Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 42:22 - ಕನ್ನಡ ಸತ್ಯವೇದವು C.L. Bible (BSI)

22 ಈ ಜನರಾದರೋ ಸೂರೆಯಾಗಿದ್ದಾರೆ ಕೊಳ್ಳೆಗೆ ಈಡಾಗಿ, ಎಲ್ಲರೂ ಬಿದ್ದಿದ್ದಾರೆ ಹಳ್ಳಕೊಳ್ಳಗಳಲ್ಲಿ, ಸೆರೆಮನೆಗಳಲ್ಲಿ ಬಂಧಿಗಳಾಗಿ; ಸುಲಿಗೆಯಾಗಿದ್ದರೂ ಅವರನ್ನು ಬಿಡಿಸುವವರಾರೂ ಇಲ್ಲ ಸೂರೆಯಾಗಿದ್ದರೂ ಅವರನ್ನು ಬಿಟ್ಟುಬಿಡಿ ಎನ್ನುವವರಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಈ ಜನರೇ ಕೊಳ್ಳೆಗೆ ಈಡಾಗಿ ಸೂರೆಹೋಗಿದ್ದಾರೆ. ಎಲ್ಲರೂ ಹಳ್ಳಕೊಳ್ಳಗಳಿಗೆ ಸಿಕ್ಕಿಬಿದ್ದಿದ್ದಾರೆ, ಸೆರೆಮನೆಗಳಲ್ಲಿ ಮುಚ್ಚಲ್ಪಟ್ಟಿದ್ದಾರೆ. ಅವರು ಸುಲಿಗೆಯಾಗಿದ್ದರೂ ಯಾರೂ ಬಿಡಿಸರು, ಸೂರೆಯಾಗಿದ್ದರೂ ಯಾರೂ ಹಿಂದಕ್ಕೆ ಬಿಡು ಎನ್ನುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಈ ಜನರೇ ಕೊಳ್ಳೆಗೆ ಈಡಾಗಿ ಸೂರೆಹೋಗಿದ್ದಾರೆ; ಎಲ್ಲರೂ ಹಳ್ಳಕೊಳ್ಳಗಳಿಗೆ ಸಿಕ್ಕಿಬಿದ್ದಿದ್ದಾರೆ, ಸೆರೆಮನೆಗಳಲ್ಲಿ ಮುಚ್ಚಲ್ಪಟ್ಟಿದ್ದಾರೆ; ಅವರು ಸುಲಿಗೆಯಾಗಿದ್ದರೂ ಯಾರೂ ಬಿಡಿಸರು, ಸೂರೆಯಾಗಿದ್ದರೂ ಯಾರೂ ಹಿಂದಕ್ಕೆ ಬಿಡು ಅನ್ನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದರೆ, ಜನರನ್ನು ನೋಡಿರಿ. ಅವರನ್ನು ಬೇರೆಯವರು ಸೋಲಿಸಿದ್ದಾರೆ. ಅವರಿಂದ ವಸ್ತುಗಳನ್ನು ದೋಚಿದ್ದಾರೆ. ತರುಣರೆಲ್ಲರೂ ಭಯಪಟ್ಟಿದ್ದಾರೆ; ಅವರನ್ನು ಸೆರೆಮನೆಯಲ್ಲಿ ಬಂಧಿಸಿದ್ದಾರೆ. ಅವರಿಂದ ಹಣವನ್ನು ಜನರು ಕಿತ್ತುಕೊಂಡಿದ್ದಾರೆ. ಅವರನ್ನು ರಕ್ಷಿಸಲು ಯಾರೂ ಇಲ್ಲ. ಅವರಲ್ಲಿ ಹಣವನ್ನು “ಹಿಂದಕ್ಕೆ ಕೊಡು” ಎಂದು ಹೇಳುವವರೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆದರೆ ಈ ಜನರೇ ಕೊಳ್ಳೆಗೆ ಈಡಾಗಿ ಸೂರೆ ಹೋಗಿದ್ದಾರೆ. ಅವರೆಲ್ಲರೂ ಹಳ್ಳಕೊಳ್ಳಗಳಲ್ಲಿ ಸಿಕ್ಕಿಬಿದ್ದಿದ್ದಾರೆ. ಸೆರೆಮನೆಗಳಲ್ಲಿ ಬಂಧಿಗಳಾಗಿದ್ದಾರೆ. ಅವರು ಸೂರೆಯಾದರೂ, ತಪ್ಪಿಸುವವನು ಒಬ್ಬನೂ ಇಲ್ಲ. ಕೊಳ್ಳೆಯಾದದ್ದನ್ನು, “ತಿರುಗಿ ಹಿಂದಕ್ಕೆ ಕೊಡು,” ಎಂದು ಹೇಳುವ ಒಬ್ಬನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 42:22
23 ತಿಳಿವುಗಳ ಹೋಲಿಕೆ  

ಆಲಿಸಿದಾತನು ಬಂಧಿತರ ಗೋಳಾಟವನು I ಬಿಡಿಸಿಹನು ಮರಣತೀರ್ಪಿಗೆ ಗುರಿಯಾದವರನು II


“ಇಸ್ರಯೇಲ್ ಚದರಿಹೋದ ಮಂದೆ. ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ. ಮೊಟ್ಟಮೊದಲು ಅಸ್ಸೀರಿಯಾದ ಅರಸನು ಅದನ್ನು ಕಬಳಿಸಿದನು. ಕಟ್ಟಕಡೆಗೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು.


ಕೊಡುವೆ ಆ ಕೋಪದ ಕೊಡವನು ನಿನ್ನನು ಶೋಷಿಸಿದವರಿಗೆ ‘ನಾವು ತುಳಿದು ಹಾದುಹೋಗುವಂತೆ ನೆಲಕಚ್ಚಿ ಬೀಳು ಕೆಳಗೆ’ ಎಂದು ನಿಮ್ಮ ಬೆನ್ನನೆ ನೆಲವಾಗಿಸಿ, ಬೀದಿಕಸವನ್ನಾಗಿಸಿದವರಿಗೆ.”


ದೇವನ ನೆನೆಯದವರೇ, ನೀಡಿರಿ ಗಮನವನು I ಇಲ್ಲವಾದರೆ ಛಿನ್ನಛಿನ್ನವಾಗಿಸಿಬಿಟ್ಟೇನು I ನನ್ನ ಕೈಯಿಂದ ತಪ್ಪಿಸುವವರಾರು ನಿಮ್ಮನು? II


ಕೊಡುವೆ ನೀನು ಕಣ್ಣನ್ನು ಕುರುಡರಿಗೆ ತರುವೆ ಬಂಧಿಗಳನ್ನು ಸೆರೆಯಿಂದ ಹೊರಗೆ ಕತ್ತಲೆಯ ಕಾರಾಗೃಹದಿಂದ ಅವರನ್ನು ಬೆಳಕಿಗೆ.


ತಳ್ಳುವವರನು ಖೈದಿಗಳ ಗುಂಪಿನಂತೆ ನೆಲಮಾಳಿಗೆಗೆ, ಇರುವರವರು ಸೆರೆಯಲಿ ಬಹುದಿನಗಳವರೆಗೆ, ತದನಂತರ ಗುರಿಯಾಗುವರು ದಂಡನೆಗೆ.


ಬೀಳುವನು ಕುಳಿಯಲ್ಲಿ, ಭಯಭೀತಿಯ ಸಪ್ಪಳಕ್ಕೆ ಓಡಿಹೋಗುವವನು, ಸಿಕ್ಕಿಬೀಳುವನು ಬಲೆಯಲ್ಲಿ ಕುಳಿಯ ಹತ್ತಿ ಬರುವವನು. ತೆರೆದಿವೆ ನೋಡಿ, ಆಕಾಶದ ದ್ವಾರಗಳು, ಕಂಪಿಸುತ್ತಿವೆ ಬುವಿಯ ಅಸ್ತಿವಾರಗಳು.


ಜೊಂಡು ಮರದ ದೋಣಿಗಳಲ್ಲಿ ನೈಲುನದಿಯ ಮಾರ್ಗವಾಗಿ, ರಾಯಭಾರಿಗಳನ್ನು ಕಳುಹಿಸುವ ಆ ದೇಶಕ್ಕೆ ಧಿಕ್ಕಾರ ! ಶೀಘ್ರವಾಗಿ ಬರುತ್ತಿರುವ ದೂತರೇ, ಹಿಂದಕ್ಕೆ ಹೋಗಿ, ಎತ್ತರವಾದ ನುಣುಪಾದ ಮೈಕಟ್ಟುಳ್ಳ, ಸರ್ವರಿಗೂ ಭಯಪ್ರದರಾಗಿರುವ, ಪ್ರಬಲ ಆಕ್ರಮಣಕಾರಿಗಳೂ ಆದ, ನದಿಗಳಿಂದ ಸೀಳಿಹೋಗಿರುವ ರಾಷ್ಟ್ರದವರ ಬಳಿಗೆ ತೆರಳಿ.


ನಗರಗಳನು ಕೆಡವಿಸಿದವನು, ನಾಡನು ಕಾಡಾಗಿಸಿದವನು, ಖೈದಿಗಳನು ಬಂಧನದಿಂದ ಬಿಡಿಸಿದವನು ಈತನೇ ಅಲ್ಲವೆ?’ ಎಂದಾಡಿಕೊಳ್ವರು.


ನಿಮ್ಮ ನಾಡು ಹಾಳುಬಿದ್ದಿದೆ: ನಿಮ್ಮ ಪಟ್ಟಣಗಳು ಸುಟ್ಟು ಭಸ್ಮವಾಗಿವೆ. ನಿಮ್ಮ ಕಣ್ಮುಂದೆಯೆ ನಿಮ್ಮ ಭೂಮಿಯನ್ನು ಅನ್ಯಜನರು ಕಬಳಿಸುತ್ತಿದ್ದಾರೆ. ಅನ್ಯದೇಶಗಳು ನಾಶವಾದಂತೆಯೇ ನಿಮ್ಮ ನಾಡು ಹಾಳಾಗಿದೆ.


ಎವೀಲ್ಮೆರೋದಕನು ಪಟ್ಟಕ್ಕೆ ಬಂದ ಮೊದಲನೆಯ ವರ್ಷದಲ್ಲಿ, ಅಂದರೆ ಜುದೇಯದ ಅರಸ ಯೆಹೋಯಾಕೀಮನು ಸೆರೆಗೆ ಸಿಕ್ಕಿದ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೈದನೆಯ ದಿನದಲ್ಲಿ, ಯೆಹೋಯಾಕೀಮನನ್ನು ಕ್ಷಮಿಸಿ ಸೆರೆಯಿಂದ ಬಿಡುಗಡೆಮಾಡಿದನು.


“ಕಾಡಿನ ಮೃಗಗಳೇ ಬನ್ನಿ, ಬಂದು ನುಂಗಿಬಿಡಿ!


ಧರ್ಮಸಾಧನೆಗಾಗಿ ಕೋರೆಷನನ್ನು ಉದಯಗೊಳಿಸಿರುವೆನು ಅವನ ಮಾರ್ಗಗಳನ್ನು ನಾನೇ ಸರಾಗಮಾಡುವೆನು ನನ್ನ ನಗರವನು ಪುನರ್ ನಿರ್ಮಾಣಮಾಡುವನು ಅವನು ಸೆರೆಯಾದ ನನ್ನ ಜನರನು ಬಿಡುಗಡೆ ಮಾಡುವನು ಸಂಬಳವನ್ನಾಗಲಿ ಸಂಭಾವನೆಯನ್ನಾಗಲಿ ಸ್ವೀಕರಿಸನು. ಇದ ನುಡಿದಿರುವೆನು ಸೇನಾಧೀಶ್ವರ ಸರ್ವೇಶ್ವರನಾದ ನಾನು.”


ಅರಸ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೆಯ ವರ್ಷದಲ್ಲಿ, ಅಸ್ಸೀರಿಯದ ಅರಸ ಸನ್ಹೇರೀಬನು ಬಂದು ಜುದೇಯ ಪ್ರಾಂತ್ಯದ ಸುಭದ್ರ ಪಟ್ಟಣಗಳನ್ನೆಲ್ಲಾ ಸ್ವಾಧೀನಮಾಡಿಕೊಂಡನು.


ಗರ್ಜಿಸುತಿಹರು ಸೈನಿಕರು ಸಿಂಹದಂತೆ, ಆರ್ಭಟಿಸುತಿಹರವರು ಪ್ರಾಯದ ಸಿಂಹಗಳಂತೆ, ಗುರುಗುಟ್ಟುತಿಹರು ಬೇಟೆ ಹಿಡಿದ ಕೇಸರಿಯಂತೆ. ಅದನ್ನೆತ್ತಿಕೊಂಡು ಓಡುತಿಹರು, ಬಿಡಿಸುವರಾರೂ ಇಲ್ಲದಂತೆ.


ಈ ಮಾತಿಗೆ ನಿಮ್ಮಲ್ಲಿ ಕಿವಿಗೊಡುವವರಾರು? ಮುಂದಕ್ಕಾದರೂ ಕಿವಿಗೊಟ್ಟು ಆಲಿಸುವವರಾರು?


ಬೆಟ್ಟ ಬರಿದಾಗಿ ಸಂಪೂರ್ಣ ಸುಲಿಗೆಯಾಗುವುದು ಜಗವು, ಸರ್ವೇಶ್ವರ ಸ್ವಾಮಿಯ ನುಡಿಗಳಿವು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು