Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 43:22 - ಕನ್ನಡ ಸತ್ಯವೇದವು C.L. Bible (BSI)

22 “ಯಕೋಬೇ, ನೀನೆನ್ನ ನಾಮಸ್ಮರಣೆ ಮಾಡದೆಹೋದೆ; ಇಸ್ರಯೇಲೇ, ನನ್ನ ವಿಷಯದಲ್ಲಿ ನೀನು ಬೇಸರಗೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 “ಯಾಕೋಬೇ, ನೀನಾದರೋ ನನ್ನನ್ನು ಪ್ರಾರ್ಥಿಸಲಿಲ್ಲ, ಇಸ್ರಾಯೇಲೇ, ನೀನು ನನ್ನ ವಿಷಯದಲ್ಲಿ ಬೇಸರಗೊಂಡಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯಾಕೋಬೇ, ನೀನಾದರೋ ನನ್ನನ್ನು ಪ್ರಾರ್ಥಿಸಲಿಲ್ಲ, ಇಸ್ರಾಯೇಲೇ, ನೀನು ನನ್ನ ವಿಷಯದಲ್ಲಿ ಬೇಸರಗೊಂಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ಯಾಕೋಬೇ, ನೀನು ನನಗೆ ಪ್ರಾರ್ಥಿಸಲಿಲ್ಲ. ಇಸ್ರೇಲೇ, ನೀನು ನನ್ನ ವಿಷಯದಲ್ಲಿ ಆಯಾಸಗೊಂಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ಆದರೂ ಯಾಕೋಬೇ, ನೀನು ನನ್ನನ್ನು ಪ್ರಾರ್ಥಿಸಲಿಲ್ಲ. ಇಸ್ರಾಯೇಲೇ, ನನ್ನ ವಿಷಯದಲ್ಲಿ ನೀನು ಬೇಸರಗೊಂಡಿದ್ದೀ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 43:22
19 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಇಂತೆನ್ನುತ್ತಾರೆ: “ನನ್ನ ಪ್ರಜೆಯೇ, ನಾನು ನಿನಗೇನು ಮಾಡಿದೆ? ಯಾವ ವಿಷಯದಲ್ಲಿ ನಿನಗೆ ಬೇಸರವನ್ನುಂಟುಮಾಡಿದೆ? ಪ್ರಮಾಣವಾಗಿ ಹೇಳು.


ದೇವರಿಗೆ ಸೇವೆಮಾಡುವುದು ವ್ಯರ್ಥ. ಅವರು ಹೇಳಿದಂತೆ ನಾವು ನಡೆದುಕೊಳ್ಳುವುದರಿಂದ ಪ್ರಯೋಜನವೇನು? ನಮ್ಮ ಕೃತ್ಯಗಳಿಗಾಗಿ ಸೇನಾಧೀಶ್ವರ ಸರ್ವೇಶ್ವರನ ಮುಂದೆ ದುಃಖಪಡುವುದರಿಂದ ಲಾಭವೇನು?


ಅಯ್ಯೋ, ಎಷ್ಟು ಬೇಸರವಾದುದು ಈ ಸೇವೆ’ ಎಂದುಕೊಂಡು ನೀವು ಅದನ್ನು ತಾತ್ಸಾರಮಾಡುತ್ತೀರಿ. “ಕಳವಿನ ಪಶುವನ್ನು, ರೋಗ ಹಿಡಿದ, ಊನವಾದ ಪ್ರಾಣಿಯನ್ನು ಅರ್ಪಿಸುತ್ತೀರಿ. ಇಂಥ ಕಾಣಿಕೆಯನ್ನು ನಿಮ್ಮ ಕೈಗಳಿಂದ ನಾನು ಸ್ವೀಕರಿಸಲೋ?’ ಎಂದು ಕೇಳುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಸರ್ವೇಶ್ವರಾ, ನಿಮ್ಮನ್ನು ಅರಿತುಕೊಳ್ಳದವರ ಮೇಲೆ ನಿಮ್ಮ ನಾಮವನ್ನು ಉಚ್ಚರಿಸದವರ ಮೇಲೆ ನಿಮ್ಮ ಕೋಪಾಗ್ನಿಯನ್ನು ಸುರಿದುಬಿಡಿ. ಅವರು ಯಕೋಬ್ಯರನ್ನು ಕಬಳಿಸಿದ್ದಾರೆ ಹೌದು, ಪೂರ್ತಿಯಾಗಿ ಕಬಳಿಸಿಬಿಟ್ಟಿದ್ದಾರೆ ಅವರ ನಿವಾಸಗಳನ್ನು ನಾಶಮಾಡಿದ್ದಾರೆ.


ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆಯೇ ಈ ವಿಪತ್ತೆಲ್ಲಾ ನಮ್ಮ ಮೇಲೆ ಬಂದಿದೆ. ಆದರೂ ನಾವು ನಮ್ಮ ಧರ್ಮಮಾರ್ಗಗಳನ್ನು ತೊರೆದುಬಿಟ್ಟಿದ್ದೇವೆ. ನಿಮ್ಮ ಸತ್ಯೋಪದೇಶವನ್ನು ಗ್ರಹಿಸಿ ನಡೆಯುವಂತೆ ನಮ್ಮ ದೇವರಾದ ಸರ್ವೇಶ್ವರನೆಂಬ ನಿಮ್ಮ ದಯೆಯನ್ನು ಬೇಡಿಕೊಳ್ಳಲಿಲ್ಲ.


“ನಿಮ್ಮ ಪಿತೃಗಳು ನನ್ನಲ್ಲಿ ಯಾವ ಕೊರತೆಯನ್ನು ಕಂಡು ನನ್ನಿಂದ ದೂರವಾದರು? ಅವರು ವ್ಯರ್ಥಾಚಾರಗಳನ್ನು ಅನುಸರಿಸುತ್ತಾ ತಾವೇ ವ್ಯರ್ಥವಾಗಿಬಿಟ್ಟರು !


ನಿಮ್ಮ ನಾಮಸ್ಮರಣೆ ಮಾಡುವವನು ಯಾರೂ ಇಲ್ಲ. ನಿಮ್ಮ ಆಶ್ರಯ ಕೋರುವ ಆಸಕ್ತನು ಎಲ್ಲಿಯೂ ಇಲ್ಲ. ಏಕೆಂದರೆ ನೀವು ನಮಗೆ ವಿಮುಖರಾಗಿದ್ದೀರಿ. ನಮ್ಮ ಪಾಪಗಳ ವಶಕ್ಕೆ ನಮ್ಮನ್ನು ಬಿಟ್ಟುಬಿಟ್ಟಿದ್ದೀರಿ.


ಸುರಿ ರೌದ್ರವನು ನಿನ್ನನರಿಯದಾ ಮ್ಲೇಚ್ಛರ ಮೇಲೆ I ನಿನ್ನ ಶ್ರೀನಾಮವನು ಉಚ್ಚರಿಸದಾ ರಾಜ್ಯಗಳ ಮೇಲೆ II


ದುರ್ಜನರೆನ್ನ ಜನರನು ಅನ್ನದಂತೆ ನುಂಗುವುದೇಕೆ? I ಪ್ರಭುವನು ನೆನೆಯದಾ ದುಷ್ಕರ್ಮಿಗಳಿಗೆ ಅರಿವಿಲ್ಲವೇಕೆ? I


“ನೀವು ನಿಮ್ಮ ಮಾತುಗಳಿಂದ ಪ್ರಭುವನ್ನು ಬೇಸರಗೊಳಿಸಿದ್ದೀರಿ. ‘ಯಾವ ವಿಷಯದಲ್ಲಿ ಅವರನ್ನು ಬೇಸರಗೊಳಿಸಿದ್ದೇವೆ?’ ಎನ್ನುತ್ತೀರೋ? ‘ಕೆಡುಕರೆಲ್ಲರೂ ದೇವರ ದೃಷ್ಟಿಯಲ್ಲಿ ಒಳ್ಳೆಯವರು. ಅವರೇ ಆತನಿಗೆ ಬೇಕಾದವರು’ ಎಂದು ಹೇಳುವುದರಿಂದ: ‘ನ್ಯಾಯ ತೀರಿಸುವ ದೇವರೆಲ್ಲಿ?’ ಎಂದು ಕೇಳುವುದರಿಂದ.”


ನಾವೆಲ್ಲರೂ ಅಶುದ್ಧರು, ನಮ್ಮ ಸತ್ಕಾರ್ಯಗಳೆಲ್ಲ ಕೊಳಕು, ತರಗೆಲೆಯಂತೆ ಒಣಗಿಹೋಗಿದ್ದೇವೆ. ಬಿರುಗಾಳಿಯಂತೆ ನಮ್ಮನ್ನು ತಳ್ಳಿಕೊಂಡು ಬಂದಿವೆ, ನಮ್ಮ ಅಪರಾಧಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು