Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 43:23 - ಕನ್ನಡ ಸತ್ಯವೇದವು C.L. Bible (BSI)

23 ಕುರಿಮೇಕೆಗಳನ್ನು ನೀನು ತರಲಿಲ್ಲ ನನಗೆ ಹೋಮಕ್ಕಾಗಿ ಬಲಿಗಳನ್ನು ಅರ್ಪಿಸಲಿಲ್ಲ ನನ್ನ ಘನತೆಗಾಗಿ ನಾ ನಿನ್ನನು ಒತ್ತಾಯಿಸಲಿಲ್ಲ ನೈವೇದ್ಯಕ್ಕಾಗಿ ನಾ ನಿನ್ನನು ಬೇಸರಗೊಳಿಸಲಿಲ್ಲ ಧೂಪಾರತಿಗಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನೀನು ನನಗೆ ಹೋಮಕ್ಕಾಗಿ ಕುರಿ ಮೇಕೆಗಳನ್ನು ತಂದು ಯಜ್ಞಗಳಿಂದ ನನ್ನನ್ನು ಘನಪಡಿಸಲಿಲ್ಲ. ಕಾಣಿಕೆಗಳನ್ನು ಕೇಳಿ ನಿನ್ನನ್ನು ನಾನು ತೊಂದರೆಪಡಿಸಲಿಲ್ಲ, ಧೂಪಕ್ಕಾಗಿ ನಿನ್ನನ್ನು ಬೇಸರಗೊಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನೀನು ನನಗೆ ಹೋಮಕ್ಕಾಗಿ ಕುರಿಮೇಕೆಗಳನ್ನು ತಂದು ಯಜ್ಞಗಳಿಂದ ನನ್ನನ್ನು ಘನಪಡಿಸಲಿಲ್ಲ, ನೈವೇದ್ಯಕ್ಕಾಗಿ ನಿನ್ನನ್ನು ನಾನು ತೊಂದರೆಪಡಿಸಲಿಲ್ಲ, ಧೂಪಕ್ಕಾಗಿ ನಿನ್ನನ್ನು ಬೇಸರಗೊಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಿನ್ನ ಕುರಿಗಳನ್ನು ನನ್ನ ಬಳಿಗೆ ಯಜ್ಞಮಾಡುವದಕ್ಕಾಗಿ ತರಲಿಲ್ಲ. ನೀನು ನನ್ನನ್ನು ಸನ್ಮಾನಿಸಲಿಲ್ಲ. ನೀನು ನನಗೆ ಬಲಿಯರ್ಪಣೆ ಮಾಡಲಿಲ್ಲ. ನೀನು ಬಲಿಯರ್ಪಣೆ ಮಾಡಬೇಕೆಂದು ನಾನು ನಿನ್ನನ್ನು ಬಲವಂತಪಡಿಸಲಿಲ್ಲ. ನೀನು ಆಯಾಸಗೊಳ್ಳುವ ತನಕ ಧೂಪಹಾಕಬೇಕೆಂದು ನಾನು ನಿನ್ನನ್ನು ಒತ್ತಾಯಪಡಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನಿನ್ನ ದಹನಬಲಿಯ ಎಳೆಯ ಕುರಿಗಳನ್ನು ನನಗೆ ತರಲಿಲ್ಲ. ನಿನ್ನ ಯಜ್ಞಗಳಿಂದ ನನ್ನನ್ನು ಸನ್ಮಾನಿಸಲಿಲ್ಲ. ನೀನು ಕಾಣಿಕೆಯನ್ನು ಅರ್ಪಿಸದೆ ಇದ್ದದ್ದಕ್ಕೆ ನಿನ್ನನ್ನು ನಾನು ತೊಂದರೆಪಡಿಸಲಿಲ್ಲ, ಧೂಪಕ್ಕಾಗಿ ನಿನ್ನನ್ನು ಬೇಸರಗೊಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 43:23
19 ತಿಳಿವುಗಳ ಹೋಲಿಕೆ  

“ಇಸ್ರಯೇಲಿನ ವಂಶದವರೇ, ನಲವತ್ತು ವರ್ಷಗಳ ಕಾಲ ನೀವು ಮರಳುಗಾಡಿನಲ್ಲಿದ್ದಾಗ, ಬಲಿಪ್ರಾಣಿಗಳನ್ನಾಗಲೀ, ಧಾನ್ಯನೈವೇದ್ಯಗಳನ್ನಾಗಲಿ ನೀವು ಅರ್ಪಿಸಬೇಕೆಂದು ನಾನು ಕೇಳಿದ್ದುಂಟೋ?


ನನ್ನ ನೊಗ ಹಗುರ, ನನ್ನ ಹೊರೆ ಸುಗಮ,” ಎಂದರು.


ನರಮಾನವನು ದೇವರಿಗೆ ಮೋಸಮಾಡಬಹುದೋ? ಆದರೂ ನೀವು ನನಗೆ ಮೋಸಮಾಡುತ್ತಿದ್ದೀರಿ. ‘ನಿಮಗೆ ಹೇಗೆ ಮೋಸಮಾಡುತ್ತಿದ್ದೇವೆ?’ ಎಂದು ಕೇಳುತ್ತೀರೋ? ನೀವು ತೆರೆಬೇಕಾದ ದಶಮಾಂಶದಲ್ಲೂ, ಕೊಡಬೇಕಾದ ಕಾಣಿಕೆಯಲ್ಲೂ ಮೋಸಮಾಡುತ್ತಿದ್ದೀರಿ.


ನಿಮ್ಮ ಪೂರ್ವಜರನ್ನು ಈಜಿಪ್ಟ್ ದೇಶದಿಂದ ಬರಮಾಡಿದಾಗ ದಹನಬಲಿಯ ವಿಷಯವಾಗಿಯಾಗಲಿ, ಯಜ್ಞಬಲಿಯ ವಿಷಯವಾಗಿಯಾಗಲಿ ನಾನು ಅವರಿಗೆ ಏನೂ ಹೇಳಲಿಲ್ಲ; ಯಾವ ಕಟ್ಟಳೆಯನ್ನೂ ಕೊಡಲಿಲ್ಲ.


“ಜನರು ಮನಬಂದ ಮಾರ್ಗವನ್ನು ಅನುಸರಿಸುತ್ತಾರೆ; ತಮ್ಮ ಅಸಹ್ಯಕಾರ್ಯಗಳಲ್ಲಿ ಅತ್ಯಾನಂದಪಡುತ್ತಾರೆ. ಹೋರಿಯನ್ನು ಬಲಿಕೊಡುವವನು ನರಬಲಿಯನ್ನು ಕೊಡುತ್ತಾನೆ; ಕುರಿ ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ. ಕಾಣಿಕೆ ಒಪ್ಪಿಸುವವನು ಹಂದಿಯ ನೆತ್ತರನ್ನು ಅರ್ಪಿಸುತ್ತಾನೆ; ಧೂಪಾರತಿ ಎತ್ತುವವನು ವಿಗ್ರಹಾರಾಧನೆಯನ್ನು ಮಾಡುತ್ತಾನೆ.


ದುಷ್ಟರು ಅರ್ಪಿಸುವ ಬಲಿಯಜ್ಞ ಅಸಹ್ಯ; ದುರಾಲೋಚನೆಯಿಂದ ಅರ್ಪಿಸುವುದು ಮತ್ತೂ ಅಸಹ್ಯ.


ದುರುಳರು ಅರ್ಪಿಸುವ ಬಲಿ ಸರ್ವೇಶ್ವರನಿಗೆ ಅಸಹ್ಯ; ಸಜ್ಜನರು ಮಾಡುವ ಪ್ರಾರ್ಥನೆ ಆತನಿಗೆ ಪ್ರಿಯ.


“ಯಾರಾದರು ಸರ್ವೇಶ್ವರ ಸ್ವಾಮಿಗೆ ಧಾನ್ಯವನ್ನು ನೈವೇದ್ಯ ಮಾಡಬೇಕೆಂದಿದ್ದರೆ ಅದು ಗೋದಿ ಹಿಟ್ಟಾಗಿರಬೇಕು. ಅದರ ಮೇಲೆ ಎಣ್ಣೆಹೊಯ್ದು, ಸಾಂಬ್ರಾಣಿಯನ್ನಿಟ್ಟು, ಅದನ್ನು ಆರೋನನ ವಂಶಜರಾದ ಯಾಜಕರ ಬಳಿಗೆ ತರಬೇಕು.


ಸರ್ವೇಶ್ವರ ಮೋಶೆಗೆ ಮತ್ತೆ ಆಜ್ಞಾಪಿಸಿದ್ದೇನೆಂದರೆ: “ನೀನು ಹಾಲುಮಡ್ಡಿ, ಗುಗ್ಗುಲ ಹಾಗು ಗಂಧದಚೆಕ್ಕೆ ಎಂಬ ಪರಿಮಳ ದ್ರವ್ಯಗಳನ್ನು ಮತ್ತು ಸ್ವಚ್ಚವಾದ ಧೂಪವನ್ನು ಸಮಭಾಗವಾಗಿ ತೆಗೆದುಕೊಂಡು ಸುವಾಸನೆಯುಳ್ಳ ಬುಕ್ಕಿಟ್ಟಾಗಿರುವಂತೆ


ಒಂದೊಂದು ರಾಶಿಯ ಮೇಲೆ ಸ್ವಚ್ಛವಾದ ಸಾಂಬ್ರಾಣಿಯನ್ನು ಇಡಬೇಕು. ಆ ರೊಟ್ಟಿಗಳ ನೈವೇದ್ಯವನ್ನು ಸೂಚಿಸಲು ಆ ಸಾಂಬ್ರಾಣಿಯನ್ನು ಸರ್ವೇಶ್ವರನಿಗೆ ಹೋಮಮಾಡಬೇಕು.


ನಿನ್ನ ಆಸ್ತಿಯನ್ನರ್ಪಿಸಿ ಸರ್ವೇಶ್ವರನನ್ನು ಸನ್ಮಾನಿಸು, ನಿನ್ನ ಬೆಳೆಯ ಪ್ರಥಮ ಫಲವನ್ನು ಕಾಣಿಕೆಯಾಗಿಕೊಡು.


ಇಸ್ರಯೇಲಿನ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರನ ನುಡಿ ಇದು: “ನೀವು ಅರ್ಪಿಸುವ ದಹನಬಲಿಗಳನ್ನು, ಸಾಧಾರಣ ಯಜ್ಞಬಲಿಗಳೆಂದು ಭಾವಿಸಿ ಅವುಗಳ ಮಾಂಸವನ್ನು ಕೂಡ ನೀವೇ ತಿನ್ನಿರಿ.


ಸರ್ವೇಶ್ವರ ಇಂತೆನ್ನುತ್ತಾರೆ: “ನನ್ನ ಪ್ರಜೆಯೇ, ನಾನು ನಿನಗೇನು ಮಾಡಿದೆ? ಯಾವ ವಿಷಯದಲ್ಲಿ ನಿನಗೆ ಬೇಸರವನ್ನುಂಟುಮಾಡಿದೆ? ಪ್ರಮಾಣವಾಗಿ ಹೇಳು.


ಇದಲ್ಲದೆ, ಲೇವಿಯರಿಗೆ ಸಲ್ಲತಕ್ಕ ಪಾಲುಗಳು ಅವರಿಗೆ ಸಿಕ್ಕಲಿಲ್ಲವೆಂದೂ ಆರಾಧನೆ ನಡೆಸತಕ್ಕ ಲೇವಿಯರೂ ಗಾಯಕರೂ ತಮ್ಮ ತಮ್ಮ ಆಸ್ತಿಯಿದ್ದಲ್ಲಿಗೆ ಹೋಗಿಬಿಟ್ಟರೆಂದೂ ನನಗೆ ಗೊತ್ತಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು