Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 44:4 - ಕನ್ನಡ ಸತ್ಯವೇದವು C.L. Bible (BSI)

4 ವೃದ್ಧಿಯಾಗುವರವರು ನೀರನಾಲೆ ಬದಿಯ ಪಚ್ಚೆಪಸಿರಂತೆ, ಹರಿವ ಕಾಲುವೆಗಳ ಬಳಿಯ ಜೊಂಡುಹುಲ್ಲಿನಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀರಿನ ಕಾಲುವೆಗಳ ಬಳಿಯಲ್ಲಿ ಹಸಿರು ಹುಲ್ಲಿನ ನಡುವೆ ಬೆಳೆಯುವ ನೀರವಂಜಿಗಳಂತೆ ವೃದ್ಧಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೀರಿನ ಕಾಲುವೆಗಳ ಬಳಿಯಲ್ಲಿ ಹಸುರು ಹುಲ್ಲಿನ ನಡುವೆ ಬೆಳೆಯುವ ನೀರವಂಜಿಗಳಂತೆ ವೃದ್ಧಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವರು ಈ ಲೋಕದ ಜನರೊಂದಿಗೆ ಬೆಳೆಯುವರು. ಅವರು ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದಂತಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನೀರಿನ ಕಾಲುವೆಗಳ ಬಳಿಯಲ್ಲಿ, ಹಸಿರು ಹುಲ್ಲಿನ ನಡುವೆ ಬೆಳೆಯುವ ನೀರವಂಜಿಗಳಂತೆ ವೃದ್ಧಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 44:4
13 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಸ್ವಾಮಿ ನಿಮ್ಮನ್ನು ನಿರಂತರವಾಗಿ ಮುನ್ನಡೆಸುವರು; ಮರುಭೂಮಿಯಲ್ಲೂ ನಿಮಗೆ ಮನಃತೃಪ್ತಿಯನ್ನು ನೀಡುವರು; ನಿಮ್ಮ ಎಲುಬುಗಳನ್ನು ಬಲಪಡಿಸುವರು; ನೀರೆರೆದ ತೋಟದಂತೆಯೂ ಬತ್ತಿಹೋಗದ ಬುಗ್ಗೆಯಂತೆಯೂ ನೀವು ಇರುವಿರಿ.


ನದಿಯ ಬದಿಯಲೇ ಬೆಳೆದಿಹ ಮರದಂತೆ I ಸಕಾಲಕೆ ಫಲವೀವ ವೃಕ್ಷದಂತೆ I ಎಲೆಬಾಡದೆ ಪಸಿರಿರುವ ತರುವಂತೆ I ಸಿಗುವುದು ಅವನ ಕಾರ್ಯಗಳಿಗೆ ಸಫಲತೆ II


ಆಮೇಲೆ ಅದು ಆ ದೇವದಾರು ಇದ್ದ ದೇಶದ ಒಂದು ಬೀಜವನ್ನು ತೆಗೆದುಕೊಂಡು ಫಲವತ್ತಾದ ನೀರಾವರಿಯ ಭೂಮಿಯಲ್ಲಿ ನೆಟ್ಟು ನೀರವಂಜಿಯ ಹಾಗೆ ಬೆಳೆಸಿತು.


ಆದರೆ ಪ್ರೇಷಿತರ ಬೋಧನೆಯನ್ನು ಕೇಳಿದ ಅನೇಕರು ವಿಶ್ವಾಸಿಗಳಾದರು. ಭಕ್ತವಿಶ್ವಾಸಿಗಳ ಸಂಖ್ಯೆ ಸುಮಾರು ಐದು ಸಾವಿರಕ್ಕೆ ಏರಿತು.


ಆದರೂ ಪ್ರಭುವನ್ನು ವಿಶ್ವಾಸಿಸುತ್ತಿದ್ದ ಸ್ತ್ರೀಪುರುಷರ ಸಂಖ್ಯೆ ಅಧಿಕವಾಗುತ್ತಾ ಬಂದಿತು.


ಬುವಿಯು ತನ್ನಿಂದ ಬೀಜವನು ಮೊಳೆಯಿಸುವಂತೆ ತೋಟವು ತನ್ನೊಳು ಸಸಿಯನು ಬೆಳೆಸುವಂತೆ ಸ್ವಾಮಿ ಸರ್ವೇಶ್ವರ, ಸಮಸ್ತ ರಾಷ್ಟ್ರಗಳ ಮುಂದೆ ವೃದ್ಧಿಗೊಳಿಸುವನು ಸದ್ಧರ್ಮವನೆ, ಸ್ತುತಿಸ್ತೋತ್ರವನೆ.


ಮೊದಲನೆಯ ದಿನ ಮರಗಳಿಂದ ಒಳ್ಳೊಳ್ಳೆಯ ಹಣ್ಣುಗಳನ್ನು, ಖರ್ಜೂರ ಮರದ ಗರಿಗಳನ್ನು, ಎಲೆಗಳು ದಟ್ಟವಾಗಿರುವ ಮರಗಳ ಕೊಂಬೆಗಳನ್ನು ಮತ್ತು ನೀರಿನ ಕಾಲುವೆಗಳ ಬಳಿ ಬೆಳೆಯುವ ನೀರವಂಜಿ ಚಿಗುರುಗಳನ್ನು ತೆಗೆದುಕೊಂಡು ಬಂದು ಸರ್ವೇಶ್ವರನ ಸನ್ನಿಧಿಯಲ್ಲಿ ಏಳು ದಿನಗಳೂ ಸಂಭ್ರಮದಿಂದಿರಬೇಕು.


ಅದಕ್ಕೆ ನೆರಳನ್ನೀಯುತ್ತವೆ ತಾವರೆ ಎಲೆಗಳು ಅದರ ಸುತ್ತಲಿರುತ್ತವೆ ನದಿಯ ನೀರವಂಜಿಗಳು.


ನಿನ್ನ ಸಂತತಿ ದೊಡ್ಡದೆಂಬುದನು ನೀನು ತಿಳಿಯುವೆ ಅದು ಇಳೆಯ ಹುಲ್ಲಿನಂತೆ ಹುಲುಸಾಗಿ ಬೆಳೆವುದನು ಕಾಣುವೆ.


ಅಗಣಿತವಾಗಿರುತ್ತಿತ್ತು ನಿನ್ನ ಸಂತತಿ ಕಡಲ ಮರಳಿನಂತೆ, ನಿನ್ನ ಕರುಳಿನ ಕುಡಿಗಳು ಉಸುಬಿನ ಅಣುರೇಣುಗಳಂತೆ, ಅವರ ಹೆಸರುಗಳು ಕೆಟ್ಟು ಅಳಿದುಹೋಗುತ್ತಿರಲಿಲ್ಲ ನನ್ನ ಮುಂದೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು