Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 44:20 - ಕನ್ನಡ ಸತ್ಯವೇದವು C.L. Bible (BSI)

20 ಅಂಥವನು ಮುಕ್ಕುವುದು ಬೂದಿಯನ್ನೇ; ಅವನ ಹೃದಯ ಮೋಸಗೊಂಡು ಅವನನ್ನು ತಪ್ಪುದಾರಿಗೆ ಎಳೆದಿದೆ. ಎಂದೇ, ಅವನು ಅಂಗೈ ಹುಣ್ಣಿನಂತಿರುವ ಆ ಸುಳ್ಳನ್ನೂ ಅರಿಯದೆ ಇದ್ದಾನೆ; ತನ್ನನ್ನೇ ರಕ್ಷಿಸಿಕೊಳ್ಳಲು ಆಗದೆ ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವನು ತಿನ್ನುವುದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ, “ನನ್ನ ಕೈ ಸುಳ್ಳನ್ನು ಹಿಡಿದಿದೆಯಲ್ಲಾ” ಎಂದುಕೊಳ್ಳಲೂ ಆಗದು. ತನ್ನನ್ನು ರಕ್ಷಿಸಿಕೊಳ್ಳಲೂ ಆಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ ನನ್ನ ಕೈ ಸುಳ್ಳನ್ನು ಹಿಡಿದಿದೆಯಲ್ಲಾ ಎಂದುಕೊಳ್ಳಲೂ ಆಗದು, ತನ್ನನ್ನು ರಕ್ಷಿಸಿಕೊಳ್ಳಲೂ ಆಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆ ಮನುಷ್ಯನಿಗೆ ತಾನು ಮಾಡುತ್ತಿರುವುದೇ ತಿಳಿಯದು. ಅವನು ಗಲಿಬಿಲಿಗೊಂಡಿದ್ದಾನೆ. ಅವನ ಹೃದಯವು ಅವನನ್ನು ತಪ್ಪುದಾರಿಯಲ್ಲಿ ನಡಿಸುತ್ತದೆ. ಅವನು ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು. ತಾನು ಮಾಡುತ್ತಿರುವುದು ತಪ್ಪೆಂದು ಅವನು ಕಾಣಲಾರನು. “ನನ್ನ ಕೈಯಲ್ಲಿರುವ ಈ ವಿಗ್ರಹವು ಸುಳ್ಳು ದೇವರಾಗಿದೆ” ಎಂದು ಅವನು ಹೇಳುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವನು ತಿನ್ನುವುದು ಬೂದಿಯೇ. ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ, ನನ್ನ ಬಲಗೈ ಸುಳ್ಳನ್ನು ಹಿಡಿದಿದೆಯಲ್ಲಾ ಎಂದುಕೊಳ್ಳಲೂ ಆಗದು. ತನ್ನ ಪ್ರಾಣವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 44:20
29 ತಿಳಿವುಗಳ ಹೋಲಿಕೆ  

ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟರು.


“ಎಫ್ರಯಿಮ್ ಕೇವಲ ಗಾಳಿಗೆ ಕುರಿಗಾಹಿ; ಅದು ದಿನವಿಡೀ ಗುದ್ದಾಡುತ್ತಿರುವುದು ಮೂಡಣಗಾಳಿಯನ್ನೇ. ಅದು ಮೋಸವನ್ನೂ ಹಿಂಸೆಯನ್ನೂ ನಿರಂತರವಾಗಿ ಹೆಚ್ಚಿಸುತ್ತಿದೆ. ಅಸ್ಸೀರಿಯದೊಂದಿಗೆ ಒಪ್ಪಂದಮಾಡಿಕೊಳ್ಳುತ್ತಿದೆ. ಈಜಿಪ್ಟಿಗೆ ಎಣ್ಣೆಯನ್ನು ಕಾಣಿಕೆಯಾಗಿ ಕಳುಹಿಸುತ್ತಿದೆ.”


ಬೂದಿಯೇ ನನಗೆ ಆಹಾರವಾಯಿತು I ಪಾನದಲಿ ಕಣ್ಣೀರು ಮಿಶ್ರವಾಯಿತು II


ವ್ಯರ್ಥವಾದುದನು ನಂಬಿ ಅವನು ಮೋಸಹೋಗದಿರಲಿ ಇಲ್ಲವಾದರೆ ಅವನಿಗೆ ಸಿಗುವ ಪ್ರತಿಫಲ ವ್ಯರ್ಥವೇ ಸರಿ.


ನಾವು ವಿಶ್ವಾಸಭ್ರಷ್ಟರಾದರೂ ವಿಶ್ವಾಸಪಾತ್ರನಾತ; ಕಾರಣ, ತನ್ನ ಸ್ವಭಾವಕ್ಕೆ ವಿರುದ್ಧ ವರ್ತಿಸನಾತ.


ಅವರು ದೇವರ ಸತ್ಯವನ್ನು ಬಿಟ್ಟು ಅಸತ್ಯವಾದುದನ್ನು ಅಂಗೀಕರಿಸಿದರು; ಸೃಷ್ಟಿಕರ್ತನನ್ನು ಆರಾಧಿಸದೆ, ಸೃಷ್ಟಿಯಾದ ವಸ್ತುಗಳನ್ನೇ ಆರಾಧಿಸಿ, ಸೇವೆಸಲ್ಲಿಸಿದರು. ಸರ್ವಕಾಲಕ್ಕೂ ಸೃಷ್ಟಿಕರ್ತರೊಬ್ಬರಿಗೇ ಸ್ತುತಿಸ್ತೋತ್ರ ಸಲ್ಲತಕ್ಕದ್ದು. ಆಮೆನ್.


ನನ್ನ ಜನರು ಮರದ ತುಂಡನ್ನು ಹಿಡಿದು ಕಣಿ ಕೇಳುತ್ತಾರೆ; ಕೈಯಲ್ಲಿ ಹಿಡಿದ ದೊಣ್ಣೆಯಿಂದ ವಿವೇಕವಾಣಿಯನ್ನು ಪಡೆಯಲೆತ್ನಿಸುತ್ತಾರೆ. ವ್ಯಭಿಚಾರಗುಣ ಅವರನ್ನು ತಪ್ಪುದಾರಿಗೆ ಎಳೆದಿದೆ. ದೇವರ ಸದ್ಭಕ್ತಿಯನ್ನು ತೊರೆದು ಅವರು ಧರ್ಮಭ್ರಷ್ಠರಾಗಿದ್ದಾರೆ.


ಆ ಒಂದು ಸಾವಿರ ವರ್ಷಗಳ ಕಾಲದವರೆಗೆ, ಅದು ಜನಾಂಗಗಳನ್ನು ಮರುಳುಗೊಳಿಸದಂತೆ ದೇವದೂತನು ಸೈತಾನನನ್ನು ಪಾತಾಳಕ್ಕೆ ದಬ್ಬಿ, ಬಾಗಿಲು ಮುಚ್ಚಿ, ಅದಕ್ಕೆ ಮುದ್ರೆ ಹಾಕಿದನು. ಆ ಸಾವಿರ ವರ್ಷಗಳ ಕಾಲ ಮುಗಿದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆ ದೊರೆಯುವುದು.


“ಉರಿಯುವ ದೀಪದ ಬೆಳಕು ಹೊಳೆಯದು ನಿನ್ನಲ್ಲಿ, ವಧುವರರ ಇನಿದನಿ ಕೇಳದು ನಿನ್ನಲ್ಲಿ. ಇದ್ದರು ನಿನ್ನ ವರ್ತಕರು ಇಳೆಗೆ ಧನವಂತರಾಗಿ ಬಿದ್ದವು ರಾಷ್ಟ್ರಗಳು ನಿನ್ನ ಜಾಲಕೆ ವಂಚಿತರಾಗಿ.


ಮೊದಲನೆಯ ಮೃಗದ ಎದುರಿನಲ್ಲಿ ಪವಾಡಗಳನ್ನೆಸಗುವ ಅನುಮತಿ ಇದ್ದುದರಿಂದ ಅದು ಭೂನಿವಾಸಿಗಳನ್ನು ಮರುಳುಗೊಳಿಸಿತು. ಖಡ್ಗದಿಂದ ಗಾಯಗೊಂಡಿದ್ದರೂ ಸಾಯದೆ ಬದುಕಿದ್ದ ಮೃಗದ ಗೌರವಾರ್ಥ ಒಂದು ವಿಗ್ರಹವನ್ನು ನಿರ್ಮಿಸಬೇಕೆಂದು ಭೂನಿವಾಸಿಗಳಿಗೆ ಅದು ವಿಧಿಸಿತು.


ಸಮಸ್ತ ಜಗತ್ತನ್ನೂ ವಂಚಿಸುತ್ತಿದ್ದ ಆ ಮಹಾಘಟಸರ್ಪವನ್ನು ಭೂಮಿಗೆ ತಳ್ಳಲಾಯಿತು. ಈ ಪುರಾತನ ಸರ್ಪಕ್ಕೆ ‘ಪಿಶಾಚಿ’ ಎಂತಲೂ ‘ಸೈತಾನ’ ಎಂತಲೂ ಹೆಸರು. ಅದರ ದೂತರನ್ನು ಅದರೊಡನೆ ತಳ್ಳಲಾಯಿತು.


ದುಷ್ಕರ್ಮಿಗಳು ಮತ್ತು ದುರ್ಬೋಧಕರು ಇತರರನ್ನು ವಂಚಿಸುತ್ತಾ ತಮ್ಮನ್ನೂ ವಂಚಿಸಿಕೊಳ್ಳುತ್ತಾ ದಿನೇದಿನೇ ಅಧೋಗತಿಗಿಳಿಯುತ್ತಾರೆ.


ಕಪಟಿಗಳು ದುರ್ಬೋಧನೆಗಳನ್ನು ಪ್ರಸರಿಸುತ್ತಾರೆ. ಬರೆಹಾಕಿದ ಚರ್ಮದಂತೆ ಅವರ ಮನಸ್ಸಾಕ್ಷಿಯು ಸುಟ್ಟುಹೋಗಿದೆ.


ಅಲ್ಲಿ ಹಂದಿ ತಿನ್ನುತ್ತಿದ್ದ ಕಾಳುಗಳನ್ನಾದರೂ ತಿಂದು ಹಸಿವನ್ನು ನೀಗಿಸಿಕೊಳ್ಳಲು ಹಂಬಲಿಸಿದ. ಆದರೆ ಅದನ್ನೂ ಅವನಿಗೆ ಯಾರೂ ಕೊಡಲಿಲ್ಲ.


ಕೆತ್ತನೆಯ ವಿಗ್ರಹದಿಂದ ಪ್ರಯೋಜನ ಏನು? ಅದು ಕೇವಲ ಮಾನವನ ಕೃತಿ, ಸುಳ್ಳು ಕಣಿಗಾಗಿ ಇಟ್ಟುಕೊಂಡ ಎರಕದ ಗೊಂಬೆ. ಅದನ್ನು ನಿರ್ಮಿಸಿದಾತನಿಗೆ ಅದು ಯಾವ ಅಭಯವನ್ನು ತಾನೇ ತಂದೀತು? ಅದು ಬಾಯ್ದೆರೆಯಲಾಗದ ಮೂಕ ಬೊಂಬೆಯಷ್ಟೆ.


“ಹೇ ಸರ್ವೇಶ್ವರಾ, ನನ್ನ ಶಕ್ತಿಯೇ, ನನ್ನ ಕೋಟೆಯೇ, ಆಪತ್ತು ಕಾಲದಲ್ಲಿ ನನ್ನ ಆಶ್ರಯವೇ, ಜಗದ ಕಟ್ಟಕಡೆಯಿಂದ ಜನಾಂಗಗಳು ನಿಮ್ಮ ಸಮ್ಮುಖಕ್ಕೆ ಬರುವುವು. ‘ನಮ್ಮ ಪೂರ್ವಜರು ಪಾರಂಪರ್ಯವಾಗಿ ಪಡೆದವುಗಳು ನಿಶ್ಚಯವಾಗಿ ಅಬದ್ಧವಾದವುಗಳು, ಮಾಯರೂಪವಾದವುಗಳು ಹಾಗು ನಿಷ್ಪ್ರಯೋಜನವಾದವುಗಳು.


ಹೌದು, ನಿಮಗೆ ತಪ್ಪುಮಾಡಿ ನಿಮ್ಮನ್ನು ಅಲ್ಲಗಳೆದಿದ್ದೇವೆ. ನಮ್ಮ ದೇವರಾದ ನಿಮ್ಮನ್ನು ಹಿಂಬಾಲಿಸದೆ ಹಿಂದಿರುಗಿದ್ದೇವೆ; ಹಿಂಸಾಚಾರವನ್ನೂ ದಂಗೆ ಏಳುವುದನ್ನೂ ಪ್ರಚೋದಿಸಿದ್ದೇವೆ. ನಮ್ಮ ಅಂತರಾಲೋಚನೆಗಳು ಹುಸಿ; ನಮ್ಮ ಬಾಯಿಮಾತು ಸುಳ್ಳು.


ವಿವೇಕಿಯ ಮನ ತಿಳುವಳಿಕೆಯನ್ನು ಅರಸುವುದು; ಮತಿಹೀನನ ಬಾಯಿ ಮೂರ್ಖತನವನ್ನು ಮುಕ್ಕುವುದು.


“ಬುದ್ಧಿವಂತನು ಗಾಳಿಮಾತನ್ನಾಡುವುದು ಸರಿಯೆ? ಸುಡುಗಾಳಿಯಿಂದ ಹೊಟ್ಟೆ ತುಂಬಿಸಿಕೊಳ್ಳಬಹುದೇ?


ಅವರ ವಿಗ್ರಹ ಬರೀ ಬೆಳ್ಳಿ ಬಂಗಾರ I ಅವು ಮಾನವನ ಕೈ ಕೆಲಸಗಳು ಮಾತ್ರ II


ಅವರ ಬಾಯಿಂದ ಬರುವ ಮಾತು ಅಸತ್ಯ I ಅವರು ಕೈಯೆತ್ತಿ ಮಾಡುವ ಶಪಥ ಮಿಥ್ಯ II


ಕ್ರೂರ ವೈರಿಗಳಿಂದೆನ್ನ ಬಿಡಿಸಯ್ಯಾ I ಅವರ ಬಾಯಿಂದ ಬರುವ ಮಾತು ಅಸತ್ಯ I ಅವರು ಕೈಯೆತ್ತಿ ಮಾಡುವ ಶಪಥ ಮಿಥ್ಯ II


ಕೇಡನು ನೀ ಮಾಡಿದೆ ಭಯಪಡದೆ ನೋಡರಾರೂ ಎಂದುಕೊಂಡಿದ್ದೆ, ನೀನು ಜ್ಞಾನಿ ವಿವೇಕಿಯೆಂದು ತಿಳಿದುಕೊಂಡೇ ಮರುಳಾದೆ; ‘ಏಕೈಕಳು ನಾನೇ, ಇನ್ನಾರೂ ಇಲ್ಲ’ ಎಂದುಕೊಂಡೆ.


ನೀನು ಯಾರಿಗೆ ಹೆದರಿ ಬೆದರಿ, ನನ್ನನ್ನು ಮರೆತು, ನನಗೆ ಸುಳ್ಳಾಡಿ ಮೋಸಮಾಡಿರುವೆ? ಇಂಥ ದ್ರೋಹಕ್ಕೂ ನೀನು ಹಿಂಜರಿಯಲಿಲ್ಲವಲ್ಲಾ! ಬಹುಕಾಲದಿಂದ ನಾನು ಸುಮ್ಮನೆ ಇದ್ದುದರಿಂದಲೇ ನೀನು ನನ್ನನ್ನು ಗೌರವಿಸದೆ ಇರುವುದಕ್ಕೆ ಕಾರಣವಲ್ಲವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು