ಯೆಶಾಯ 44:12 - ಕನ್ನಡ ಸತ್ಯವೇದವು C.L. Bible (BSI)12 ಕಮ್ಮಾರನು ಮುಟ್ಟನ್ನು ತೆಗೆದುಕೊಂಡು ಕೆಂಡದಲ್ಲಿ ಕೆಲಸ ಮಾಡುತ್ತಾನೆ; ಬಲವಾದ ತೋಳಿನಿಂದ ಚಮಟಿಕೆ ಹಿಡಿದು ಬಡಿದು ವಿಗ್ರಹವನ್ನು ರೂಪಿಸುತ್ತಾನೆ; ಹಸಿದು ಬಳಲುತ್ತಾನೆ, ಬಾಯಾರಿ ಸೊರಗುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಕಮ್ಮಾರನು ತನ್ನ ಸಲಕರಣೆಗಳನ್ನು ತೆಗೆದುಕೊಂಡು ಕೆಂಡದಲ್ಲಿ ಕೆಲಸಮಾಡುತ್ತಾ, ಚಮಟಿಕೆಗಳಿಂದ ಬಡಿದು ತೋಳಿನ ಬಲದಿಂದ ವಿಗ್ರಹವನ್ನು ರೂಪಿಸುವನು. ಅವನು ಹಸಿದು ಬಳಲುವನು, ನೀರಿಲ್ಲದೆ ದಣಿಯುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಕಮ್ಮಾರನು ಮುಟ್ಟನ್ನು ತೆಗೆದುಕೊಂಡು ಕೆಂಡದಲ್ಲಿ ಕೆಲಸಮಾಡುತ್ತಾ ಚಮಟಿಕೆಗಳಿಂದ ಬಡಿದು ತೋಳಿನ ಬಲದಿಂದ ವಿಗ್ರಹವನ್ನು ರೂಪಿಸುವನು; ಅವನೂ ಹಸಿದು ಬಳಲುವನು, ನೀರಿಲ್ಲದೆ ಕಂಗೆಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಒಬ್ಬನು ಕುಲಿಮೆಯ ಬೆಂಕಿಯ ಮೇಲೆ ಕಬ್ಬಿಣವನ್ನು ಕಾಯಿಸುತ್ತಾನೆ. ಅವನು ತನ್ನ ಸುತ್ತಿಗೆಯಿಂದ ಆ ಲೋಹವನ್ನು ವಿಗ್ರಹವನ್ನಾಗಿ ಮಾಡುತ್ತಾನೆ. ಅವನು ಅದನ್ನು ತನ್ನ ತೋಳ್ಬಲದಿಂದ ಮಾಡುತ್ತಾನೆ. ಆದರೆ ಅವನು ಹಸಿದಾಗ ಅವನ ಶಕ್ತಿಯು ಕಡಿಮೆಯಾಗುತ್ತದೆ. ಆ ಮನುಷ್ಯನು ನೀರನ್ನು ಕುಡಿಯದಿದ್ದರೆ ಅವನು ಬಲಹೀನನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಕಮ್ಮಾರನು ಸಲಕರಣೆಯನ್ನು ತೆಗೆದುಕೊಂಡು ಕೆಂಡದಲ್ಲಿ ಕೆಲಸ ಮಾಡುತ್ತಾನೆ; ಅವನು ಸುತ್ತಿಗೆ ಹಿಡಿದು ತನ್ನ ತೋಳಿನ ಬಲದಿಂದ ವಿಗ್ರಹವನ್ನು ರೂಪಿಸುತ್ತಾನೆ; ಅವನು ಹಸಿದು ಬಲಹೀನನಾಗಿದ್ದರೂ, ನೀರು ಕುಡಿಯದೇ ದಣಿಯುತ್ತಾನೆ. ಅಧ್ಯಾಯವನ್ನು ನೋಡಿ |