ಯೆಶಾಯ 44:26 - ಕನ್ನಡ ಸತ್ಯವೇದವು C.L. Bible (BSI)26 ನನ್ನ ದಾಸನ ಮಾತನ್ನಾದರೋ ದೃಢೀಕರಿಸುವವನು ನಾನೆ ನನ್ನ ದೂತರ ಯೋಜನೆಯನ್ನು ಸಫಲಗೊಳಿಸುವವನು ನಾನೆ ಜನನಿವಾಸವಾಗುವುದು ಜೆರುಸಲೇಮ್ ನಗರವು ಪುನಃ ಕಟ್ಟಲ್ಪಡುವುವು ಜುದೇಯ ಪಟ್ಟಣಗಳು. ಅಲ್ಲಿ ಹಾಳುಬಿದ್ದವುಗಳು ಮರಳಿ ಎದ್ದು ನಿಲ್ಲುವುವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ನನ್ನ ಸೇವಕನ ಮಾತನ್ನು ಸ್ಥಾಪಿಸಿ ನನ್ನ ದೂತರ ಮಂತ್ರಾಲೋಚನೆಯನ್ನು ನೆರವೇರಿಸುವವನಾಗಿದ್ದೇನೆ. ಯೆರೂಸಲೇಮಿಗೆ, ‘ನೀನು ಜನ ನಿವಾಸವಾಗುವಿ’ ಎಂದು ಯೆಹೂದದ ಪಟ್ಟಣಗಳಿಗೆ, ‘ಅವು ತಿರುಗಿ ಕಟ್ಟಲ್ಪಡುವವು, ಅಲ್ಲಿನ ಹಾಳು ಸ್ಥಳಗಳನ್ನು ನೆಟ್ಟಗೆ ಮಾಡುವೆನು’ ಎಂದು ಮುಂತಿಳಿಸಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ನನ್ನ ಸೇವಕನ ಮಾತನ್ನು ಸ್ಥಾಪಿಸಿ ನನ್ನ ದೂತರ ಮಂತ್ರಾಲೋಚನೆಯನ್ನು ನೆರವೇರಿಸುವವನಾಗಿದ್ದೇನೆ; ಯೆರೂಸಲೇಮು ಜನನಿವಾಸವಾಗುವದು, ಯೆಹೂದದ ಪಟ್ಟಣಗಳು ತಿರಿಗಿ ಕಟ್ಟಲ್ಪಡುವವು, ಅಲ್ಲಿನ ಹಾಳನ್ನು ಹಸನುಮಾಡುವೆನು ಎಂದು ನಾನು ಮುಂತಿಳಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಯೆಹೋವನು ತನ್ನ ಸೇವಕರನ್ನು ಜನರಿಗೆ ಸಂದೇಶ ತಿಳಿಸುವದಕ್ಕಾಗಿ ಉಪಯೋಗಿಸಿಕೊಳ್ಳುತ್ತಿದ್ದಾನೆ. ಆತನ ಸಂದೇಶಗಳು ಸತ್ಯವಾದವುಗಳಾಗಿವೆ. ಜನರು ಮಾಡಬೇಕಾದ ಕಾರ್ಯಗಳ ಬಗ್ಗೆ ಯೆಹೋವನು ಸಂದೇಶಕರನ್ನು ಕಳುಹಿಸುತ್ತಾನೆ. ಅವರ ಸಲಹೆಯು ಒಳ್ಳೆಯದೆಂದು ಯೆಹೋವನು ತೋರಿಸಿಕೊಡುತ್ತಾನೆ. ಯೆಹೋವನು ಜೆರುಸಲೇಮಿಗೆ, “ಜನರು ನಿನ್ನಲ್ಲಿ ಮತ್ತೆ ವಾಸಮಾಡುವರು” ಎಂತಲೂ ಯೆಹೂದದ ನಗರಗಳಿಗೆ, “ನೀವು ತಿರುಗಿ ಕಟ್ಟಲ್ಪಡುವಿರಿ” ಎಂತಲೂ ಕೆಡವಲ್ಪಟ್ಟ ನಗರಗಳಿಗೆ, “ನಾನು ತಿರುಗಿ ನಿಮ್ಮನ್ನು ನಗರಗಳನ್ನಾಗಿ ಮಾಡುತ್ತೇನೆ” ಎಂತಲೂ ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ತನ್ನ ಸೇವಕನ ಮಾತುಗಳನ್ನು ಸ್ಥಾಪಿಸುವವನು, ಮತ್ತು ತನ್ನ ದೂತರ ಆಲೋಚನೆಯನ್ನು ಪೂರೈಸುವವನು. “ಯೆರೂಸಲೇಮಿಗೆ, ‘ನೀನು ನಿವಾಸವಾಗುವೆ,’ ಯೆಹೂದ ಪಟ್ಟಣಗಳಿಗೆ, ‘ಅವು ಪುನಃ ಕಟ್ಟಲಾಗುವುದು,’ ಮತ್ತು ಅದರ ಹಾಳು ಸ್ಥಳಗಳಿಗೆ, ‘ನಾನು ಪುನಃಸ್ಥಾಪಿಸುವೆನು,’ ಎಂದು ಹೇಳುವವನು, ಅಧ್ಯಾಯವನ್ನು ನೋಡಿ |