Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 42:21 - ಕನ್ನಡ ಸತ್ಯವೇದವು C.L. Bible (BSI)

21 ಸರ್ವೇಶ್ವರ ಮುಕ್ತಿದಾತನಾದುದರಿಂದ ಧರ್ಮಶಾಸ್ತ್ರಕ್ಕೆ ಮಹಿಮೆಯಿತ್ತು ಅದನ್ನು ಮಹತ್ತಾಗಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೆಹೋವನು ಧರ್ಮಸ್ವರೂಪನಾಗಿರುವುದರಿಂದ ಧರ್ಮೋಪದೇಶವನ್ನು ಘನಪಡಿಸಿ ಮಹತ್ತಿಗೆ ತರಬೇಕೆಂದು ಇಷ್ಟಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೆಹೋವನು ಧರ್ಮಸ್ವರೂಪನಾಗಿರುವದರಿಂದ ಧರ್ಮೋಪದೇಶವನ್ನು ಘನಪಡಿಸಿ ಮಹತ್ತಿಗೆ ತರಬೇಕೆಂದು ಇಷ್ಟಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ತನ್ನ ಸೇವಕನು ನೀತಿವಂತನಾಗಿರಬೇಕೆಂದೂ ತನ್ನ ಉತ್ಕೃಷ್ಟವಾದ ಉಪದೇಶವನ್ನು ಗೌರವಿಸಬೇಕೆಂದೂ ಯೆಹೋವನು ಬಯಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಯೆಹೋವ ದೇವರು ಆತನ ನೀತಿಗೋಸ್ಕರ ಬಹಳವಾಗಿ ಮೆಚ್ಚುವನು. ಆತನು ನಿಯಮವನ್ನು ಹೆಚ್ಚಿಸಿ, ಘನಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 42:21
32 ತಿಳಿವುಗಳ ಹೋಲಿಕೆ  

‘ವಿಶ್ವಾಸದ ಮೂಲಕ’ ಎಂದು ಒತ್ತಿ ಹೇಳುವಾಗ ಧರ್ಮಶಾಸ್ತ್ರವನ್ನು ನಾವು ಅಲ್ಲಗಳೆಯುತ್ತೇವೆಂದು ಅರ್ಥವೆ? ಎಂದಿಗೂ ಇಲ್ಲ. ಬದಲಿಗೆ ಧರ್ಮಶಾಸ್ತ್ರದ ನಿಲುವನ್ನು ಸಮರ್ಥಿಸುತ್ತೇವೆ.


ಆ ದಿನಗಳು ಬಂದಮೇಲೆ ಇಸ್ರಯೇಲ್ ವಂಶದವರೊಡನೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು, ಎಂದರು ಸರ್ವೇಶ್ವರ. ನಾಟಿಸುವೆನು ನನ್ನಾಜ್ಞೆಗಳನು ಅವರ ಮನದಲಿ ಬರೆಯುವೆನು ಅವುಗಳನು ಅವರ ಹೃದಯದಲಿ ದೇವನಾಗಿರುವೆನು ನಾನವರಿಗೆ ಅವರಾಗುವರು ಪ್ರಜೆಗಳು ನನಗೆ.


ಧರ್ಮಶಾಸ್ತ್ರ ಪವಿತ್ರವಾದುದು. ಅಂತೆಯೇ, ಆಜ್ಞೆಯೂ ಪವಿತ್ರವಾದುದು. ನ್ಯಾಯವಾದುದು ಮತ್ತು ಹಿತಕರವಾದುದು.


ಆದರೆ ಯೇಸು, “ಸದ್ಯಕ್ಕೆ ತಡೆಯದಿರು; ನಾವು ದೈವನಿಯಮಕ್ಕೆ ತಲೆಬಾಗುವುದು ಒಳಿತು,” ಎಂದರು. ಯೊವಾನ್ನನು ಅದಕ್ಕೆ ಸಮ್ಮತಿಸಿದನು.


ಎಡವಿ ಬೀಳನವನು, ಎದೆಗುಂದನವನು ಜಗದೊಳು ಸ್ಥಾಪಿಸುವ ತನಕ ಸದ್ಧರ್ಮವನು, ಎದುರುನೋಡುವುವು ದ್ವೀಪ-ದ್ವೀಪಾಂತರಗಳು ಆತನ ಧರ್ಮಶಾಸ್ತ್ರವನು.


ನಿನ್ನ ಶಕ್ತಿ, ನಿನ್ನ ನೀತಿ ದೇವಾ, ಗಗನ ಮುಟ್ಟುತ್ತಿಹವು I ಮಹತ್ಕಾರ್ಯಗಳೆಸಗಿದ ನಿನಗೆ ದೇವಾ, ಯಾರು ಸಾಟಿಯು? II


ನಿನ್ನ ಚಿತ್ತಾನುಸಾರ ನಡೆವುದೇ ನನಗೆ ಪರಮಾವೇಶ I ನನ್ನಂತರಂಗದಲಿದೆ ದೇವಾ, ನಿನ್ನ ಧರ್ಮೋಪದೇಶ” II


ಧರ್ಮಶಾಸ್ತ್ರದ ಪಾಲನೆಯಿಂದ ದೊರಕುವ, ನನ್ನದೇ ಎಂದು ಹೇಳಿಕೊಳ್ಳಬಹುದಾದ ಸತ್ಸಂಬಂಧ ಯಾವುದೂ ನನಗಿಲ್ಲ. ಪ್ರತಿಯಾಗಿ, ನಾನು ಕ್ರಿಸ್ತಯೇಸುವಿನಲ್ಲಿಟ್ಟಿರುವ ವಿಶ್ವಾಸದ ಪ್ರಯುಕ್ತ ದೇವರೊಂದಿಗೆ ಸರಿಯಾದ ಸತ್ಸಂಬಂಧವನ್ನು ಹೊಂದಿದ್ದೇನೆ. ಈ ಸಂಬಂಧವು ದೇವರು ನನಗೆ ದಯಪಾಲಿಸಿರುವ ಅನುಗ್ರಹ. ನನ್ನ ವಿಶ್ವಾಸದ ಆಧಾರದ ಮೇಲೆ ಅವರೇ ನೀಡಿರುವ ಕೃಪಾವರ.


ಹಾಗಾದರೆ, ಧರ್ಮಶಾಸ್ತ್ರ ದೇವರ ವಾಗ್ದಾನಕ್ಕೆ ವಿರುದ್ಧವಾಗಿದೆಯೆಂದು ಹೇಳೋಣವೇ? ಎಂದಿಗೂ ಇಲ್ಲ. ಸಜ್ಜೀವಗೊಳಿಸುವ ಶಕ್ತಿಯನ್ನು ಧರ್ಮಶಾಸ್ತ್ರ ಹೊಂದಿದ್ದರೆ ಅದನ್ನು ಅನುಸರಿಸುವುದರಿಂದ ನಿಸ್ಸಂದೇಹವಾಗಿ ದೇವರೊಡನೆ ಸತ್ಸಂಬಂಧ ದೊರಕುತ್ತಿತ್ತು.


ಮರಕ್ಕೆ ತೂಗುಹಾಕಲಾದ ಪ್ರತಿ ಒಬ್ಬನೂ ಶಾಪಗ್ರಸ್ತನು,” ಎಂದು ಬರೆದಿರುವಂತೆ, ನಮಗೋಸ್ಕರ ಕ್ರಿಸ್ತಯೇಸು ಶಾಪಸ್ವರೂಪಿಯಾಗಿ ಧರ್ಮಶಾಸ್ತ್ರದಲ್ಲಿ ಹೇಳಲಾಗಿರುವ ಶಾಪದಿಂದ ನಮ್ಮನ್ನು ಪಾರುಮಾಡಿದರು.


ದೇವರಲ್ಲಿ ವಿಶ್ವಾಸವಿಡುವ ಪ್ರತಿಯೊಬ್ಬನಿಗೂ ಆ ಸತ್ಸಂಬಂಧ ದೊರಕುವಂತೆ ಕ್ರಿಸ್ತಯೇಸು ಧರ್ಮಶಾಸ್ತ್ರವನ್ನು ಇತಿಗೊಳಿಸಿದರು.


ನನ್ನ ಪಿತನು ಕೊಟ್ಟ ಆಜ್ಞೆಗಳನ್ನು ಪಾಲಿಸಿ ಅವರ ಪ್ರೀತಿಯಲ್ಲಿ ನಾನು ನೆಲೆಗೊಂಡಿರುವ ಹಾಗೆ ನೀವು ಕೂಡ ನಾನು ಕೊಟ್ಟ ಆಜ್ಞೆಗಳನ್ನು ಪಾಲಿಸಿದರೆ ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.


ನನ್ನನ್ನು ಕಳುಹಿಸಿದಾತನು ನನ್ನೊಡನಿದ್ದಾನೆ. ಆತನು ಮೆಚ್ಚುವುದನ್ನೇ ನಾನು ಸತತವೂ ಮಾಡುವುದರಿಂದ ಆತನು ನನ್ನನ್ನು ಏಕಾಕಿಯಾಗಿ ಬಿಟ್ಟಿಲ್ಲ.”


ಪೇತ್ರ ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೇಘವೊಂದು ಅವರನ್ನು ಆವರಿಸಿತು; ಆ ಮೇಘದಿಂದ ಒಂದು ವಾಣಿ, ‘ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು. ಈತನ ಮಾತಿಗೆ ಕಿವಿಗೊಡಿ,” ಎಂದಿತು.


ಆಗ ಆಕಾಶದಿಂದ, “ಇವನೇ ನನ್ನ ಪುತ್ರ; ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂಬ ದೈವವಾಣಿ ಕೇಳಿಸಿತು.


ಸ್ವಾಮಿ ದೇವಾ, ಸ್ಮರಿಸುವೆನು ನಿನ್ನ ಮಹತ್ಕಾರ್ಯಗಳನೆ I ಪ್ರಕಟಪಡಿಸುವೆನು ನಿನ್ನೊಬ್ಬನ ನ್ಯಾಯನೀತಿಯನೆ II


ಪೊಗಳುವೆ ನಿನ್ನ ನಾಮವನು ತಲೆಬಾಗಿ ನಿನ್ನ ಪವಿತ್ರಾಲಯದತ್ತ I ನಿನ್ನ ಪ್ರೀತಿಸತ್ಯತೆಗಳ, ನಾಮ ನುಡಿಗಳ ಮಹತ್ವದ ಪ್ರಯುಕ್ತ II


ಆಲಿಸಿರಿ ನನ್ನ ಜನರೆ, ಕಿವಿಗೊಡಿ ನನ್ನ ಪ್ರಜೆಗಳೆ : ಧರ್ಮೋಪದೇಶ ಹೊರಡುವುದು ರಾಷ್ಟ್ರಗಳಿಗೆ ನನ್ನಿಂದಲೆ; ಬೆಳಗುವುದು ಜಗಜ್ಯೋತಿಯಾಗಿ ನನ್ನ ನ್ಯಾಯಬೋಧೆ.


ಇವುಗಳನ್ನು ಕೈಗೊಂಡು ಅನುಸರಿಸಿರಿ. ಅನುಸರಿಸಿದ್ದೇ ಆದರೆ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ ವಿವೇಕಿಗಳೂ ಎಂದು ತಿಳಿಯುವರು; ಈ ಆಜ್ಞೆಗಳ ಬಗ್ಗೆ ಅವರು ಅರಿತುಕೊಂಡಾಗ, ‘ಈ ದೊಡ್ಡ ಜನಾಂಗ ಎಂಥಾ ಜ್ಞಾನವಿವೇಕವುಳ್ಳ ಜನಾಂಗ’, ಎಂದು ಮಾತಾಡಿಕೊಳ್ಳುವರು.


ನಾನು ಈ ದಿನ ನಿಮ್ಮ ಮುಂದಿಡುವ ಇಂಥ ನ್ಯಾಯಯುತವಾದ ಆಜ್ಞಾವಿಧಿಗಳನ್ನು ಒಳಗೊಂಡ ಈ ಧರ್ಮಶಾಸ್ತ್ರಕ್ಕೆ ಸಮಾನವಾದುದು ಬೇರೆ ಯಾವ ಜನಾಂಗಕ್ಕೆ ಉಂಟು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು