Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 43:5 - ಕನ್ನಡ ಸತ್ಯವೇದವು C.L. Bible (BSI)

5 ಭಯಪಡಬೇಡ, ನಾನಿರುವೆ ನಿನ್ನ ಸಂಗಡ ಕರೆತರುವೆ ನಿನ್ನ ಸಂತತಿಯನ್ನು ಮೂಡಣದಿಂದ ಒಟ್ಟುಗೂಡಿಸುವೆ ನಿನ್ನವರನ್ನು ಪಡುವಣದಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಭಯಪಡಬೇಡ, ನಾನು ನಿನ್ನ ಸಂಗಡ ಇದ್ದೇನೆ; ನಿನ್ನ ಸಂತತಿಯವರನ್ನು ಪೂರ್ವದಿಂದ ತರುವೆನು, ನಿನ್ನವರನ್ನು ಪಶ್ಚಿಮದಿಂದ ಕೂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಭಯಪಡಬೇಡ, ನಾನು ನಿನ್ನ ಸಂಗಡ ಇದ್ದೇನೆ; ನಿನ್ನ ಸಂತತಿಯವರನ್ನು ಮೂಡಲಿಂದ ತರುವೆನು; ನಿನ್ನವರನ್ನು ಪಡುವಲಿಂದ ಕೂಡಿಸುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಆದ್ದರಿಂದ ಭಯಪಡಬೇಡ, ನಾನೇ ನಿನ್ನೊಂದಿಗಿದ್ದೇನೆ. ನಾನು ನಿನ್ನ ಮಕ್ಕಳನ್ನು ಒಟ್ಟುಗೂಡಿಸಿ ನಿನ್ನ ಬಳಿಗೆ ಕರೆತರುವೆನು. ನಾನು ಪೂರ್ವಪಶ್ಚಿಮ ದಿಕ್ಕುಗಳಿಂದ ಅವರನ್ನು ಒಟ್ಟುಗೂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಭಯಪಡಬೇಡ, ಏಕೆಂದರೆ ನಾನೇ ನಿನ್ನೊಂದಿಗೆ ಇದ್ದೇನೆ. ನಿನ್ನ ಸಂತತಿಯವರನ್ನು ಪೂರ್ವದಿಂದ ತರುವೆನು. ಪಶ್ಚಿಮದಿಂದ ನಿನ್ನನ್ನು ಕೂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 43:5
41 ತಿಳಿವುಗಳ ಹೋಲಿಕೆ  

ಆಗ, ನಿಮ್ಮ ದೇವರಾದ ಸರ್ವೇಶ್ವರ ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ, ನಿಮ್ಮನ್ನು ಕನಿಕರಿಸಿ, ನಿಮ್ಮನ್ನು ಚದುರಿಸಿದ ಎಲ್ಲ ದೇಶಗಳಿಂದ ಮತ್ತೆ ಕೂಡಿಸುವರು.


ಚತುರ್ದಿಕ್ಕುಗಳಿಂದಲೂ ಜನರು ಬಂದು, ದೇವರ ಸಾಮ್ರಾಜ್ಯದ ಹಬ್ಬದೂಟದಲ್ಲಿ ಭಾಗಿಗಳಾಗುವರು.


ನೋಡಿ, ಬರುತಿಹರು ನನ್ನ ಜನರು ದೂರದಿಂದ ಹೌದು, ಬರುತಿಹರು ಉತ್ತರ ಪಶ್ಚಿಮದಿಂದ ದಕ್ಷಿಣದ ಆ ಅಶ್ವಾನ್ ನಾಡಿನಿಂದ.


ನಿನ್ನನ್ನು ಸೃಷ್ಟಿಸಿದ ಸರ್ವೇಶ್ವರ ನಾನೆ ತಾಯ ಗರ್ಭದಿಂದ ನಿನ್ನನ್ನು ರೂಪಿಸಿದವನು ನಾನೆ ಅಂದಿನಿಂದ ನಿನಗೆ ನೆರವಾಗುತ್ತಾ ಬಂದವನು ನಾನೆ. ಭಯಪಡಬೇಡ, ನನ್ನ ದಾಸ ಯಕೋಬನೇ, ಅಂಜಬೇಡ, ನಾನು ಆರಿಸಿಕೊಂಡ ಯೆಶುರೂನೇ.


ನಾನೇ ಇರುವೆ ನಿನ್ನ ಸಂಗಡ ನೀ ಜಲರಾಶಿಯನ್ನು ದಾಟುವಾಗ ಮುಳುಗಿಸದು ನದಿ ನೀ ಅದನ್ನು ಹಾದುಹೋಗುವಾಗ ಸುಡದು ಬೆಂಕಿ, ದಹಿಸದು ಜ್ವಾಲೆ, ಅದರ ಮಧ್ಯೆ ನೀ ನಡೆಯುವಾಗ.


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ಇಗೋ, ನಾನು ನನ್ನ ಜನರನ್ನು ಪೂರ್ವಪಶ್ಚಿಮ ನಾಡುಗಳಿಂದ ಬಿಡುಗಡೆಮಾಡಿ, ಇಲ್ಲಿಗೆ ಬರಮಾಡುವೆನು.


ಸರ್ವೇಶ್ವರ ಇಂತೆನ್ನುತ್ತಾರೆ : “ಹುಳುವಿನಂತಿರುವ ಯಕೋಬೇ, ಇಸ್ರಯೇಲಿನ ಜನತೆಯೇ, ಭಯಪಡಬೇಡ, ನಾನೇ ನಿನಗೆ ಸಹಾಯಕ ಇಸ್ರಯೇಲಿನ ಪರಮಪಾವನ ಸ್ವಾಮಿಯೇ ನಿನಗೆ ವಿಮೋಚಕ.


ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ.


ಇಂತಿರಲು ನನ್ನ ದಾಸನಾದ ಇಸ್ರಯೇಲೇ, ನಾನು ಆಯ್ದುಕೊಂಡ ಯಕೋಬೇ, ನನ್ನ ಗೆಳೆಯ ಅಬ್ರಹಾಮನ ಸಂತತಿಯೇ,


ಹೇ ಪ್ರಭು, ನಮ್ಮ ದೇವಾ, ನಮ್ಮನ್ನುದ್ಧರಿಸು I ನಾಡುನಾಡುಗಳಿಂದ ನಮ್ಮನೊಂದುಗೂಡಿಸು I ನಿನ್ನ ಪವಿತ್ರ ನಾಮವನು ನಾವು ಭಜಿಸುವೆವು I ನಿನ್ನ ಸ್ತುತಿ ಸ್ತೋತ್ರಗಳಲಿ ಹೆಚ್ಚಳ ಪಡುವೆವು II


ಈ ಮಂದೆಗೆ ಸೇರದ ಬೇರೆ ಕುರಿಗಳೂ ನನಗಿವೆ. ಅವನ್ನೂ ನಾನು ಕರೆತರಬೇಕು. ಅವು ಸಹ ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಕುರಿಹಿಂಡು ಆಗುವುದು. ಒಬ್ಬನೇ ಕುರಿಗಾಹಿ ಇರುವನು.


“ಯಕೋಬ ವಂಶಜರೇ, ನಾನು ನಿಮ್ಮನ್ನೆಲ್ಲಾ ಖಂಡಿತವಾಗಿ ಒಟ್ಟುಗೂಡಿಸುವೆನು. ಇಸ್ರಯೇಲಿನ ಅಳಿದುಳಿದ ಜನರನ್ನು ಸೇರಿಸಿಯೇ ಸೇರಿಸುವೆನು. ಹಟ್ಟಿಯಲ್ಲಿರುವ ಕುರಿಗಳಂತೆ ಅವರನ್ನು ಒಟ್ಟಿಗೆ ಸೇರಿಸುವೆನು. ಹುಲ್ಲುಗಾವಲಿನಲ್ಲಿರುವ ಕುರಿಮಂದೆಯಂತೆ ಒಂದುಗೂಡಿಸುವೆನು,” ಎನ್ನುತ್ತಾರೆ.


ಅಂತೆಯೇ ವಂದಿಸಲಿ ಬಂದವರು ಚತುರ್ದಿಕ್ಕುಗಳಿಂದ I ಒಂದಾಗಿ ಕೂಡಿಸಲ್ಪಟ್ಟವರೆಲ್ಲರು ನಾನಾ ದೇಶಗಳಿಂದ II


ವ್ಯರ್ಥವಾಗುವುದು ನೀವು ಮಾಡಿದ ಸಮಾಲೋಚನೆ; ಕೈಗೂಡದು ನೀವು ಮಾಡಿದ ಪ್ರತಿಜ್ಞೆ; ಕಾರಣ, ದೇವನಿರುವನು ನಮ್ಮೊಡನೆ.”


ಬರಮಾಡಿದೆ ನಾನು ನಿನ್ನನ್ನು ಭೂಮಿಯ ಕಟ್ಟಕಡೆಯಿಂದ ಕರೆದುತಂದೆ ನಿನ್ನನ್ನು ದಿಗಂತದಿಂದ. ನಿನಗೆ ನಾನು ಇಂತೆಂದೆ : ನೀನೆನ್ನ ದಾಸ, ನಿನ್ನ ನಾ ತಿರಸ್ಕರಿಸದೆ ಆರಿಸಿಕೊಂಡೆ !


ಈಗಲಾದರೋ ಯಕೋಬ ವಂಶವೇ, ಇಸ್ರಯೇಲ್ ಸಂತಾನವೇ ಕೇಳು : ನಿನ್ನನ್ನು ಸೃಷ್ಟಿಸಿದ, ರೂಪಿಸಿದ ಸರ್ವೇಶ್ವರನ ನುಡಿಯನ್ನು ಕೇಳು; “ಭಯಪಡಬೇಡ, ನಿನ್ನನ್ನು ರಕ್ಷಿಸಿದಾತ ನಾನಲ್ಲವೆ? ನಿನ್ನನ್ನು ಹೆಸರು ಹಿಡಿದು ಕರೆದಾತ ನಾನಲ್ಲವೆ? ನೀನು ನನ್ನವನೇ ಅಲ್ಲವೆ?


ಕಣ್ಣೆತ್ತಿ ಸುತ್ತಮುತ್ತಲು ನೋಡು : ಬರುತಿಹರು ನಿನ್ನ ಬಳಿಗೆ ಅವರೆಲ್ಲರು ಕೂಡಿಕೊಂಡು. ನನ್ನ ಜೀವದಾಣೆ ನಿನಗೆ ಹೇಳುವುದೇನೆಂದರೆ : ‘ವಧುವು ಒಡವೆಗಳನು ಧರಿಸಿಕೊಳ್ಳುವಂತೆ ಅವರಾಗುವರು ನಿನಗೆ ಆಭರಣಗಳಂತೆ.’


ಏಕೆಂದರೆ ಹಬ್ಬಿಕೊಳ್ಳುವೆ ನೀನು ಎಡಬಲದೊಳು ಎಲ್ಲೆಲ್ಲು, ವಶಮಾಡಿಕೊಳ್ಳುವರು ನಿನ್ನ ಸಂತಾನದವರು ಜನಾಂಗಗಳನು. ಜನಭರಿತವಾಗುವಂತೆ ಮಾಡುವರು ಪಾಳುಬಿದ್ದ ಪಟ್ಟಣಗಳನು.


“ಬಿಟ್ಟಿದ್ದೆನು ನಿನ್ನನು ಕ್ಷಣಮಾತ್ರ ಪ್ರೀತಿಯಿಂದ ಸೇರಿಸಿಕೊಳ್ಳುವೆ ಹತ್ತಿರ.


ಪ್ರಖ್ಯಾತವಾಗುವುದು ಇವರ ಸಂತಾನ ವಿಶ್ವದಲ್ಲೆಲ್ಲ ಹೆಸರುವಾಸಿಯಾಗುವುದು ಇವರ ಸಂತತಿ ಅನ್ಯರಾಷ್ಟ್ರಗಳಲ್ಲೆಲ್ಲ. ಲಭಿಸುವುದು ಸರ್ವೇಶ್ವರನ ಆಶೀರ್ವಾದ ಈ ಜನತೆಗೆ ಖಚಿತವಾಗುವುದಿದು ನೋಡುವವರೆಲ್ಲರಿಗೆ.”


ಬದಲಿಗೆ ‘ಇಸ್ರಯೇಲ್ ಮನೆತನವೆಂಬ ಸಂತಾನವನ್ನು ಉತ್ತರನಾಡಿನಿಂದಲೂ ಅವರನ್ನು ತಳ್ಳಲಾಗಿದ್ದ ಸಕಲ ಸೀಮೆಗಳಿಂದಲೂ ಬರಮಾಡಿ ಉದ್ಧರಿಸಿದ ಸರ್ವೇಶ್ವರನ ಜೀವದಾಣೆ’ ಎಂದು ಪ್ರಮಾಣ ಮಾಡುವರು. ಅವರು ಸ್ವಂತ ನಾಡಿನಲ್ಲಿ ಸುಖವಾಗಿ ಬಾಳುವರು. ಇದು ಸರ್ವೇಶ್ವರನಾದ ನನ್ನ ನುಡಿ.”


ಹೌದು, ನಾನು ನಿಮಗೆ ದೊರೆಯುವೆನು. ನಿಮ್ಮನ್ನು ನಿಮ್ಮ ದುರವಸ್ಥೆಯಿಂದ ತಪ್ಪಿಸಿ, ನಿಮ್ಮನ್ನು ಅಟ್ಟಲಾಗಿದ್ದ ಸಮಸ್ತ ದೇಶಗಳಿಂದಲೂ ಸಕಲ ರಾಷ್ಟ್ರಗಳ ಮಧ್ಯೆಯಿಂದಲೂ ಒಟ್ಟುಗೂಡಿಸಿ, ನಿಮ್ಮನ್ನು ಯಾವ ಸ್ಥಳದಿಂದ ಸೆರೆಗೆ ಸಾಗಿಸಿದೆನೋ ಅಲ್ಲಿಗೆ ಮರಳಿ ಬರಮಾಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ.’


ಬಾಬಿಲೋನಿಯದ ಅರಸನಿಗೆ ಹೆದರಬೇಡಿ, ಬೆದರಬೇಡಿ. ನಿಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಲಿಕ್ಕೆ ನಾನೇ ನಿಮ್ಮೊಂದಿಗೆ ಇರುವೆನು. ಇದು ಸರ್ವೇಶ್ವರನಾದ ನನ್ನ ನುಡಿ.


ನಿಮ್ಮ ಎದೆ ಕುಂದದಿರಲಿ. ನಾಡಿನಲ್ಲಿ ಕಿವಿಗೆ ಬೀಳುವ ಸುದ್ದಿ ನಿಮ್ಮನ್ನು ಹೆದರಿಸದಿರಲಿ. ಒಂದು ವರ್ಷ ಒಂದು ಸುದ್ದಿಯಾದರೆ ಮತ್ತೊಂದು ವರ್ಷ ಮತ್ತೊಂದು ಸುದ್ದಿ. ಹಿಂಸಾಚಾರ ಪ್ರಬಲವಾಗುತ್ತಿದೆ ನಾಡಿನಲ್ಲಿ. ಅಧಿಕಾರಿಗೆ ಅಧಿಕಾರಿಯೇ ವಿರೋಧಿ ಅಲ್ಲಿ.


ಇಂತಿರಲು, ನೀವು ಅವರನ್ನು ಮಾರಿದ ಊರುಗಳಿಂದ ದಂಗೆಯೆದ್ದು ಹೊರಬರುವಂತೆ ಅವರನ್ನು ಹುರಿದುಂಬಿಸುವೆನು. ನೀವು ಮಾಡಿದ ಕೇಡನ್ನು ನಿಮ್ಮ ತಲೆಗೇ ತರುವೆನು.


ಆ ಕಾಲದಲ್ಲಿ ಜುದೇಯ ವಂಶವು ಇಸ್ರಯೇಲ್ ವಂಶದೊಡನೆ ಜೊತೆಯಾಗಿ ಬಾಳುವುದು. ಈ ಎರಡು ವಂಶಗಳೂ ಉತ್ತರ ಪ್ರಾಂತ್ಯವನ್ನು ಬಿಟ್ಟು ನಾನು ನಿಮ್ಮ ಪೂರ್ವಜರಿಗೆ ಬಾಧ್ಯವಾಗಿ ಕೊಟ್ಟ ನಾಡಿಗೆ ಬರುವುವು.”


ಬರಲಿರುವ ಆ ಕಾಲದಲ್ಲಿ ಜನರು, ‘ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಉದ್ಧರಿಸಿದ ಸರ್ವೇಶ್ವರನ ಜೀವದಾಣೆ’ ಎಂದು ಪ್ರಮಾಣ ಮಾಡುವ ಪದ್ಧತಿಯನ್ನು ಬಿಟ್ಟುಬಿಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು