Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 43:2 - ಕನ್ನಡ ಸತ್ಯವೇದವು C.L. Bible (BSI)

2 ನಾನೇ ಇರುವೆ ನಿನ್ನ ಸಂಗಡ ನೀ ಜಲರಾಶಿಯನ್ನು ದಾಟುವಾಗ ಮುಳುಗಿಸದು ನದಿ ನೀ ಅದನ್ನು ಹಾದುಹೋಗುವಾಗ ಸುಡದು ಬೆಂಕಿ, ದಹಿಸದು ಜ್ವಾಲೆ, ಅದರ ಮಧ್ಯೆ ನೀ ನಡೆಯುವಾಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು, ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಳುಗಿಸುವುದಿಲ್ಲ, ಬೆಂಕಿಯಲ್ಲಿ ನಡೆಯುವಾಗ ನೀನು ಸುಟ್ಟುಹೋಗುವುದಿಲ್ಲ, ಜ್ವಾಲೆಯು ನಿನ್ನನ್ನು ದಹಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು; ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಣುಗಿಸವು; ಉರಿಯಲ್ಲಿ ನಡೆಯುವಾಗ ನೀನು ಕಂದದಿರುವಿ, ಜ್ವಾಲೆಯು ನಿನ್ನನ್ನು ದಹಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಿನ್ನ ಕಷ್ಟಕಾಲದಲ್ಲಿ ನಾನು ನಿನ್ನೊಂದಿಗಿರುವೆನು. ನೀನು ಜಲರಾಶಿಯನ್ನು ಹಾದುಹೋಗುವಾಗ ನಾನೇ ನಿನ್ನೊಂದಿಗಿರುವೆ. ನೀನು ನದಿಗಳನ್ನು ದಾಟುವಾಗ ಅಪಾಯಕ್ಕೆ ಗುರಿಯಾಗದಿರುವೆ. ಬೆಂಕಿಯೊಳಗಿಂದ ನಡೆಯುವಾಗ ನಿನಗೆ ಹಾನಿಯಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನೀನು ಜಲರಾಶಿಯನ್ನು ದಾಟಿಹೋಗುವಾಗ, ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ, ಅವು ನಿನ್ನನ್ನು ಮುಳುಗಿಸುವುದಿಲ್ಲ; ಬೆಂಕಿಯಲ್ಲಿ ನಡೆಯುವಾಗ, ನೀನು ಸುಟ್ಟುಹೋಗುವುದಿಲ್ಲ; ಜ್ವಾಲೆಯು ನಿನ್ನನ್ನು ದಹಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 43:2
40 ತಿಳಿವುಗಳ ಹೋಲಿಕೆ  

ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ.


ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವ ಎಡೆಗಳಲ್ಲೆಲ್ಲ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನ್ನ ಸಂಗಡ ಇರುತ್ತೇನೆ,” ಎಂದು ಹೇಳಿದರು.


ಶತ್ರುಗಳೆಮ್ಮ ತಲೆಮೇಲೆ ರಥವನೋಡಗೊಳಿಸಿದೆ I ಅಗ್ನಿಯನೂ ಜಲವನೂ ದಾಟುವಂತೆ ಮಾಡಿದೆ I ಕೊನೆಗೆ ಸಮೃದ್ಧ ನಾಡಿಗೆಮ್ಮನು ಸೇರಿಸಿದೆ II


ಕಾರ್ಗತ್ತಲ ಕಣಿವೆಯಲಿ ನಾ ನಡೆವಾಗಲು, ಅಂಜೆನು ಕೇಡಿಗೆ I ನಿನ್ನ ಕುರಿಗೋಲು, ಊರುಗೋಲು, ಧೈರ್ಯವನು ತರುವುದೆನಗೆ I ಕಾಣೆನೆಂದಿಗೂ ನಾ ದಿಗಿಲನು, ನೀನಿರಲು ನನ್ನೊಂದಿಗೆ II


ನನಗೆ ಮೊರೆಯಿಟ್ಟಾಗ ಕಿವಿಗೊಡುವೆನು I ಸಂಕಟದೊಳು ಅವನ ಸಂಗಡವಿರುವೆನು I ಅವನನು ಉದ್ಧರಿಸಿ ಘನಪಡಿಸುವೆನು II


ವಿಶ್ವಾಸದಿಂದಲೇ ಇಸ್ರಯೇಲರು ಒಣನೆಲವನ್ನು ದಾಟುವಂತೆ, ಕೆಂಪು ಸಮುದ್ರವನ್ನು ದಾಟಿದರು. ಈಜಿಪ್ಟಿನವರು ಹಾಗೆಯೇ ದಾಟಲೆತ್ನಿಸಿದಾಗ ನೀರಿನ ಪಾಲಾದರು.


ನಿನ್ನ ಜೀವಮಾನವಿಡೀ ಯಾರೊಬ್ಬನು ನಿನ್ನನ್ನು ಎದುರಿಸಿ ನಿಲ್ಲನು. ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರುವೆನು. ನಿನ್ನನ್ನು ಕೈಬಿಡುವುದಿಲ್ಲ, ನಿನ್ನನ್ನು ತೊರೆದುಬಿಡುವುದಿಲ್ಲ.


“ಇಮ್ಮಾನುವೇಲ್” ಎಂದರೆ, “ದೇವರು ನಮ್ಮೊಡನೆ ಇದ್ದಾರೆ” ಎಂದು ಅರ್ಥ.


ಹೇ ದೇವಾ, ನೀ ನಮ್ಮನ್ನು ಪರಿಶೋಧಿಸಿದೆ I ಪುಟಕ್ಕಿಟ್ಟ ಚಿನ್ನದಂತೆ ಶುದ್ಧೀಕರಿಸಿದೆ II


ಇಸ್ರಯೇಲರಾದರೋ, ಸಮುದ್ರದೊಳಗೆ ಒಣ ನೆಲದಲ್ಲೇ ನಡೆದುಹೋದರು. ನೀರು ಅವರ ಎಡಬಲಗಳಲ್ಲಿ ಗೋಡೆಯಂತೆ ನಿಂತಿತ್ತು.


ಆದರೆ ಪ್ರಭು ನನಗೆ ಬೆಂಬಲವಾಗಿ ನಿಂತರು. ನಾನು ಶುಭಸಂದೇಶವನ್ನು ಸಂಪೂರ್ಣವಾಗಿ ಸಾರುವಂತೆಯೂ ಅನ್ಯಧರ್ಮೀಯರೆಲ್ಲರು ಅದನ್ನು ಕೇಳುವಂತೆಯೂ ಮಾಡಿದರು. ಅಲ್ಲದೆ, ಸಿಂಹದ ಬಾಯಿಂದಲೂ ನನ್ನನ್ನು ಸಂರಕ್ಷಿಸಿದರು.


ಸರ್ವೇಶ್ವರ ಇಂತೆನ್ನುತ್ತಾರೆ : “ಹುಳುವಿನಂತಿರುವ ಯಕೋಬೇ, ಇಸ್ರಯೇಲಿನ ಜನತೆಯೇ, ಭಯಪಡಬೇಡ, ನಾನೇ ನಿನಗೆ ಸಹಾಯಕ ಇಸ್ರಯೇಲಿನ ಪರಮಪಾವನ ಸ್ವಾಮಿಯೇ ನಿನಗೆ ವಿಮೋಚಕ.


ಪ್ರಭು ನಿನ್ನೊಂದಿಗಿರಲಿ, ದೇವರ ಅನುಗ್ರಹ ನಿಮ್ಮೆಲ್ಲರಲ್ಲೂ ಇರಲಿ!


ಹಾಕುವೆನಾ ಮೂರನೇ ಭಾಗದವರನ್ನು ಬೆಂಕಿಗೆ, ಶೋಧಿಸುವೆನು ಅವರನ್ನು ಬೆಳ್ಳಿಯ ಹಾಗೆ. ಶುದ್ಧೀಕರಿಸುವೆನು ಬಂಗಾರದ ಹಾಗೆ. ಕಿವಿಗೊಡುವೆ ನನ್ನ ಹೆಸರೆತ್ತಿ ಪ್ರಾರ್ಥಿಸುವವರಿಗೆ. ಹೇಳುವೆನು, ‘ಇವರೇ ನನ್ನ ಪ್ರಜೆಯೆಂದು. ಹೇಳುವರವರು ‘ಸರ್ವೇಶ್ವರನೇ ನಮ್ಮ ದೇವ’ ಎಂದು.


ಇಗೋ, ಸರ್ವೇಶ್ವರ ನಾಮಧೇಯನು ಬರುತಿಹನು ದೂರದಿಂದ; ಭುಗಿಲೇರುತಿದೆ ಆತನ ಕೋಪ ಏಳುತಿದೆ ದಟ್ಟವಾದ ಧೂಮ ಅದರಿಂದ. ದಹಿಸುವ ಅಗ್ನಿಯಂತಿದೆ ಆತನ ನಾಲಗೆ. ಭರಿತವಾಗಿದೆ ಆತನ ತುಟಿಗಳು ರೋಷದಿಂದ.


ಗುಡುಗು, ಭೂಕಂಪ, ಮಹಾಗರ್ಜನೆ, ಬಿರುಗಾಳಿ, ಚಂಡಮಾರುತ, ಭಸ್ಮಮಾಡುವಂಥ ಅಗ್ನಿಜ್ವಾಲೆ - ಇವುಗಳ ಮೂಲಕ ಸರ್ವೇಶ್ವರ ನಿನ್ನ ಪರವಾಗಿ ಪ್ರತ್ಯಕ್ಷವಾಗುವರು.


“ಇಗೋ, ಆ ದಿನ ಬರುತ್ತಿದೆ. ಒಲೆಯಂತೆ ಉರಿಯುತ್ತಿದೆ. ಎಲ್ಲ ಅಹಂಕಾರಿಗಳು, ದುಷ್ಕರ್ಮಿಗಳು, ಒಣಹುಲ್ಲಿನಂತೆ ಆಗಿಹೋಗಿದ್ದಾರೆ. ಆದ್ದರಿಂದ ಬರಲಿರುವ ಆ ದಿನದಂದು ಸುಟ್ಟು ಭಸ್ಮವಾಗುತ್ತಾರೆ. ಬುಡ ರೆಂಬೆಸಹಿತ ಬೂದಿಯಾಗುತ್ತದೆ,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಅದಕ್ಕೆ ದೇವರು, “ನಾನೇ ನಿನ್ನ ಸಂಗಡ ಇರುವೆನು; ನೀನು ನನ್ನ ಜನರನ್ನು ಈಜಿಪ್ಟಿನಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ದೇವರನ್ನು ಆರಾಧಿಸುವಿರಿ. ನಿನ್ನನ್ನು ಕಳಿಸಿದವನು ನಾನೇ ಎಂಬುದಕ್ಕೆ ಇದೇ ನಿನಗೆ ಗುರುತಾಗಿ ಇರುವುದು,” ಎಂದರು.


ಎಂತಲೇ ಭಕ್ತರೆಲ್ಲರು ನಿನ್ನ ಪ್ರಾರ್ಥಿಸಲಿ ಸಕಾಲದಲಿ I ಹುಚ್ಚುಹೊಳೆ ಉಕ್ಕಿಬಂದಾಗ ನೀ ಸಿಕ್ಕಲಿಲ್ಲವೆನ್ನದಿರಲಿ II


ಭಯಪಡಬೇಡ, ನಾನಿರುವೆ ನಿನ್ನ ಸಂಗಡ ಕರೆತರುವೆ ನಿನ್ನ ಸಂತತಿಯನ್ನು ಮೂಡಣದಿಂದ ಒಟ್ಟುಗೂಡಿಸುವೆ ನಿನ್ನವರನ್ನು ಪಡುವಣದಿಂದ.


ಬಾಬಿಲೋನಿಯದ ಅರಸನಿಗೆ ಹೆದರಬೇಡಿ, ಬೆದರಬೇಡಿ. ನಿಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಲಿಕ್ಕೆ ನಾನೇ ನಿಮ್ಮೊಂದಿಗೆ ಇರುವೆನು. ಇದು ಸರ್ವೇಶ್ವರನಾದ ನನ್ನ ನುಡಿ.


ಯಾವ ರಾಷ್ಟ್ರಗಳಿಗೆ ನಿನ್ನನ್ನು ಅಟ್ಟಿದೆನೋ ಆ ರಾಷ್ಟ್ರಗಳನ್ನೆಲ್ಲ ನಿರ್ಮೂಲ ಮಾಡುವೆನು. ನಿನ್ನನ್ನಾದರೋ, ನಿರ್ಮೂಲ ಮಾಡೆನು ಮಿತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡೆನು. ಸರ್ವೇಶ್ವರನಾದ ನನ್ನ ನುಡಿ ಇದು.”


ಅತ್ತ ಶದ್ರಕ್, ಮೇಶಕ್, ಅಬೇದ್‍ನೆಗೋ ಈ ಮೂವರು ಕಟ್ಟಿನೊಂದಿಗೆ ಧಗಧಗನೆ ಉರಿಯುವ ಆವಿಗೆಯ ನಡುವೆ ಬಿದ್ದರು.


ಇದನ್ನು ನೋಡಿ ಸ್ವಾಮಿಯ ದೂತನಾದ ಹಗ್ಗಾಯನು ಜನರಿಗೆ, “ನಾನು ನಿಮ್ಮೊಡನೆ ಇದ್ದೇನೆ ಎಂದು ಸರ್ವೇಶ್ವರ ನುಡಿದಿದ್ದಾರೆ. ಇದು ಸರ್ವೇಶ್ವರಸ್ವಾಮಿಯ ಸಂದೇಶ,” ಎಂದನು.


ಐದಾರು ಇಕ್ಕಟ್ಟುಗಳಿಂದ ನಿನ್ನನು ಬಿಡಿಸುವನು ಏಳನೆಯದು ಬಂದರೂ ನಿನ್ನನು ಕೇಡು ಮುಟ್ಟದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು