Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 43:25 - ಕನ್ನಡ ಸತ್ಯವೇದವು C.L. Bible (BSI)

25 ಆದರೂ ನಾನೇ ನಾನಾಗಿ ಅಳಿಸಿಬಿಡುವೆ ನಿನ್ನ ದ್ರೋಹಗಳನು, ನನ್ನ ನೆನಪಿನಿಂದ ತೆಗೆದುಹಾಕುವೆ ನಿನ್ನ ಪಾಪಗಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿ ಬಿಡುತ್ತೇನೆ. ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿ ಬಿಡುತ್ತೇನೆ, ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 “ನಿಮ್ಮ ಪಾಪಗಳನ್ನೆಲ್ಲಾ ಅಳಿಸಿ ಹಾಕುವಾತನು ನಾನೇ. ನಾನು ಇದನ್ನು ನನಗೋಸ್ಕರವಾಗಿ ಮಾಡುತ್ತೇನೆ. ನಾನು ನಿಮ್ಮ ಪಾಪಗಳನ್ನು ಜ್ಞಾಪಿಸಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 “ನಾನಾಗಿ ನಾನೇ, ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 43:25
37 ತಿಳಿವುಗಳ ಹೋಲಿಕೆ  

ಅವರ ಪಾಪಗಳನ್ನು ಕ್ಷಮಿಸುವೆನು ಅವರ ತಪ್ಪುನೆಪ್ಪುಗಳನು ನೆನಪಿಗೆ ತಂದುಕೊಳ್ಳೆನು ಎಂದರು ಸರ್ವೇಶ್ವರ.”


“ಅವರ ಪಾಪಗಳನ್ನೂ ತಪ್ಪುನೆಪ್ಪುಗಳನ್ನೂ ನೆನಪಿಗೆ ತಂದುಕೊಳ್ಳೆನು,” ಎಂದಿದ್ದಾರೆ.


ಒಬ್ಬನು ತನ್ನ ನೆರೆಹೊರೆಯವರನ್ನು ಕುರಿತು ಅಥವಾ ಅಣ್ಣತಮ್ಮಂದಿರನ್ನು ಕುರಿತು, ‘ಸರ್ವೇಶ್ವರನನ್ನು ಅರಿತುಕೊ’ ಎಂದು ಬೋಧಿಸಬೇಕಾಗಿರುವುದಿಲ್ಲ. ಚಿಕ್ಕವರಿಂದ ಮೊದಲ್ಗೊಂಡು ದೊಡ್ಡವರ ತನಕ ಎಲ್ಲರು ನನ್ನನ್ನು ಅರಿತುಕೊಳ್ಳುವರು. ನಾನು ಅವರ ಅಪರಾಧವನ್ನು ಕ್ಷಮಿಸಿ, ಅವರ ಪಾಪವನ್ನು ಎಂದಿಗೂ ನೆನಪಿಗೆ ತಂದುಕೊಳ್ಳುವುದಿಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.”


ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: “ಬನ್ನಿರಿ, ಈಗ ವಾದಿಸೋಣ. ನಿಮ್ಮ ಪಾಪಗಳು ಕಡುಗೆಂಪಾಗಿದ್ದರೂ ಹಿಮದಂತೆ ಬಿಳುಪಾಗುವುವು. ರಕ್ತಗೆಂಪಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವುವು.


ಪರಿಹರಿಸಿದೆ ನಿನ್ನ ದ್ರೋಹಗಳನ್ನು ಮಂಜಿನಂತೆ ಚದರಿಸಿದ್ದೇನೆ ನಿನ್ನ ಪಾಪಗಳನು ಮೋಡದಂತೆ ವಿಮೋಚಿಸಿದ್ದೇನೆ ನೀ ನನಗೆ ಅಭಿಮುಖನಾಗಬೇಕೆಂದೆ.”


ಯೌವನದೆನ್ನ ಪಾಪಪ್ರವೃತ್ತಿಗಳ ಮನದಲ್ಲಿಟ್ಟುಕೊಳ್ಳಬೇಡ I ನಿನ್ನೊಲುಮೆ ನಲ್ಮೆಗಳ ನಿಮಿತ್ತ ಪ್ರಭು, ನನ್ನ ನೆನೆಯದಿರಬೇಡ II


ನಾ ಪಟ್ಟ ದುಃಖವು ನನ್ನ ಸುಖಕ್ಕಾಗಿಯೇ ನನ್ನಾತ್ಮವನ್ನು ನಾಶಕೂಪದಿಂದ ರಕ್ಷಿಸಿದ್ದು ನಿನ್ನ ಪ್ರೀತಿಯೇ; ನನ್ನ ಪಾಪಗಳನ್ನೆಲ್ಲಾ ನೀ ಹಾಕಿರುವೆ ನಿನ್ನ ಬೆನ್ನ ಹಿಂದೆ.


ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿರಿ. ಅವರು ನಿಮ್ಮ ಪಾಪಗಳನ್ನು ಪರಿಹರಿಸುವರು.


ಧರ್ಮಶಾಸ್ತ್ರದ ಪ್ರವೇಶ ಆದಂತೆ, ಅಪರಾಧಗಳು ಹೆಚ್ಚಿದವು. ಅಪರಾಧಗಳು ಹೆಚ್ಚಿದಂತೆ, ದೇವರ ಅನುಗ್ರಹವು ಹೆಚ್ಚುಹೆಚ್ಚು ಆಯಿತು.


“ನಾನು, ನಾನೇ ಸರ್ವೇಶ್ವರ, ನನ್ನ ಹೊರತು ಇಲ್ಲ ಬೇರೆ ಉದ್ಧಾರಕ.


ನಿನ್ನ ನಾಮದ ನಿಮಿತ್ತ ನನ್ನನು ಈಕ್ಷಿಸು I ಎನ್ನ ಘೋರ ಪಾಪವನು ಪ್ರಭು ಕ್ಷಮಿಸು II


ನನ್ನ ಪಾಪದೋಷಕೆ ವಿಮುಖನಾಗು I ಸರ್ವದ್ರೋಹಗಳನು ಅಳಿಸಿಹಾಕು II


ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಸಿಗದು. ಜುದೇಯದ ಪಾಪವನ್ನು ತಡಕಿದರೂ ಸಿಗದು. ಏಕೆಂದರೆ ನಾನು ಉಳಿಸಿದ ಜನಶೇಷವನ್ನು ಕ್ಷಮಿಸಿಬಿಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ.”


“ಆದಕಾರಣ - ನೀನು ಇಸ್ರಯೇಲ್ ವಂಶದವರಿಗೆ ಹೀಗೆ ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಸ್ರಯೇಲ್ ವಂಶದವರೇ, ನಿಮ್ಮ ನಿಮಿತ್ತವಲ್ಲ, ನೀವು ಜನಾಂಗಗಳೊಳಗೆ ಸೇರಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧ ನಾಮದ ನಿಮಿತ್ತವೆ, ಈ ರಕ್ಷಣಾಕಾರ್ಯವನ್ನು ಮಾಡುತ್ತೇನೆ.


ಆದರೂ ಯಾವ ಜನಾಂಗಗಳ ಮುಂದೆ ಅವರನ್ನು ಪಾರುಮಾಡಿದೆನೋ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಬರಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆ.


ಆದರೂ, ‘ನಿಮ್ಮನ್ನು ಈಜಿಪ್ಟಿನಿಂದ ಪಾರುಮಾಡುವೆನು,’ ಎಂಬುದಾಗಿ ಜನಾಂಗಗಳ ಮುಂದೆಯೇ ನನ್ನನ್ನು ಇವರಿಗೆ ಪ್ರಕಟಿಸಿಕೊಂಡೆನಲ್ಲಾ ಎಂದು ಯೋಚಿಸಿ ಅವರ ಸುತ್ತಮುತ್ತಲಿನ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗದಂತೆ ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆ.


ನನಗಾಗಿಯೂ ನನ್ನ ದಾಸ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು - ಎಂದಿದ್ದಾರೆ,” ಎಂದು ಹೇಳಿದನು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನಾನು ಈ ರಕ್ಷಣಾಕಾರ್ಯವನ್ನು ಮಾಡುವುದು ನಿಮ್ಮ ನಿಮಿತ್ತವಲ್ಲವೆಂಬುದು ನಿಮಗೆ ತಿಳಿದಿರಲಿ; ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳಿಗಾಗಿ ಲಜ್ಜೆಗೊಳ್ಳಿರಿ, ನಾಚಿಕೆಪಡಿರಿ.


ಆದರೂ ನಾನು ಯಾವ ಜನಾಂಗಗಳ ಮುಂದೆ ಅವರನ್ನು ಬಿಡುಗಡೆ ಮಾಡಿದೆನೋ, ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡು, ಕೈಯನ್ನು ಹಿಂದಕ್ಕೆ ತೆಗೆದುಕೊಂಡೆ.


ತಮ್ಮ ಪ್ರೀತಿಯ ಪುತ್ರನಲ್ಲೇ ಅವರು ನಮಗೆ ಉಚಿತವಾಗಿ ಅನುಗ್ರಹಿಸಿರುವ ಅತಿಶಯ ವರಪ್ರಸಾದಕ್ಕಾಗಿ ಅವರಿಗೆ ಸ್ತುತಿಸಲ್ಲಿಸೋಣ.


ಇದನ್ನು ಕೇಳಿದ ಧರ್ಮಶಾಸ್ತ್ರಿಗಳೂ ಫರಿಸಾಯರೂ, “ದೇವದೂಷಣೆ ಆಡುತ್ತಿರುವ ಇವನಾರು? ದೇವರೊಬ್ಬರನ್ನು ಬಿಟ್ಟರೆ ಪಾಪಗಳನ್ನು ಕ್ಷಮಿಸಿ ಪರಿಹರಿಸಲು ಬೇರೆ ಯಾರಿಂದ ಸಾಧ್ಯ?” ಎಂದು ತಮ್ಮಲ್ಲೇ ಹೇಳಿಕೊಳ್ಳಲು ಆರಂಭಿಸಿದರು.


ನಿಮ್ಮ ದಾಸನಾದ ನಾನಾಗಲಿ, ನಿಮ್ಮ ಪ್ರಜೆಗಳಾದ ಇಸ್ರಯೇಲರಾಗಲಿ, ಈ ಸ್ಥಳದ ಕಡೆಗೆ ತಿರುಗಿಕೊಂಡು ನಿಮ್ಮನ್ನು ಪ್ರಾರ್ಥಿಸುವಾಗ ನಿಮ್ಮ ನಿವಾಸವಾಗಿರುವ ಪರಲೋಕದಿಂದ ನಮ್ಮ ಬಿನ್ನಹಗಳನ್ನು ಕೇಳಿ, ಕ್ಷಮೆಯನ್ನು ಅನುಗ್ರಹಿಸಿರಿ.


ಪಡುವಣದಿಂದ ಮೂಡಣವೆಷ್ಟೋ ದೂರ I ದೂಡಿದನಾತ ನಮ್ಮ ಪಾಪಗಳನು ಅಷ್ಟು ದೂರ II


ಇದನ್ನು ಮಾಡುವೆ ನನಗೋಸ್ಕರವೆ ಇದನ್ನು ಮಾಡುವೆ ಕಳಂಕಬಾರದಂತೆ ನನ್ನ ಹೆಸರಿಗೆ ಸಲ್ಲಗೊಡಿಸೆನು ನನ್ನ ಮಹಿಮೆಯನು ಮತ್ತೊಬ್ಬನಿಗೆ.”


ಬಿಟ್ಟುಬಿಡಲಿ ದುಷ್ಟನು ತನ್ನ ದುರ್ಮಾರ್ಗವನು ತೊರೆದುಬಿಡಲಿ ದುರುಳನು ದುರಾಲೋಚನೆಗಳನು. ಹಿಂದಿರುಗಿ ಬರಲಿ ಸರ್ವೇಶ್ವರನ ಬಳಿಗೆ ಕರುಣೆ ತೋರುವನು ಆತನು ಅವನಿಗೆ. ಆಶ್ರಯಪಡೆಯಲಿ ಅವನು ನಮ್ಮ ದೇವರಿಂದ ಕ್ಷಮಿಸುವನಾತನು ಮಹಾಕೃಪೆಯಿಂದ.


ಸ್ವಾಮಿ, ನಮ್ಮ ಮೇಲೆ ಅತಿಕೋಪಗೊಳ್ಳದಿರಿ. ಸದಾ ನಮ್ಮ ಅಕ್ರಮಗಳನ್ನು ನೆನೆಸದಿರಿ, ಇಗೋ ನೋಡಿ, ಬೇಡುತ್ತಿದ್ದೇವೆ, ನಾವೆಲ್ಲರೂ ನಿಮ್ಮ ಜನರು.


ಅವನು ಮಾಡಿದ ಯಾವ ಅಪರಾಧವೂ ಅವನ ಲೆಕ್ಕಕ್ಕೆ ಸೇರದು. ಅವನು ಮಾಡುತ್ತಿರುವ ಸದ್ಧರ್ಮದಿಂದಲೇ ಅವನು ಜೀವಿಸುವನು.


ಅವನು ಮಾಡಿದ ಯಾವ ಪಾಪವೂ ಅವನ ಲೆಕ್ಕಕ್ಕೆ ಸೇರದು; ನ್ಯಾಯನೀತಿಗಳನ್ನು ನಡೆಸುತ್ತಿರುವುದರಿಂದ ಅವನು ಬಾಳೇ ಬಾಳುವನು.


ಒಪ್ಪಿಕೊಂಡೆನಿದೋ, ನಾನೇ ಅಪರಾಧಿ I ಕಟ್ಟಿದಂತಿದೆ ಕಣ್ಗೆ ಪಾಪ ದಿನವಿಡಿ II


ಹೌದು ದೇವಾ, ನಿನಗೆ ದ್ರೋಹವೆಸಗಿದೆ I ನಿನ್ನ ಕಣ್ಗೆ ಕೆಟ್ಟದುದನೆ ಮಾಡಿದೆ II ನಿನ್ನ ನಿರ್ಣಯವು ನ್ಯಾಯಯುತ I ನೀ ನೀಡುವ ತೀರ್ಪು ನಿರ್ಲಿಪ್ತ II


ಮನ್ನಿಸುವನಾತ ನನ್ನ ದೋಷಗಳನು I ವಾಸಿಮಾಡುವನು ನನ್ನ ರೋಗಗಳನು II


ಆದರೂ ಸ್ವಾಮಿ ಸರ್ವೇಶ್ವರಾ, ನೀವು ನಮ್ಮ ತಂದೇ. ನಾವು ಜೇಡಿಮಣ್ಣು, ನೀವೇ ಕುಂಬಾರ; ನಾವೆಲ್ಲರು ನಿಮ್ಮ ಕೈಯ ಕೃತಿಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು