Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 44:3 - ಕನ್ನಡ ಸತ್ಯವೇದವು C.L. Bible (BSI)

3 ಮಳೆಗರೆವೆನು ಬತ್ತಿದ ಭೂಮಿಯಲಿ ಹರಿಸುವೆನು ಕಾಲುವೆಗಳನು ಒಣನೆಲದಲಿ. ಮಳೆಗರೆವೆನು ನನ್ನಾತ್ಮವನು ನಿನ್ನ ಸಂತಾನದ ಮೇಲೆ ನನ್ನ ಆಶೀರ್ವಾದವನು ನಿನ್ನ ಸಂತತಿಯ ಮೇಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಏಕೆಂದರೆ ಬತ್ತಿದ ಭೂಮಿಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು, ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಬತ್ತಿದ ಭೂವಿುಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು, ಸುರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ಬಾಯಾರಿದ ಜನರಿ ಗೆ ನಾನು ನೀರು ಹೊಯ್ಯುವೆನು. ಬಂಜ ರು ಭೂಮಿಯಲ್ಲಿ ನಾನು ಹೊಳೆ ಹರಿಯುವಂತೆ ಮಾಡುವೆನು. ನಿನ್ನ ಸಂತಾನದ ಮೇಲೆ ನಾನು ನನ್ನ ಆತ್ಮವನ್ನು ಸುರಿಸುವೆನು; ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು. ಅದು ಹರಿಯುವ ಬುಗ್ಗೆಯ ನೀರಿನಂತಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಏಕೆಂದರೆ ನಾನು ಬಾಯಾರಿದ ಭೂಮಿಯ ಮೇಲೆ ನೀರನ್ನು ಸುರಿಸುವೆನು. ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು. ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ, ನಿನ್ನಿಂದ ಹುಟ್ಟುವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 44:3
38 ತಿಳಿವುಗಳ ಹೋಲಿಕೆ  

“ತರುವಾಯ ಎಲ್ಲಾ ಮಾನವರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಪುತ್ರಪುತ್ರಿಯರು ಪ್ರವಾದನೆ ಮಾಡುವರು; ನಿಮ್ಮ ಹಿರಿಯರು ಸ್ವಪ್ನಶೀಲರಾಗುವರು; ನಿಮ್ಮ ಯುವಕರಿಗೆ ದಿವ್ಯದರ್ಶನಗಳಾಗುವುವು.


ಸುರಿಸುವೆನು ಸರ್ವರ ಮೇಲೂ ಎನ್ನಾತ್ಮವನು ಅಂತಿಮ ದಿನಗಳಲಿ; ಪ್ರವಾದಿಸುವರಾಗ ನಿಮ್ಮ ಕುವರ ಕುವರಿಯರು; ದಿವ್ಯದರ್ಶನ ಪಡೆವರು ನಿಮ್ಮ ಯುವಜನರು; ಕನಸುಕಾಣುವರು ನಿಮ್ಮ ವಯೋವೃದ್ಧರು.


ಅವರೊಡನೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಇದೇ: ನಿಮ್ಮ ಮೇಲೆ ನೆಲೆಸಿರುವ ನನ್ನ ಆತ್ಮವೂ ಮತ್ತು ನಿಮ್ಮ ಬಾಯಲ್ಲಿ ನಾನಿಟ್ಟಿರುವ ವಾಕ್ಯಗಳೂ ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ, ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ, ಇಂದಿನಿಂದ ಎಂದಿಗೂ ತೊಲಗುವುದಿಲ್ಲ.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ನನ್ನ ಎಚ್ಚರಿಕೆಯ ಮಾತಿನತ್ತ ಗಮನಕೊಡಿ; ನನ್ನ ಚೈತನ್ಯವನ್ನು ನಿಮ್ಮ ಮೇಲೆ ಸುರಿಸಿ, ನನ್ನ ನುಡಿಯನ್ನು ನಿಮಗೆ ತಿಳಿಯಪಡಿಸುವೆನು.


ಸಿಂಹಾಸನಾರೂಢನಾಗಿದ್ದವನು ನನಗೆ ಮತ್ತೂ ಹೇಳಿದ್ದೇನೆಂದರೆ : ಮುಗಿಸಿದ್ದಾಯಿತು, ‘ಅ'ಕಾರವೂ ‘ಳ'ಕಾರವೂ ನಾನೇ; ಆದಿಯೂ ಅಂತ್ಯವೂ ನಾನೇ; ಬಾಯಾರಿದವರಿಗೆ ಕೊಡುವೆ, ಜೀವಜಲವನು ಉಚಿತವಾಗಿಯೇ.


ಈ ವಾಗ್ದಾನವನ್ನು ನಿಮಗೆ ಮಾತ್ರವಲ್ಲ, ನಿಮ್ಮ ಸಂತತಿಗೂ ದೂರ ಇರುವ ಎಲ್ಲರಿಗೂ ಮತ್ತು ಸರ್ವೇಶ್ವರನಾದ ದೇವರು ತಮ್ಮತ್ತ ಆಹ್ವಾನಿಸುವ ಪ್ರತಿಯೊಬ್ಬನಿಗೂ ಮಾಡಲಾಗಿದೆ,” ಎಂದನು.


“ದಾವೀದನ ವಂಶಜರಲ್ಲೂ ಜೆರುಸಲೇಮಿನ ನಿವಾಸಿಗಳ ಮನದಲ್ಲೂ ಕರುಣಿಸುವ ಹಾಗೂ ಪ್ರಾರ್ಥಿಸುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನೇ ಅವರು ಆಗ ದಿಟ್ಟಿಸಿ ನೋಡುವರು. ಏಕೈಕ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಕಾಲವಾದ ಜ್ಯೇಷ್ಠ ಪುತ್ರನಿಗಾಗಿ ಎಂಬಂತೆ ಅತ್ತು ಪ್ರಲಾಪಿಸುವರು.


ಇನ್ನೆಂದಿಗೂ ಅವರಿಗೆ ವಿಮುಖನಾಗೆನು; ಇಸ್ರಯೇಲ್ ವಂಶದ ಮೇಲೆ ನನ್ನ ಆತ್ಮವನ್ನು ಸುರಿಸಿದ್ದೇನೆ; ಇದು ಸರ್ವೇಶ್ವರನಾದ ದೇವರ ನುಡಿ.”


ಆದರೆ ದೇವರು ಉನ್ನತಲೋಕದಿಂದ ತಮ್ಮ ಪವಿತ್ರಾತ್ಮ ಧಾರೆಯನ್ನು ನಮ್ಮ ಮೇಲೆ ಸುರಿಯುವರು; ಆಗ ಪಾಳುಭೂಮಿ ಫಲಭರಿತ ಭೂಮಿಯಾಗುವುದು; ಫಲಭರಿತ ಭೂಮಿ ಸಮೃದ್ಧ ಅರಣ್ಯವಾಗಿ ಮಾರ್ಪಡುವುದು.


ಎಲ್ಲರು ವಿವಿಧ ಭಾಷೆಗಳನ್ನು ಮಾತನಾಡುತ್ತಾ ದೇವರ ಮಹತ್ವವನ್ನು ಸ್ತುತಿಸತೊಡಗಿದರು. ಜೊಪ್ಪದಿಂದ ಪೇತ್ರನೊಡನೆ ಬಂದಿದ್ದ ಯೆಹೂದ್ಯ ಭಕ್ತವಿಶ್ವಾಸಿಗಳು ಇದನ್ನು ಕಂಡು, ದೇವರು ಅನ್ಯಧರ್ಮದವರ ಮೇಲೂ ಪವಿತ್ರಾತ್ಮಧಾರೆ ಎರೆಯುತ್ತಿದ್ದಾರಲ್ಲಾ ಎಂದು ವಿಸ್ಮಿತರಾದರು. ಆಗ ಪೇತ್ರನು,


ಕೆರೆಯಾಗಿಸಿದಾ ಮರುಭೂಮಿಯನು I ಊಟೆಯಾಗಿಸಿದ ಆ ಒಣನೆಲವನು II


ದೀನದರಿದ್ರರು ನೀರಿಗಾಗಿ ಪರದಾಡುವಾಗ ಬಾಯಾರಿ ಅವರ ನಾಲಿಗೆ ಒಣಗಿಹೋದಾಗ ಪ್ರಸನ್ನನಾಗುವೆ ಸರ್ವೇಶ್ವರನಾದ ನಾನೇ. ಇಸ್ರಯೇಲಿನ ದೇವರಾದ ನಾನವರನ್ನು ಕೈಬಿಡುವೆನೆ?


ಆ ದಿನಗಳಲ್ಲಿ ಬೆಟ್ಟಗುಡ್ಡಗಳಿಂದ ದ್ರಾಕ್ಷಾರಸ ಮತ್ತು ಹಾಲುತುಪ್ಪ ಹರಿಯುವುದು. ಜುದೇಯ ನಾಡಿನ ಹಳ್ಳಕೊಳ್ಳಗಳು ನೀರಿನಿಂದ ತುಂಬಿರುವುವು. ದೇವಾಲಯದಿಂದ ನೀರು ಚಿಮ್ಮಿಬಂದು ಆಕಾಚಿಯದ ಹಳ್ಳವನ್ನು ತಂಪಾಗಿಸುವುದು.


ಯೇಸು, ದೇವರ ಬಲಪಾರ್ಶ್ವಕ್ಕೆ ಆರೋಹಿತರಾದರು. ಅವರು ತಮ್ಮ ಪಿತ ವಾಗ್ದಾನಮಾಡಿದ ಪವಿತ್ರಾತ್ಮ ಅವರನ್ನು ಪಡೆದು, ನಮ್ಮ ಮೇಲೆ ಸುರಿಸಿದ ಆ ವರವನ್ನೇ ನೀವು ಈಗ ನೋಡುತ್ತಿರುವುದು ಹಾಗೂ ಕೇಳುತ್ತಿರುವುದು.


ನಾನು ಅವರನ್ನೂ ನನ್ನ ಪರ್ವತದ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿಸಿ ಸುಖಪಡಿಸುವೆನು; ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ಶುಭದಾಯಕ ವೃಷ್ಟಿ ಆಗುವುದು.


ಪ್ರಖ್ಯಾತವಾಗುವುದು ಇವರ ಸಂತಾನ ವಿಶ್ವದಲ್ಲೆಲ್ಲ ಹೆಸರುವಾಸಿಯಾಗುವುದು ಇವರ ಸಂತತಿ ಅನ್ಯರಾಷ್ಟ್ರಗಳಲ್ಲೆಲ್ಲ. ಲಭಿಸುವುದು ಸರ್ವೇಶ್ವರನ ಆಶೀರ್ವಾದ ಈ ಜನತೆಗೆ ಖಚಿತವಾಗುವುದಿದು ನೋಡುವವರೆಲ್ಲರಿಗೆ.”


ದೇವರಾತ್ಮ ಹಾಗು ಮದುವಣಗಿತ್ತಿ, ‘ಬಾ’ ಎಂದು ಆಹ್ವಾನಿಸುತ್ತಾರೆ. ಇದನ್ನು ಕೇಳಿಸಿಕೊಳ್ಳುವ ಪ್ರತಿಯೊಬ್ಬನೂ ‘ಬಾ’ ಎಂದು ಹೇಳಲಿ. ಬಾಯಾರಿದವನು ಬರಲಿ; ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ಪಡೆಯಲಿ.”


ಆತ ಮರುಭೂಮಿಯಲ್ಲಿ ತನ್ನ ಜನರನ್ನು ನಡೆಸಿದಾಗ ಬಳಲಲಿಲ್ಲ ಅವರು ಬಾಯಾರಿಕೆಯಿಂದ; ಹರಿಸಿದನು ನೀರನ್ನು ಅವರಿಗಾಗಿ ಕಲ್ಲಿನೊಳಗಿಂದ ಜಲವಾಹಿನಿ ಹರಿಯಿತು ಆತ ಸೀಳಿದ ಬಂಡೆಯಿಂದ.


ಅವರು ವ್ಯರ್ಥವಾಗಿ ದುಡಿಯರು, ಅನಾಹುತಕ್ಕಾಗಿ ಮಕ್ಕಳನ್ನು ಹಡೆಯರು. ಸದಾಕಾಲ ಅವರೂ ಅವರ ಸಂತತಿಯವರೂ ಸರ್ವೇಶ್ವರನಿಂದ ಅನುಗ್ರಹಗೊಂಡ ಗೋತ್ರವಾಗುವರು.


ದೇವಾ, ನೀಯೆನ್ನ ದೇವ, ನಿನಗಾಗಿ ನಾ ಕಾದಿರುವೆ I ನಿರ್ಜಲ ಮರುಭೂಮಿಯಲಿ ನೀರಿಗಾಗಿ ಹಾತೊರೆವಂತೆ I ನಿನಗೋಸ್ಕರ ಎನ್ನ ತನು ಸೊರಗಿದೆ, ಮನ ಬಾಯಾರಿದೆ II


ಇರದು ಅವರಿಗೆ ಹಸಿವು ಬಾಯಾರಿಕೆ ಬಡಿಯವು ಅವರಿಗೆ ಬಿಸಿಲುಬೇಗೆ. ನಡೆಸುವೆನು ನೀರುಕ್ಕುವ ಚಿಲುಮೆಗಳ ಬಳಿಗೆ ಕರುಣಾಕರನು ದಾರಿತೋರಿಸುವನು ಅವರಿಗೆ.


ಪ್ರತಿಯೊಬ್ಬನೂ ಬಿರುಗಾಳಿಗೆ ತಡೆಯಂತೆ, ಬಿರುಮಳೆಗೆ ಬಿಡಾರದಂತೆ, ಮರುಭೂಮಿಯಲ್ಲಿ ಜಲಧಾರೆಯಂತೆ, ಬೆಂಗಾಡಿನಲ್ಲಿ ಭಾರಿಬಂಡೆಯ ನೆರಳಿನಂತೆ ಇರುವನು.


“ದೆವ್ವವು ಒಬ್ಬ ಮನುಷ್ಯನನ್ನು ಬಿಟ್ಟು ತೊಲಗಿದ ಮೇಲೆ ನೆಲೆಯನ್ನು ಹುಡುಕುತ್ತಾ ಒಣಗಾಡಿನಲ್ಲಿ ಅಲೆದಾಡುತ್ತದೆ. ಅದಕ್ಕೆ ನೆಲೆ ಸಿಗದಾಗ, ಅದು, ‘ನಾನು ಬಿಟ್ಟುಬಂದ ಮನೆಗೆ ಹಿಂದಿರುಗುತ್ತೇನೆ’ ಎಂದು ಹೇಳಿಕೊಳ್ಳುತ್ತದೆ.


ನಿನ್ನ ಸಂತತಿ ದೊಡ್ಡದೆಂಬುದನು ನೀನು ತಿಳಿಯುವೆ ಅದು ಇಳೆಯ ಹುಲ್ಲಿನಂತೆ ಹುಲುಸಾಗಿ ಬೆಳೆವುದನು ಕಾಣುವೆ.


ಅಗಣಿತವಾಗಿರುತ್ತಿತ್ತು ನಿನ್ನ ಸಂತತಿ ಕಡಲ ಮರಳಿನಂತೆ, ನಿನ್ನ ಕರುಳಿನ ಕುಡಿಗಳು ಉಸುಬಿನ ಅಣುರೇಣುಗಳಂತೆ, ಅವರ ಹೆಸರುಗಳು ಕೆಟ್ಟು ಅಳಿದುಹೋಗುತ್ತಿರಲಿಲ್ಲ ನನ್ನ ಮುಂದೆ.”


ಎಲೈ ಬಾಯಾರಿದ ಜನರೇ, ನೀರಿನ ಬಳಿಗೆ ಬನ್ನಿ ಹಣವಿಲ್ಲದವರೇ ಬನ್ನಿ, ಅನ್ನವನ್ನು ತೆಗೆದುಕೊಂಡು ತಿನ್ನಿ. ಹಾಲನು, ದ್ರಾಕ್ಷಾರಸವನು ಕ್ರಯವಿಲ್ಲದೆ ಕೊಂಡುಕೊಳ್ಳಿ.


ನನ್ನ ಆತ್ಮವನ್ನು ನಿಮ್ಮಲ್ಲಿ ನೆಲೆಸಿರುವಂತೆ ಅನುಗ್ರಹಿಸಿ, ನೀವು ನನ್ನ ನಿಯಮಗಳನ್ನು ಅನುಸರಿಸುವ ಹಾಗೆ ಮಾಡುವೆನು. ನೀವು ನನ್ನ ವಿಧಿಗಳನ್ನು ಕೈಗೊಂಡು ಆಚರಿಸುವಿರಿ.


ಆಗ ಅವನು ನನಗೆ ಹೀಗೆ ಹೇಳಿದನು: “ಈ ಪ್ರವಾಹ ಪೂರ್ವಪ್ರಾಂತ್ಯಕ್ಕೆ ಹೊರಟು ಅರಬಾ ಎಂಬ ಕಣಿವೆಗೆ ಇಳಿದು ಲವಣ ಸಮುದ್ರದ ಕಡೆಗೆ ಹರಿಯುವುದು; ದೇವಸ್ಥಾನದಿಂದ ಹೊರಟ ಪ್ರವಾಹವು ಲವಣ ಸಮುದ್ರಕ್ಕೆ ಸೇರಲು ಅದರ ನೀರು ಸಿಹಿಯಾಗುವುದು.


ನಾನು ಇಂತೆಂದೆ: “ಪಾಳುಬಿದ್ದ ನೆಲವನ್ನು ಉತ್ತು ಹದಮಾಡಿರಿ; ನೀತಿಯ ಬೀಜವನ್ನು ಬಿತ್ತಿರಿ; ಪ್ರೀತಿಯ ಫಲವನ್ನು ಕೊಯ್ಯಿರಿ. ಸಮಯವು ಸನ್ನಿಹಿತವಾಗಿದೆ. ಸರ್ವೇಶ್ವರ ಆಗಮಿಸಿ ನಿಮ್ಮ ಮೇಲೆ ನೀತಿಯನ್ನು ಮಳೆಗರೆಯುವಂತೆ ಅವರಿಗೆ ಶರಣುಹೋಗಬೇಕು.


ಸರ್ವೇಶ್ವರಸ್ವಾಮಿಯ ಕೃಪೆಯಿಂದ ಇಬ್ಬನಿಯೂ ತುಂತುರುಮಳೆಯೂ ಮಾನವನ ನೆರವನ್ನು ನಿರೀಕ್ಷಿಸದೆ, ಹುಲ್ಲನ್ನು ಸಮೃದ್ಧಿಗೊಳಿಸುತ್ತವೆ. ಅಂತೆಯೇ ಯಕೋಬನ ಅಳಿದುಳಿದ ವಂಶದವರು ಹಲವಾರು ಜನಾಂಗಗಳ ಮಧ್ಯೆ ನೆಲಸಿ, ಅವರ ಅಭ್ಯುದಯಕ್ಕೆ ಕಾರಣರಾಗುವರು.


ಸರ್ವೇಶ್ವರನಾದ ನಾನೇ ಇದರ ತೋಟಗಾರ, ಕ್ಷಣಕ್ಷಣಕ್ಕೂ ಇದಕೆ ಹೊಯ್ಯುವೆ ನೀರ, ಇದನ್ನಾದರೂ ಮುಟ್ಟದಂತೆ ಕಾಯುವೆ ನಿರಂತರ.


ನಾನೇ ಇಸ್ರಯೇಲಿನ ಮಧ್ಯೆ ನೆಲೆಯಾಗಿ ಇರುವವನು ನಾನೇ ನಿಮ್ಮ ಸರ್ವೇಶ್ವರನಾದ ದೇವರು; ನಾನಲ್ಲದೆ ಬೇರೆ ದೇವರು ನಿಮಗಿಲ್ಲ. ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು ಎಂದು ನಿಮಗೆ ಮನದಟ್ಟಾಗುವುದು.


ಸರ್ವೇಶ್ವರಸ್ವಾಮಿಯ ನುಡಿಯಿದು: “ಆ ದಿನಗಳಲ್ಲಿ ಜುದೇಯ ಹಾಗೂ ಜೆರುಸಲೇಮಿನ ಸಿರಿಸಂಪತ್ತನ್ನು ಮರಳಿ ಕೊಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು