Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 42:8 - ಕನ್ನಡ ಸತ್ಯವೇದವು C.L. Bible (BSI)

8 ನಾನೇ ಸರ್ವೇಶ್ವರ, ನನ್ನ ನಾಮವು ಅದುವೆ. ಸಲ್ಲಿಸೆನು ನನ್ನ ಮಹಿಮೆಯನ್ನು ಮತ್ತೊಬ್ಬರಿಗೆ ನನ್ನ ಸ್ತೋತ್ರವನು ವಿಗ್ರಹಗಳ ಪಾಲಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾನೇ ಯೆಹೋವನು; ಇದೇ ನನ್ನ ನಾಮವು; ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಸಲ್ಲಗೊಡಿಸೆನು, ನನ್ನ ಸ್ತೋತ್ರವನ್ನು ವಿಗ್ರಹಗಳ ಪಾಲು ಮಾಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾನೇ ಯೆಹೋವನು; ಇದೇ ನನ್ನ ನಾಮವು; ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಸಲ್ಲಗೊಡಿಸೆನು, ನನ್ನ ಸ್ತೋತ್ರವನ್ನು ವಿಗ್ರಹಗಳ ಪಾಲು ಮಾಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ನಾನೇ ಕರ್ತನು. ಯೆಹೋವನೆಂಬುದೇ ನನ್ನ ಹೆಸರು. ನನ್ನ ಮಹಿಮೆಯನ್ನು ನಾನು ಇತರರಿಗೆ ಕೊಡೆನು. ನನಗೆ ಸಲ್ಲತಕ್ಕ ಮಹಿಮೆಯನ್ನು ಸುಳ್ಳುದೇವರ ವಿಗ್ರಹಗಳಿಗೆ ಬಿಟ್ಟುಕೊಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾನೇ ಯೆಹೋವ ದೇವರು, ಅದೇ ನನ್ನ ಹೆಸರು. ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಇಲ್ಲವೆ ನನ್ನ ಸ್ತುತಿಯನ್ನು ಎರಕದ ವಿಗ್ರಹಗಳಿಗೂ ಕೊಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 42:8
16 ತಿಳಿವುಗಳ ಹೋಲಿಕೆ  

ಇದನ್ನು ಮಾಡುವೆ ನನಗೋಸ್ಕರವೆ ಇದನ್ನು ಮಾಡುವೆ ಕಳಂಕಬಾರದಂತೆ ನನ್ನ ಹೆಸರಿಗೆ ಸಲ್ಲಗೊಡಿಸೆನು ನನ್ನ ಮಹಿಮೆಯನು ಮತ್ತೊಬ್ಬನಿಗೆ.”


“ನಾನು, ನಾನೇ ಸರ್ವೇಶ್ವರ, ನನ್ನ ಹೊರತು ಇಲ್ಲ ಬೇರೆ ಉದ್ಧಾರಕ.


ನೀವು ಬೇರೆ ದೇವರ ಮುಂದೆ ಅಡ್ಡಬೀಳಬಾರದು; ಏಕೆಂದರೆ ಸ್ವಾಭಿಮಾನಿಯೆಂಬ ಹೆಸರುಳ್ಳ ಸರ್ವೇಶ್ವರನಾದ ನಾನು ನನಗೆ ಸಲ್ಲಬೇಕಾದ ಅಭಿಮಾನವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸುವುದಿಲ್ಲ.


ಇವರು ಅರಿಯಲಿ ಪ್ರಭುವೆಂಬ ನಾಮ ನಿನ್ನದೆಂದು I ಧರೆಯಲ್ಲೆಲ್ಲಾ ಸರ್ವೋನ್ನತ ನೀನೇ ಎಂದು II


“ಇದರಿಂದ ಆ ಜನರು ಪೂರ್ವಜರಾದ ಅಬ್ರಹಾಮ, ಇಸಾಕ ಹಾಗು ಯಕೋಬರ ದೇವರಾಗಿರುವ ಸರ್ವೇಶ್ವರ ನಿನಗೆ ಕಾಣಸಿದ್ದು ನಿಜ ಎಂಬುದನ್ನು ನಂಬುವರು,” ಎಂದು ಹೇಳಿದರು.


ಏಕೆಂದರೆ, ತಮ್ಮನ್ನು ಗೌರವಿಸುವಂತೆಯೇ ಜನರೆಲ್ಲರು ಪುತ್ರನನ್ನು ಗೌರವಿಸಬೇಕೆಂಬುದು ಅವರ ಬಯಕೆ. ಪುತ್ರನನ್ನು ಗೌರವಿಸದವನು ಆತನನ್ನು ಕಳುಹಿಸಿದ ಪಿತನನ್ನೂ ಗೌರವಿಸುವುದಿಲ್ಲ.


ಯೇಸು ಅವರಿಗೆ, “ಅಬ್ರಹಾಮನು ಹುಟ್ಟುವುದಕ್ಕೆ ಮೊದಲಿನಿಂದಲೂ ನಾನಿದ್ದೇನೆ,” ಎಂದು ಮರುನುಡಿದರು.


“ಈ ಗ್ರಂಥದಲ್ಲಿ ಬರೆದಿರುವ ಧರ್ಮಶಾಸ್ತ್ರ ವಾಕ್ಯಗಳನ್ನೆಲ್ಲಾ ನೀವು ಅನುಸರಿಸಲೊಲ್ಲದೆ, ನಿಮ್ಮ ದೇವರಾದ ಸರ್ವೇಶ್ವರನೆಂಬ ಮಹಾಮಹಿಮೆಯುಳ್ಳ ಪೂಜ್ಯನಾಮದಲ್ಲಿ ನೀವು ಭಯಭಕ್ತಿಯುಳ್ಳವರಾಗಿರದೇ ಹೋದರೆ


ಹಾಡಲಿ ಆತನ ಶ್ರೀನಾಮ ಮಹಿಮೆಗೆ II


ನಿನ್ನ ದೇವರಾದ ಸರ್ವೇಶ್ವರ ನಾನು, ಇಸ್ರಯೇಲರ ಪರಮಪಾವನ ಸ್ವಾಮಿ, ನಿನ್ನ ರಕ್ಷಕ ನಾನು. ಈಡುಮಾಡಿದ್ದೇನೆ ಈಜಿಪ್ಟನ್ನು ನಿನ್ನ ವಿಮೋಚನೆಗಾಗಿ ಕೊಟ್ಟಿದ್ದೇನೆ ಸುಡಾನ್ ಸೆಬಾ ನಾಡುಗಳನ್ನು ನಿನಗೆ ಈಡಾಗಿ.


ಕುಡಿದುಕೊಂಡೇ ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ತಮ್ಮ ದೇವರುಗಳನ್ನು ಆರಾಧಿಸಿದರು.


‘ಈ ಕಾರ್ಯಗಳನ್ನು ನಡೆಸಿದ್ದು ನನ್ನ ವಿಗ್ರಹವೇ ವಿಧಿಸಿದ್ದು ನನ್ನ ಕೆತ್ತನೆಯ ಬೊಂಬೆಯೇ, ಎರಕದ ಮೂರ್ತಿಯೇ’ ಎಂದು ನೀ ಜಂಬ ಕೊಚ್ಚಿಕೊಳ್ಳದಂತೆ ಪುರಾತನ ಕಾಲದಲ್ಲೆ ನಾನಿವುಗಳನು ಮುಂತಿಳಿಸಿದೆ. ಅವುಗಳು ನೆರವೇರುವುದಕ್ಕೆ ಮುಂಚೆಯೇ ಪ್ರಕಟಿಸಿದೆ.


ನೋಡು, ನೀ ಕೇಳಿದವೆಲ್ಲ ನಡೆದಿದೆಯೊ ಇಲ್ಲವೋ ಎಂಬುದನು. ಆದರೂ ಘೋಷಿಸುತ್ತಾರೆಯೇ ನಿನ್ನವರು ಅವುಗಳನ್ನು? ಅರುಹುವೆನು ನಿನಗಿಂದಿನಿಂದ ಹೊಸ ಸಂಗತಿಗಳನು ಈವರೆಗೂ ನೀನರಿಯದ ಗುಪ್ತ ವಿಷಯಗಳನು.


ಲೋಕವನ್ನು ಸೃಷ್ಟಿಸಿ, ರೂಪಿಸಿ, ಸ್ಥಾಪಿಸಿದವರು ಹಾಗೂ ‘ಸರ್ವೇಶ್ವರ’ ಎಂದು ನಾಮಾಂಕಿತಗೊಂಡ ಅವರು ನನಗೆ ಹೀಗೆಂದರು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು