Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 42:7 - ಕನ್ನಡ ಸತ್ಯವೇದವು C.L. Bible (BSI)

7 ಕೊಡುವೆ ನೀನು ಕಣ್ಣನ್ನು ಕುರುಡರಿಗೆ ತರುವೆ ಬಂಧಿಗಳನ್ನು ಸೆರೆಯಿಂದ ಹೊರಗೆ ಕತ್ತಲೆಯ ಕಾರಾಗೃಹದಿಂದ ಅವರನ್ನು ಬೆಳಕಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀನು ಕುರುಡರಿಗೆ ಕಣ್ಣುಕೊಟ್ಟು, ಬಂದಿಗಳನ್ನು ಸೆರೆಯಿಂದಲೂ, ಕತ್ತಲಲ್ಲಿ ಬಿದ್ದವರನ್ನು ಕಾರಾಗೃಹದಿಂದಲೂ ಹೊರಗೆ ತರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನೆಂಬ ನಾನು ನನ್ನ ಧರ್ಮದ ಸಂಕಲ್ಪನುಸಾರವಾಗಿ ನಿನ್ನನ್ನು ಕರೆದು ಕೈಹಿಡಿದು ಕಾಪಾಡಿ ನನ್ನ ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇವಿುಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀನು ಕುರುಡರ ಕಣ್ಣುಗಳಿಗೆ ದೃಷ್ಟಿಯನ್ನು ಕೊಡುವೆ; ಸೆರೆಮನೆಯಲ್ಲಿರುವ ಎಷ್ಟೋ ಜನರನ್ನು ನೀನು ಬಿಡಿಸುವೆ. ಕತ್ತಲೆಯಲ್ಲಿ ವಾಸಿಸುವ ಎಷ್ಟೋ ಜನರನ್ನು ನೀನು ಸೆರೆಮನೆಯಿಂದ ಬಿಡಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 42:7
24 ತಿಳಿವುಗಳ ಹೋಲಿಕೆ  

ನನ್ನ ಮೇಲಿದೆ ಸರ್ವೇಶ್ವರ ಸ್ವಾಮಿಯ ಆತ್ಮ; ನನಗೆ ಅಭಿಷೇಕಮಾಡಿ, ಕಳುಹಿಸಿಹನು ಆತ : ದೀನದಲಿತರಿಗೆ ಶುಭಸಂದೇಶ ಬೋಧಿಸಲೆಂದೆ ಮನನೊಂದವರನು ಸಂತೈಸಿ ಗುಣಪಡಿಸಲೆಂದೆ ಬಂಧಿತರಿಗೆ ಬಿಡುಗಡೆಯನು ಪ್ರಕಟಿಸಲೆಂದೆ; ಸೆರೆಯಾಳುಗಳಿಗೆ ಬಂಧವಿಮುಕ್ತಿಯಾಗುವುದನು,


‘ಹೊರಟುಹೋಗಿರಿ’ ಎನ್ನುವೆನು ಸೆರೆಯಾಳುಗಳಿಗೆ ‘ಬೆಳಕಿಗೆ ಬನ್ನಿರಿ’ ಎನ್ನುವೆನು ಕತ್ತಲಲ್ಲಿರುವವರಿಗೆ ಪಾಳುಬಿದ್ದ ಸೊತ್ತುಗಳನ್ನು ಹಂಚಿಕೊಡುವೆನು ಅವರಿಗೆ. ದೇಶವನ್ನು ಪುನಃ ತರುವೆನು ಪೂರ್ವಸ್ಥಿತಿಗೆ ದಾರಿಯುದ್ದಕ್ಕೂ ಆಹಾರ ಒದಗಿಸುವೆನು ನನ್ನ ಪ್ರಜೆಗೆ ಬೋಳು ಬೆಟ್ಟಗಳೆಲ್ಲ ಹುಲ್ಲುಗಾವಲುಗಳಾಗುವುವು ನನ್ನಾ ಮಂದೆಗೆ.


ಕುರುಡರ ಕಣ್ಣು ಕಾಣುವುದಾಗ ಕಿವುಡರ ಕಿವಿ ತೆರೆಯುವುದಾಗ.


ಸೈತಾನನ ಬಲೆಯಲ್ಲಿ ಸಿಕ್ಕಿಕೊಂಡು ಅವನ ಇಚ್ಛಾನುಸಾರ ನಡೆಯುವವರು ಹೀಗೆ ಬಿಡುಗಡೆಹೊಂದಲು ಸಾಧ್ಯವಾಗಬಹುದು.


ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಸ್ವಸ್ಥರಾಗುತ್ತಾರೆ. ಕಿವುಡರು ಕೇಳುತ್ತಾರೆ, ಸತ್ತವರು ಮತ್ತೆ ಜೀವ ಪಡೆಯುತ್ತಾರೆ. ದೀನದಲಿತರಿಗೆ ಶುಭಸಂದೇಶವನ್ನು ಪ್ರಕಟಿಸಲಾಗುತ್ತಿದೆ.


ಆಮೇಲೆ, ಪವಿತ್ರಗ್ರಂಥವನ್ನು ಅವರು ಅರ್ಥಮಾಡಿಕೊಳ್ಳುವಂತೆ ಅವರ ಬುದ್ಧಿಯನ್ನು ವಿಕಾಸಗೊಳಿಸಿದರು.


ಈಗ ನನ್ನ ಬುದ್ಧಿಮಾತುಗಳನ್ನು ಕೇಳು. ನೀನು ಐಶ್ವರ್ಯವಂತನಾಗುವಂತೆ ಬೆಂಕಿಯಲ್ಲಿ ಪುಟವಿಟ್ಟ ಚಿನ್ನವನ್ನು ನನ್ನಿಂದ ಕೊಂಡುಕೋ. ಲಜ್ಜಾಸ್ಪದವಾದ ನಿನ್ನ ಬೆತ್ತಲೆಯನ್ನು ಮುಚ್ಚಿಕೊಳ್ಳಲು ಶ್ವೇತವಸ್ತ್ರಗಳನ್ನು ನನ್ನಿಂದ ಕ್ರಯಕ್ಕೆ ಕೊಂಡುಕೊಂಡು ಅವುಗಳನ್ನು ಧರಿಸಿಕೋ. ನಿನಗೆ ಕಣ್ಣು ಕಾಣಿಸುವಂತೆ ಲೇಪನವನ್ನು ನನ್ನಿಂದ ಬೆಲೆಗೆ ತೆಗೆದುಕೊಂಡು ನಿನ್ನ ಕಣ್ಣುಗಳಿಗೆ ಹಚ್ಚಿಕೋ.


ಆಗ ಯೇಸು, “ಕುರುಡರು ಕಾಣುವಂತೆಯೂ ಕಾಣುವವರು ಕುರುಡರಾಗುವಂತೆಯೂ ತೀರ್ಪುಕೊಡಲೆಂದೇ ನಾನು ಈ ಲೋಕಕ್ಕೆ ಬಂದುದು,” ಎಂದು ನುಡಿದರು.


ಆ ದಿನದಂದು ಕಿವುಡರು ಗ್ರಂಥವಾಕ್ಯಗಳನ್ನು ಓದುವುದನ್ನು ಕೇಳುವರು. ಕುರುಡರಿಗೆ ಮಬ್ಬಿನಲ್ಲೂ ಕತ್ತಲಲ್ಲೂ ಕಣ್ಣು ಕಾಣಿಸುವುದು.


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ನೀನು ಇವರ ಕಣ್ಣುಗಳನ್ನು ತೆರೆಯಬೇಕು; ಅಂಧಕಾರವನ್ನು ಬಿಟ್ಟು ಬೆಳಕಿಗೆ ಬರುವಂತೆ ಮಾಡಬೇಕು; ಸೈತಾನನ ಆಧಿಪತ್ಯವನ್ನು ತ್ಯಜಿಸಿ ದೇವರತ್ತ ತಿರುಗುವಂತೆ ಮಾಡಬೇಕು. ಹೀಗೆ, ಅವರು ನನ್ನಲ್ಲಿಡುವ ವಿಶ್ವಾಸದ ಪ್ರಯುಕ್ತ ಪಾಪವಿಮೋಚನೆಯನ್ನು ಪಡೆಯುವರು; ಆಯ್ಕೆಯಾದವರಿಗಿರುವ ಹಕ್ಕುಬಾಧ್ಯತೆಗಳಲ್ಲಿ ಭಾಗಿಗಳಾಗುವರು,’ ಎಂದು ಹೇಳಿದರು.


ಕಾಣಿಸಿತೊಂದು ಮಹಾಜ್ಯೋತಿ ಕತ್ತಲಲಿ ಸಂಚರಿಸುತ್ತಿದ್ದ ಜನರಿಗೆ ಪ್ರಜ್ವಲಿಸಿತಾ ಜ್ಯೋತಿ ಕಗ್ಗತ್ತಲಲಿ ಬಾಳುತ್ತಿದ್ದಾ ನಾಡಿಗರಿಗೆ.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.


ಈ ಜನರಾದರೋ ಸೂರೆಯಾಗಿದ್ದಾರೆ ಕೊಳ್ಳೆಗೆ ಈಡಾಗಿ, ಎಲ್ಲರೂ ಬಿದ್ದಿದ್ದಾರೆ ಹಳ್ಳಕೊಳ್ಳಗಳಲ್ಲಿ, ಸೆರೆಮನೆಗಳಲ್ಲಿ ಬಂಧಿಗಳಾಗಿ; ಸುಲಿಗೆಯಾಗಿದ್ದರೂ ಅವರನ್ನು ಬಿಡಿಸುವವರಾರೂ ಇಲ್ಲ ಸೂರೆಯಾಗಿದ್ದರೂ ಅವರನ್ನು ಬಿಟ್ಟುಬಿಡಿ ಎನ್ನುವವರಾರೂ ಇಲ್ಲ.


ಕುರುಡರನ್ನು ನೆಪ್ಪಿಲ್ಲದ ಮಾರ್ಗದಲ್ಲಿ ಬರಮಾಡುವೆನು ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಸುವೆನು. ಅವರೆದುರಿನ ಕತ್ತಲನ್ನು ಬೆಳಕಾಗಿಸುವೆನು ಅವರ ಹಾದಿಯ ಡೊಂಕನು ನೇರಮಾಡುವೆನು. ಬಿಡದೆ ಮಾಡುವೆನು ಈ ಕಾರ್ಯಗಳನು.


(’ಶಿಲೋವಾಮ್’ ಎಂದರೆ ಕಳುಹಿಸಲಾದವನು ಎಂದರ್ಥ). ಅದರಂತೆಯೇ ಆ ಕುರುಡನು ಹೋಗಿ ಕಣ್ಣುಗಳನ್ನು ತೊಳೆದುಕೊಂಡನು; ಹಿಂದಿರುಗಿದಾಗ ಅವನಿಗೆ ಕಣ್ಣು ಬಂದಿತ್ತು.


ಆ ಸ್ವಾಮಿಗೆ ವಿರುದ್ಧ ನಾನು ಪಾಪಮಾಡಿದ್ದರಿಂದ ಅವರ ಕೋಪವನ್ನು ನಾನು ಸಹಿಸಿಕೊಳ್ಳಬೇಕಾಗುತ್ತದೆ. ಅವರು ನನ್ನ ಪರವಾಗಿ ವಾದಿಸಿ ನನಗಾದ ಅನ್ಯಾಯವನ್ನು ನೀಗಿಸುವರು; ನನ್ನನ್ನು ಕತ್ತಲೆಯಿಂದ ಬೆಳಕಿಗೆ ತರುವರು. ಅವರಿಂದ ಬರುವ ರಕ್ಷಣಾನೀತಿಯನ್ನು ಆಗ ಸವಿಯುವೆನು.


ನಾಚಲಿ ವ್ಯರ್ಥವಿಗ್ರಹಗಳನು ಪೂಜಿಸಿ ಹಿಗ್ಗುವವರು I ಪ್ರಭುವಿಗೆ ಅಡ್ಡಬೀಳಲಿ ಆ ದೇವರುಗಳೆಲ್ಲರು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು