ಯೆಶಾಯ 44:6 - ಕನ್ನಡ ಸತ್ಯವೇದವು C.L. Bible (BSI)6 ಇಂತೆನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ, ಇಸ್ರಯೇಲರ ಅರಸ, ಅವರ ಉದ್ಧಾರಕ: “ಆದಿಯು ನಾನೇ, ಅಂತ್ಯವು ನಾನೇ, ನನ್ನ ಹೊರತು ದೇವರಾರು ಇಲ್ಲ ಬೇರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಇಸ್ರಾಯೇಲರ ಅರಸನೂ, ವಿಮೋಚಕನೂ ಆಗಿರುವ ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, “ನಾನೇ ಆದಿಯೂ, ನಾನೇ ಅಂತ್ಯವೂ. ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಇಸ್ರಾಯೇಲ್ಯರ ಅರಸನೂ ವಿಮೋಚಕನೂ ಆಗಿರುವ ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ - ನಾನೇ ಆದಿ, ಅಂತವೂ ನಾನೇ; ನಾನು ಹೊರತು ಯಾವ ದೇವರೂ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯೆಹೋವನು ಇಸ್ರೇಲರ ಅರಸನಾಗಿದ್ದಾನೆ. ಸರ್ವಶಕ್ತನಾದ ಯೆಹೋವನು ಇಸ್ರೇಲನ್ನು ರಕ್ಷಿಸುತ್ತಾನೆ. ಆತನು ಹೇಳುವುದೇನೆಂದರೆ: “ನಾನೊಬ್ಬನೇ ದೇವರು. ನನ್ನ ಹೊರತು ಬೇರೆ ದೇವರುಗಳಿಲ್ಲ. ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 “ಇಸ್ರಾಯೇಲಿನ ಅರಸನೂ ವಿಮೋಚಕನೂ, ಸೇನಾಧೀಶ್ವರ ಯೆಹೋವ ದೇವರು ಇಂತೆನ್ನುತ್ತಾರೆ: ನಾನೇ ಮೊದಲನೆಯವನು, ನಾನೇ ಕಡೆಯವನು. ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ. ಅಧ್ಯಾಯವನ್ನು ನೋಡಿ |