Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 43:12 - ಕನ್ನಡ ಸತ್ಯವೇದವು C.L. Bible (BSI)

12 ಶ್ರುತಪಡಿಸಿದವನು ನಾನೇ, ಉದ್ಧರಿಸಿದವನು ನಾನೇ, ಘೋಷಿಸಿದವನು ನಾನೇ. ಇದನ್ನು ಮಾಡಿಲ್ಲ ಅನ್ಯದೇವರಾರು ನಿಮ್ಮ ಮಧ್ಯೆ. ನನಗೆ ಸಾಕ್ಷಿಗಳು ನೀವೇ, ದೇವರು ನಾನೊಬ್ಬನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಾನೇ ರಕ್ಷಣೆಯನ್ನು ಮುಂತಿಳಿಸಿ ನೆರವೇರಿಸಿ ಪ್ರಕಟಿಸಿದ್ದೇನೆ, ನಿಮ್ಮಲ್ಲಿ ಅನ್ಯದೇವರು ಯಾರೂ ಇರಲಿಲ್ಲವಲ್ಲ; ನೀವೇ ನನ್ನ ಸಾಕ್ಷಿಗಳು, ನಾನೊಬ್ಬನೇ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಾನೇ ರಕ್ಷಣೆಯನ್ನು ಮುಂತಿಳಿಸಿ ನೆರವೇರಿಸಿ ಪ್ರಕಟಿಸಿದ್ದೇನೆ, ನಿಮ್ಮಲ್ಲಿ ಅನ್ಯದೇವರು ಯಾರೂ ಇರಲಿಲ್ಲವಲ್ಲ; ನೀವೇ ನನ್ನ ಸಾಕ್ಷಿಗಳು, ನಾನೊಬ್ಬನೇ ದೇವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಾನೇ ನಿಮ್ಮೊಂದಿಗೆ ಮಾತನಾಡಿದೆನು. ನಾನೇ ನಿಮ್ಮನ್ನು ರಕ್ಷಿಸಿದೆನು. ನಾನು ಆ ವಿಷಯಗಳನ್ನು ನಿಮಗೆ ತಿಳಿಸಿದೆನು. ನಿಮ್ಮೊಂದಿಗೆ ಇದ್ದಾತನು ಅಪರಿಚಿತನಾಗಿರಲಿಲ್ಲ. ನೀವು ನನ್ನ ಸಾಕ್ಷಿಗಳಾಗಿದ್ದೀರಿ. ನಾನೇ ನಿಮ್ಮ ದೇವರು.” (ಯೆಹೋವನು ತಾನೇ ಈ ವಿಷಯಗಳನ್ನು ಹೇಳಿದ್ದಾನೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಿಮ್ಮಲ್ಲಿ ಅನ್ಯದೇವರು ಇಲ್ಲದಿರುವಾಗಲೇ, ನಾನೇ ರಕ್ಷಣೆಯನ್ನು ಪ್ರಕಟಿಸಿ, ತೋರಿಸಿದ್ದೇನೆ. ಆದ್ದರಿಂದ ನೀವು ನನ್ನ ಸಾಕ್ಷಿಗಳು,” “ನಾನೇ ದೇವರು ಎಂದು ಯೆಹೋವ ದೇವರು ನುಡಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 43:12
13 ತಿಳಿವುಗಳ ಹೋಲಿಕೆ  

ಇಂತೆನ್ನುತ್ತಾರೆ ಸರ್ವೇಶ್ವರ : “ನೀವೇ ನನಗೆ ಸಾಕ್ಷಿಗಳು; ನನ್ನಿಂದ ಆಯ್ಕೆಯಾದ ನನ್ನ ದಾಸರು; ಏಕೆನೆ ನಾನೇ ಪರಮಾತ್ಮನೆಂದು ಅರಿತು, ವಿಶ್ವಾಸವಿಟ್ಟು, ಗ್ರಹಿಸಬೇಕಾದವರು; ದೇವರಾರೂ ನನಗಿಂತ ಮುಂದೆ ಇರಲಿಲ್ಲ ನನ್ನಾನಂತರವೂ ಇರುವುದಿಲ್ಲ.


ಅವರನು ನಡೆಸಿದವನು ಸರ್ವೇಶ್ವರನೇ, ಅನ್ಯದೇವರಾರೂ ಇಲ್ಲ, ಆತನೊರ್ವನೇ.


ಹೆದರಬೇಡಿ, ಅಂಜದಿರಿ, ನನ್ನ ಜನರೇ, ನನಗೆ ಸಾಕ್ಷಿಗಳು ನೀವೇ; ಪೂರ್ವಕಾಲದಿಂದ ನಡೆದವುಗಳನು ನಾ ನಿಮಗೆ ಮುಂತಿಳಿಸಿ ಶ್ರುತಪಡಿಸಿಲ್ಲವೆ? ನನ್ನ ಹೊರತು ಬೇರೆ ದೇವನಿರುವನೆ? ನನ್ನ ಹೊರತು ಬೇರೆ ಸೇನಾಧೀಶ್ವರನಿರುವನೆ? ಅಂಥವನಾರೋ ನಾನರಿಯೆ.”


ನಮ್ಮ ದೇವರಾದ ಸರ್ವೇಶ್ವರಾ, ನೀವೇ ಏಕೈಕ ಸರ್ವೇಶ್ವರ ಎಂಬುದನ್ನು ಭೂಮಿಯ ರಾಷ್ಟ್ರಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಅಸ್ಸೀರಿಯರ ಕೈಯಿಂದ ಬಿಡಿಸಿರಿ.”


ಅವನ ಮೇಲೆ ಭಯಾತ್ಮನನ್ನು ಬರಮಾಡುವೆನು, ಅವನ ಒಂದು ಸುದ್ದಿಯನ್ನು ಕೇಳಿ ಸ್ವದೇಶಕ್ಕೆ ಹಿಂದಿರುಗಿ ಅಲ್ಲೆ ಕತ್ತಿಗೆ ತುತ್ತಾಗುವಂತೆ ಮಾಡುವೆನು.”


ರೇಗಿಸಿದರಾತನನು ಅನ್ಯದೇವರುಗಳನು ಪೂಜಿಸುತ ಸಿಟ್ಟಿಗೇರಿಸಿದರು ನಿಷಿದ್ಧಾಚಾರಗಳನು ನಡೆಸುತ.


ನಾನು ಗುಟ್ಟುಗುಟ್ಟಾಗಿ ಮಾತಾಡಿದವನಲ್ಲ ಕಗ್ಗತ್ತಲೆಯೊಳಗಿನಿಂದ ನುಡಿದವನಲ್ಲ ಶೂನ್ಯದಲ್ಲಿ ನನ್ನ ಹುಡುಕಿರಿ ಎಂದು ಯಕೋಬ ವಂಶಕ್ಕೆ ಹೇಳಿದವನಲ್ಲ. ಸರ್ವೇಶ್ವರನಾದ ನಾನು ಸತ್ಯಾನುಸಾರ ನುಡಿಯುವವನು, ನೆಟ್ಟನೆಯ ಮಾತುಗಳನ್ನೆ ಸ್ಪಷ್ಟವಾಗಿ ಹೇಳುವವನು.”


“ಇರುವಾತನು ನಾನೇ, ನಾನೊಬ್ಬನೇ ಬದುಕಿಸುವವನು, ಕೊಲ್ಲುವವನು ನಾನೇ, ಗಾಯಗೊಳಿಸುವವನು, ವಾಸಿಮಾಡುವವನು ನಾನೇ. ಇಂದಾದರು ತಿಳಿಯಿರಿ: ನನ್ನ ವಿನಾ ದೇವರಿಲ್ಲ ನನ್ನ ಕೈಯಿಂದ ತಪ್ಪಿಸಬಲ್ಲ ಶಕ್ತನಾರೂ ಇಲ್ಲ.


ನೇಮಿಸಿರುವೆ ಆತನನು ಜನಗಳಿಗೆ ಸಾಕ್ಷಿಯನ್ನಾಗಿ ಜನಾಂಗಗಳಿಗೆ ನಾಯಕನನ್ನಾಗಿ, ಅಧಿಪತಿಯನ್ನಾಗಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು