ಜಗಳ ಸಲ್ಲದು. ಆತನು ಎಲ್ಲರೊಡನೆ ಸೌಹಾರ್ದದಿಂದ ನಡೆದುಕೊಳ್ಳಬೇಕು.


ದೇವರ ಸಾಮ್ರಾಜ್ಯವು ಯಾವಾಗ ಬರುವುದೆಂದು ಫರಿಸಾಯರು ಕೇಳಿದಾಗ ಯೇಸುಸ್ವಾಮಿ ಪ್ರತ್ಯುತ್ತರವಾಗಿ, “ದೇವರ ಸಾಮ್ರಾಜ್ಯವು ಕಣ್ಣುಗಳಿಗೆ ಕಾಣಿಸುವಂತೆ ಬರುವುದಿಲ್ಲ.


ನಾನು ವಿನಯಶೀಲನು, ದೀನಹೃದಯನು; ನನ್ನ ನೊಗಕ್ಕೆ ಹೆಗಲುಕೊಟ್ಟು ನನ್ನಿಂದ ಕಲಿತುಕೊಳ್ಳಿ. ಆಗ ನಿಮಗೆ ವಿಶ್ರಾಂತಿ ಸಿಗುವುದು.


ಅವರು, ಅವಮಾನಪಡಿಸಿದವರನ್ನು ಪ್ರತಿಯಾಗಿ ಅವಮಾನಪಡಿಸಲಿಲ್ಲ. ಅವರು ಯಾತನೆಯನ್ನು ಅನುಭವಿಸುವಾಗಲೂ ಯಾರಿಗೂ ಬೆದರಿಕೆ ಹಾಕಲಿಲ್ಲ. ಬದಲಿಗೆ, ಸತ್ಯಸ್ವರೂಪರೂ ನ್ಯಾಯಾಧಿಪತಿಯೂ ಆದ ದೇವರಿಗೆ ತಮ್ಮನ್ನೇ ಒಪ್ಪಿಸಿಕೊಂಡರು.


ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.


ಇಗೋ, ನನ್ನ ದಾಸನು ! ನನ್ನ ಆಧಾರ ಪಡೆದವನು ನನ್ನಿಂದ ಆಯ್ಕೆಯಾದವನು ನನಗೆ ಪರಮ ಪ್ರಿಯನು. ನೆಲೆಗೊಳಿಸಿರುವೆ ಇವನಲ್ಲಿ ನನ್ನ ಆತ್ಮವನು ಅನ್ಯರಾಷ್ಟ್ರಗಳಿಗೆ ಸಾರುವನಿವನು ಸದ್ಧರ್ಮವನು.


ಮುರಿಯುವುದಿಲ್ಲ ಆತ, ಜಜ್ಜಿದ ದಂಟನು ನಂದಿಸುವುದಿಲ್ಲ ಆತ, ಕಳೆಗುಂದಿದ ದೀಪವನು ತಪ್ಪದೆ ಸಿದ್ಧಿಗೆ ತರುವನಾತ ಸದ್ಧರ್ಮವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು