Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 44:19 - ಕನ್ನಡ ಸತ್ಯವೇದವು C.L. Bible (BSI)

19 “ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದ್ದೇನೆ. ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ, ಮಾಂಸ ಸುಟ್ಟು ತಿಂದಿದ್ದೇನೆ; ಮಿಕ್ಕಿದ್ದರಿಂದ ವಿಗ್ರಹಮಾಡುವುದು ಸರಿಯೇ? ಆ ಮರದ ತುಂಡಿಗೆ ಅಡ್ಡಬೀಳುವುದು ಅಸಹ್ಯವಲ್ಲವೆ?” ಎಂದುಕೊಳ್ಳುವಷ್ಟು ವಿವೇಕ ಯಾರಿಗೂ ಇಲ್ಲ; ಯಾರೂ ಇದನ್ನು ಮನಸ್ಸಿನಲ್ಲಿ ಅರ್ಥೈಸಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 “ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು. ಹೌದು, ಅದರ ಕೆಂಡದಲ್ಲಿ ರೊಟ್ಟಿ ಮಾಡಿ ಮಾಂಸವನ್ನು ಸುಟ್ಟು ತಿಂದೆನಲ್ಲಾ, ಉಳಿದ ಭಾಗದಿಂದ ಅಸಹ್ಯವಾದ ವಿಗ್ರಹವನ್ನು ನಾನು ಮಾಡಲೋ? ಮರದ ತುಂಡಿಗೆ ಅಡ್ಡಬೀಳಬಹುದೋ?” ಎಂದುಕೊಳ್ಳುವಷ್ಟು ಜ್ಞಾನ ವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆ ತಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು, ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ ಮಾಂಸ ಸುಟ್ಟು ತಿಂದೆನಲ್ಲಾ; ವಿುಕ್ಕದ್ದನ್ನು ನಾನು ಬೊಂಬೆ ಮಾಡಲೋ, ಮರದ ತುಂಡಿಗೆ ಅಡ್ಡಬೀಳಬಹುದೋ, ಅಂದುಕೊಳ್ಳುವಷ್ಟು ಜ್ಞಾನ ವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆ ತಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ನಾನು ಆ ಮರದ ತುಂಡುಗಳನ್ನು ಬೆಂಕಿಯಲ್ಲಿ ಉರಿಸಿ ಚಳಿಕಾಯಿಸಿಕೊಂಡೆನು; ಅದರ ಕೆಂಡದಲ್ಲಿ ರೊಟ್ಟಿ ಸುಟ್ಟೆನು; ಮಾಂಸ ಬೇಯಿಸಿದೆನು; ಆ ಮಾಂಸವನ್ನು ತಿಂದೆನು; ಉಳಿದ ಮರದ ತುಂಡಿನಿಂದ ಅಸಹ್ಯವಾದ ಈ ವಿಗ್ರಹವನ್ನು ಮಾಡಿದೆನು; ನಾನು ಮರದ ತುಂಡನ್ನು ಪೂಜಿಸುತ್ತೇನೆ” ಎಂದು ಅವರೆಂದೂ ಯೋಚಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು. ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ, ಮಾಂಸವನ್ನು ಸುಟ್ಟು ತಿಂದೆನಲ್ಲಾ. ಮಿಕ್ಕಿದ್ದರಲ್ಲಿ ಅಸಹ್ಯವಾದದ್ದನ್ನು ಮಾಡಲೋ? ಮರದ ತುಂಡಿಗೆ ಅಡ್ಡಬೀಳಬಹುದೋ?” ಎಂದುಕೊಳ್ಳುವಷ್ಟು ಜ್ಞಾನ ವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿನಲ್ಲಿ ಅರ್ಥೈಸಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 44:19
16 ತಿಳಿವುಗಳ ಹೋಲಿಕೆ  

‘ಶಿಲ್ಪಿಯ ಕೆಲಸವಾಗಿ ಇರುವ ಮರದ ವಿಗ್ರಹ ಹಾಗು ಲೋಹವಿಗ್ರಹ ಸರ್ವೇಶ್ವರನಿಗೆ ಹೇಯವಾದದ್ದು. ಆದುದರಿಂದ ಅವನ್ನು ಮಾಡಿಸಿ ಗೋಪ್ಯವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು,’ ಎನ್ನಲು ಜನರೆಲ್ಲರು, ‘ಆಮೆನ್’ ಎನ್ನಬೇಕು.


ಅವನು ಜೆರುಸಲೇಮಿನ ಮೂಡಲಲ್ಲಿರುವ ಗುಡ್ಡದಲ್ಲಿ ಮೋವಾಬ್ಯರ ಕೆಮೋಷ್ ಎಂಬ ಅಸಹ್ಯ ವಿಗ್ರಹಕ್ಕೂ ಪೂಜಾಸ್ಥಳಗಳನ್ನು ಏರ್ಪಡಿಸಿದನು.


ಸಿದೋನ್ಯರ ಅಷ್ಟೋರೆತ್ ದೇವತೆಯನ್ನೂ ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹವನ್ನೂ ಆರಾಧಿಸತೊಡಗಿದನು.


ಆದರೆ ಅವರ ದುಷ್ಕೃತ್ಯಗಳೆಲ್ಲ ಸರ್ವೇಶ್ವರಸ್ವಾಮಿಯ ಜ್ಞಾಪಕದಲ್ಲಿ ಇರುತ್ತವೆ ಎಂಬುದನ್ನು ಅವರು ಮನದಟ್ಟುಮಾಡಿಕೊಂಡಿಲ್ಲ. ಅವರ ನೀಚಕೃತ್ಯಗಳು ಅವರನ್ನು ಆವರಿಸಿಕೊಂಡಿವೆ; ನನ್ನ ಕಣ್ಮುಂದೆಯೇ ಇವೆ.


ಆ ಪುರುಷ ನನಗೆ, “ನರಪುತ್ರನೇ, ನೀನು ಕಣ್ಣಿಟ್ಟು ನೋಡು, ಕಿವಿಗೊಟ್ಟು ಕೇಳು; ನಾನು ನಿನಗೆ ತೋರಿಸುವುದನ್ನೆಲ್ಲಾ ಮನಸ್ಸಿಟ್ಟು ತಿಳಿದುಕೋ; ನಾನು ನಿನಗೆ ತೋರಿಸುವುದನ್ನು ನೀನು ನೋಡಬೇಕೆಂದೇ ನಿನ್ನನ್ನು ಇಲ್ಲಿಗೆ ತರಲಾಗಿದೆ; ನೀನು ನೋಡುವುದನ್ನೆಲ್ಲ ಇಸ್ರಯೇಲ್ ವಂಶದವರಿಗೆ ಪ್ರಕಟಿಸು,” ಎಂದು ಹೇಳಿದನು.


“ಅಳಿದುಳಿದ ಅನ್ಯಜನರೇ, ನೆರೆದು ಬನ್ನಿ, ಒಟ್ಟಿಗೆ ನನ್ನ ಬಳಿಗೆ ಬನ್ನಿ. ತಮ್ಮ ಮರದ ಬೊಂಬೆಯನು ಹೊತ್ತು ತಿರುಗುವವರು ರಕ್ಷಿಸಲಾಗದ ದೇವತೆಗೆ ಮೊರೆಯಿಡುವ ಬುದ್ಧಿಹೀನರು.


ಈ ಕಾರಣ, ನನ್ನ ಜನರು ಬುದ್ಧಿಹೀನರಂತೆ ಸೆರೆಹೋಗುವುದು ನಿಶ್ಚಯ. ಅವರ ಮುಖಂಡರು ಹಸಿವಿನಿಂದ ಸಾಯುವರು. ಅವರಲ್ಲಿ ಜನಸಾಮಾನ್ಯರು ಬಾಯಾರಿ ಸೊರಗಿಹೋಗುವರು.


ಇಸ್ರಯೇಲರ ಅರಸ ಸೊಲೊಮೋನನು ಸಿದೋನ್ಯರ ಅಷ್ಟೋರೆತ್, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹಗಳಿಗಾಗಿ ಜೆರುಸಲೇಮಿನ ಎದುರಿನಲ್ಲೂ ಎಘ್ನಪರ್ವತದ ದಕ್ಷಿಣದಿಕ್ಕಿನಲ್ಲೂ ಸ್ಥಾಪಿಸಿದ ಪೂಜಾಸ್ಥಳಗಳನ್ನು ಇವನು ಹೊಲೆಮಾಡಿದನು.


“ನಾನು ಈಗ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನೆಲ್ಲ ಮನಸ್ಸಿನಲ್ಲಿಟ್ಟುಕೊಳ್ಳಿರಿ; ನಿಮ್ಮ ಸಂತತಿಯವರಿಗೆ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸರಿಸಬೇಕೆಂದು ಆಜ್ಞಾಪಿಸಿರಿ.


ಈ ಸೂಚಕಕಾರ್ಯವನ್ನು ಕೂಡ ಗಣನೆಗೆ ತೆಗೆದುಕೊಳ್ಳದೆ ಫರೋಹನು ತನ್ನ ಅರಮನೆಗೆ ಹಿಂದಿರುಗಿದನು.


ನಮಗೆ ಒದಗಿರುವ ಪರಿಸ್ಥಿತಿಯನ್ನು ಆಲೋಚಿಸಿ ನೋಡಿ.


ಮತಭ್ರಷ್ಟರೇ, ಜ್ಞಾಪಕದಲ್ಲಿಡಿ ಇದನ್ನು ಧೈರ್ಯದಿಂದ ಒಪ್ಪಿಕೊಳ್ಳಿ ನಿಮ್ಮ ತಪ್ಪನ್ನು.


ಕಲ್ಲುಗಂಬಗಳನ್ನು ಒಡೆದುಹಾಕಿ, ಅಶೇರ ವಿಗ್ರಹಸ್ತಂಭಗಳನ್ನು ಕಡಿದುಬಿಟ್ಟು, ಅವುಗಳಿದ್ದ ಸ್ಥಳವನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.


ಇಂಥವರು ಮಂದಮತಿಗಳು, ಏನೂ ಗ್ರಹಿಸಲಾರದವರು; ಅವರ ಕಣ್ಣು ಕಾಣದಂತೆಯೂ ಹೃದಯ ಗ್ರಹಿಸದಂತೆಯೂ ಅವರಿಗೆ ಅಂಟು ಬಳಿಯಲಾಗಿದೆ.


“ಜನರು ಮನಬಂದ ಮಾರ್ಗವನ್ನು ಅನುಸರಿಸುತ್ತಾರೆ; ತಮ್ಮ ಅಸಹ್ಯಕಾರ್ಯಗಳಲ್ಲಿ ಅತ್ಯಾನಂದಪಡುತ್ತಾರೆ. ಹೋರಿಯನ್ನು ಬಲಿಕೊಡುವವನು ನರಬಲಿಯನ್ನು ಕೊಡುತ್ತಾನೆ; ಕುರಿ ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ. ಕಾಣಿಕೆ ಒಪ್ಪಿಸುವವನು ಹಂದಿಯ ನೆತ್ತರನ್ನು ಅರ್ಪಿಸುತ್ತಾನೆ; ಧೂಪಾರತಿ ಎತ್ತುವವನು ವಿಗ್ರಹಾರಾಧನೆಯನ್ನು ಮಾಡುತ್ತಾನೆ.


ನನ್ನ ಜನರು ಮರದ ತುಂಡನ್ನು ಹಿಡಿದು ಕಣಿ ಕೇಳುತ್ತಾರೆ; ಕೈಯಲ್ಲಿ ಹಿಡಿದ ದೊಣ್ಣೆಯಿಂದ ವಿವೇಕವಾಣಿಯನ್ನು ಪಡೆಯಲೆತ್ನಿಸುತ್ತಾರೆ. ವ್ಯಭಿಚಾರಗುಣ ಅವರನ್ನು ತಪ್ಪುದಾರಿಗೆ ಎಳೆದಿದೆ. ದೇವರ ಸದ್ಭಕ್ತಿಯನ್ನು ತೊರೆದು ಅವರು ಧರ್ಮಭ್ರಷ್ಠರಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು