Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 44:21 - ಕನ್ನಡ ಸತ್ಯವೇದವು C.L. Bible (BSI)

21 “ಯಕೋಬೇ, ಇಸ್ರಯೇಲೇ, ನೆನಪಿನಲ್ಲಿಡು ಇದನ್ನು : ನೀನೆನ್ನ ದಾಸನು, ಇಸ್ರಯೇಲ್, ನಿನ್ನ ನಿರ್ಮಿಸಿದವನು ನಾನು; ನೀನೆನ್ನ ದಾಸನು, ನಿನ್ನನ್ನು ನಾನು ಮರೆತುಬಿಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯಾಕೋಬೇ, ಇಸ್ರಾಯೇಲೇ, ಈ ವಿಷಯಗಳನ್ನು ಜ್ಞಾಪಕದಲ್ಲಿಟ್ಟುಕೋ, ನನ್ನ ಸೇವಕನಾಗಿದ್ದೀಯಲ್ಲವೇ. ಇಸ್ರಾಯೇಲೇ, ನಾನು ನಿನ್ನನ್ನು ನಿರ್ಮಿಸಿದೆನು, ನೀನು ನನ್ನ ಸೇವಕನು, ನಿನ್ನನ್ನು ಮರೆತುಬಿಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯಾಕೋಬೇ, ಇಸ್ರಾಯೇಲೇ, ಈ ವಿಷಯಗಳನ್ನು ಜ್ಞಾಪಕದಲ್ಲಿಟ್ಟುಕೋ, ನನ್ನ ಸೇವಕನಾಗಿದ್ದೀಯಲ್ಲವೇ; ಇಸ್ರಾಯೇಲೇ, ನಾನು ನಿನ್ನನ್ನು ನಿರ್ಮಿಸಿದೆನು, ನೀನು ನನ್ನ ಸೇವಕನು, ನಿನ್ನನ್ನು ಮರೆತುಬಿಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ಯಾಕೋಬೇ, ಈ ವಿಷಯಗಳನ್ನು ನೆನಪಿನಲ್ಲಿಟ್ಟುಕೊ! ಇಸ್ರೇಲೇ, ನೀನು ನನ್ನ ಸೇವಕನೆಂಬುದನ್ನು ನೆನಪಿನಲ್ಲಿಟ್ಟುಕೊ! ನಾನೇ ನಿನ್ನನ್ನು ನಿರ್ಮಿಸಿದೆನು; ನೀನೇ ನನ್ನ ಸೇವಕನು. ಆದ್ದರಿಂದ ಇಸ್ರೇಲೇ, ನನ್ನನ್ನು ಮರೆತುಬಿಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ಯಾಕೋಬೇ, ಇಸ್ರಾಯೇಲೇ! ಈ ವಿಷಯಗಳನ್ನು ಜ್ಞಾಪಕದಲ್ಲಿಟ್ಟುಕೋ, ನೀನು ನನ್ನ ಸೇವಕನಾಗಿದ್ದೀ. ನಾನು ನಿನ್ನನ್ನು ನಿರ್ಮಿಸಿದೆನು. ನೀನು ನನ್ನ ಸೇವಕನು. ಇಸ್ರಾಯೇಲೇ, ನಾನು ನಿನ್ನನ್ನು ಮರೆತುಬಿಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 44:21
16 ತಿಳಿವುಗಳ ಹೋಲಿಕೆ  

ಚದರಿದೆನಾದರೂ ಅವರನು ಅನ್ಯರಾಷ್ಟ್ರಗಳಲಿ ಸ್ಮರಿಸಿಕೊಳ್ಳುವರವರು ನನ್ನನು ದೂರದೇಶಗಳಲಿ ಹಿಂದಿರುಗುವರು ಸಂತಾನ ಸಮೇತ ಬದುಕಿಬಾಳಿ.


ನಾನೇ ಸರ್ವೇಶ್ವರನು, ನಿಮ್ಮ ಪರಮಪೂಜ್ಯನು ಇಸ್ರಯೇಲಿನ ಸೃಷ್ಟಿಕರ್ತನು, ನಿಮ್ಮ ಅರಸನು.”


ಈಗಲಾದರೋ ಯಕೋಬ ವಂಶವೇ, ಇಸ್ರಯೇಲ್ ಸಂತಾನವೇ ಕೇಳು : ನಿನ್ನನ್ನು ಸೃಷ್ಟಿಸಿದ, ರೂಪಿಸಿದ ಸರ್ವೇಶ್ವರನ ನುಡಿಯನ್ನು ಕೇಳು; “ಭಯಪಡಬೇಡ, ನಿನ್ನನ್ನು ರಕ್ಷಿಸಿದಾತ ನಾನಲ್ಲವೆ? ನಿನ್ನನ್ನು ಹೆಸರು ಹಿಡಿದು ಕರೆದಾತ ನಾನಲ್ಲವೆ? ನೀನು ನನ್ನವನೇ ಅಲ್ಲವೆ?


ಕರೆತರುವೆ ಈ ಪರಿ ನನ್ನ ನಾಮಧಾರಿಗಳೆಲ್ಲರನು ನನ್ನ ಮಹಿಮೆಗಾಗಿ ನಾನು ಸೃಷ್ಟಿಸಿ ರೂಪಿಸಿದವರನು.


ಈ ಮಾತಿಗೆ ನಿಮ್ಮಲ್ಲಿ ಕಿವಿಗೊಡುವವರಾರು? ಮುಂದಕ್ಕಾದರೂ ಕಿವಿಗೊಟ್ಟು ಆಲಿಸುವವರಾರು?


ಎಲೈ ಇಸ್ರಯೇಲರೇ, ಮರೆತಿರಾ ಜನ್ಮವಿತ್ತ ಪೊರೆಬಂಡೆಯನು ಸ್ಮರಿಸಲಿಲ್ಲ ನೀವು ಹೆತ್ತತಾಯಂತಿದ್ದಾ ದೇವರನು.


“ಎಚ್ಚರಿಕೆಯಾಗಿರಿ; ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಮರೆತುಬಿಡಬೇಡಿ. ಅವರು ಪೂಜಿಸಬೇಡಿರೆಂದು ನಿಷೇಧಿಸಿದ ಯಾವ ವಿಗ್ರಹ ವಸ್ತುಗಳನ್ನೂ ಮಾಡಿಕೊಳ್ಳಬೇಡಿ.


ಹೀಗಿರುವಲ್ಲಿ, ನೀವು ಬಹಳ ಜಾಗರೂಕತೆಯಿಂದಿರಿ; ನಿಮ್ಮ ಕಣ್ಣುಗಳಿಂದಲೇ ನೋಡಿದ ಘಟನೆಗಳನ್ನು ಎಷ್ಟು ಮಾತ್ರಕ್ಕೂ ಮರೆಯದಿರಿ; ಜೀವಮಾನಪರ್ಯಂತ ಇವುಗಳನ್ನು ನೆನಪಿನಲ್ಲಿ ಇಡಿ; ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಿ,


ಮರಗಳ ರೆಂಬೆಕೊಂಬೆಗಳು ಒಣಗಿ ಮುರಿದುಹೋಗಿವೆ. ಹೆಂಗಸರ ಕೈಗೆ ಒಲೆಪಾಲಾಗುವ ಸೌದೆಯಾಗಿವೆ. ಈ ಪ್ರಜೆಗಳು ಮಂದಮತಿಗಳೇ ಸರಿ. ಈ ಕಾರಣ, ಸೃಷ್ಟಿಕರ್ತನು ಇವರನ್ನು ಕರುಣಿಸನು. ನಿರ್ಮಿಸಿದಾತನು ಇವರಿಗೆ ದಯೆ ತೋರಿಸನು.


ಹೀಗಿರಲು ಎಲೈ ಯಕೋಬ್ಯರೇ, ಇಸ್ರಯೇಲರೇ, ‘ಮರೆಯಾಗಿದೆ ಪ್ರಭುವಿಗೆ ನನ್ನ ಕುಂದುಕೊರತೆ, ನ್ಯಾಯನೀತಿ ದೊರಕದಿದೆ ನನಗೆ ಇದರತ್ತ ದೇವರ ಲಕ್ಷ್ಯಬೀಳದಿದೆ’ ಎನ್ನುತ್ತಿರುವಿರಿ ಏಕೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು