Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 44:23 - ಕನ್ನಡ ಸತ್ಯವೇದವು C.L. Bible (BSI)

23 ಜಯ ಜಯಕಾರ ಮಾಡು ಓ ಆಕಾಶವೇ, ಜಯಘೋಷ ಮಾಡು ಭೂ ತಳವೇ, ಹರ್ಷಧ್ವನಿಗೈಯಿರಿ ಬೆಟ್ಟಗುಡ್ಡಗಳೇ ವನವೃಕ್ಷಗಳೇ. ವಿಮೋಚಿಸಿದನು ಸರ್ವೇಶ್ವರ ಯಕೋಬನನು, ಇಸ್ರಯೇಲನ್ನು ರಕ್ಷಿಸಿ ಪ್ರಚಾರಗೊಳಿಸಿದನು ತನ್ನ ಮಹಿಮೆಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಕಾಶವೇ, ಹರ್ಷಧ್ವನಿಗೈ, ಯೆಹೋವನು ತನ್ನ ಕಾರ್ಯವನ್ನು ನೆರವೇರಿಸಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭಟಿಸು. ಪರ್ವತಗಳೇ, ವನವೇ, ಸಕಲವನವೃಕ್ಷಗಳೇ, ಉತ್ಸಾಹಧ್ವನಿಮಾಡಿರಿ. ಏಕೆಂದರೆ ಯೆಹೋವನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನ ರಕ್ಷಣೆಯಿಂದ ತನ್ನ ಮಹಿಮೆಯನ್ನು ಪ್ರಚುರಗೊಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆಕಾಶವೇ, ಹರ್ಷಧ್ವನಿಗೈ, ಯೆಹೋವನು ತನ್ನ ಕಾರ್ಯವನ್ನು ನೆರವೇರಿಸಿದ್ದಾನೆ; ಭೂವಿುಯ ಅಧೋಭಾಗವೇ, ಆರ್ಭಟಿಸು; ಪರ್ವತಗಳೇ, ವನವೇ, ಸಕಲವನವೃಕ್ಷಗಳೇ, ಕೋಲಾಹಲಮಾಡಿರಿ; ಯೆಹೋವನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನ ರಕ್ಷಣೆಯಿಂದ ತನ್ನ ಮಹಿಮೆಯನ್ನು ಪ್ರಚುರಗೊಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೆಹೋವನು ಮಹಾ ಕಾರ್ಯಗಳನ್ನು ಮಾಡಿದ್ದರಿಂದ ಆಕಾಶವು ಹರ್ಷಿಸುತ್ತದೆ. ಭೂಮಿಯೂ ಭೂಮಿಯ ಅಧೋಭಾಗವೂ ಸಂತೋಷಿಸುತ್ತದೆ. ಪರ್ವತಗಳು ಕೃತಜ್ಞತಾಸ್ತುತಿಗಳನ್ನು ಮಾಡುತ್ತವೆ. ಅರಣ್ಯದಲ್ಲಿರುವ ಎಲ್ಲಾ ಮರಗಳು ಹರ್ಷಿಸುತ್ತವೆ. ಯಾಕೆಂದರೆ ಯೆಹೋವನು ಯಾಕೋಬನನ್ನು ರಕ್ಷಿಸಿದನು, ಇಸ್ರೇಲಿಗೆ ಆತನು ಅದ್ಭುತಕಾರ್ಯವನ್ನು ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಕಾಶಗಳೇ, ಹರ್ಷಧ್ವನಿಗೈಯಿರಿ. ಏಕೆಂದರೆ ಯೆಹೋವ ದೇವರು ತಾನೇ ಅದನ್ನು ಮಾಡಿದ್ದಾನೆ. ಭೂಮಿಯ ಕೆಳಭಾಗವೇ ಆರ್ಭಟಿಸು. ಪರ್ವತಗಳೇ, ವನವೇ, ಅದರಲ್ಲಿರುವ ಎಲ್ಲಾ ಮರಗಳೇ ಉತ್ಸಾಹಧ್ವನಿ ಮಾಡಿರಿ. ಏಕೆಂದರೆ ಯೆಹೋವ ದೇವರು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನಲ್ಲಿ ತನ್ನನ್ನು ಮಹಿಮೆಪಡಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 44:23
40 ತಿಳಿವುಗಳ ಹೋಲಿಕೆ  

ಭೂಮ್ಯಾಕಾಶಗಳು ಆತನನು ಕೊಂಡಾಡಲಿ I ಸಾಗರಗಳು, ಜಲಚರಗಳು ಆತನನು ಭಜಿಸಲಿ II


ಆಗ ಭೂಮಿ ಆಕಾಶಗಳೂ ಅಲ್ಲಿನ ಸಮಸ್ತವೂ ಬಾಬಿಲೋನಿನ ನಾಶ ನೋಡಿ ಜಯಘೋಷಮಾಡುವುವು. ಹಾಳುಮಾಡುವರು, ಉತ್ತರದಿಂದ ಬಂದು ಹಾಳುಮಾಡುವರು.


ಆತನೆನಗೆ ಇಂತೆಂದ : “ನೀನೆನ್ನ ದಾಸ; ನನ್ನ ಮಹಿಮೆ ಬೆಳಗಿಸುವ ಇಸ್ರಯೇಲ.”


ಹರ್ಷಧ್ವನಿಗೈ ಆಕಾಶವೇ ಉಲ್ಲಾಸಪಡು ಪೊಡವಿಯೇ ತಟ್ಟಾಡಿರಿ ಬೆಟ್ಟಗುಡ್ಡಗಳೇ ಏಕೆನೆ ಸಂತೈಸಿಹನು ಸರ್ವೇಶ್ವರ ತನ್ನ ಪ್ರಜೆಯನು ಕನಿಕರಿಸಿಹನು ಶೋಷಿತರಾದ ತನ್ನ ಜನರನು.


“ಸ್ವರ್ಗನಿವಾಸಿಗಳೇ, ಸಂಭ್ರಮಿಸಿ, ದೇವಜನರೇ, ಪ್ರೇಷಿತರೇ, ಪ್ರವಾದಿಗಳೇ, ಹರ್ಷಿಸಿ ! ದಂಡಿಸಿರುವರು ಅವಳನು ದೇವರೇ ಸರಿಯಾಗಿ ನಿಮಗಾಕೆ ಎಸಗಿದಕ್ಕೆ ಪ್ರತಿಯಾಗಿ.”


ಎಂದೇ ಸ್ವರ್ಗಲೋಕ, ಸ್ವರ್ಗನಿವಾಸಿಗಳೆಲ್ಲ ನಲಿಯಲಿ ! ಕ್ಷಿತಿಸಾಗರಗಳಿಗೆ ಒದಗಿದೆ ದುರ್ಗತಿ. ಬಂದಿಹನು ಪಿಶಾಚಿ ಕಡುರೋಷದಿಂದ ತನಗಿರುವ ಕಾಲ ತುಸುವೆಂಬ ತವಕದಿಂದ.”


ಬೋಧಿಸುವ ವರವನ್ನು ಪಡೆದವನು ದೇವರ ವಾಕ್ಯವನ್ನು ಬೋಧಿಸುವವನಂತೆ ಬೋಧನೆಮಾಡಲಿ. ಸೇವೆಮಾಡುವ ವರವನ್ನು ಪಡೆದವನು, ದೇವರಿಂದ ಶಕ್ತಿಯನ್ನು ಪಡೆದವನಂತೆ ಸೇವೆಮಾಡಲಿ. ಇದರಿಂದ ಯೇಸುಕ್ರಿಸ್ತರ ಮುಖಾಂತರ ಎಲ್ಲದರಲ್ಲಿಯೂ ದೇವರಿಗೆ ಸ್ತುತಿಯುಂಟಾಗುವುದು. ಅವರಿಗೆ ಸದಾಕಾಲ ಮಹಿಮೆಯೂ ಸರ್ವಾಧಿಕಾರವೂ ಸಲ್ಲಲಿ. ಆಮೆನ್.


ಇಸ್ರಯೇಲಿನ ಪರ್ವತಗಳೇ, ನಿಮ್ಮ ಗಿಡಗಳು ರೆಂಬೆಗಳನ್ನು ಹರಡಿಕೊಂಡು ನನ್ನ ಜನರಾದ ಇಸ್ರಯೇಲರಿಗೆ ಫಲಕೊಡುವುವು; ಅವರ ಬರುವಿಕೆ ಸಮೀಪವಾಯಿತು.


“ನರಪುತ್ರನೇ, ನೀನು ಇಸ್ರಯೇಲಿನ ಪರ್ವತಗಳಿಗೆ ಈ ದೈವೋಕ್ತಿಯನ್ನು ನುಡಿ: ಇಸ್ರಯೇಲಿನ ಪರ್ವತಗಳೇ, ಸರ್ವೇಶ್ವರನ ಈ ವಾಕ್ಯವನ್ನು ಕೇಳಿರಿ:


ದುಃಖಿತರೆಲ್ಲರಿಗೆ ಸಾಂತ್ವನ ಸಾರಲೆಂದೇ ಕಳುಹಿಸಿದನಾತ ನನ್ನನು. ಸಿಯೋನಿನ ಶೋಕಾರ್ತರಿಗೆ ಬರಿಬೂದಿಗೆ ಬದಲು ಶಿರೋಭೂಷಣ, ದುಃಖತಾಪದ ಬದಲು ಆನಂದ ತೈಲ, ಸೊರಗಿದ್ದ ಮನಕೆ ಮೆಚ್ಚಿಕೆಯ ಮೇಲ್ವಸ್ತ್ರ ಒದಗಿಸಲೆಂದೇ ನನ್ನನ್ನು ಕಳುಹಿಸಿದನಾತ. ನೆಟ್ಟಿಹನು ಇವರನು ಸರ್ವೇಶ್ವರ ತನ್ನ ಮಹಿಮೆಯಾಗಿ ಹೆಸರ ಪಡೆವರಿವರು ‘ನೀತಿವೃಕ್ಷ’ಗಳೆಂಬುದಾಗಿ.


ಸದ್ಧರ್ಮಿಗಳಾಗಿರುವರು ನಿನ್ನ ಜನರೆಲ್ಲರು ಆಗುವರವರು ನಾಡಿಗೆ ಶಾಶ್ವತ ಬಾಧ್ಯಸ್ಥರು ನನ್ನ ಮಹಿಮೆಗಾಗಿ ನಾ ನೆಟ್ಟ ಸಸಿಗಳವರು ನನ್ನ ಕೈಗಳು ಸೃಷ್ಟಿಸಿದ ಪ್ರಜೆಗಳವರು.


ಹೆಚ್ಚಿಸಿರುವೆ ಸರ್ವೇಶ್ವರಾ, ನಿನ್ನ ಜನರನು ಹೌದು, ವೃದ್ಧಿಗೊಳಿಸಿರುವೆ ನಿನ್ನ ಪ್ರಜೆಯನು. ವಿಸ್ತರಿಸಿರುವೆ ನಾಡಿನ ಮೇರೆಗಳನು ಈಪರಿ ಪಡೆದಿರುವೆ ಮಹಿಮೆಯನು.


ತಿಮಿಂಗಲಗಳೂ ಆದಿಸಾಗರಗಳೂ I ಹೊಗಳಲಿ ಭೂಮಂಡಲದಿಂದ ಪ್ರಭುವನು II


ಹೌದು, ದೇಶದ ಸಕಲ ಪ್ರಜೆಗಳು ಅವರನ್ನು ಹೂಳಿಬಿಡುವರು. ಹೀಗೆ ನನ್ನ ಮಹಿಮೆಯನ್ನು ಪ್ರತ್ಯಕ್ಷಗೊಳಿಸುವಾಗ ನನ್ನ ಜನರಿಗೆ ಗೌರವ ಉಂಟಾಗುವುದು; ಇದು ಸರ್ವೇಶ್ವರನಾದ ದೇವರ ನುಡಿ.


‘ಏರಿದನು’ ಎನ್ನುವುದರ ಅರ್ಥವಾದರೂ ಏನು? ಆತನು ಮೊದಲು ಭೂಗರ್ಭಕ್ಕೂ ಇಳಿದಿದ್ದನು ಎಂಬ ಅರ್ಥವನ್ನೂ ಒಳಗೊಂಡಿದೆ.


“ಹರ್ಷಿಸಲಿ ಆಕಾಶ, ಸಂತೋಷಿಸಲಿ ಭೂಲೋಕ I ಗರ್ಜಿಸಲಿ ಸಮುದ್ರ ಮತ್ತು ಅದರೊಳಿರುವುದೆಲ್ಲ I ಸಾರಲಿ ರಾಷ್ಟ್ರಗಳಿಗೆ ಸರ್ವೇಶ್ವರ ರಾಜನೆಂದು I ಧರೆಗೆ ನ್ಯಾಯತೀರಿಸಲು ಖಂಡಿತ ಬರುವನೆಂದು II


ಹುಲ್ಲುಗಾವಲುಗಳು ತುಂಬಿತುಳುಕುತಿವೆ ಕುರಿಹಿಂಡುಗಳಿಂದ I ಕಣಿವೆ ಕಂದರಗಳಿದೊ ಕಂಗೊಳಿಸುತ್ತಿವೆ ತೆನೆಕಾಳುಗಳಿಂದ I ಇಳೆ ಮೊಳಗುತಿದೆ ಆನಂದಘೋಷ, ಸಂತಸ ಗೀತೆಗಳಿಂದ II


ಎಲ್ಲಾ ಬೆಟ್ಟಗಳೂ ಗುಡ್ಡಗಳೂ I ಫಲವೃಕ್ಷಗಳೂ ದೇವದಾರುಗಳೂ II


ಹಾಡಿರಿ ಸರ್ವೇಶ್ವರನಿಗೆ ಸ್ತುತಿಯನು ಎಸಗಿಹನಾತ ಮಹಿಮಾಕಾರ್ಯಗಳನು ತಿಳಿಸಿರಿ ಜಗದಾದ್ಯಂತಕೆ ಈ ವಿಷಯವನು.


ಈಗಲಾದರೋ ಯಕೋಬ ವಂಶವೇ, ಇಸ್ರಯೇಲ್ ಸಂತಾನವೇ ಕೇಳು : ನಿನ್ನನ್ನು ಸೃಷ್ಟಿಸಿದ, ರೂಪಿಸಿದ ಸರ್ವೇಶ್ವರನ ನುಡಿಯನ್ನು ಕೇಳು; “ಭಯಪಡಬೇಡ, ನಿನ್ನನ್ನು ರಕ್ಷಿಸಿದಾತ ನಾನಲ್ಲವೆ? ನಿನ್ನನ್ನು ಹೆಸರು ಹಿಡಿದು ಕರೆದಾತ ನಾನಲ್ಲವೆ? ನೀನು ನನ್ನವನೇ ಅಲ್ಲವೆ?


ಕರೆತರುವೆ ಈ ಪರಿ ನನ್ನ ನಾಮಧಾರಿಗಳೆಲ್ಲರನು ನನ್ನ ಮಹಿಮೆಗಾಗಿ ನಾನು ಸೃಷ್ಟಿಸಿ ರೂಪಿಸಿದವರನು.


ಬರಮಾಡುವೆನು ಮುಕ್ತಿಯನು ಹತ್ತಿರಕೆ ಅದಿನ್ನು ದೂರವಿರದು ನಿಮಗೆ. ತಡವಾಗದು ನಿಮಗೆ ನನ್ನ ರಕ್ಷಣೆ ಸಾಧಿಸುವೆನು ರಕ್ಷಣೆಯನ್ನು ಸಿಯೋನಿನಲೇ, ಬೀರುವೆನು ನನ್ನ ಮಹಿಮೆಯನ್ನು ಇಸ್ರಯೇಲ ಮೇಲೆ.”


ಜೆರುಸಲೇಮಿನ ಹಾಳುಬಿದ್ದ ಪ್ರದೇಶಗಳೇ, ಜಯಕಾರಮಾಡಿ ತಟ್ಟನೆ, ಹಾಡಿರಿ ಒಟ್ಟಿಗೆ, ಬಿಡುಗಡೆ ಮಾಡಿರುವನು ಸರ್ವೇಶ್ವರ ಜೆರುಸಲೇಮನು ತಂದಿರುವನು ತನ್ನ ಜನರಿಗೆ ಸಮಾಧಾನವನು.


ಸರ್ವೇಶ್ವರ ಯಕೋಬರ ವಿಮೋಚಕ ಅವರನ್ನು ಅವರಿಗಿಂತ ಬಲಿಷ್ಠರ ಕೈಯಿಂದ ಬಿಡಿಸಿದಾತ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನಾನು ನಿನ್ನನ್ನು ಹಾಳುಮಾಡಿ ಜಗವನ್ನೆಲ್ಲಾ ಸಂತೋಷಪಡಿಸುವೆನು.


ಈಜಿಪ್ಟಿನವರ ಕೈಯಿಂದ ಇಸ್ರಯೇಲರನ್ನು ಬಿಡಿಸಿ ಸರ್ವೇಶ್ವರ ಅವರಿಗೆ ಇಷ್ಟೆಲ್ಲಾ ಉಪಕಾರ ಮಾಡಿದ್ದಕ್ಕಾಗಿ ಇತ್ರೋ ಸಂತೋಷಪಟ್ಟನು.


ಉಲ್ಲಾಸಿಸಲಿ ಹೊಲಗದ್ದೆಗಳು ಪೈರುಪಚ್ಚೆಗಳು I ಹರ್ಷಧ್ವನಿಗೈಯಲಿ ಕಾಡಿನ ಫಲವೃಕ್ಷಗಳು II


ರಕ್ಷಿಸುವನು ದೇವನು ಆ ಸಿಯೋನ್ ಪಟ್ಟಣವನು I ಕಟ್ಟಿಸುವನು ಯೆಹೂದ ನಾಡಿನ ನಗರಗಳನು I ಸ್ವಂತವಾಗಿರಿಸಿಕೊಂಬರು ಆತನ ಪ್ರಜೆ ಅದನು II


ನಿನ್ನ ಹಸ್ತ ಶಕ್ತಿಯುತ, ಬಲಗೈ ಮಹೋನ್ನತ I ನಿನ್ನ ಭುಜಬಲವಾದರೊ ಪರಾಕ್ರಮರೂಪಿತ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು