Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 44:16 - ಕನ್ನಡ ಸತ್ಯವೇದವು C.L. Bible (BSI)

16 ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸುತ್ತಾನೆ. ಅದು ಮಾಂಸ ಬೇಯಿಸಲಾಗುತ್ತದೆ, ಆ ಸುಟ್ಟ ಮಾಂಸದಿಂದ ಹಸಿವೆ ತೀರಿಸಿಕೊಳ್ಳುತ್ತಾನೆ. ಆ ಬೆಂಕಿಯಿಂದ ಮೈ ಬೆಚ್ಚಗಾಯಿತು,” ಎಂದುಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸುವನು, ಅದರ ಮೇಲೆ ಮಾಂಸವನ್ನು ಸುಡುವನು. ಅದನ್ನು ತಿಂದು ತೃಪ್ತನಾಗುವನು. ತನ್ನನ್ನು ಕಾಯಿಸಿಕೊಳ್ಳುತ್ತಾ, “ಆಹಾ, ಬೆಂಕಿಯನ್ನು ಕಂಡೆ, ಬೆಚ್ಚಗಾಯಿತು” ಎಂದುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸುವನು; ಅದು ಮಾಂಸಭೋಜನಕ್ಕೆ ಅನುಕೂಲಿಸುವದು; ಬಾಡು ಸುಟ್ಟು ಹಸಿವೆ ತೀರಿಸಿಕೊಳ್ಳುವನು; ಮತ್ತು ಕಾಯಿಸಿಕೊಳ್ಳುತ್ತಾ - ಆಹಾ, ಬೆಂಕಿ ಕಂಡೆ; ಬೆಚ್ಚಗಾಯಿತು ಎಂದುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಮರದ ಅರ್ಧಭಾಗವನ್ನು ಬೆಂಕಿಯಲ್ಲಿ ಉರಿಸುವನು; ಆ ಬೆಂಕಿಯಲ್ಲಿ ಮಾಂಸವನ್ನು ಬೇಯಿಸಿ ಹೊಟ್ಟೆತುಂಬಾ ತಿನ್ನುವನು; ಆ ಮರದ ಸೌದೆಯನ್ನು ಸುಟ್ಟು ಚಳಿಕಾಯಿಸಿಕೊಳ್ಳುವನು. ಆಗ ಅವನು, “ಈಗ ನನಗೆ ಬೆಚ್ಚಗಾಯಿತು. ಬೆಂಕಿಯ ಪ್ರಕಾಶದಲ್ಲಿ ನಾನು ನೋಡಬಲ್ಲೆನು!” ಎಂದು ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸುವನು. ಅದರ ಇನ್ನೊಂದು ಭಾಗದಲ್ಲಿ ಮಾಂಸವನ್ನು ಉಣ್ಣುವನು. ಮಾಂಸವನ್ನು ಸುಟ್ಟು ತೃಪ್ತಿಹೊಂದುವನು. ಅವನು ಚಳಿಕಾಯಿಸಿಕೊಳ್ಳುತ್ತಾ, ಬೆಂಕಿಯನ್ನು ಕಂಡೆ, ಬೆಚ್ಚಗಾಯಿತು ಅಂದುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 44:16
5 ತಿಳಿವುಗಳ ಹೋಲಿಕೆ  

ಮೊಟ್ಟೆಗಳನು ಭೂಮಿಯ ಮೇಲೆ ಬಿಟ್ಟುಬಿಡುವಾ ಪಕ್ಷಿ, ಕೇವಲ ಧೂಳಿನಿಂದ ಅವಕ್ಕೆ ಕಾವು ಕೊಡುತ್ತದೆ, ಅಲ್ಲವೆ?


ಅದರ ಒಂದು ಭಾಗ ಒಲೆಗಾಗುತ್ತದೆ, ಚಳಿ ಕಾಯಿಸಿಕೊಳ್ಳುವುದಕ್ಕೆ ಆಗುತ್ತದೆ, ರೊಟ್ಟಿ ಸುಡುವುದಕ್ಕಾಗುತ್ತದೆ. ಇನ್ನೊಂದು ಭಾಗದಿಂದ ದೇವತೆಯನ್ನು ಮಾಡಿ ಮನುಷ್ಯ ಪೂಜಿಸುತ್ತಾನೆ; ವಿಗ್ರಹ ಕೆತ್ತಿ ಅದಕ್ಕೆ ಅಡ್ಡಬೀಳುತ್ತಾನೆ.


ಉಳಿದ ಭಾಗದಿಂದ ತನ್ನ ದೇವತೆಯ ವಿಗ್ರಹವನ್ನು ಕೆತ್ತಿ, ಅದಕ್ಕೆ ಎರಗಿ ಅಡ್ಡಬೀಳುತ್ತಾನೆ; “ನೀನೇ ನನ್ನ ದೇವರು; ನನ್ನನ್ನು ರಕ್ಷಿಸು,” ಎಂದು ಪ್ರಾರ್ಥಿಸುತ್ತಾನೆ.


ಇರುವರವರೆಲ್ಲರು ಒಣಹುಲ್ಲಿನ ಕೂಳೆಯಂತೆ ಸುಟ್ಟುಬಿಡುವುದವರನು ಉರಿಯುವ ಚಿತೆ ತುತ್ತಾಗುವರವರು ಆ ಜ್ವಾಲಾಗ್ನಿಗೆ ತಪ್ಪದೆ. ಅದು ಚಳಿಗೆ ಮೈಕಾಯಿಸಿಕೊಳ್ಳುವ ಬೆಂಕಿಯಂತಲ್ಲ ಮೈಬೆಚ್ಚಗಾಗಿಸಿಕೊಳ್ಳುವ ಉರಿಯಂತಲ್ಲ.


ಜೆರುಸಲೇಮಿನ ದೇವರು ಮನುಷ್ಯರ ಕೈಕೆಲಸವಾಗಿರುವ ಅನ್ಯದೇಶಗಳ ಜನರ ದೇವತೆಗಳಿಗೆ ಸಮಾನನಾಗಿರುತ್ತಾನೆ, ಎಂಬ ಅರ್ಥದಲ್ಲಿ ಅವರ ಬಗ್ಗೆ ಗಟ್ಟಿಯಾಗಿ ಕೂಗಿ ಹೇಳಿದರು; ಆ ಜನರೊಡನೆ ಹಿಬ್ರುಭಾಷೆಯಲ್ಲೆ ಮಾತಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು