Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 43:10 - ಕನ್ನಡ ಸತ್ಯವೇದವು C.L. Bible (BSI)

10 ಇಂತೆನ್ನುತ್ತಾರೆ ಸರ್ವೇಶ್ವರ : “ನೀವೇ ನನಗೆ ಸಾಕ್ಷಿಗಳು; ನನ್ನಿಂದ ಆಯ್ಕೆಯಾದ ನನ್ನ ದಾಸರು; ಏಕೆನೆ ನಾನೇ ಪರಮಾತ್ಮನೆಂದು ಅರಿತು, ವಿಶ್ವಾಸವಿಟ್ಟು, ಗ್ರಹಿಸಬೇಕಾದವರು; ದೇವರಾರೂ ನನಗಿಂತ ಮುಂದೆ ಇರಲಿಲ್ಲ ನನ್ನಾನಂತರವೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನ ಮಾತೇನೆಂದರೆ, ‘ನೀವು ನನ್ನ ಸಾಕ್ಷಿ, ನಾನು ಆರಿಸಿಕೊಂಡಿರುವ ಸೇವಕನು. ನೀವು ನನ್ನನ್ನು ತಿಳಿದು ನಂಬಿ, ನನ್ನನ್ನೇ ದೇವರು ಎಂದು ಗ್ರಹಿಸುವ ಹಾಗೆ ಇದನ್ನು ನಡೆಸಿದೆನು. ನನಗಿಂತ ಮೊದಲು ಯಾವ ದೇವರೂ ಇರಲಿಲ್ಲ, ನನ್ನ ಅನಂತರದಲ್ಲಿಯೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೋವನ ಮಾತೇನಂದರೆ - ನೀವು ನನ್ನ ಸಾಕ್ಷಿ, ನಾನು ಆರಿಸಿಕೊಂಡಿರುವ ಸೇವಕನು; ನೀವು ನನ್ನನ್ನು ತಿಳಿದು ನಂಬಿ ನನ್ನನ್ನೇ ಪರಮಾತ್ಮನು ಎಂದು ಗ್ರಹಿಸುವ ಹಾಗೆ [ಇದನ್ನು ನಡಿಸಿದೆನು]; ನನಗಿಂತ ಮುಂಚೆ ಯಾವ ದೇವರೂ ಇರಲಿಲ್ಲ, ನನ್ನ ಅನಂತರದಲ್ಲಿಯೂ ಇರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೋವನು ಹೇಳುವುದೇನೆಂದರೆ: “ನೀವು ನನ್ನ ಸಾಕ್ಷಿಗಳಾಗಿದ್ದೀರಿ. ನಾನು ಆರಿಸಿಕೊಂಡ ಸೇವಕನು ನೀನೇ. ಜನರು ನನ್ನನ್ನು ನಂಬುವಂತೆ ನಾನು ನಿಮ್ಮನ್ನು ಆರಿಸಿಕೊಂಡೆನು. ನಾನು ನಿಜ ದೇವರು ಎಂದು ನೀವು ತಿಳಿಯಬೇಕೆಂದು ನಿಮ್ಮನ್ನು ಆರಿಸಿಕೊಂಡೆನು. ನಾನೇ ನಿಜವಾದ ದೇವರು. ನನಗಿಂತ ಮೊದಲು ಯಾರೂ ಇರಲಿಲ್ಲ, ಇನ್ನು ಮುಂದೆಯೂ ನನ್ನ ಹೊರತು ಯಾವ ದೇವರೂ ಇರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೆಹೋವ ದೇವರು ಹೇಳುವುದೇನೆಂದರೆ, “ನೀವು ನನಗೆ ಸಾಕ್ಷಿಗಳಾಗಿದ್ದೀರಿ,” “ನಾನು ಇರುವಾತನೇ ಆಗಿದ್ದೇನೆಂದು, ನೀವು ತಿಳಿದು, ನಂಬಿ, ಗ್ರಹಿಸಿರಿ; ನಾನು ನಿನ್ನನ್ನು ಸೇವಕನನ್ನಾಗಿ ಆರಿಸಿಕೊಂಡಿದ್ದೇನೆ. ನನಗಿಂತ ಮುಂಚೆಯೂ, ನನ್ನ ಅನಂತರದಲ್ಲಿಯೂ ಯಾವ ದೇವರೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 43:10
29 ತಿಳಿವುಗಳ ಹೋಲಿಕೆ  

ಇದನ್ನೆಲ್ಲಾ ನಡೆಯಿಸಿ ನೆರವೇರಿಸಿದವನು ಯಾರು? ಆದಿಯಿಂದ ಈಗಿನವರೆಗೂ ತಲತಲಾಂತರಗಳನ್ನು ಬರಮಾಡುವವರು ಯಾರು? ಸರ್ವೇಶ್ವರನಾದ ನಾನೇ. ಹೌದು, ಆದಿಯಲ್ಲಿದ್ದವನು. ಅಂತ್ಯದಲ್ಲಿ ಇರುವವನು ಆದ ನಾನೇ.


ಇದ ಕಂಡು ತಿಳಿಯುವರೆಲ್ಲರು ಪೂರ್ವದಿಂದ ಪಶ್ಚಿಮದವರೆಗು : ನಿನ್ನ ವಿನಾ ದೇವರಾರು ಇಲ್ಲವೆಂದು ನಾನೇ ಸರ್ವೇಶ್ವರ ಮತ್ತಾರು ಅಲ್ಲವೆಂದು;


ಶ್ರುತಪಡಿಸಿದವನು ನಾನೇ, ಉದ್ಧರಿಸಿದವನು ನಾನೇ, ಘೋಷಿಸಿದವನು ನಾನೇ. ಇದನ್ನು ಮಾಡಿಲ್ಲ ಅನ್ಯದೇವರಾರು ನಿಮ್ಮ ಮಧ್ಯೆ. ನನಗೆ ಸಾಕ್ಷಿಗಳು ನೀವೇ, ದೇವರು ನಾನೊಬ್ಬನೇ.


ಆದರೆ ಪವಿತ್ರಾತ್ಮ ಅವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯುತರಾಗುವಿರಿ. ಆಗ ನೀವು ಜೆರುಸಲೇಮಿನಲ್ಲೂ ಜುದೇಯದಲ್ಲೂ ಸಮಾರಿಯದಲ್ಲೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು.


ತನ್ನನ್ನೇ ಬರಿದುಮಾಡಿಕೊಂಡು ದಾಸನ ರೂಪವನು ಧರಿಸಿಕೊಂಡು ಮನುಜನಾಕಾರದಲಿ ಕಾಣಿಸಿಕೊಂಡು ನರಮಾನವರಿಗೆ ಸರಿಸಮನಾದ.


ಇಗೋ, ನನ್ನ ದಾಸನು ! ನನ್ನ ಆಧಾರ ಪಡೆದವನು ನನ್ನಿಂದ ಆಯ್ಕೆಯಾದವನು ನನಗೆ ಪರಮ ಪ್ರಿಯನು. ನೆಲೆಗೊಳಿಸಿರುವೆ ಇವನಲ್ಲಿ ನನ್ನ ಆತ್ಮವನು ಅನ್ಯರಾಷ್ಟ್ರಗಳಿಗೆ ಸಾರುವನಿವನು ಸದ್ಧರ್ಮವನು.


ಇದನು ಕಂಡರಿತು ಗ್ರಹಿಸಿಕೊಳ್ಳುವರು ಜನರು ಮನಸಾರೆ, ನುಡಿವರಾಗ, ‘ಇದನ್ನು ಮಾಡಿದ ಹಸ್ತವು ಸರ್ವೇಶ್ವರ ಸ್ವಾಮಿಯದೇ, ಇದನ್ನು ಸೃಷ್ಟಿಸಿದಾತ ಇಸ್ರಯೇಲಿನ ಪರಮಪಾವನ ಸ್ವಾಮಿಯೇ.’


ಯೊವಾನ್ನನು ದೇವರ ಸಂದೇಶಕ್ಕೂ ಕ್ರಿಸ್ತೇಸು ತಿಳಿಸಿದ ಸತ್ಯಕ್ಕೂ ಸಾಕ್ಷಾತ್ ಸಾಕ್ಷಿಯಾಗಿದ್ದಾನೆ.


ಇಲ್ಲಿ ಬರೆದವುಗಳ ಉದ್ದೇಶ ಇಷ್ಟೇ; ಯೇಸು, ದೇವರಪುತ್ರ ಹಾಗು ಲೋಕೋದ್ಧಾರಕ ಎಂದು ನೀವು ವಿಶ್ವಾಸಿಸಬೇಕು; ವಿಶ್ವಾಸಿಸಿ ಅವರ ಹೆಸರಿನಲ್ಲಿ ಸಜ್ಜೀವವನ್ನು ಪಡೆಯಬೇಕು.


ಮೊತ್ತಮೊದಲಿನಿಂದಲೂ ನನ್ನ ಸಂಗಡ ಇದ್ದ ನೀವು ಕೂಡ ನನ್ನನ್ನು ಕುರಿತು ಸಾಕ್ಷಿನೀಡುವವರಾಗಿದ್ದೀರಿ.


ಇಂತಿರಲು ನನ್ನ ದಾಸನಾದ ಇಸ್ರಯೇಲೇ, ನಾನು ಆಯ್ದುಕೊಂಡ ಯಕೋಬೇ, ನನ್ನ ಗೆಳೆಯ ಅಬ್ರಹಾಮನ ಸಂತತಿಯೇ,


ನಂಬಲರ್ಹವಾದ ಸಾಕ್ಷಿಯೂ ಮೃತ್ಯುವಿನಿಂದ ಪುನರುತ್ಥಾನ ಹೊಂದಿದವರಲ್ಲಿ ಪ್ರಪ್ರಥಮರೂ ಭೂರಾಜರ ಒಡೆಯರೂ ಆದ ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದಿಂದ ನಮ್ಮ ಪಾಪಗಳನ್ನು ತೊಳೆದವರೂ


ಸತ್ತವರು ಪುನರುತ್ಥಾನ ಹೊಂದುವುದಿಲ್ಲ ಎಂಬುದು ನಿಜವಾದರೆ ದೇವರು ಕ್ರಿಸ್ತಯೇಸುವನ್ನು ಪುನರುತ್ಥಾನಗೊಳಿಸಿಲ್ಲ ಎಂದಂತಾಯಿತು. ದೇವರು ಕ್ರಿಸ್ತಯೇಸುವನ್ನು ಸಾವಿನಿಂದ ಪುನರುತ್ಥಾನಗೊಳಿಸಿದ್ದಾರೆ ಎಂದು ಸಾಕ್ಷಿ ಹೇಳಿದ ನಾವು ಆಗ ದೇವರ ಬಗ್ಗೆಯೇ ಸುಳ್ಳುಸಾಕ್ಷಿ ಹೇಳಿದಂತಾಯಿತು.


“ಲವೊದಿಕೀಯದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ : ವಿಶ್ವಾಸಪಾತ್ರನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಮೂಲಾಧಾರನೂ ಆದ ‘ಆಮೆನ್’ ಎಂಬಾತನು ನೀಡುವ ಸಂದೇಶವಿದು :


ಈ ಶುಭಸಂದೇಶವನ್ನು ಕ್ರಿಸ್ತಯೇಸುವಿನ ನಂಬಿಕಸ್ಥ ದಾಸನೂ ನಮ್ಮ ಜೊತೆಯ ಸೇವಕನೂ ಆದ ಎಪಫ್ರನಿಂದ ಕಲಿತುಕೊಂಡಿದ್ದೀರಿ.


ನೇಮಿಸಿರುವೆ ಆತನನು ಜನಗಳಿಗೆ ಸಾಕ್ಷಿಯನ್ನಾಗಿ ಜನಾಂಗಗಳಿಗೆ ನಾಯಕನನ್ನಾಗಿ, ಅಧಿಪತಿಯನ್ನಾಗಿ.


ಸರ್ವೇಶ್ವರ ಸ್ವಾಮಿಯೊಬ್ಬರೇ ದೇವರು, ಬೇರೆ ದೇವರೇ ಇಲ್ಲವೆಂದು ನೀವು ಅರಿತುಕೊಳ್ಳುವುದಕ್ಕಾಗಿ ಇದನ್ನೆಲ್ಲಾ ನಿಮಗೆ ಮಾತ್ರ ತೋರಿಸಲಾಗಿದೆ.


“ಇರುವಾತನು ನಾನೇ, ನಾನೊಬ್ಬನೇ ಬದುಕಿಸುವವನು, ಕೊಲ್ಲುವವನು ನಾನೇ, ಗಾಯಗೊಳಿಸುವವನು, ವಾಸಿಮಾಡುವವನು ನಾನೇ. ಇಂದಾದರು ತಿಳಿಯಿರಿ: ನನ್ನ ವಿನಾ ದೇವರಿಲ್ಲ ನನ್ನ ಕೈಯಿಂದ ತಪ್ಪಿಸಬಲ್ಲ ಶಕ್ತನಾರೂ ಇಲ್ಲ.


ನೀನಂತೂ ಬದಲಾಗದೆ ಇರುವೆಯಯ್ಯಾ I ನಿನ್ನ ವರುಷಗಳಿಗೆ ಮುಗಿವೇ ಇಲ್ಲವಯ್ಯಾ II


ಸರ್ವೇಶ್ವರ ನಾನಲ್ಲದೆ ಬೇರಾರು ಅಲ್ಲ ನನ್ನ ಹೊರತು ಯಾವ ದೇವರು ಇಲ್ಲ. ನೀನು ನನ್ನನ್ನು ಅರಿಯದವನಾಗಿರುವೆ ಆದರೂ ನಿನ್ನನ್ನು ಶಸ್ತ್ರಧಾರಿಯಾಗಿಸುವೆ.


“ಯಕೋಬೆ, ನಾ ಕರೆದ ಇಸ್ರಯೇಲೆ ನನಗೆ ಕಿವಿಗೊಡು, ಪರಮಾತ್ಮ ನಾನೆ ಆದಿಯು ನಾನೆ, ಅಂತ್ಯವು ನಾನೆ.


ಸಾಕುತಂದೆಗಳಾಗುವರು ರಾಜರು ನಿನಗೆ ಸಾಕುತಾಯಿಯರಾಗುವರು ರಾಣಿಯರು ನಿನಗೆ. ನಿನ್ನ ಪಾದಧೂಳಿಯ ನೆಕ್ಕುವರವರು ಸಾಷ್ಟಾಂಗವೆರಗಿ ನನಗೆ. ಆಗ ನಿನಗೆ ಗೊತ್ತಾಗುವುದು ನಾನೇ ಸರ್ವೇಶ್ವರನೆಂದು ನನ್ನನ್ನು ನಿರೀಕ್ಷಿಸುವವರು ಆಶಾಭಂಗಪಡರೆಂದು.


ಸೇನಾಧಿಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ಶೆಯಲ್ತೀಯೇಲನ ಮಗನೂ ನನ್ನ ದಾಸನೂ ಆದ ಜೆರುಬ್ಬಾಬೆಲನೇ, ಆ ದಿನಗಳಲ್ಲಿ ನಾನು ನಿನ್ನನ್ನು ಆರಿಸಿ ತೆಗೆದುಕೊಳ್ಳುವೆನು. ನನ್ನ ಮುದ್ರೆ ಉಂಗುರವನ್ನು ತೊಟ್ಟ ರಾಜನನ್ನಾಗಿ ನಿನ್ನನ್ನು ನೇಮಿಸುವೆನು,” ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿಯಿದು.


ಆರೋನನು ಈಜಿಪ್ಟ್ ದೇಶದಲ್ಲಿ ನೀರಿರುವ ಎಲ್ಲ ಸ್ಥಳಗಳ ಮೇಲೆ ಕೈಚಾಚಲು ಕಪ್ಪೆಗಳು ಹೊರಟುಬಂದು ದೇಶವನ್ನೆಲ್ಲಾ ತುಂಬಿಕೊಂಡವು.


ನೀವು ಇದನ್ನೆಲ್ಲಾ ಆಲೋಚಿಸಿ, ಮೇಲೆ ಆಕಾಶದಲ್ಲಾಗಲಿ, ಕೆಳಗೆ ಭೂಮಿಯಲ್ಲಾಗಲಿ ಸರ್ವೇಶ್ವರಸ್ವಾಮಿ ಒಬ್ಬರೇ ದೇವರು, ಬೇರೆ ಯಾವ ದೇವರೂ ಇಲ್ಲವೆಂಬುದನ್ನು ಈಗ ಗ್ರಹಿಸಿಕೊಂಡು ಜ್ಞಾಪಕದಲ್ಲಿ ಇಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು