Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 42:25 - ಕನ್ನಡ ಸತ್ಯವೇದವು C.L. Bible (BSI)

25 ಎಂದೇ ಸುರಿಸಿದನಾತ ರೋಷಾಗ್ನಿಯನು, ಯುದ್ಧದ ರೌದ್ರವನು ಅವರ ಮೇಲೆಲ್ಲ; ಸುತ್ತಲು ಉರಿ ಹತ್ತಿದರೂ ಅವರು ಅರಿಯಲಿಲ್ಲ, ದಹಿಸಿದರೂ ಅವರು ಕಲಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆದುದರಿಂದ ಆತನು ಅವರ ಮೇಲೆ ತನ್ನ ರೋಷಾಗ್ನಿಯನ್ನೂ, ಯುದ್ಧದ ರೌದ್ರವನ್ನೂ ಸುರಿಸಿದನು. ಎಲ್ಲಾ ಕಡೆಯಿಂದಲೂ ಅವರಿಗೆ ಉರಿಹೊತ್ತಿಕೊಂಡಿತು, ಆದರೆ ಅವರು ತಿಳಿಯಲಿಲ್ಲ. ದಹಿಸಿತು, ಆದರೆ ಅವರು ಲಕ್ಷ್ಯಕ್ಕೆ ತಂದುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆಗ ಆತನು ಅವರ ಮೇಲೆ ತನ್ನ ರೋಷಾಗ್ನಿಯನ್ನೂ ಯುದ್ಧದ ರೌದ್ರವನ್ನೂ ಸುರಿಸಿದನು. ಎಲ್ಲಾ ಕಡೆಯಿಂದಲೂ ಅವರಿಗೆ ಉರಿಹತ್ತಿತು, ಆದರೆ ಅವರು ತಿಳಿಯಲಿಲ್ಲ; ದಹಿಸಿತು, ಲಕ್ಷ್ಯಕ್ಕೆ ತರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆದ್ದರಿಂದ ಯೆಹೋವನು ಅವರ ಮೇಲೆ ಕೋಪಗೊಂಡನು. ಅವರಿಗೆ ವಿರುದ್ಧವಾಗಿ ಬಲವಾದ ಯುದ್ಧಗಳು ನಡೆಯುವಂತೆ ಮಾಡಿದನು. ಇಸ್ರೇಲ್ ಜನರ ಸುತ್ತಲೂ ಬೆಂಕಿಯು ಆವರಿಸಿಕೊಂಡಿರುವಂತಿದ್ದರೂ ಅವರಿಗೆ ಅದರ ಪ್ರಜ್ಞೆಯಿರಲಿಲ್ಲ. ಅವರೇ ಉರಿಯುತ್ತಿರುವಂತೆ ಅದಿತ್ತು. ಆದರೆ ಅವರು ವಿಷಯಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆದ್ದರಿಂದ ಆತನು ತನ್ನ ಯುದ್ಧದ ರೌದ್ರವನ್ನು ಮತ್ತು ರೋಷಾಗ್ನಿಯನ್ನು ಅವನ ಮೇಲೆ ಸುರಿಸಿದನು. ಅದು ಅವನ ಸುತ್ತಲೂ ಉರಿಯು ಹತ್ತಿದರೂ, ಅವನಿಗೆ ತಿಳಿಯಲಿಲ್ಲ. ಅದು ಅವನನ್ನು ಸುಟ್ಟರೂ, ಅವನು ಮನಸ್ಸಿಗೆ ತಂದುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 42:25
26 ತಿಳಿವುಗಳ ಹೋಲಿಕೆ  

ಅನ್ಯಜನರು ಅದರ ಶಕ್ತಿಯನ್ನು ಹೀರಿಕೊಂಡರೂ ಅದಕ್ಕೆ ಅರಿವಿಲ್ಲ. ಅದರ ತಲೆಗೂದಲು ನೆರೆತುಹೋದರೂ ಅದಕ್ಕೆ ಪ್ರಜ್ಞೆ ಇಲ್ಲ.


ನೀನು ಯಾರಿಗೆ ಹೆದರಿ ಬೆದರಿ, ನನ್ನನ್ನು ಮರೆತು, ನನಗೆ ಸುಳ್ಳಾಡಿ ಮೋಸಮಾಡಿರುವೆ? ಇಂಥ ದ್ರೋಹಕ್ಕೂ ನೀನು ಹಿಂಜರಿಯಲಿಲ್ಲವಲ್ಲಾ! ಬಹುಕಾಲದಿಂದ ನಾನು ಸುಮ್ಮನೆ ಇದ್ದುದರಿಂದಲೇ ನೀನು ನನ್ನನ್ನು ಗೌರವಿಸದೆ ಇರುವುದಕ್ಕೆ ಕಾರಣವಲ್ಲವೆ?


ನನ್ನ ನಾಮಕ್ಕೆ ಮಹಿಮೆ ಸಲ್ಲಿಸಬೇಕು. ಇದನ್ನು ನೀವು ಮನದಟ್ಟು ಮಾಡಿಕೊಳ್ಳಬೇಕು. ನನ್ನ ಈ ಮಾತಿಗೆ ಕಿವಿಗೊಡದಿದ್ದರೆ ನಿಮಗೆ ಶಾಪವನ್ನು ತರುವೆನು. ನಿಮ್ಮ ವರಮಾನಗಳನ್ನೆಲ್ಲ ಶಾಪವಾಗಿ ಮಾರ್ಪಡಿಸುವೆನು; ಈಗಾಗಲೇ ಮಾರ್ಪಡಿಸಿರುವೆನು. ನನ್ನ ಆಜ್ಞೆಯನ್ನು ನಿಮ್ಮಲ್ಲಿ ಯಾರೂ ಮನದಟ್ಟು ಮಾಡಿಕೊಂಡಿಲ್ಲ.


ಸಜ್ಜನರು ಸಾಯುತ್ತಾರೆ, ಆದರೆ ಯಾರೂ ಮನಸ್ಸಿಗೆ ಹಚ್ಚಿಕೊಳ್ಳುವುದಿಲ್ಲ. ಶರಣರು ಕಣ್ಮರೆಯಾಗುತ್ತಾರೆ, ‘ಇವರು ಕೇಡಿನಿಂದ ಪಾರಾದರು’ ಎಂದು ಯಾರೂ ಅರ್ಥಮಾಡಿಕೊಳ್ಳುವುದಿಲ್ಲ.


ಸರ್ವೇಶ್ವರನ ಆಲಯವನ್ನೂ ಅರಮನೆಯನ್ನೂ ಜೆರುಸಲೇಮಿನ ಎಲ್ಲ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.


ಯಾರು ತಡೆದಾರು ಆತನ ಸಿಟ್ಟಿಗೆ? ಯಾರು ನಿಂತಾರು ಆತನ ರೋಷಾಗ್ನಿಗೆ? ಆತನ ರೌದ್ರ ಜ್ವಾಲಾಪ್ರವಾಹದಂತೆ ಬಂಡೆಗಳು ಪುಡಿಪುಡಿ ಆತನ ಮುಂದೆ.


ಹೌದು, ನಾನು ಶಿಕ್ಷಾಹಸ್ತವನ್ನೆತ್ತಿ, ಭುಜಪರಾಕ್ರಮವನ್ನು ತೋರಿಸಿ, ರೋಷಾಗ್ನಿಯನ್ನು ಹರಿಸುತ್ತಾ, ನಿಮ್ಮನ್ನು ಜನಾಂಗಗಳಿಂದ ಬಿಡುಗಡೆಮಾಡಿ, ನೀವು ಚದರಿಹೋಗಿರುವ ದೇಶಗಳಿಂದ ನಿಮ್ಮನ್ನು ಒಂದುಗೂಡಿಸಿ,


ಸ್ವಾಮಿ ಸರ್ವೇಶ್ವರನ ಕಣ್ಣು ನಾಟಿಸುವುದು ಸತ್ಯದ ಮೇಲೆ. ಅವರು ದಂಡಿಸಿದರೂ ನೀವು ಪಶ್ಚಾತ್ತಾಪಪಡಲಿಲ್ಲ. ಅವರು ನಸುಕಿದರೂ ನೀವು ತಿದ್ದುಕೊಳ್ಳಲು ಒಪ್ಪಲಿಲ್ಲ. ನಿಮ್ಮ ಮುಖವನ್ನು ಕಲ್ಲಿಗಿಂತ ಕಠಿಣ ಮಾಡಿಕೊಂಡಿರಿ. ಅವರಿಗೆ ಅಭಿಮುಖರಾಗಲು ಸಮ್ಮತಿಸದೆಹೋದಿರಿ.


ನನ್ನ ಜನರ ಹಿಂಸೆಬಾಧೆಗಳನ್ನು ಗಮನಿಸದೆ ಬರಲಿರುವ ಪರಿಣಾಮವನ್ನು ನೆನೆಸಿಕೊಳ್ಳದೆ ನೀನೇ ಶಾಶ್ವತ ರಾಣಿಯೆಂದು ಮೆರೆದೆ.


ಸರ್ವೇಶ್ವರ ಹೀಗೆಂದರು : “ಈ ಜನರು ನನ್ನನ್ನು ಸಮೀಪಿಸುವುದು ಬರೀ ಮಾತಿನ ಮರ್ಯಾದೆಯಿಂದ, ಇವರು ನನ್ನನ್ನು ಸನ್ಮಾನಿಸುವುದು ಬರೀ ಮಾತಿನ ಮಾಲೆಯಿಂದ, ಇವರ ಹೃದಯವಾದರೋ ಬಲು ದೂರವಿದೆ ನನ್ನಿಂದ, ಇವರು ನನಗೆ ಸಲ್ಲಿಸುವ ಭಕ್ತಿ ಕೂಡಿದೆ ಕೇವಲ ಭಯದಿಂದ, ಕಲಿತಿಹರಿವರು ಮಾನವಕಲ್ಪಿತ ಕಟ್ಟಳೆಯನು ಬಾಯಿಪಾಠದಿಂದ.


ಆದರೂ ತಮ್ಮನ್ನು ಶಿಕ್ಷಿಸಿದ ದೇವರಿಗೆ ಇಸ್ರಯೇಲರು ಅಭಿಮುಖರಾಗಲಿಲ್ಲ. ಸೇನಾಧೀಶ್ವರಸ್ವಾಮಿಯನ್ನು ಅರಸಲಿಲ್ಲ.


‘ಉರಿದೇಳುತ್ತಿದೆ ಕೆಳಲೋಕದ ತನಕ ಎನ್ನ ಕೋಪಾಗ್ನಿ ದಹಿಸಿಬಿಡುವುದದು ಭೂಮಿಯನು ಬೆಳೆಸಹಿತವಾಗಿ ಭಸ್ಮಮಾಡುವುದದು ಬೆಟ್ಟಗಳನು ಬುಡಸಮೇತವಾಗಿ.


ನಿನ್ನ ಕಡುಕೋಪವನು ಎಲ್ಲೆಡೆಯೂ ಹರಡಿಸು ಕಣ್ಣಿಟ್ಟು ಗರ್ವಿಷ್ಠರೆಲ್ಲರನು ತಗ್ಗಿಸು.


ಎಂದೇ ತಮ್ಮ ಜನರ ವಿರುದ್ಧ ಸ್ವಾಮಿಯ ಕೋಪ ಭುಗಿಲೆದ್ದಿದೆ. ಹೊಡೆಯುವುದಕ್ಕೆ ಅವರ ಕೈ ಮೇಲಕ್ಕೆತ್ತಿದೆ. ಬೆಟ್ಟಗುಡ್ಡಗಳು ನಡುಗುವುವು. ಸತ್ತ ಹೆಣಗಳು ಕಸದಂತೆ ಬೀದಿಯಲ್ಲಿ ಬಿದ್ದಿರುವುವು. ಇಷ್ಟೆಲ್ಲ ನಡೆದರೂ ಸ್ವಾಮಿಯ ಕೋಪ ತಣಿಯದು, ಎತ್ತಿದ ಕೈ ಇಳಿಯದು.


ಸೇನಾಧೀಶ್ವರಸ್ವಾಮಿಯ ಕೋಪಾಗ್ನಿಯಿಂದ ನಾಡು ಸುಟ್ಟುಹೋಗಿದೆ. ಪ್ರಜೆಗಳು ಅಗ್ನಿಗೆ ಆಹುತಿಯಾಗಿದ್ದಾರೆ. ಅಣ್ಣನಿಗೆ ತಮ್ಮನ ಮೇಲೆ ದಯೆ ಇಲ್ಲದಾಗಿದೆ.


ಹೌದು, ಹೌದು ನೀ ಕೇಳಿಲ್ಲ, ತಿಳಿದೂ ಇಲ್ಲ ಅದಿಯಿಂದ ನಿನ್ನ ಕಿವಿ ತೆರೆದೂ ಇಲ್ಲ ನೀನು ಆಗರ್ಭ ದ್ರೋಹಿ, ಮಹಾ ಕುಟಿಲ ಎಂಬುದು ನನಗೆ ತಿಳಿದು ಇದೆಯಲ್ಲ !


“ಸರ್ವೇಶ್ವರನಾದ ನಾನು ಹೇಳುವುದನ್ನು ಗಮನಿಸಿರಿ; ಇಗೋ, ನನ್ನ ಕೋಪವೆಂಬ ರೋಷಾಗ್ನಿಯನ್ನು ಈ ಸ್ಥಳದ ಮೇಲೆ ಸುರಿಸುವೆನು. ನರಮಾನವರ ಮೇಲೂ ಪಶುಪ್ರಾಣಿಗಳ ಮೇಲೂ ಕಾಡುಮರಗಳ ಮೇಲೂ ಭೂಮಿಯ ಬೆಳೆಯ ಮೇಲೂ ಅದನ್ನು ಕಾರುವೆನು. ಅದು ಆರದೆ ದಹಿಸುವುದು!”


ಹೌದು, ಹಾಳುಮಾಡಿದ್ದಾರೆ ಪಾಳುಬಿದ್ದು ಅದು ನನಗೆ ಗೋಳಿಡುತ್ತಿದೆ ಯಾವನೂ ಗಮನಕ್ಕೆ ತಂದುಕೊಳ್ಳದೆ ನಾಡೆಲ್ಲ ಬಿಕೋ ಎನ್ನುತ್ತಿದೆ.


ಶತ್ರು ಬಂದೆರಗಿದಾಗ ಸ್ವಾಮಿ ತನ್ನ ಶಕ್ತಿಯುತ ಕೈಯನ್ನು ಹಿಂದೆಗೆದುಬಿಟ್ಟ, ಇಸ್ರಯೇಲಿನ ಕೋಡನ್ನು ಕಡಿದು ಪುಡಿಪುಡಿ ಮಾಡಿಬಿಟ್ಟ, ಸುತ್ತುಗಟ್ಟಿ ನುಂಗುವ ಅಗ್ನಿಜ್ವಾಲೆಯಂತೆ ಯಕೋಬನನ್ನು ದಹಿಸಿಬಿಟ್ಟ.


ಬಿಲ್ಲುಹಿಡಿದು ಬಂದ ಆತ ವೈರಿಯಂತೆ ಬಲಗೈಯೆತ್ತಿ ನಿಂತ ವಿರೋಧಿಯಂತೆ, ಸಂಹರಿಸಿಬಿಟ್ಟ ಸುಂದರ ಪ್ರಜೆಯೆಲ್ಲರನ್ನು ರೋಷಾಗ್ನಿ ಸುರಿಸಿ ಭಸ್ಮಮಾಡಿದ ಸಿಯೋನ್ ಗುಡಾರವನ್ನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು