Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 43:14 - ಕನ್ನಡ ಸತ್ಯವೇದವು C.L. Bible (BSI)

14 “ಬಾಬಿಲೋನಿಯಗೆ ಕಳುಹಿಸುವೆ ಒಬ್ಬಾತನನು ನಿಮಗಾಗಿ ಮುರಿವನಾತ ಆ ಕಾರಾಗೃಹದ ಕಂಬಿಗಳನು ತುಂಡುತುಂಡಾಗಿ ಬಾಬಿಲೋನಿಯರ ಕೂಗಾಟವನು ಮಾರ್ಪಡಿಸುವೆನು ಗೋಳಾಟವನ್ನಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಿಮ್ಮ ವಿಮೋಚಕನೂ, ಇಸ್ರಾಯೇಲರ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮಗೋಸ್ಕರ ದೂತನನ್ನು ಬಾಬಿಲೋನಿಗೆ ಕಳುಹಿಸಿ, ಕಸ್ದೀಯರನ್ನೆಲ್ಲಾ ತಮ್ಮ ವಿನೋದದ ಹಡಗುಗಳ ಮೇಲೆ ಪಲಾಯನ ಮಾಡುವಂತೆ ಅಟ್ಟಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಿಮ್ಮ ವಿಮೋಚಕನೂ ಇಸ್ರಾಯೇಲ್ಯರ ಸದಮಲಸ್ವಾವಿುಯೂ ಆದ ಯೆಹೋವನು ಹೀಗನ್ನುತ್ತಾನೆ - ನಾನು ನಿಮಗೋಸ್ಕರ [ದೂತನನ್ನು] ಬಾಬೆಲಿಗೆ ಕಳುಹಿಸಿ ಕಸ್ದೀಯರನ್ನೆಲ್ಲಾ ತಮ್ಮ ವಿನೋದದ ಹಡಗುಗಳ ಮೇಲೆ ಪಲಾಯಿತರನ್ನಾಗಿ ಅಟ್ಟಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಇಸ್ರೇಲರ ಪರಿಶುದ್ಧನೇ, ನಿಮ್ಮನ್ನು ರಕ್ಷಿಸುವಾತನು. ಯೆಹೋವನು ಹೇಳುವುದೇನೆಂದರೆ: “ನಾನು ನಿಮಗೋಸ್ಕರ ಬಾಬಿಲೋನಿಗೆ ಸೈನ್ಯವನ್ನು ಕಳುಹಿಸುವೆನು. ಎಷ್ಟೋ ಮಂದಿ ಸೆರೆಹಿಡಿಯಲ್ಪಡುವರು. ಕಲ್ದೀಯ ಜನರು ಅವರ ಹಡಗುಗಳಿಂದಲೇ ಒಯ್ಯಲ್ಪಡುವರು. (ಅವರು ಆ ಹಡಗುಗಳ ಬಗ್ಗೆ ಬಹು ಹೆಮ್ಮೆಯಿಂದಿದ್ದಾರೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಿಮ್ಮ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಆಗಿರುವ ಯೆಹೋವ ದೇವರು ಹೇಳುವುದೇನೆಂದರೆ: ನಾನು ನಿಮಗೋಸ್ಕರ ಬಾಬಿಲೋನಿಗೆ ಕಳುಹಿಸಿ, ಅವರ ಘನವಂತರನ್ನೆಲ್ಲಾ ಮತ್ತು ಹಡಗುಗಳಲ್ಲಿ ಆರ್ಭಟಿಸುವ ಕಸ್ದೀಯರನ್ನು ತಗ್ಗಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 43:14
23 ತಿಳಿವುಗಳ ಹೋಲಿಕೆ  

“ಆದರೆ ಬಾಬಿಲೋನಿನವರು ಹಾಗು ಅದರ ಕಸ್ದೀಯರು ಸಿಯೋನಿನಲ್ಲಿ ಮಾಡಿದ ಎಲ್ಲ ಕೇಡಿಗೆ ಪ್ರತಿಯಾಗಿ ನಾನು ಅವರೆಲ್ಲರಿಗೆ ಆ ಸಿಯೋನಿನವರ ಕಣ್ಣೆದುರಿಗೇ ಮುಯ್ಯಿ ತೀರಿಸುವೆನು,” ಎನ್ನುತ್ತಾರೆ ಸರ್ವೇಶ್ವರ.


ಇಂತೆನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ, ಇಸ್ರಯೇಲರ ಅರಸ, ಅವರ ಉದ್ಧಾರಕ: “ಆದಿಯು ನಾನೇ, ಅಂತ್ಯವು ನಾನೇ, ನನ್ನ ಹೊರತು ದೇವರಾರು ಇಲ್ಲ ಬೇರೆ.


ಬಾಬಿಲೋನಿನ ನಾಡನ್ನು ನೋಡು. ಅದರ ಜನಾಂಗ ನಿರ್ನಾಮವಾಯಿತು. ಅಸ್ಸೀರಿಯದವರು ಆ ನಾಡನ್ನು ಕಾಡುಮೃಗಗಳಿಗೆ ಈಡುಮಾಡಿದರು. ಅಲ್ಲಿ ಬುರುಜುಗಳನ್ನು ಕಟ್ಟಿಕೊಂಡರು. ಇದರ ಕೋಟೆಗಳನ್ನಾದರೋ ಕೆಡವಿ ನಾಶಮಾಡಿದರು.


ಅವರು ಈ ಹೊಸ ಗೀತೆಯನ್ನು ಹಾಡುತ್ತಿದ್ದರು: :ಸುರುಳಿಯನ್ನು ಸ್ವೀಕರಿಸಲು ನೀ ಯೋಗ್ಯನು ಅದರ ಮುದ್ರೆಗಳನ್ನು ಮುರಿಯಲು ನೀ ಶಕ್ತನು. ಸಮರ್ಪಿಸಿಕೊಂಡಿರುವೆ ನಿನ್ನನೇ ನೀ ಬಲಿಯರ್ಪಣೆಯಾಗಿ ಸಕಲ ದೇಶ, ಭಾಷೆ, ಕುಲಗೋತ್ರಗಳಿಂದ ಕೊಂಡುಕೊಂಡಿರುವೆ ಮಾನವರನು ನಿನ್ನ ರಕ್ತದಿಂದ.


ತಾಯ ಗರ್ಭದಿಂದ ರೂಪಿಸಿ ನಿನ್ನನು ಹೊರತಂದ ಸರ್ವೇಶ್ವರ ಹೇಳಿಹನು ಇದನ್ನು : “ಸರ್ವವನು ಸೃಷ್ಟಿಸಿದ ಸರ್ವೇಶ್ವರನು ನಾನೆ ಗಗನಮಂಡಲವನು ವಿಸ್ತರಿಸಿದವನು ನಾನೆ ಭೂಮಂಡಲವನು ಹರಡಿದವನು ನಾನೆ ನನಗಾಗ ನೆರವಾಗಲು ಯಾರಾದರೂ ಇದ್ದರೆ?


ಈಗಲಾದರೋ ಯಕೋಬ ವಂಶವೇ, ಇಸ್ರಯೇಲ್ ಸಂತಾನವೇ ಕೇಳು : ನಿನ್ನನ್ನು ಸೃಷ್ಟಿಸಿದ, ರೂಪಿಸಿದ ಸರ್ವೇಶ್ವರನ ನುಡಿಯನ್ನು ಕೇಳು; “ಭಯಪಡಬೇಡ, ನಿನ್ನನ್ನು ರಕ್ಷಿಸಿದಾತ ನಾನಲ್ಲವೆ? ನಿನ್ನನ್ನು ಹೆಸರು ಹಿಡಿದು ಕರೆದಾತ ನಾನಲ್ಲವೆ? ನೀನು ನನ್ನವನೇ ಅಲ್ಲವೆ?


ನಿನಗೊಪ್ಪಿಗೆಯಾಗಲಿ ನನ್ನ ಬಾಯಮಾತು, ಹೃದಯಧ್ಯಾನ I ನೀನೆನ್ನ ಪ್ರಭು, ನನಗೆ ಉದ್ಧಾರಕ, ನನಗಾಶ್ರಯಧಾಮ II


ನಾನಂತು ಬಲ್ಲೆ, ನನ್ನ ಉದ್ಧಾರಕ ಜೀವಸ್ವರೂಪನೆಂದು ಕಡೆಯ ದಿನದಂದು ಧರೆಗಾತ ಇಳಿದುಬರುವನೆಂದು.


ಸರ್ವೇಶ್ವರ ಇಂತೆನ್ನುತ್ತಾರೆ : “ಹುಳುವಿನಂತಿರುವ ಯಕೋಬೇ, ಇಸ್ರಯೇಲಿನ ಜನತೆಯೇ, ಭಯಪಡಬೇಡ, ನಾನೇ ನಿನಗೆ ಸಹಾಯಕ ಇಸ್ರಯೇಲಿನ ಪರಮಪಾವನ ಸ್ವಾಮಿಯೇ ನಿನಗೆ ವಿಮೋಚಕ.


ನಿನ್ನ ಜೀವೋದ್ಧಾರಕನು ಇಸ್ರಯೇಲಿನ ಪರಮಪಾವನನು ಆದ ಸರ್ವೇಶ್ವರ ಸ್ವಾಮಿಯೆ ನುಡಿದಿಹನು : “ನಿನಗೆ ಕ್ಷೇಮ‍ಕರವಾದ ಮಾರ್ಗವನು ಬೋಧಿಸುವವನೂ ನೀ ಹೋಗಬೇಕಾದ ಹಾದಿಯಲಿ ನಡೆಯಿಸುವವನೂ ಆದಂಥ ಸರ್ವೇಶ್ವರ ಸ್ವಾಮಿ ದೇವರು ನಾನು.


“ಬಹುಜಲಾಶ್ರಯಗಳ ನಡುವೆ ನಿಂತಿರುವ ನಗರಿಯೇ, ಧನಭರಿತ ಪುರಿಯೇ, ನಿನ್ನ ಅಂತ್ಯಕಾಲವು ಬಂದಿದೆ. ನೀನು ಕೊಳ್ಳೆಹೊಡೆದದ್ದು ಸಾಕಾಗಿದೆ.”


ನಾನು ನನ್ನ ಪವಿತ್ರನಾಮವನ್ನು ನನ್ನ ಜನರಾದ ಇಸ್ರಯೇಲರ ನಡುವೆ ವ್ಯಕ್ತಗೊಳಿಸುವೆನು, ಅದನ್ನು ಇನ್ನು ಮುಂದೆ ಅಪಕೀರ್ತಿಗೆ ಗುರಿಯಾಗಲುಬಿಡೆನು; ನಾನೇ ಸರ್ವೇಶ್ವರ, ಇಸ್ರಯೇಲಿನ ಪರಮಪಾವನಸ್ವಾಮಿ ಎಂದು ಜನಾಂಗಗಳಿಗೆ ಗೊತ್ತಾಗುವುದು.”


ಸಿಯೋನ್ ಕುವರಿಯೇ, ಪ್ರಸವವೇದನೆಯಿಂದ ನರಳಾಡು; ಪಟ್ಟಣವನ್ನು ಬಿಟ್ಟು, ಬಯಲಿನಲ್ಲಿ ವಾಸಮಾಡು. ಬಾಬಿಲೋನಿಗೆ ತೆರಳು. ಅಲ್ಲೇ ನಿನಗೆ ಉದ್ಧಾರವಾಗುವುದು. ಅಲ್ಲೇ ನಿನ್ನ ಶತ್ರುಗಳಿಂದ ಸರ್ವೇಶ್ವರ ಬಿಡುಗಡೆ ಮಾಡುವರು.


ನಮ್ಮ ಉದ್ಧಾರಕನ ನಾಮಧೇಯ ಸೇನಾಧೀಶ್ವರ ಸರ್ವೇಶ್ವರ ಆತನೇ ಇಸ್ರಯೇಲರಿಗೆ ಪರಮಪವಿತ್ರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು