Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 43:16 - ಕನ್ನಡ ಸತ್ಯವೇದವು C.L. Bible (BSI)

16 ಸಮುದ್ರದ ಮಧ್ಯೆ ದಾರಿಮಾಡಿದವನಾರೋ, ಭೋರ್ಗರೆವ ಜಲರಾಶಿಗಳಲ್ಲಿ ಮಾರ್ಗವೇರ್ಪಡಿಸಿದವನಾರೋ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯಾರು ಸಮುದ್ರದಲ್ಲಿ ದಾರಿಮಾಡಿ ಜಲಪ್ರವಾಹಗಳಲ್ಲಿ ಮಾರ್ಗವನ್ನು ಏರ್ಪಡಿಸಿದನೋ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯಾವನು ಸಮುದ್ರದಲ್ಲಿ ದಾರಿಮಾಡಿ ಜಲಪ್ರವಾಹಗಳಲ್ಲಿ ಮಾರ್ಗವನ್ನು ಏರ್ಪಡಿಸಿದನೋ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೆಹೋವನು ಸಮುದ್ರದ ಮೂಲಕ ಮಾರ್ಗವನ್ನು ನಿರ್ಮಿಸುವನು. ಅಲ್ಲೋಲಕಲ್ಲೋಲವಾಗಿರುವ ನೀರಿನ ಮೂಲಕ ತನ್ನ ಜನರಿಗೆ ಮಾರ್ಗವನ್ನು ಮಾಡುವನು. ಯೆಹೋವನು ಹೇಳುವುದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೆಹೋವ ದೇವರು ಇಂತೆನ್ನುತ್ತಾರೆ: ಸಮುದ್ರದ ಮುಖಾಂತರವಾಗಿ ಮಾರ್ಗಮಾಡಿದವನೂ; ಬಲವಾದ ನೀರಿನಲ್ಲಿ ದಾರಿ ಮಾಡಿದವನೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 43:16
21 ತಿಳಿವುಗಳ ಹೋಲಿಕೆ  

ಸಮುದ್ರ ಜನರಾಶಿಗಳನು ಬತ್ತಿಸಿದ ಬಾಹು ನೀನು ವಿಮುಕ್ತ ಜನ ಹಾಯುವಂತೆ ಸಮುದ್ರದಲಿ ದಾರಿಮಾಡಿದೆ ನೀನು.


ನಾನೇ ಇರುವೆ ನಿನ್ನ ಸಂಗಡ ನೀ ಜಲರಾಶಿಯನ್ನು ದಾಟುವಾಗ ಮುಳುಗಿಸದು ನದಿ ನೀ ಅದನ್ನು ಹಾದುಹೋಗುವಾಗ ಸುಡದು ಬೆಂಕಿ, ದಹಿಸದು ಜ್ವಾಲೆ, ಅದರ ಮಧ್ಯೆ ನೀ ನಡೆಯುವಾಗ.


ಸಾಗರವನೆ ನೀ ತುಳಿದು ನಡೆದೆ I ಮಹಾಸಾಗರವನೆ ನೀ ದಾಟಿದೆ I ಹೆಜ್ಜೆಯ ಗುರುತನೂ ಕಾಣಬಿಡದೆ II


ಸರ್ವೇಶ್ವರನು, ಹಗಲಲ್ಲಿ ಬೆಳಕು ನೀಡಲು ಸೂರ್ಯನನ್ನು ನೇಮಿಸಿದಾತ. ಇರುಳಲ್ಲಿ ಬೆಳಕು ನೀಡಲು ಚಂದ್ರ ನಕ್ಷತ್ರಗಳನ್ನು ಏರ್ಪಡಿಸಿದಾತ. ಅಲೆಗಳು ಭೋರ್ಗರೆವಷ್ಟು ಸಮುದ್ರವನ್ನು ಕೆರಳಿಸುವಾತ ‘ಸೇನಾಧೀಶ್ವರ ಸರ್ವೇಶ್ವರ’ ಎಂಬ ನಾಮಧೇಯದಿಂದ ಪ್ರಸಿದ್ಧನಾತ.


ನಿನ್ನ ದೇವರಾದ ಸರ್ವೇಶ್ವರ ನಾನೆ ಸಮುದ್ರವನು ಕಲ್ಲೋಲಗೊಳಿಸುವವನು ನಾನೆ ಅದರ ಅಲೆಗಳನು ಭೋರ್ಗರೆಸುವವನು ನಾನೆ ನನ್ನ ಹೆಸರು ಸೇನಾಧೀಶ್ವರ ಸರ್ವೇಶ್ವರ!


ಒಣಗಿಹೋಯಿತಾ ಕೆಂಗಡಲು ಆತನ ಗದರಿಕೆಗೆ I ದಾಟಿಸಿದನಾ ಸಾಗರವನು ಅಡವಿಯೋ ಎಂಬ ಹಾಗೆ II


ದಾಟಿಸಿದನವರನು ಸಮುದ್ರವನೆ ಭೇದಿಸಿ I ಅದರತುಳ ನೀರನು ರಾಶಿಯಾಗಿ ನಿಲ್ಲಿಸಿ II


ಕಡಲನು ಸೀಳಿ, ಆ ಪಿತೃಗಳ ನಡೆಸಿದಿರಿ ಒಣನೆಲದಲೋ ಎಂಬಂತೆ ಅವರ ಬೆನ್ನಟ್ಟಿ ಬಂದವರನು ಜಲರಾಶಿಯ ತಳಮುಟ್ಟಿಸಿದಿರಿ ಕಲ್ಲಂತೆ.


ಆರನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಯೂಫ್ರೆಟಿಸ್ ಎಂಬ ಮಹಾನದಿಯ ಮೇಲೆ ಸುರಿದನು. ಕೂಡಲೇ ಅದರ ನೀರು ಬತ್ತಿಹೋಯಿತು. ಇದರ ಪರಿಣಾಮವಾಗಿ ಪೂರ್ವದೇಶದ ರಾಜರು ಬರುವುದಕ್ಕೆ ಮಾರ್ಗವಾಯಿತು.


ಇಸ್ರಯೇಲರಾದರೋ, ಸಮುದ್ರದೊಳಗೆ ಒಣ ನೆಲದಲ್ಲೇ ನಡೆದುಹೋದರು. ನೀರು ಅವರ ಎಡಬಲಗಳಲ್ಲಿ ಗೋಡೆಯಂತೆ ನಿಂತಿತ್ತು.


ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಚಾಚಿ ಅದನ್ನು ವಿಭಾಗಿಸು; ಆಗ ಇಸ್ರಯೇಲರು ಸಮುದ್ರದ ಮಧ್ಯೆ ಒಣಗಿದ ನೆಲದ ಮೇಲೆ ನಡೆದುಹೋಗುವರು.


‘ಬತ್ತಿಹೋಗು’ ಎಂದು ಜಲರಾಶಿಗಳಿಗೆ ‘ಒಣಗಿಹೋಗು’ ಎಂದು ನಿನ್ನ ಸೇರುವ ನದಿಗಳಿಗೆ ಅಪ್ಪಣೆ ಕೊಡುವಾತನು ನಾನೆ.


ನಾನು ರಕ್ಷಿಸಲು ಬಂದಾಗ ಯಾರೂ ಕಾದಿರಲಿಲ್ಲ, ಏಕೆ? ನಾನು ಕೂಗಿಕರೆದಾಗ ಯಾರೂ ಉತ್ತರಕೊಡಲಿಲ್ಲ, ಏಕೆ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿ ನನ್ನಲ್ಲಿ ಇಲ್ಲವೋ? ಬರಿ ಗರ್ಜನೆಯಿಂದ ಬತ್ತಿಸಬಲ್ಲೆ ಸಮುದ್ರವನು ಬೆಂಗಾಡಾಗಿಸಬಲ್ಲೆ ನಾ ನದಿಸರೋವರಗಳನು ಬಾಯಾರಿ ಸತ್ತು ನಾರುವಂತೆ ಮಾಡಬಲ್ಲೆ ಅಲ್ಲಿಯ ಮೀನುಗಳನು.


ಕುರುಬನು ತನ್ನ ಕುರಿಮಂದೆಯನು ಕರೆದೊಯ್ಯುವಂತೆ I ಮೋಶೆ, ಆರೋನರಿಂದ ನಿನ್ನ ಪ್ರಜೆಗಳನು ನಡೆಸಿದೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು