Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 44:13 - ಕನ್ನಡ ಸತ್ಯವೇದವು C.L. Bible (BSI)

13 ಬಡಗಿಯು ಮರಕ್ಕೆ ನೂಲು ಹಿಡಿದು, ಮೊಳೆಯಿಂದ ಗೆರೆ ಎಳೆಯುತ್ತಾನೆ; ಕೈವಾರದಿಂದ ಗುರುತಿಸುತ್ತಾನೆ, ಉಳಿ ಬಾಚಿಗಳಿಂದ ಕೆತ್ತುತ್ತಾನೆ; ಸುಂದರವಾದ ನರನಂತೆ ರೂಪಿಸಿ ಮಂದಿರದಲ್ಲಿ ಇಡಲು ಯೋಗ್ಯವಾಗುವಂತೆ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಬಡಗಿಯು ಮರಕ್ಕೆ ನೂಲು ಹಾಕಿ ಮೊಳೆಯಿಂದ ಗೆರೆಯೆಳೆದು ಬಾಚಿಗಳಿಂದ ಕೆತ್ತಿ, ಕೈವಾರದಿಂದ ಗುರುತಿಸಿ, ಅದು ಮನೆಯಲ್ಲಿ ವಾಸಿಸತಕ್ಕದ್ದಾಗಲೆಂದು ಮನುಷ್ಯನ ಆಕಾರಕ್ಕೆ ತಂದು ಮನುಷ್ಯನ ಅಂದದಂತೆ ರೂಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಬಡಗಿಯು [ಮರಕ್ಕೆ] ನೂಲು ಹಾಕಿ ಮೊಳೆಯಿಂದ ಗೆರೆಯೆಳೆದು ಉಳಿಬಾಚಿಗಳಿಂದ ಕೆತ್ತಿ ಕೈವಾರದಿಂದ ಗುರುತಿಸಿ ಅದು ಮನೆಯಲ್ಲಿ ವಾಸಿಸತಕ್ಕದ್ದಾಗಲೆಂದು ಮನುಷ್ಯನ ಆಕಾರಕ್ಕೆ ತಂದು ನರನ ಅಂದದಂತೆ ರೂಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಇನ್ನೊಬ್ಬ ಕುಶಲಕರ್ಮಿಯು ತನ್ನ ನೂಲಿನಿಂದಲೂ ಅಡಿಕೋಲುಗಳಿಂದಲೂ ಮರದ ಮೇಲೆ ಗುರುತು ಮಾಡುವನು. ತಾನು ಎಲ್ಲಿ ಮರವನ್ನು ತುಂಡುಮಾಡಬೇಕೆಂದು ಇದರಿಂದ ಗೊತ್ತುಪಡಿಸಿಕೊಳ್ಳುತ್ತಾನೆ. ಅವನು ತನ್ನ ಉಳಿಗಳಿಂದ ಒಂದು ವಿಗ್ರಹವನ್ನು ಮನುಷ್ಯಾಕಾರದಲ್ಲಿ ಕೆತ್ತುತ್ತಾನೆ. ಈ ವಿಗ್ರಹವು ಬೇರೆ ಏನೂ ಮಾಡದೆ ಮನೆಯೊಳಗೆ ಇಟ್ಟ ಸ್ಥಳದಲ್ಲಿಯೇ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಬಡಗಿಯು ಮರಕ್ಕೆ ನೂಲನ್ನು ಹಿಡಿದು, ಮೊಳೆಯಿಂದ ಗೆರೆ ಎಳೆಯುತ್ತಾನೆ. ಉಳಿಬಾಚಿಗಳಿಂದ ಕೆತ್ತುತ್ತಾನೆ. ಕೈವಾರದಿಂದ ಗುರುತಿಸಿ, ಆಮೇಲೆ ಮನುಷ್ಯನ ಆಕಾರಕ್ಕೆ ತಂದು, ಮಂದಿರದಲ್ಲಿ ಇಡಲು ಮನುಷ್ಯನ ಅಂದದಂತೆ ರೂಪಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 44:13
18 ತಿಳಿವುಗಳ ಹೋಲಿಕೆ  

ಅಮರದೇವರನ್ನು ಆರಾಧಿಸುವುದನ್ನು ಬಿಟ್ಟು ಅಳಿದುಹೋಗುವಂಥ ನರಮಾನವರ, ಪ್ರಾಣಿಪಕ್ಷಿಗಳ, ಸರ್ಪಾದಿಗಳ ವಿಗ್ರಹಗಳನ್ನು ಮಾಡಿ ಆರಾಧಿಸತೊಡಗಿದರು.


“ನಾವು ದೇವರ ಮಕ್ಕಳಾಗಿರುವುದರಿಂದ ಜನರು ಕಲಾಕುಶಲತೆಯಿಂದಲೂ ಕಲ್ಪನೆಯಿಂದಲೂ ರೂಪಿಸಿದ ಚಿನ್ನ, ಬೆಳ್ಳಿ, ಶಿಲೆಗಳ ಪ್ರತಿಮೆಗೆ ದೇವರು ಸಮಾನರೆಂದು ಭಾವಿಸಲಾಗದು.


ಆಗ ದೇವರು ನನಗೆ, “ನರಪುತ್ರನೇ, ಇಸ್ರಯೇಲ್ ವಂಶದ ಹಿರಿಯರೆಲ್ಲರು ನಾನಾ ರೂಪಗಳಿಂದ ಚಿತ್ರಿತವಾದ ತಮ್ಮ ತಮ್ಮ ಕೊಠಡಿಗಳೊಳಗೆ, ಕತ್ತಲೆಯಲ್ಲಿ ನಡೆಸುವ ಕೆಲಸವನ್ನು ನೋಡಿದೆಯಾ? ‘ಸರ್ವೇಶ್ವರ ನಮ್ಮನ್ನು ನೋಡನು, ಸರ್ವೇಶ್ವರ ನಾಡನ್ನು ತೊರೆದುಬಿಟ್ಟಿದ್ದಾನೆ,’ ಎಂದು ಮಾತಾಡಿಕೊಳ್ಳುತ್ತಾರಷ್ಟೆ,” ಎಂಬುದಾಗಿ ಹೇಳಿದರು.


ಚೆನ್ನಾಗಿದೆ ಎನ್ನುತ್ತಾನೆ ಬಡಗಿ ಅಕ್ಕಸಾಲಿಗನಿಗೆ; ಪ್ರೋತ್ಸಾಹ ನೀಡುತ್ತಾನೆ ನುಣುಪು ಮಾಡುವವನು ಅಡಿಗಲ್ಲನ್ನು ತಟ್ಟುವವನಿಗೆ. ಬೆಸುಗೆ ಚೆನ್ನಾಗಿದೆ ಎಂದವರು ಮೊಳೆಗಳನ್ನು ಬಡಿಯುತ್ತಾರೆ ವಿಗ್ರಹ ಅಲುಗದಂತೆ.


ಅವನು, “ನೀವು ಯಾಜಕನನ್ನೂ ನಾನು ಮಾಡಿಸಿಕೊಂಡ ದೇವರುಗಳನ್ನೂ ಅಪಹರಿಸಿಕೊಂಡಿದ್ದೀರಿ, ನನಗೆ ಇನ್ನೇನಿದೆ; ಹೀಗಿರಲಾಗಿ ನಿನಗೇನಾಯಿತೆಂದು ನೀವೇ ನನ್ನನ್ನು ಕೇಳುವುದು ಹೇಗೆ?” ಎಂದನು.


‘ಶಿಲ್ಪಿಯ ಕೆಲಸವಾಗಿ ಇರುವ ಮರದ ವಿಗ್ರಹ ಹಾಗು ಲೋಹವಿಗ್ರಹ ಸರ್ವೇಶ್ವರನಿಗೆ ಹೇಯವಾದದ್ದು. ಆದುದರಿಂದ ಅವನ್ನು ಮಾಡಿಸಿ ಗೋಪ್ಯವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು,’ ಎನ್ನಲು ಜನರೆಲ್ಲರು, ‘ಆಮೆನ್’ ಎನ್ನಬೇಕು.


ಅಲ್ಲಿ ಮಾನವರ ಕೈಯಿಂದ ಮಾಡಲಾದ ಮರ ಮತ್ತು ಕಲ್ಲಿನ ದೇವರುಗಳನ್ನು ಪೂಜಿಸುವಿರಿ; ಅವುಗಳಿಂದ ನೋಡುವುದಕ್ಕಾಗಲಿ, ಕೇಳುವುದಕ್ಕಾಗಲಿ, ತಿನ್ನಲಿಕ್ಕಾಗಲಿ, ಮೂಸುವುದಕ್ಕಾಗಲಿ ಆಗದು.


ಆಗ ಯಕೋಬನು ತನ್ನ ಮನೆಯವರಿಗೂ ಹಾಗು ತನ್ನ ಸಂಗಡ ಇದ್ದ ಎಲ್ಲರಿಗೂ, “ನಿಮ್ಮಲ್ಲಿ ಇರುವ ಅನ್ಯ ದೇವರುಗಳನ್ನು ತೊರೆದುಬಿಡಿ; ನಿಮ್ಮನ್ನೇ ಶುದ್ಧೀಕರಿಸಿಕೊಂಡು ಮಡಿವಸ್ತ್ರಗಳನ್ನು ಹಾಕಿಕೊಳ್ಳಿ; ನಾವು ಬೇತೇಲಿಗೆ ಹೊರಟುಹೋಗೋಣ.


ಆದರೆ ನಿಮ್ಮ ಕುಲದೇವರುಗಳ ವಿಗ್ರಹಗಳು ಯಾರ ಬಳಿಯಲ್ಲಿ ಸಿಕ್ಕುತ್ತವೆಯೋ ಅವನು ಸಾಯಲಿ, ನಮ್ಮ ಬಂಧುಬಳಗದವರ ಎದುರಿನಲ್ಲೇ ನನ್ನ ಸೊತ್ತನ್ನು ಪರೀಕ್ಷಿಸಬಹುದು. ಅದರಲ್ಲಿ ನಿಮ್ಮದೇನಾದರೂ ಸಿಕ್ಕಿದರೆ ಅದನ್ನು ತೆಗೆದುಕೊಳ್ಳಬಹುದು,” ಎಂದು ಹೇಳಿದನು. ಆ ಕುಲದೇವರುಗಳ ವಿಗ್ರಹಗಳನ್ನು ಕದ್ದವಳು ರಾಖೇಲಳೆಂದು ಯಕೋಬನಿಗೆ ತಿಳಿದಿರಲಿಲ್ಲ.


ತಂದೆಯ ಮನೆಗೆ ಹಿಂದಿರುಗುವ ಅಭಿಲಾಶೆಯಿಂದ ನೀನು ಹೀಗೆ ಬಂದು ಬಿಟ್ಟಿದ್ದೇನೋ ಸರಿ. ಆದರೆ ನನ್ನ ಕುಲದೇವರುಗಳನ್ನು ಕದ್ದದ್ದು ಏಕೆ?” ಎಂದು ಕೇಳಿದನು.


ಇತ್ತ ಲಾಬಾನನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸಲು ಹೋಗಿದ್ದನು. ಅದೇ ಸಮಯದಲ್ಲಿ ರಾಖೇಲಳು ತನ್ನ ತಂದೆಯ ಮನೆಯಲ್ಲಿದ್ದ ಕುಲದೈವಗಳ ವಿಗ್ರಹಗಳನ್ನು ಕದ್ದುಕೊಂಡಳು.


ತನ್ನ ಕೆಲಸಕ್ಕಾಗಿ ದೇವದಾರುಗಳನ್ನು ಕಡಿಯುತ್ತಾನೆ, ತುರಾಯಿ ಅಲ್ಲೋನ್ ಮರಗಳನ್ನು ಆರಿಸಿಕೊಳ್ಳುತ್ತಾನೆ; ಅವುಗಳನ್ನು ವನವೃಕ್ಷಗಳ ನಡುವೆ ಬೆಳೆಸುತ್ತಾನೆ; ಪೀತದಾರ ಮರವನ್ನು ನೆಟ್ಟು, ಮಳೆ ಸುರಿದು ಬೆಳೆಯುವವರೆಗೂ ಕಾಯುತ್ತಾನೆ,


ಅಕಟಾ, ಎಲ್ಲಾ ಜಾತಿಯ ಕ್ರಿಮಿಕೀಟಗಳು, ಅಸಹ್ಯ ಮೃಗಗಳು ಹಾಗು ಇಸ್ರಯೇಲ್ ವಂಶದವರು ಪೂಜಿಸುವ ಸಕಲ ಮೂರ್ತಿಗಳು ಆ ಗೋಡೆಯ ಸುತ್ತಲೂ ಚಿತ್ರಿತವಾಗಿದ್ದವು.


ಇಸ್ರಯೇಲ್ ವಂಶದ ಎಪ್ಪತ್ತು ಮಂದಿ ಹಿರಿಯರೂ ಅವರ ಮಧ್ಯದಲ್ಲಿ ಶಾಫಾನನ ಮಗ ಯಾಜನ್ಯನೂ ತಮ್ಮ ತಮ್ಮ ಕೈಗಳಲ್ಲಿ ಧೂಪಾರತಿಗಳನ್ನು ಹಿಡಿದುಕೊಂಡು ಆ ಚಿತ್ರಗಳ ಮುಂದೆ ನಿಂತಿದ್ದರು: ಧೂಪದ ಸುವಾಸನೆಯ ಧೂಮವು ಮೇಘವಾಗಿ ಏರುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು