Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 44:28 - ಕನ್ನಡ ಸತ್ಯವೇದವು C.L. Bible (BSI)

28 ಕೋರೆಷನಿಗೆ ಇಂತೆನ್ನುವೆನು ನಾನು : ನನ್ನ ಮಂದೆ ಕಾಯುವವನು ನೀನು ನನ್ನ ಇಷ್ಟಾರ್ಥವನು ನೆರವೇರಿಸುವವನು ನೀನು; 'ಪುನಃ ನಿರ್ಮಾಣವಾಗುವೆ' ಎನ್ನುವೆ ಜೆರುಸಲೇಮಿಗೆ, ನೀನು; ‘ಪುನಃ ನಿನಗೆ ಅಸ್ತಿವಾರ ಹಾಕಿಸುವೆ’ ಎನ್ನುವೆ ಆ ದೇವಾಲಯಕೆ ನೀನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಕೋರೆಷನ ವಿಷಯವಾಗಿ, ‘ಅವನು ನನ್ನ ಮಂದೆಯನ್ನು ಕಾಯುವವನು, ಯೆರೂಸಲೇಮು ಕಟ್ಟಲ್ಪಡಲಿ, ದೇವಸ್ಥಾನದ ಅಸ್ತಿವಾರವು ಹಾಕಲ್ಪಡಲಿ’ ಎಂದು ಹೇಳಿ, ‘ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸತಕ್ಕವನು’” ಎಂಬುದಾಗಿ ಮಾತನಾಡುವವನು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಮತ್ತು ಕೋರೆಷನ ವಿಷಯವಾಗಿ - ಅವನು ನನ್ನ ಮಂದೆ ಕಾಯುವವನು, ಯೆರೂಸಲೇಮು ಕಟ್ಟಲ್ಪಡಲಿ, ದೇವಸ್ಥಾನದ ಅಸ್ತಿವಾರವು ಹಾಕಲ್ಪಡಲಿ ಎಂದು ಹೇಳಿ ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸತಕ್ಕವನು ಎಂಬದಾಗಿ ಮಾತಾಡುವವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಸೈರಸನಿಗೆ ಯೆಹೋವನು ಹೀಗೆನ್ನುತ್ತಾನೆ, “ನೀನೇ ನನ್ನ ಕುರುಬನು. ನಾನು ಬಯಸುವ ಕಾರ್ಯಗಳನ್ನು ನೀನು ಮಾಡುವೆ. ನೀನು ಜೆರುಸಲೇಮಿಗೆ, ‘ನೀನು ಕಟ್ಟಲ್ಪಡುವೆ’ ಎಂದೂ ದೇವಾಲಯಕ್ಕೆ ‘ನಿನ್ನ ಅಸ್ತಿವಾರವು ಮತ್ತೆ ಹಾಕಲ್ಪಡುವದು’ ಎಂದೂ ಹೇಳುವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಕೋರೆಷನ ವಿಷಯವಾಗಿ ಹೀಗೆ ಹೇಳುವೆನು, ‘ನನ್ನ ಕುರುಬನು, ನನ್ನ ಇಷ್ಟವನ್ನೆಲ್ಲಾ ಪೂರೈಸುವವನು, ಯೆರೂಸಲೇಮಿಗೆ, “ನೀನು ಪುನಃ ನಿರ್ಮಾಣವಾಗುವೆ,” ದೇವಾಲಯಕ್ಕೆ, “ನಿನಗೆ ಅಸ್ತಿವಾರವು ಹಾಕಲಾಗುವುದು,” ಎಂದು ಅನ್ನುವವನೂ ನಾನೇ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 44:28
23 ತಿಳಿವುಗಳ ಹೋಲಿಕೆ  

ಪರ್ಷಿಯದ ಅರಸ ಸೈರಸನ ಮೊದಲನೆಯ ವರ್ಷದಲ್ಲಿ ಸರ್ವೇಶ್ವರಸ್ವಾಮಿ ತಾವು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ಕಾರ್ಯಗತ ಮಾಡಿದರು: ಆ ಪರ್ಷಿಯದ ರಾಜ ಕೋರೆಷನ ಮನಸ್ಸನ್ನು ಪ್ರೇರಿಸಿದರು; ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ ಪತ್ರಗಳಿಂದಲೂ,


ಇಂತೆಂದರು ಸರ್ವೇಶ್ವರ ತಾನು ಅಭಿಷೇಕಿಸಿದ ಕೋರೆಷನಿಗೆ “ರಾಷ್ಟ್ರಗಳನ್ನು ನೀ ಸದೆಬಡಿಯುವಂತೆ ರಾಜಮಹಾರಾಜರನು ನಿಶ್ಯಸ್ತ್ರರನ್ನಾಗಿ ಮಾಡುವಂತೆ ಮುಚ್ಚಲಾಗದ ಹಾಗೆ ಬಾಗಿಲು ಹೆಬ್ಬಾಗಿಲುಗಳನ್ನು ತೆರೆಯುವಂತೆ ನಾ ನಿನ್ನ ಕೈಹಿಡಿದು ನಡೆಸುವೆನು ಮುಂದೆ.


ಪರ್ಷಿಯದ ರಾಜನಾದ ಸೈರೆಷನ ಆಳ್ವಿಕೆಯ ಮೂರನೇ ವರ್ಷದಲ್ಲಿ ಬೇಲ್ತೆಶಚ್ಚೆರನೆಂಬ ದಾನಿಯೇಲನಿಗೆ ಒಂದು ಸಂಗತಿ ಪ್ರಕಟವಾಯಿತು. ಅದು ಮಹಾ ಹೋರಾಟದ ಸಂಗತಿ, ಸತ್ಯವಾದ ಸಂಗತಿ. ಅದರ ಅರ್ಥವನ್ನು ತಾನು ಕಂಡ ದರ್ಶನದಿಂದ ಮನದಟ್ಟು ಮಾಡಿಕೊಂಡನು.


ಧರ್ಮಸಾಧನೆಗಾಗಿ ಕೋರೆಷನನ್ನು ಉದಯಗೊಳಿಸಿರುವೆನು ಅವನ ಮಾರ್ಗಗಳನ್ನು ನಾನೇ ಸರಾಗಮಾಡುವೆನು ನನ್ನ ನಗರವನು ಪುನರ್ ನಿರ್ಮಾಣಮಾಡುವನು ಅವನು ಸೆರೆಯಾದ ನನ್ನ ಜನರನು ಬಿಡುಗಡೆ ಮಾಡುವನು ಸಂಬಳವನ್ನಾಗಲಿ ಸಂಭಾವನೆಯನ್ನಾಗಲಿ ಸ್ವೀಕರಿಸನು. ಇದ ನುಡಿದಿರುವೆನು ಸೇನಾಧೀಶ್ವರ ಸರ್ವೇಶ್ವರನಾದ ನಾನು.”


ಆಗ ಆ ಜನರು ಪುರಾತನ ಮೋಶೆಯ ಕಾಲವನ್ನು ನೆನಪಿಗೆ ತಂದುಕೊಂಡು ಹೀಗೆಂದರು : “ತನ್ನ ಜನರೆಂಬ ಮಂದೆಯನ್ನು, ಅದರ ಕುರುಬನ ಸಮೇತ ಸಮುದ್ರದಿಂದ ಸುರಕ್ಷಿತವಾಗಿ ಬರಮಾಡಿದ ಸ್ವಾಮಿ ಎಲ್ಲಿ? ಆ ಜನರಿಗೆ ತಮ್ಮ ಪವಿತ್ರಾತ್ಮನನ್ನು ಪ್ರದಾನಮಾಡಿದ ಸ್ವಾಮಿ ಎಲ್ಲಿ?


ಮೂಡಲಿಂದ ಬೇಟೆಗಾಗಿ ರಣಹದ್ದನು ಕರೆದಂತೆ ಕರೆದಿಹೆನು ದೂರದೇಶದಿಂದ ನನ್ನ ಸಂಕಲ್ಪ ಈಡೇರಿಸಲೆಂದೇ. ನುಡಿದಿರುವೆನು ನಾನು; ಈಡೇರಿಸುವೆನು ಅದನ್ನು ಯೋಜಿಸಿರುವೆನು ನಾನು; ಸಾಧಿಸುವೆನು ಅದನ್ನು.


ಹೆಸರು ಹಿಡಿದು ನಿನ್ನ ಕರೆಯುವ ಸರ್ವೇಶ್ವರ ನಾನು ಕೊಡುವೆ ನಾ ನಿನಗೆ ಕತ್ತಲಲಿ ಬಚ್ಚಿಟ್ಟ ಭಂಡಾರಗಳನು ಗುಪ್ತಸ್ಥಳಗಳಲ್ಲಿ ಮರೆಮಾಡಿರುವ ನಿಧಿನಿಕ್ಷೇಪಗಳನು. ಈ ಪರಿ ಅರಿತುಕೊಳ್ಳುವೆ ನೀನು ನಾನೇ ಇಸ್ರಯೇಲರ ದೇವರೆಂಬುದನು.


ನಾಶಪಡಿಸುವೆನು ಬೆಟ್ಟಗುಡ್ಡಗಳನು ಒಣಗಿಸಿಬಿಡುವೆನು ಹುಲ್ಲು ಸಸಿಗಳನು. ಒಣನೆಲ ಮಾಡುವೆನು ನದಿಗಳನು ಬತ್ತಿಸಿಬಿಡುವೆನು ಕೆರೆಕುಂಟೆಗಳನು.


ಹೊರನಾಡಿನ ರಾಯಭಾರಿಗಳಿಗೆ ನಮ್ಮ ಉತ್ತರವೇನು? “ಸರ್ವೇಶ್ವರ ಸ್ವಾಮಿ ಸ್ಥಾಪಿಸಿಹರು ಸಿಯೋನನ್ನು, ದೀನದಲಿತರು ಆಶ್ರಯಿಸಿಕೊಳ್ಳುವರು ಅದನ್ನು.”


"ಪರ್ಷಿಯದ ರಾಜ ಸೈರಸ್ ಎಂಬ ನನ್ನ ಮಾತಿಗೆ ಕಿವಿಗೊಡಿ; ಪರಲೋಕ ದೇವರಾದ ಸರ್ವೇಶ್ವರ ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನು ಒಪ್ಪಿಸಿದ್ದಾರೆ; ತಮಗಾಗಿ ಜುದೇಯ ನಾಡಿನ ಜೆರುಸಲೇಮಿನಲ್ಲಿ ಆಲಯವನ್ನು ಕಟ್ಟಬೇಕೆಂದು ಆಜ್ಞಾಪಿಸಿದ್ದಾರೆ; ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತಾರೋ ಅವರು ಸ್ವಂತನಾಡಿಗೆ ಹೋಗಬಹುದು; ಅವರ ದೇವರಾದ ಸರ್ವೇಶ್ವರ ಅವರೊಂದಿಗೆ ಇರುತ್ತಾರೆ!” ಎಂದು ಪ್ರಕಟಿಸಿದನು.


ಸೈರಸನು ಪರ್ಷಿಯ ದೇಶದ ಅರಸ. ಆತನ ಆಳ್ವಿಕೆಯ ಮೊದಲನೆಯ ವರ್ಷದಲ್ಲೆ ಸರ್ವೇಶ್ವರಸ್ವಾಮಿ ತಾವು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸಿದರು. ಅದಕ್ಕಾಗಿಯೆ ಅರಸ ಸೈರಸನನ್ನು ಪ್ರೇರೇಪಿಸಿ ಅವನ ರಾಜ್ಯದಲ್ಲೆಲ್ಲಾ ಡಂಗುರ ಹಾಗು ಪತ್ರಗಳ ಮೂಲಕ ಹೀಗೆ ಪ್ರಕಟಿಸುವಂತೆ ಮಾಡಿದರು:


ಪರ್ಷಿಯ ರಾಜನಾದ ಸೈರಸೆಂಬ ನನ್ನ ಮಾತನ್ನು ಕೇಳಿರಿ; ಪರಲೋಕ ದೇವರಾದ ಸರ್ವೇಶ್ವರಸ್ವಾಮಿ ಭೂಲೋಕದ ಎಲ್ಲ ರಾಜ್ಯಗಳನ್ನು ನನಗೆ ಕೊಟ್ಟಿದ್ದಾರೆ; ‘ನನಗಾಗಿ ಜುದೇಯ ನಾಡಿನ ಜೆರುಸಲೇಮಿನಲ್ಲಿ ಒಂದು ಆಲಯವನ್ನು ಕಟ್ಟಿಸಬೇಕು’ ಎಂದು ಅವರು ಆಜ್ಞಾಪಿಸಿದ್ದಾರೆ.


ಕೇಳಿ, ಇದನ್ನು ಮೊದಲು ತಿಳಿಸಿದವನು ನಾನೇ ಸಿಯೋನಿಗೆ; ಶುಭಸಂದೇಶಕ ದೂತನನ್ನು ಕಳುಹಿಸಿದವನು ನಾನೇ ಜೆರುಸಲೇಮಿಗೆ.


“ಶೋಷಣೆಗೆ, ಬಿರುಗಾಳಿಗೆ, ನಿರ್ಗತಿಗೆ ಗುರಿಯಾದವಳೇ, ನಿರ್ಮಿಸುವೆ ನಿನ್ನನು ವಜ್ರವೈಡೂರ್ಯಗಳಿಂದ ಅಸ್ತಿವಾರ ಹಾಕುವೆ ನಿನಗೆ ನೀಲಮಣಿಗಳಿಂದ.


ಪುರಾತನಕಾಲದ ಪಾಳುಬಿದ್ದ ಮನೆಗಳನ್ನು ನಿಮ್ಮವರು ಮರಳಿ ಕಟ್ಟುವರು. ತಲತಲಾಂತರಗಳಿಂದ ಪಾಳುಬಿದ್ದಿರುವ ತಳಹದಿಗಳ ಮೇಲೆ ಕಟ್ಟಡಗಳನ್ನು ನೀವು ನಿರ್ಮಿಸುವಿರಿ. ‘ಬಿದ್ದ ಗೋಡೆಯನ್ನು ಎಬ್ಬಿಸಿದ ರಾಷ್ಟ್ರ’ ಎಂಬ ಬಿರುದು ನಿಮಗೆ ಬರುವುದು.”


ಈಗ ಈ ನಾಡುಗಳನ್ನೆಲ್ಲ ಬಾಬಿಲೋನಿಯದ ಅರಸ ಹಾಗೂ ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈವಶಮಾಡಿದ್ದೇನೆ. ಅವನ ಸೇವೆಗಾಗಿ ಕಾಡುಮೃಗಗಳನ್ನೂ ಕೊಟ್ಟಿದ್ದೇನೆ.


‘ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಹೇಳುವುದನ್ನು ಕೇಳಿ: ನಾನು ಬಾಬಿಲೋನಿನ ಅರಸನು ಹಾಗು ನನ್ನ ಸೇವಕನು ಆದ ನೆಬೂಕದ್ನೆಚ್ಚರನನ್ನು ನಾನು ಕರೆಯಿಸುವೆನು. ನಾನು ಮರೆಮಾಡಿಟ್ಟಿರುವ ಈ ಕಲ್ಲುಗಳ ಮೇಲೆಯೆ ಅವನು ತನ್ನ ಸಿಂಹಾಸನವನ್ನು ಹಾಕಿಸುವನು. ಈ ಕಲ್ಲುಗಳ ಮೇಲೆಯೆ ತನ್ನ ರತ್ನಗಂಬಳಿಯನ್ನು ಹಾಸಿಸುವನು.


ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತಾರೋ ಅಂಥವರು ಜುದೇಯ ನಾಡಿನ ಜೆರುಸಲೇಮಿಗೆ ಹೋಗಿ ಅಲ್ಲಿ ವಾಸಿಸುತ್ತಿರುವ ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ, ಒಂದು ದೇವಾಲಯವನ್ನು ಕಟ್ಟಲಿ; ಅವರ ಸಂಗಡ ಅವರ ದೇವರಿರಲಿ!


“ನೀವು ನನ್ನ ಮಾತನ್ನು ಕೇಳದ ಕಾರಣ ನಾನು ಉತ್ತರಭಾಗದ ರಾಷ್ಟ್ರಗಳನ್ನೆಲ್ಲ ಕರೆಯಿಸುವೆನು. ಬಾಬಿಲೋನಿನ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನನ್ನೂ ಬರಮಾಡುವೆನು. ಅವರು ಈ ನಾಡಿನ, ಇದರ ನಿವಾಸಿಗಳ, ಮತ್ತು ಸುತ್ತಮುತ್ತಲಿನ ನಾಡುಗಳ ಮೇಲೂ ಬೀಳುವರು. ಹೀಗೆ ಇವುಗಳನ್ನು ತೀರ ಹಾಳುಮಾಡುವೆನು. ನಿರಂತರ ಪರಿಹಾಸ್ಯಕ್ಕೂ ಪರಿವಿನಾಶಕ್ಕೂ ಇವನ್ನು ಗುರಿಪಡಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು