Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 43:3 - ಕನ್ನಡ ಸತ್ಯವೇದವು C.L. Bible (BSI)

3 ನಿನ್ನ ದೇವರಾದ ಸರ್ವೇಶ್ವರ ನಾನು, ಇಸ್ರಯೇಲರ ಪರಮಪಾವನ ಸ್ವಾಮಿ, ನಿನ್ನ ರಕ್ಷಕ ನಾನು. ಈಡುಮಾಡಿದ್ದೇನೆ ಈಜಿಪ್ಟನ್ನು ನಿನ್ನ ವಿಮೋಚನೆಗಾಗಿ ಕೊಟ್ಟಿದ್ದೇನೆ ಸುಡಾನ್ ಸೆಬಾ ನಾಡುಗಳನ್ನು ನಿನಗೆ ಈಡಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಏಕೆಂದರೆ ಯೆಹೋವನೆಂಬ ನಾನು ನಿನ್ನ ದೇವರು, ಇಸ್ರಾಯೇಲರ ಸದಮಲಸ್ವಾಮಿಯಾದ ನಾನು ನಿನ್ನ ರಕ್ಷಕನು. ಐಗುಪ್ತವನ್ನು ನಿನ್ನ ವಿಮೋಚನೆಗೆ ಈಡುಮಾಡಿದ್ದೇನೆ. ನಿನ್ನ ಬದಲಾಗಿ ಕೂಷ್ ಮತ್ತು ಸೆಬಾ ಸೀಮೆಗಳನ್ನು ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನೆಂಬ ನಾನು ನಿನ್ನ ದೇವರಾಗಿದ್ದೇನಷ್ಟೆ, ಇಸ್ರಾಯೇಲ್ಯರ ಸದಮಲಸ್ವಾವಿುಯಾದ ನಾನು ನಿನ್ನ ರಕ್ಷಕನು. ಐಗುಪ್ತವನ್ನು ನಿನ್ನ ವಿಮೋಚನೆಗೆ ಈಡುಮಾಡಿದ್ದೇನೆ; ನಿನಗೆ ಬದಲಾಗಿ ಕೂಷ್ ಮತ್ತು ಸೆಬಾ ಸೀಮೆಗಳನ್ನು ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯಾಕೆಂದರೆ ಯೆಹೋವನಾದ ನಾನೇ ನಿನ್ನ ದೇವರು. ಇಸ್ರೇಲಿನ ಪರಿಶುದ್ಧನಾದ ನಾನೇ ನಿನ್ನ ರಕ್ಷಕನು. ಈಜಿಪ್ಟನ್ನು ನಿನ್ನ ವಿಮೋಚನೆಗೆ ಈಡುಮಾಡಿದ್ದೇನೆ; ನಿನ್ನನ್ನು ನನ್ನವನನ್ನಾಗಿ ಮಾಡಿಕೊಳ್ಳಲು ನಿನಗೆ ಕೂಷ್ ಮತ್ತು ಸೆಬಾ ಸೀಮೆಗಳನ್ನು ಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಏಕೆಂದರೆ ನಾನೇ ನಿನ್ನ ಯೆಹೋವ ದೇವರೂ ನಿನ್ನ ದೇವರಾದ ಇಸ್ರಾಯೇಲಿನ ಪರಿಶುದ್ಧನೂ, ನಿನ್ನ ರಕ್ಷಕನೂ ಆಗಿದ್ದೇನೆ. ಈಜಿಪ್ಟನ್ನು ನಿನ್ನ ವಿಮೋಚನೆಗೂ, ಇಥಿಯೋಪಿಯ ಮತ್ತು ಸೆಬಾ ಸೀಮೆಗಳನ್ನು ನಿನಗೋಸ್ಕರ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 43:3
29 ತಿಳಿವುಗಳ ಹೋಲಿಕೆ  

ಮೊಲೆಯೂಡಿಸುವರು ಜನಾಧಿಪತಿಗಳು ನಿನಗೆ ಮೊಲೆಗೂಸಾಗುವೆ ನೀನು ಜನಾಂಗಗಳಿಗೆ. ಆಗ ತಿಳಿಯುವೆ ನಿನ್ನನುದ್ಧರಿಸಿದ ಸರ್ವೇಶ್ವರ ನಾನೆಂದು ನಿನ್ನ ವಿಮೋಚಕನು, ಯಕೋಬ್ಯರ ಪರಾಕ್ರಮಿಯು ನಾನೆಂದು.


ಇಸ್ರಯೇಲರ ದೇವರೇ, ಉದ್ಧಾರಕನೇ, ನಿಶ್ಚಯವಾಗಿ ದೇವರಾದ ನೀನು ಮರೆಯಾಗಿರುವೆ.


“ನಾನೇ ನಿನ್ನ ದೇವರಾದ ಸರ್ವೇಶ್ವರ; ಗುಲಾಮತನದಲ್ಲಿದ್ದ ನಿನ್ನನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದವನು.


ಮಾಡುವೆನು ನಿನ್ನ ಹಿಂಸಕರು ಸ್ವಮಾಂಸವನ್ನು ತಿನ್ನುವಂತೆ ಅಮಲೇರುವರು ಸ್ವಂತ ರಕ್ತವನ್ನು ಕುಡಿದು ದ್ರಾಕ್ಷಾರಸದಂತೆ. ಅರಿವರು ನರಮಾನವರೆಲ್ಲರು ಇಂತು : ನಾನೇ ಸರ್ವೇಶ್ವರ, ನಿನ್ನ ರಕ್ಷಕ, ನಿನ್ನ ನಿನ್ನ ವಿಮೋಚಕನೆಂದು; ನಾನೇ ಯಕೋಬ ವಂಶದ ಬಲಾಢ್ಯ ದೇವನೆಂದು.


ದುರ್ಜನರು ಸಜ್ಜನರಿಗೆ ದ್ರೋಹಿಗಳು; ನೀತಿವಂತರಿಗೆ ಮಾಡಲಾಶಿಸುವ ಕೇಡಿಗೆ ತಾವೇ ಈಡಾಗುವರು.


ಹೇಳಿ, ನ್ಯಾಯಸ್ಥಾನಕ್ಕೆ ಬಂದು ನಿಮ್ಮ ವಾದವನ್ನು ಮಂಡಿಸಿ; ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಪರ್ಯಾಲೋಚಿಸಿ ನೋಡಲಿ. ಪ್ರಾರಂಭದಿಂದಲೂ ಈ ವಿಷಯವನ್ನು ಪ್ರಕಟಿಸಿದವರು ಯಾರು? ಅದು ನಡೆಯುವುದಕ್ಕೆ ಮುಂಚೆಯೇ ತಿಳಿಸಿದವನು ನಾನಲ್ಲದೆ ಇನ್ಯಾರು? ನನ್ನ ಹೊರತು ಇನ್ನು ಯಾವ ದೇವರೂ ಇಲ್ಲ; ನಾನಲ್ಲದೆ ಸತ್ಯಸ್ವರೂಪನು, ಉದ್ಧಾರಕನು ಆದ ದೇವನಿಲ್ಲವೇ ಇಲ್ಲ.


ನಮ್ಮ ಉದ್ಧಾರಕರಾದ ಏಕೈಕ ದೇವರಿಗೆ ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ಮಹಿಮೆ, ಮಹತ್ವ, ಅಧಿಪತ್ಯ, ಅಧಿಕಾರ ಆದಿಯಲ್ಲಿ ಇದ್ದ ಹಾಗೆ ಈಗಲೂ ಯಾವಾಗಲೂ ಸಲ್ಲಲಿ! ಆಮೆನ್.


ಸರ್ವೇಶ್ವರ ಇಂತೆನ್ನುತ್ತಾರೆ: “ಈಜಿಪ್ಟಿನಿಂದ ನಿನ್ನನ್ನು ಬಿಡಿಸಿಕೊಂಡು ಬಂದಾಗಲಿಂದ ನಾನೇ ನಿನ್ನ ಸರ್ವೇಶ್ವರನಾದ ದೇವರು. ನಾನಲ್ಲದೆ ಬೇರೆ ದೇವರುಗಳು ನಿನಗಿಲ್ಲ. ನಾನಲ್ಲದೆ ನಿನಗೆ ಬೇರೆ ಉದ್ಧಾರಕರಿಲ್ಲ.


ನಮಗೆ ಅಡ್ಡ ಬರಬೇಡಿ. ನಮ್ಮ ದಾರಿಯಿಂದ ದೂರವಿರಿ. ಇಸ್ರಯೇಲರ ಪರಮಪಾವನ ಸ್ವಾಮಿಯ ವಿಷಯವನ್ನು ನಮ್ಮ ಮುಂದೆ ಎತ್ತಬೇಡಿ,” ಎಂದು ಹೇಳುತ್ತಾರೆ.


ಸಜ್ಜನನು ಇಕ್ಕಟ್ಟಿನಿಂದ ಪಾರಾಗುವನು; ದುರ್ಜನನು ಅದರೊಳಗೆ ಸಿಕ್ಕಿಬೀಳುವನು.


ಸರ್ವೇಶ್ವರ ಇಂತೆನ್ನುತ್ತಾರೆ : “ಹುಳುವಿನಂತಿರುವ ಯಕೋಬೇ, ಇಸ್ರಯೇಲಿನ ಜನತೆಯೇ, ಭಯಪಡಬೇಡ, ನಾನೇ ನಿನಗೆ ಸಹಾಯಕ ಇಸ್ರಯೇಲಿನ ಪರಮಪಾವನ ಸ್ವಾಮಿಯೇ ನಿನಗೆ ವಿಮೋಚಕ.


ಆಗ ಸರ್ವೇಶ್ವರ : “ನನ್ನ ದಾಸ ಯೆಶಾಯನು ಈಜಿಪ್ಟಿನ ಮತ್ತು ಸುಡಾನಿನ ವಿನಾಶಕ್ಕೆ ಸೋಜಿಗದ ಗುರುತಾಗಿ ಮೂರು ವರ್ಷ ಬಟ್ಟೆಯಿಲ್ಲದೆ ಬರಿಗಾಲಿನಲ್ಲಿ ತಿರುಗಾಡಿದನು.


ಆಗ ಪರಿವಾರದವರು ಫರೋಹನಿಗೆ, “ಈ ಮನುಷ್ಯ ಇನ್ನೆಷ್ಟುಕಾಲ ನಮಗೆ ಉರುಳಾಗಿರುವನೋ! ಆ ಜನರು ಹೋಗಿ ತಮ್ಮ ದೇವರಾದ ಸರ್ವೇಶ್ವರನನ್ನು ಆರಾಧಿಸಲು ಅಪ್ಪಣೆಕೊಟ್ಟುಬಿಡಿ. ಈಜಿಪ್ಟ್ ದೇಶವೇ ಹಾಳಾಗುತ್ತಿದೆಯೆಂದು ತಮ್ಮ ಮನಸ್ಸಿಗೆ ತೋಚಿರಬೇಕಲ್ಲವೆ?” ಎಂದು ಹೇಳಿದರು.


ಕೂಷನ ಮಕ್ಕಳು - ಸೆಬಾ, ಹವೀಲ, ಸಬ್ತಾ, ರಗ್ಮ, ಸಬ್ತಕಾ ಎಂಬ ಜನಾಂಗಗಳು. ರಗ್ಮ ಸಂತಾನದವರು -‍ ಶೆಬಾ, ದೆದಾನ್ ಎಂಬ ಜನಾಂಗಗಳು.


ಏಕೆಂದರೆ ನಾನು ನಿಮ್ಮ ದೇವರಾದ ಸರ್ವೇಶ್ವರ; ನೀವು ದೇವಜನರಿಗೆ ತಕ್ಕಂತಿರಬೇಕು. ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು. ನೆಲದ ಮೇಲೆ ಹರಿದಾಡುವ ಯಾವ ಜಂತುವಿನಿಂದಾದರೂ ನೀವು ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು.


ಕಪ್ಪಗಳನರ್ಪಿಸಲಿ ತಾರ್ಷಿಷ್ ಹಾಗೂ ದ್ವೀಪದ್ವೀಪದ ರಾಜರುಗಳು I ಕಾಣಿಕೆಗಳ ತಂದೊಪ್ಪಿಸಲಿ ಶೆಬಾ ಹಾಗೂ ಸೆಬಾದ ರಾಜರುಗಳು II


ಇವು ಈಜಿಪ್ಟ್ ದೇಶಕ್ಕೆ ಸರ್ವೇಶ್ವರ ಸ್ವಾಮಿಯ ಸಂಕೇತವಾಗಿಯೂ ಸಾಕ್ಷಿಯಾಗಿಯೂ ಇರುವುವು. ಅವರು ತಮ್ಮನ್ನು ಬಾಧಿಸುವವರ ವಿರುದ್ಧ ಸರ್ವೇಶ್ವರ ಸ್ವಾಮಿಗೆ ಮೊರೆಯಿಟ್ಟಾಗ, ಸ್ವಾಮಿಯು ವೀರನಾದ ರಕ್ಷಕನೊಬ್ಬನನ್ನು ಕಳುಹಿಸುವರು. ಆತನು ಆ ಜನರನ್ನು ಬಿಡುಗಡೆಮಾಡಿ ಉದ್ಧರಿಸುವನು.


ನಾನೇ ಸರ್ವೇಶ್ವರ, ನನ್ನ ನಾಮವು ಅದುವೆ. ಸಲ್ಲಿಸೆನು ನನ್ನ ಮಹಿಮೆಯನ್ನು ಮತ್ತೊಬ್ಬರಿಗೆ ನನ್ನ ಸ್ತೋತ್ರವನು ವಿಗ್ರಹಗಳ ಪಾಲಿಗೆ.


“ನಾನು, ನಾನೇ ಸರ್ವೇಶ್ವರ, ನನ್ನ ಹೊರತು ಇಲ್ಲ ಬೇರೆ ಉದ್ಧಾರಕ.


ಕೇಳಿರಿ ಸರ್ವೇಶ್ವರನ ಈ ಮಾತನ್ನು : “ನಿಮ್ಮದಾಗುವುದು ಈಜಿಪ್ಟಿನ ಸಿರಿಯು, ಸುಡಾನಿನ ಸಂಪದವು. ನಿಮ್ಮನ್ನು ಸೇರಿ ನಿಮಗಧೀನರಾಗುವರು ಎತ್ತರದ ಸೆಬಾಯರು. ಬೇಡಿತೊಟ್ಟು ಅಡ್ಡಬೀಳುವರು ನಿಮ್ಮ ಮುಂದೆ ಅರಿಕೆಮಾಡಿಕೊಳ್ಳುವರು ಹೀಗೆಂದೆ : ‘ನಿಶ್ಚಯವಾಗಿ ನಿಮ್ಮಲ್ಲಿಹರು ದೇವರು ಅವರಲ್ಲದೆ ದೇವರಿಲ್ಲ ಬೇರೆಯಾರು.’


“ನಿಜವಾಗಿ ಇವರು ನನ್ನ ಜನ, ನನ್ನ ಮಕ್ಕಳು, ನನಗೆ ಮೋಸಮಾಡರು,” ಎಂದುಕೊಂಡರು ಸರ್ವೇಶ್ವರ ಸ್ವಾಮಿ.


ಸರ್ವೇಶ್ವರಾ, ಇಸ್ರಯೇಲರಿಗೆ ನೀವೇ ನಿರೀಕ್ಷೆ ಇಕ್ಕಟ್ಟಿನಲ್ಲಿ ಅವರಿಗೆ ನೀವೇ ರಕ್ಷೆ. ನಾಡಿನಲ್ಲಿ ಅನ್ಯದೇಶೀಯನಂತಿರುವಿರಿ, ಏಕೆ? ರಾತ್ರಿ ಕಳೆಯಲು ಗುಡಾರಹಾಕಿದ ಪ್ರಯಾಣಿಕನಂತಿರುವಿರಿ, ಏಕೆ?


ಸರ್ವೇಶ್ವರ : “ಆದುದರಿಂದ ಇಗೋ, ಇಂದೊಮ್ಮೆ ನನ್ನ ಭುಜಬಲವನ್ನೂ ಪರಾಕ್ರಮವನ್ನೂ ಅವರಿಗೆ ತಿಳಿಯಪಡಿಸುವೆನು. ಚೆನ್ನಾಗಿ ಗ್ರಹಿಸುವಂತೆ ಮಾಡುವೆನು. ನನ್ನ ನಾಮಧೇಯ ಸರ್ವೇಶ್ವರ ಎಂದೇ ಅವರು ಗುರುತು ಹಚ್ಚುವರು.”


ನಾನು ನನ್ನ ಪವಿತ್ರನಾಮವನ್ನು ನನ್ನ ಜನರಾದ ಇಸ್ರಯೇಲರ ನಡುವೆ ವ್ಯಕ್ತಗೊಳಿಸುವೆನು, ಅದನ್ನು ಇನ್ನು ಮುಂದೆ ಅಪಕೀರ್ತಿಗೆ ಗುರಿಯಾಗಲುಬಿಡೆನು; ನಾನೇ ಸರ್ವೇಶ್ವರ, ಇಸ್ರಯೇಲಿನ ಪರಮಪಾವನಸ್ವಾಮಿ ಎಂದು ಜನಾಂಗಗಳಿಗೆ ಗೊತ್ತಾಗುವುದು.”


“ಇಸ್ರಯೇಲಿನ ಜನರೇ, ನನ್ನ ದೃಷ್ಟಿಯಲ್ಲಿ ನೀವಾಗಲಿ ಎಥಿಯೋಪಿಯದವರಾಗಲೀ, ಒಂದೇ ಅಲ್ಲವೆ? ನಾನು ನಿಮ್ಮನ್ನು ಈಜಿಪ್ಟಿನಿಂದ ಕರೆತಂದಂತೆ ಫಿಲಿಷ್ಟಿಯರನ್ನು ಕಫ್ತೋರಿನಿಂದಲೂ, ಅರಾಮ್ಯರನ್ನು ಕೀರ್ ನಾಡಿನಿಂದಲೂ ಕರೆತರಲಿಲ್ಲವೆ?


ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು